Breaking News

ರಾಜಕೀಯ

ಜನತಾ ಕರ್ಫ್ಯೂ ಗೆ ಬೆಂಬಲಿಸಿದ ರಮೇಶ್ ಜಾರಕಿಹೊಳಿ

ಗೋಕಾಕ: ದೇಶಾದ್ಯಂತ ಕೊರೋನಾ ವೈರಸ್ ನ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನಾಳೆ, ಮಾರ್ಚ್ 22ರ ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಒಬ್ಬ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾಳೆ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು‌ ಜನರಲ್ಲಿ ಮನವಿ ಮಾಡಿದ್ದಾರೆ. …

Read More »

ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್.

… ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್… ಆಸ್ಟ್ರೇಲಿಯಾ, ದುಬೈ,ಮಸ್ಕತ್,ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ಪ್ರಯೋಗಾಲಯದಿಂದ ಖಚಿತ… ಧಾರವಾಡದಲ್ಲಿ ಓರ್ವ ವ್ಯಕ್ತಿಗೆ ಕೋರೋನಾ ಇದೆ ಎಂದು ದ್ರಡಪಡಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಧಾರವಾಡದ ಹೊಸ ಯೆಲ್ಲಾಪುರದಲ್ಲಿ ಹೈ ಅಲರ್ಟ್ ಘೋಷಣೆ..

Read More »

ಜನತಾ ಕರ್ಫ್ಯೂ: ಬಾಗಲಕೋಟೆ ಸಂಪೂರ್ಣ ಬೆಂಬಲ

ಬಾಗಲಕೋಟೆ: ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ಮಹಾಮಾರಿಗೆ ತಡೆಯೊಡ್ಡಲು ಪ್ರಧಾನಿ ನರೇಂದ್ರ ಮೋದಿಜನತಾ ಕರ್ಫ್ಯೂ ಆಚರಿಸುವಂತೆ ನೀಡಿದ್ದ ಕರೆಗೆ ಬಾಗಲಕೋಟೆಯಲ್ಲಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಅಂಗಡಿಗಳು ಸಂಪೂರ್ಣ ಮುಚ್ಚಿ ಬೆಂಬಲ ಸೂಚಿಸಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಪ್ಯೂ೯ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಜನ ಬರುತ್ತಿಲ್ಲ. ಟ್ಯಾಕಿ ಚಾಲಕರ ಸಂಘ, ಹೊಟೇಲ್, ಉಪಹಾರ …

Read More »

ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. …

Read More »

ಕೊರೊನಾ ವಿರುದ್ಧ ಭಾರತದ ಯುದ್ಧ- ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ

ದೇಶದಲ್ಲಿ ಕೊರೊನಾ ಸೋಂಕು 300ರ ಗಡಿದಾಟಿದೆ. ಸೋಂಕು ತಡೆಗಟ್ಟಲು ನಮಗೆ ನಾವೇ ಮುಂಜಾಗ್ರತೆ ವಹಿಸಿ ಮಹಾಮಾರಿ ಹಬ್ಬುವುದನ್ನ ನಿಯಂತ್ರಿಸಬೇಕಿದೆ. ಪ್ರಧಾನಿ ಮೋದಿ ದೇಶದ ಜನತೆಗೆ ಸ್ವಯಂ ಗೃಹಬಂಧನ ವಿಧಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇಶದ ಮೇಲೆ ಪರಕೀಯರು ದಾಳಿ ಮಾಡಿದ್ರೆ ಭಾರತೀಯರೆಲ್ಲರೂ ಹೇಗೆ ಎದೆಕೊಟ್ಟು ಹೋರಾಟ ಮಾಡಲು ಸಿದ್ಧವಾಗುವಿರೋ ಹಾಗೇ ಇಂದು ಕಾಣದ ಶತ್ರುವಿನ ವಿರುದ್ಧ ಜನತಾ ಕಫ್ರ್ಯೂ ವಿಧಿಸಿಕೊಂಡು ಹೋರಾಡಬೇಕಿರೋದು ದೇಶದ ಪ್ರಜೆಯಾಗಿ …

