Breaking News

ರಾಜಕೀಯ

ಕಳ್ಳ ಸಹೋದರರ ಸೆರೆ: ಐದು ಬೈಕ್‌ ಜಪ್ತಿ

ಕಲಬುರಗಿ: ನಗರದಲ್ಲಿ ಹಾಡು ಹಗಲೇ ಬೈಕ್‌ಗಳ ಕಳ್ಳತನದಲ್ಲಿ ತೊಡಗಿಸಿ ಕೊಂಡಿದ್ದ ಇಬ್ಬರು ಸಹೋದರರನ್ನು ಉತ್ತರ ಉಪವಿಭಾಗದ ಚೌಕ್‌ ಠಾಣೆ ಪೊಲೀಸರು ಬಂಧಿಸಿ, 3.5 ಲಕ್ಷ ರೂ. ಮೌಲ್ಯದ ಐದು ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. ಕಾಳಗಿ ತಾಲೂಕಿನ ಕೊರವಾರ ಗ್ರಾಮದ ವಿಕಾಸ ಹೊಸಮನಿ, ರಾಮಚಂದ್ರ ಹೊಸಮನಿ ಬಂಧಿತ ಸಹೋದರರು.   ಬುಧವಾರ ಬೆಳಗ್ಗೆ ತಾಜ್‌ಸುಲ್ತಾಪುರ ರಸ್ತೆಯಲ್ಲಿ ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಈ ಕಳ್ಳರು …

Read More »

ಕಳ್ಳರು ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಇಂದು ಗುರುವಾರ ಬೆಳಗಿನ ಜಾವ ಕಳ್ಳರು ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿಂಚೋಳಿ ಮತ್ತು ತಾಂತ್ರಿಕ ಮುಖ್ಯರಸ್ತೆಯಲ್ಲಿರುವ ಎಂಆರ್ ಎಫ್ ಟೈರ್ಸ್ ಮತ್ತು ಮಾನಸ ಸಿಮೆಂಟ್ ಅಂಗಡಿಗೆ ನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ಅನ್ನು ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಕಂಪನಿಯ ಅಂಗಡಿಗೆ ನುಗ್ಗಿದ ಕಳ್ಳರು ಶೆಟರ್ ಕೀಲಿ ಮುರಿದು ಒಳಗೆ ನುಗ್ಗಿದ ಕಳ್ಳರು ಟೈರ್ ಮತ್ತು ಟ್ಯೂಬುಗಳನ್ನು …

Read More »

ಲ್ಯಾಮಿಂಗ್ಟನ್ ಶಾಲೆಯಲ್ಲಿ ಸೋಂಕು ಪತ್ತೆ, ಶಾಲೆ ಸೀಲ್‍ಡೌನ್

ಕೊರೊನಾ ಮಹಾಮಾರಿ ಸೋಂಕು ಶಾಲೆಗೆ ಲಗ್ಗೆ ಇಟ್ಟಿದ್ದು, ಲ್ಯಾಮಿಂಗ್ಟನ್ ಶಾಲೆಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್‍ಡೌನ್ ಮಾಡಲಾಯಿತು. ಹೈಸ್ಕೂಲ್‍ನ ಕೆಲವು ವಿದ್ಯಾರ್ಥಿಗಳಿಗೆ, ಸೋಂಕು ಒಕ್ಕರಿಸಿದ್ದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಶಾಲೆಯನ್ನು ಮುಂದಿನ ಆದೇಶ ಬರುವವರೆಗೂ ಸೀಲ್‍ಡೌನ್ ಮಾಡಲಾಗಿದೆ. ಸ್ಥಳಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಶಾಲೆಯನ್ನು ಸೀಲ್‍ಡೌನ್ ಮಾಡಿದರು.

Read More »

ಬಿಜೆಪಿ ಶಾಸಕನ ಮೇಲೆ ಬಿತ್ತು ಕೇಸ್​..

ಬೆಳಗಾವಿ: ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೊನೆಗೂ ಕೇಸ್ ದಾಖಲಾಗಿದೆ. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಡೆದ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಭಾಗವಹಿಸಿದ್ದ ಶಾಸಕರು ಕೋವಿಡ್​ ನಿಯಮಗಳಿಗೆ ಗೋಲಿ ಹೊಡೆದಿದ್ದರು. ಸರ್ಕಾರದ ಕಟ್ಟುನಿಟ್ಟಿನ ಆದೇಶವಿದ್ದರು ಶಾಸಕರು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನದೆ ಸಾಕಷ್ಟು ಜನ ಜಮಾವಣೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೆ ಎಮ್ಮೆ ಓಡಿಸುವ …

Read More »

ನಾಳೆ ಮಧ್ಯಾಹ್ನ 1ಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವ ಕೋವಿಡ್ ನಿಯಂತ್ರಣ ಸಭೆ:

ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಕರ್ಪ್ಯೂ ( Night Curfew ) ಹಾಗೂ ವೀಕೆಂಡ್ ಕರ್ಪ್ಯೂ ( Weekend Curfew ) ಜಾರಿಗೊಳಿಸಿದೆ. ಈ ಆದೇಶಕ್ಕೆ ಬಿಜೆಪಿಯ ಅನೇಕ ಶಾಸಕರು, ಸಚಿವರು, ಕೇಂದ್ರ ಸಚಿವರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಆದೇಶ ವಾಪಾಸ್ ನಿರ್ಧರವನ್ನು ಸಿಎಂ ಬೊಮ್ಮಾಯಿ …

Read More »

