Breaking News
Home / ರಾಜಕೀಯ (page 192)

ರಾಜಕೀಯ

ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನದ ಬೇಡಿಕೆಗೆ ಆಗ್ರಹಿಸಿದರು.:ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ

ಬೆಳಗಾವಿ : ಅಗ್ನಿಶಾಮಕ ಠಾಣೆಗಳ ಪ್ರಾರಂಭಕ್ಕೆ ಈಗಾಗಲೇ ಬಹಳಷ್ಟು ಬೇಡಿಕೆಗಳು ಬಂದಿದ್ದು, ಇದಕ್ಕಾಗಿ ಕೆಲವು ಮಾನದಂಡಗಳನ್ನು ವಿಧಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ|| ಜಿ. ಪರಮೇಶ್ವರ್ ಹೇಳಿದರು. ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನದಂಡಗಳ ಆಧಾರ …

Read More »

ಕಬ್ಬು ಬೆಳೆಗಾರರಿಗೆ ಅವಮಾನ ನಿಮ್ಮನ್ನು ಕಬ್ಬಿನಿಂದ ಹೊಡೆದು ಹಾಕುತ್ತಾರೆ: ಸವದಿ

ಬೆಳಗಾವಿ/ಬೆಂಗಳೂರು: ಶಿವಮೊಗ್ಗದವರು ಉತ್ತರ ಕರ್ನಾಟಕದ ವಿರೋಧಿಗಳು, ಬೆಳಗಾವಿಯ ಕಬ್ಬು ಬೆಳೆಗಾರರಿಗೆ ನೀವು ಅವಮಾನ ಮಾಡಿತ್ತಿದ್ದೀರಿ. ನೀವು ಹೊರಗೆ ಹೋದರೆ ನಿಮ್ಮನ್ನು ಕಬ್ಬಿನಿಂದಲೇ ಹೊಡೆದು ಹಾಕುತ್ತಾರೆ ಎಂದು ಬೆಳಗಾವಿ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್​​​ ಶಾಸಕ ಲಕ್ಷ್ಮಣ್‌ ಸವದಿ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಅಧಿವೇಶನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ ಆರಂಭಿಸಿದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ಬಿಜೆಪಿ ಶಾಸಕರ ಪೈಕಿ ಶಿವಮೊಗ್ಗ ನಗರ ಕ್ಷೇತ್ರದ …

Read More »

ವಂಟಮೂರಿ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಗೆ ಧೈರ್ಯ ತುಂಬಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಭೇಟಿ ಆರೋಗ್ಯ ವಿಚಾರಿಸಿದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿದರು. ಸಂತ್ರಸ್ತ ಮಹಿಳೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಎದುರು ನಡೆದ ಘಟನೆ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಸಂತ್ರಸ್ತ ಮಹಿಳೆ ಕುಟುಂಬಸ್ಥರು ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ಕ್ರಮ …

Read More »

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಧರಣಿಯ ನಡುವೆಯೇ 5 ವಿಧೇಯಕಳಿಗೆ ಅಂಗೀಕಾರ

ಬೆಳಗಾವಿ/ ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತೆಲಂಗಾಣ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಸದಸ್ಯರು ಧರಣಿ ನಡೆಸುತ್ತಿದ್ದ ನಡುವೆಯೇ 5 ವಿಧೇಯಕಗಳನ್ನು ಚರ್ಚೆ ಇಲ್ಲದೇ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಇಂದು ಬೆಳಗ್ಗೆ ಪ್ರಶೋತ್ತರ ಅವಧಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್‌ ಅವರ ಉತ್ತರವನ್ನು ತಿರಸ್ಕರಿಸುವುದಾಗಿ ಹೇಳಿದ ಬಿಜೆಪಿ ಸದಸ್ಯರು, ವಿವಾದಿತ ಹೇಳಿಕೆ ನೀಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಪಟ್ಟುಹಿಡಿದರು. ಕರ್ನಾಟಕ …