Read More »

ಮಹಾಮಾರಿ ಕರೋನಾ ವಿರುದ್ಧ ದೇಶಾದ್ಯಂತ ಜನತಾ ಕಫ್ರ್ಯೂ ಜಾರಿ, ಮನೆಸೇರಿದ ಜನ

ಬೆಂಗಳೂರು,ಮಾ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೋನ ಸೋಂಕು ಹಬ್ಬದಂತೆ ನಾಳೆ ಜನತಾ ಕಫ್ರ್ಯೂ(ಸ್ವಯಂ ನಿರ್ಬಂಧ) ಹಾಕಿಕೊಳ್ಳಲು ಪ್ರಧಾನಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಈಡಿ ಭಾರತವೇ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನತಾಕಫ್ರ್ಯೂ ಘೋಷಿಸಿ ರಾಷ್ಟ್ರದ ಜನತೆ ಸಹಕರಿಸುವಂತೆ ಮನವಿ ಮಾಡಿದ್ದರು. ಪ್ರಧಾನಿ ಮನವಿಗೆ …

Read More »

ಕೊರೊನಾ ವೈರಸ್‌ನಿಂದ ಕೆಎಸ್‌ಆರ್‌ಟಿಸಿಗೆ 13 ಕೋಟಿ ನಷ್ಟ..!

ಬೆಂಗಳೂರು, ಮಾ.21- ಮಾರಕ ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 13 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ. ಮಾ.1ರಿಂದ ನಿನ್ನೆಯವರೆಗೆ ಕೆಎಸ್‍ಆರ್‍ಟಿಸಿ ಬಸ್ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ 13,35,33,520 ರೂಪಾಯಿ ನಷ್ಟವಾಗಿದೆ. ನಿನ್ನೆ ಒಂದೇ ದಿನ ಎರಡುವರೆ ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ ಅಧಿಕೃತ ಪ್ರಕಟಣೆ ತಿಳಿಸಿದೆ. ಕಾಯ್ದಿರಿಸಿದ ಟಿಕೇಟ್ ರದ್ಧತಿ, ಬಸ್ ಸಂಚಾರ ಸ್ಥಗಿತ ಮತ್ತಿತರ ಕಾರಣಗಳಿಂದ …

Read More »

ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದರು. ಬೆಂಗಳೂರಿನಲ್ಲಿರುವ ಮೊಯ್ಲಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸತೀಶ ಜಾರಕಿಹೊಳಿ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಲಕ್ಷ್ಮಣರಾವ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. …

Read More »

ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು

ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು  :ಶೀಘ್ರದಲ್ಲಿಯೇ ಬೆಳಗಾವಿಯಲ್ಲಿ ಕೊರೋನಾ ಪ್ರಯೋಗಾಲಯ/ಬೆಳಗಾವಿಯಲ್ಲಿ ಆರೋಗ್ಯ ಸಚಿವ ಶ್ರೀರಾಮಲು ಹೇಳಿಕೆ/ ಡಿಸಿ ಕಚೇರಿ ಆವರಣದಲ್ಲಿ ಸಚಿವರಿಗೆ ಸ್ಕ್ರೀನಿಂಗ್ ಟೆಸ್ಟ್ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಯನ್ನು ಹಂಚಿಕೊಂಡಿರುವ ಕರ್ನಾಟಕದ ಬೆಳಗಾವಿಯಲ್ಲಿ ಕೊರೋನಾ ಸೊಂಕಿಗೆ ಸಂಬಂಧಪಟ್ಟ ಪ್ರಯೋಗಾಲಯವನ್ನು ಶೀಘ್ರದಲ್ಲಿಯೇ ಆರಂಭಿಸುತ್ತೇವೆ ಎಂದು,ಆರೋಗ್ಯ ಸಚಿವ ಶ್ರೀರಾಮಲು ಅವರು ಬೆಳಗಾವಿಯಲ್ಲಿಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವ ಮುನ್ನ ಮಾಧ್ಯಮಗಳೊಂದಿಗೆ …

Read More »