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪಣಜಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಮುನ್ನ ಗೋವಾ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಪ್ರತಿಪಕ್ಷಗಳನ್ನು ಕಠುವಾಗಿ ಟೀಕಿಸಿದರು. . ಫಡ್ನವೀಸ್ ನೇರವಾಗಿ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿಯವರು ರೂಪಿಸಿದ ಯೋಜನೆಗಳಿಂದ ದೆಹಲಿಯಲ್ಲಿ ಪ್ರತಿ ಮನೆಗೂ ನೀರು ಪೂರೈಕೆಯಾಗುವಂತಾಗಿದೆ. ಇದರಿಲ್ಲಿ ಆಮ್ ಆದ್ಮಿ ಪಕ್ಷದ ಯಾವುದೇ ಪಾತ್ರವಿಲ್ಲ. ಇದರಿಂದಾಗಿ ಆಮ್ …

Read More »

ಸಂಕೇಶ್ವರ ಮಹಿಳೆ ಶೂಟೌಟ್ ಕೇಸ್: ಪುರಸಭೆ ಬಿಜೆಪಿ ಸದಸ್ಯನ ಬಂಧನ

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದ ಮಹಿಳೆಯ ಶೂಟೌಟ್ ಕೇಸ್‍ನಲ್ಲಿ ಪುರಸಭೆ ಸದಸ್ಯನೊರ್ವನಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹೌದು ಸಂಕೇಶ್ವರ ಪುರಸಭೆ ಬಿಜೆಪಿ ಸದಸ್ಯ ಉಮೇಶ ಕಾಂಬಳೆ ಬಂಧಿತ ಆರೋಪಿಯಾಗಿದ್ದು. ಜ.16ರಂದು ನಾಡ ಪಿಸ್ತೂಲ್‍ನಿಂದ ಶೈಲಾ ನಿರಂಜನ್ ಸುಭೇದಾರ್(56) ಎಂಬ ಮಹಿಳೆಯ ಎದೆಗೆ ಹಾಗೂ ಕೈಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬೀಸಿದ್ದ ಸಂಕೇಶ್ವರ ಪಿಎಸ್‍ಐ ಗಣಪತಿ ಕೊಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ, ಹವಾಲ್ದಾರ್ …

Read More »

ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಿಸಿದ ಸಮಾಜ ಸೇವಕಿ ಪ್ರೀತಿ ಕುಕಡೆ

ಬುಧವಾರ ದಂದು ಬೆಳಗಾವಿ ನಗರದ ರವಿವಾರ ಪೇಟೆಯಲ್ಲಿ ವಾಸಿಸುವ ಅಸಂಘಟಿತ ಕಾರ್ಮಿಕರಿಗೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘ ಅಧ್ಯಕ್ಷೆ ಪ್ರೀತಿ ಕುಕಡೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡಿದರು. ಬೆಳಗಾವಿ ಉತ್ತರ ಕ್ಷೇತ್ರದ ಜನಪ್ರಿಯ ಶಾಸಕ ಅನಿಲ ಬೆನಕೆ ಅವರ ಸಹಕಾರದೊಂದಿಗೆ ಪುಷ್ಪಂ ಆನ್ಲೈನ್ ಸರ್ವಿಸ್ ಸೆಂಟರ್ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಮಂಡಳ ವತಿಯಿಂದ ಕಳೆದ ವಾರ ನಗರದ ರವಿವಾರ ಪೇಟೆಯಲ್ಲಿ ವಾಸಿಸುವ ಅಸಂಘಟಿತ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರದ ಇ-ಶ್ರಮ್ …

Read More »

ಜನಸಾಮಾನ್ಯರ ಭಾವನೆಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ: ಸಚಿವ ಡಾ.ಕೆ.ಸುಧಾಕರ್

ನಾಳೆ ನಡೆಯಲಿರುವ ಸಭೆಯಲ್ಲಿ ವೈಜ್ಞಾನಿಕ ನೆಲೆಗಟ್ಟಿನಲ್ಲಿಯೇ ಮುಖ್ಯಮಂತ್ರಿಗಳು ಎಲ್ಲರ ಸಲಹೆ ಪಡೆದುಕೊಳ್ಳುತ್ತಾರೆ. ಜನಸಾಮಾನ್ಯರನ್ನು ಯಾವುದೇ ರೀತಿ ಸಂಕಷ್ಟದಲ್ಲಿ ಸಿಲುಕಿಸಲು ಮತ್ತು ಅವರ ಭಾವನೆಗಳಿಗೆ ವಿರೋಧ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಹೈವೋಲ್ಟೇಜ್ ಕೋವಿಡ್ ಸಭೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಜನರ ಹಿತ ದೃಷ್ಟಿಯಲ್ಲಿ, ಆರೋಗ್ಯದ ಹಿತ ದೃಷ್ಟಿಯಲ್ಲಿ ಏನು …

Read More »

ಕೊರೊನಾ ಪೀಕ್‍ಗೆ ಹೋಗುವ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚಿಸುತ್ತೇವೆ: ಸಚಿವ ಬಿ.ಸಿ.ನಾಗೇಶ್

ಈಗಾಗಲೇ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಕೊರೊನಾ ಪೀಕ್‍ಗೆ ಹೋಗುತ್ತೆ ಎಂದು ಬಹಳ ಜನ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ತಾಂತ್ರಿಕ ಸಲಹಾ ಸಮಿತಿ ಒಂದು ವೇಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲಿಯೂ ಶಾಲೆಗಳನ್ನು ಆರಂಭಿಸಲು ಪ್ರಯತ್ನಿಸುತ್ತೇವೆ. ನಾಳೆ ತಾಂತ್ರಿಕ ಸಲಹಾ ಸಮಿತಿ …

Read More »