Read More »

ಸ್ವಾತಂತ್ರ್ಯ ಯೋಧರ ಕುಟುಂಬಗಳ ವಂಶಸ್ಥರಿಗೆ ಗೌರವ ಧನಕ್ಕೆ ಆಗ್ರಹಿಸಿ ಧರಣಿ

ಬೆಳಗಾವಿ : ಕರ್ನಾಟಕ ರಾಜ್ಯದ ಸಮಸ್ತ ಸ್ವಾತಂತ್ರ್ಯ ಯೋಧರ ಕುಟುಂಬಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಪರಿವಾರ ಎಂದು ಸರಕಾರ ಘೋಷಣೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ಸಂಘದ ಪದಾಧಿಕಾರಿಗಳು ಇಂದು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​ನಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್ ಸಿ ಮಹಾದೇವಪ್ಪ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. …

Read More »

ಹೆಲ್ಮೆಟ್​ ಹಾಕಿದ್ರೆ ಗುಲಾಬಿ, ಇಲ್ಲದಿದ್ರೆ ದಂಡ

ಹಾವೇರಿ: ರಾಜ್ಯದಲ್ಲಿ ರಸ್ತೆ ಅಪಘಾತಗಳಲ್ಲಿ ಹೆಚ್ಚು ಸಾವು ಸಂಭವಿಸುತ್ತಿರುವ ಜಿಲ್ಲೆಗಳಲ್ಲಿ ಹಾವೇರಿಯೂ ಒಂದು. ಜಿಲ್ಲೆಯಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿರುವ ಸಂಖ್ಯೆ 200ಕ್ಕೂ ಅಧಿಕ ಇದೆ. ಅದರಲ್ಲೂ ಹೆಚ್ಚಿನ ಸಾವು ಬೈಕ್ ಸವಾರರದ್ದಾಗಿದೆ. ಹೀಗಿದೆ ಅಂಕಿಅಂಶ: 2021ರಲ್ಲಿ ರಸ್ತೆ ಅಪಘಾತದಲ್ಲಿ 1,236 ಜನ ಗಾಯಗೊಂಡರೆ ಸಾವನ್ನಪ್ಪಿದವರ ಸಂಖ್ಯೆ 230 ಇತ್ತು. 2022ರಲ್ಲಿ 1385 ಜನ ರಸ್ತೆ ಅಪಘಾತಗಳಲ್ಲಿ ಗಾಯಗೊಂಡರೆ ಮೃತಪಟ್ಟವರ ಸಂಖ್ಯೆ 284. ಹಾಗೇ 2023 ರಲ್ಲಿ ಅಕ್ಟೋಬರ್​ರೆಗೆ 1,134 ಜನ ರಸ್ತೆ …

Read More »

ಹಣದ ಬದಲು ಅಕ್ಕಿ ವಿತರಿಸಲು ಕ್ರಮ:K.H. ಮುನಿಯಪ್ಪ

ಬೆಳಗಾವಿ/ ಬೆಂಗಳೂರು : ಆಹಾರ ಭದ್ರತೆಯಡಿ ಪಡಿತರದಾರರಿಗೆ ಕೇಂದ್ರದ 5 ಕೆ ಜಿ ಆಹಾರ ಧಾನ್ಯ ವಿತರಣೆ ಜೊತೆ ರಾಜ್ಯದಿಂದ ಪೂರೈಸಬೇಕಿದ್ದ 5 ಕೆ ಜಿ ಅಕ್ಕಿ ಬದಲು ನೀಡಲಾಗುತ್ತಿರುವ ಹಣವನ್ನು ಹೆಚ್ಚು ಮಾಡುವುದಿಲ್ಲ. ಕೇಂದ್ರ ಆಹಾರ ನಿಗಮ ನಿಗದಿಪಡಿಸಿದ ಹಣವನ್ನೇ ನಾವು ಫಲಾನುಭವಿಗಳ ಖಾತೆಗೆ ನೀಡುತ್ತಿದ್ದೇವೆ. ಆದಷ್ಟು ಬೇಗ ಹಣದ ಬದಲು ಅಕ್ಕಿಯನ್ನೇ ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಭರವಸೆ ನೀಡಿದ್ದಾರೆ. …

