ಬೆಂಗಳೂರು: ನಮ್ಮದು ಸ್ಪಂದನಾಶೀಲ ಸರ್ಕಾರ. ಹಾಗಾಗಿ ನಾವು ಯಾವುದೇ ಸರ್ಪೈಸ್ ಘೋಷಣೆ ಮಾಡುವುದಿಲ್ಲ. ಅಗತ್ಯಕ್ಕೆ ತಕ್ಕಂತೆ ಸ್ಪಂದಿಸುತ್ತಾ ಹೋಗುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಹೇಳಿಕೆಆರ್.ಟಿ. ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಜೆಂಡಾ ಪ್ರಕಾರ ಚರ್ಚೆ ನಡೆಯಲಿದೆ. ನಂತರ ಇತರ ವಿಷಯಗಳ ಚರ್ಚೆ ವೇಳೆ ಹಲವಾರು ವಿಚಾರಗಳ ಕುರಿತು ಚರ್ಚೆ ಮಾಡುತ್ತೇವೆ.
Read More »ದೇಶದಲ್ಲಿ 2.86 ಲಕ್ಷ ಹೊಸ ಪ್ರಕರಣ,
ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,86,384 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೂಲಕ ಬುಧವಾರಕ್ಕೆ ಹೋಲಿಸಿದಾಗ ಅಲ್ಪ ಏರಿಕೆ ಕಂಡುಬಂದಿದೆ. ಬುಧವಾರದಂದು 2.85 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಕಳೆದ 24 ತಾಸಿನಲ್ಲಿ 573 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 3,06,357 ಮಂದಿ ಗುಣಮುಖರಾಗಿದ್ದು, ಒಟ್ಟು 3,76,77,328 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣ …
Read More »‘ಈ ಬಾರಿ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ’ – ಸಚಿವ ನಾಗೇಶ್
ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು. ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ …
Read More »ಹೃದಯಾಘಾತದಿಂದ ಎಎಸ್‌ಐ ಸುರೇಶ್ ಸಾವು
ಶಿವಮೊಗ್ಗ: ನಗರದ ದೊಡ್ಡಪೇಟೆ ಠಾಣೆಯ ಎಎಸ್‌ಐ ಸುರೇಶ್(49) ಅವರು ಗುರುವಾರ ಬೆಳಗಿನಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಅವರು ಪೊಲೀಸ್ ಇಲಾಖೆಗೆ ಪೇದೆಯಾಗಿ ಸೇರ್ಪಡೆಯಾಗಿದ್ದರು. ಸೇವಾ ಹಿರಿತನದ ಮೇಲೆ ಎಎಸ್‌ಐಗೆ ಬಡ್ತಿ ಪಡೆದಿದ್ದರು.
Read More »ಡಿ.ಕೆ. ಶಿವಕುಮಾರ್ ಗೂ ನಮಗೂ ಹೊಂದಾಣಿಕೆಯಾಗಲ್ಲ. ,ಶೀಘ್ರವೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ: ಸಿ.ಎಂ. ಇಬ್ರಾಹಿಂ
ಬೆಂಗಳೂರು : ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಕಾಂಗ್ರೆಸ್ ಗೂ ನಮಗೂ ಇನ್ನೂ ಮುಗಿದ ಅಧ್ಯಾಯ ಎಂದು ಎಂ.ಎಲ್.ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು …
Read More »ಸಿದ್ದುಗೆ ಹೈಕಮಾಂಡ್ ಟಕ್ಕರ್
ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನೇಮಕ ಈಗ ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಕರ್ ನೀಡುವುದಕ್ಕಾಗಿಯೇ ಈ ನೇಮಕ ನಡೆದಿದೆ ಎಂಬ ಮಾತು ಕೇಳಿ ಬಂದಿದೆ. ಎಐಸಿಸಿಯಲ್ಲಿ ಸುದೀರ್ಘ ಕಾಲ ಕರ್ತವ್ಯ ನಿರ್ವಹಿಸಿರುವ ಹರಿಪ್ರಸಾದ್ ದಿಲ್ಲಿ ಅಂಗಣದಲ್ಲಿ ಪಳಗಿದ ರಾಜಕಾರಣಿ. ಕಾಂಗ್ರೆಸ್ ವರಿಷ್ಠರ ಜತೆಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಆದರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜತೆ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು,ಉಪಮೇಯರ್ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದೆ. ಅಂತು ಇಂತೂ ಪಾಲಿಕೆಯಲ್ಲಿ ನಗರಸೇವಕರ ಪರ್ವ ಶುರುವಾಗಿದ್ದು ಇಬ್ಬರು ಮಹಿಳೆಯರು ಅಧಿಕಾರ ನಡೆಸಲಿದ್ದು ಶೀಘ್ರದಲ್ಲೇ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ದಿನಾಂಕ ಪ್ರಕಟವಾಗಲಿದೆ. ಒಂದು ವರ್ಷದ ಹಿಂದೆ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪ ಮೇಯರ್ …
Read More »ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.