Read More »

ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಧೈರ್ಯ ತುಂಬಿದ ಗೃಹ ಸಚಿವರು

ಬೆಳಗಾವಿ: ಜಿಲ್ಲೆಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಗೃಹಸಚಿವ ಜಿ.ಪರಮೇಶ್ವರ್​ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮುನ್ನ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ಗೃಹ ಸಚಿವರು ವಿಚಾರಿಸಿದರು. ಹಲ್ಲೆಗೊಳಗಾದ ಮಹಿಳೆಯಿಂದ ಗೃಹ ಸಚಿವ ಜಿ ಪರಮೇಶ್ವರ್​ ಅವರು ಘಟನೆ ಕುರಿತು ಮಾಹಿತಿ ಪಡೆದು, ಧೈರ್ಯ ತುಂಬಿದರು. ಈ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಮಹಿಳಾ ಮತ್ತು ಮಕ್ಕಳ …

Read More »

ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದ ಬಿ.ಕೆ ಹರಿಪ್ರಸಾದ್

ಬೆಳಗಾವಿ : ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದು ವಿಧಾನ ಪರಿಷತ್​ ಸದಸ್ಯ ಬಿ.ಕೆ ಹರಿಪ್ರಸಾದ್ ಸೂಚ್ಯವಾಗಿ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಮಾತಮಾಡಿದ ಅವರು, ಬೆಂಗಳೂರಿನಲ್ಲಿ ಬಿಲ್ಲವ ಈಡಿಗರ ಸಮಾವೇಶ ನಡೆದ ವಿಚಾರವಾಗಿ ಪ್ರತಿಕ್ರಿಯಿಸಿದರು. ಸಮುದಾಯ ಒಡೆಯಲು ಈ ಸಮಾವೇಶ ನಡೆದಿದೆ ಎಂಬ ದಾಟಿಯಲ್ಲಿ ನಾನು ಹೇಳುತ್ತಿಲ್ಲ. ಕಾಂಗ್ರೆಸ್​ ನಾಯಕ ರಾಹುಲ್‌ ಗಾಂಧಿ ಹಿಂದುಳಿದ ವರ್ಗಗಳ ಜಾತಿ ಗಣತಿ ಆಗಬೇಕು ಎಂದಿದ್ದಾರೆ. ಯಾವುದೇ ಸಮುದಾಯ ಒಡೆಯುವ ಕೆಲಸ ಆಗಬಾರದು. ಸಮಾವೇಶದಲ್ಲಿ ಸಮಾಜದ …

Read More »

ಸುವರ್ಣಸೌಧದ ಹಾಲ್‌ನಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್​ಗೆ ರಾಯರೆಡ್ಡಿ ಮನವಿ

ಬೆಳಗಾವಿ: ಸಾವರ್ಕರ್ ಫೋಟೋ ತೆರವಿನ ಕೂಗಿನ‌ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸುವರ್ಣಸೌಧ ಸಭಾಭವನದಲ್ಲಿ ಗಣ್ಯರ ಭಾವಚಿತ್ರ ಸರಿಪಡಿಸುವ ಹಾಗೂ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್ ಯು ಟಿ ಖಾದರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಸಭಾಭವನದಲ್ಲಿ ಬಸವೇಶ್ವರರ ಭಾವ ಚಿತ್ರವನ್ನು ಹಾಕಲಾಗಿದೆ. ಹಾಲಿ ಇರುವ ಭಾವ ಚಿತ್ರದ ಬದಲಾಗಿ ಮೂಲ ಕಿರೀಟ ಧರಿಸಿರುವ ಬಸವೇಶ್ವರರ …

Read More »