ವಿಜಯಪುರ: ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ವಿಜಯಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು. ಬೆಂಗಳೂರಿನಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಮುಖಂಡರು, ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವುದಕ್ಕೆ ಅವರನ್ನು ಅಭಿನಂದಿಸಿ ಮನವಿ ಪತ್ರ ಸಲ್ಲಿಸಿದರು. ದೇವನಹಳ್ಳಿ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿದೆ. ರಸ್ತೆಗಳು ಅಭಿವೃದ್ಧಿಯಾಗಬೇಕು. …
Read More »ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ನ ಕಟ್ಟಿಹಾಕಿದ ಯು ಮುಂಬಾ..!
ಬೆಂಗಳೂರು ಬುಲ್ಸ್ ವಿರುದ್ಧ ಯು-ಮುಂಬಾ 45-34 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಭಾರೀ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಅಂತಿಮ ಹಂತದಲ್ಲಿ ಸೋಲೊಪ್ಪಿಕೊಂಡಿತು. ಉಭಯ ತಂಡಗಳು ಮೊದಲಾರ್ಧದಲ್ಲಿ ಸಮಬಲದ ಹೋರಾಟ ನಡೆಸಿತ್ತು. ಬೆಂಗಳೂರು ಬುಲ್ಸ್ ಪರ ನಾಯಕ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ಪ್ರದರ್ಶನ ನೀಡಿದರೆ, ಯು-ಮುಂಬಾದಲ್ಲಿ ಅಭಿಷೇಕ್ ಸಿಂಗ್ ಮಿಂಚಿದರು. ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ 10 ರೈಡಿಂಗ್ ಪಾಯಿಂಟ್ ಕಲೆ …
Read More »ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ; ವಸ್ತ್ರಸಂಹಿತೆ ನಿಗದಿ ಬಗ್ಗೆ ಚಿಂಥನ- ಮಂಥನಕ್ಕೆ ಮುಂದಾದ ಪದವಿ ಪೂರ್ವ ಶಿಕ್ಷಣ ಇಲಾಖೆ
ಬೆಂಗಳೂರು: ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಭಾರಿ ಸದ್ದು ಮಾಡ್ತಿದೆ. ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆ ಗ್ರಾಸವಾಗಿದೆ. ತರಗತಿಗಳಲ್ಲಿ ಹಿಜಾಬ್ ಹಾಕ್ಕೊಂಡು ಮುಸ್ಲಿಂ ವಿದ್ಯಾರ್ಥಿನಿಯರು ಕುಳಿತುಕೊಳ್ಳೋದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಕಲು ವಿರೋಧಿಸ್ತಿದ್ದು, ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ವಸ್ತ್ರ ಸಂಹಿತೆ ವಿಚಾರದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಪದವಿ ಪೂರ್ವ …
Read More »
Laxmi News 24×7