Breaking News
Home / ರಾಜಕೀಯ (page 2)

ರಾಜಕೀಯ

ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಬೇಸಗೆ ಝಳದಲ್ಲಿ ಬೇಯುತ್ತಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಕಾವೂ ಹೆಚ್ಚಿದ್ದು, ರಾಜಧಾನಿಯ ಗದ್ದುಗೆ ಹಿಡಿಯಲು ನಡೆಯುತ್ತಿರುವ ಗುದ್ದಾಟವೂ ಬಿರುಸಾಗಿಯೇ ಇದೆ. ಕಳೆದೆರಡು ಲೋಕಸಭೆ ಚುನಾವಣೆಗಳಲ್ಲಿ ಎಲ್ಲ 7 ಕ್ಷೇತ್ರಗಳಲ್ಲಿಯೂ ವಿಜಯ ಪತಾಕೆ ಹಾರಿಸಿದ್ದ ಬಿಜೆಪಿ ಈ ಬಾರಿಯೂ ಗೆಲುವಿನ ನಗೆ ಬೀರುವ ಹುಮ್ಮಸ್ಸಿನಲ್ಲಿದೆ. ಇತ್ತ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದರೂ ಕಳೆದ 10 ವರ್ಷಗಳಿಂದಲೂ ಲೋಕಸಭೆಯ ಒಂದೂ ಸ್ಥಾನವನ್ನೂ ಗೆಲ್ಲಲಾಗದ ಆಮ್‌ ಆದ್ಮಿ ಪಕ್ಷ ಈ …

Read More »

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೆಸಿಇಟಿ -2024ರ ಪರೀಕ್ಷೆಯಲ್ಲಿ ಆಗಿರುವ ಪಠ್ಯಂತರ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಎ. 27ರ ಒಳಗೆ ಸೂಕ್ತ ಪರಿಹಾರ ಘೋಷಿಸದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ಜತೆಗೆ ಕೆಇಎಗೆ ಮುತ್ತಿಗೆ ಹಾಗೂ ಕೋರ್ಟ್‌ ಮೊರೆ ಹೋಗಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನಿರ್ಧರಿಸಿದೆ.   ಮಲ್ಲೇಶ್ವರದ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ಆವರಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾಲೋಚನ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ …

Read More »

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು ಪಾಲಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನು ಆದೇಶವನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಒಂದು ವಾರದೊಳಗೆ ಶರಣಾಗುವಂತೆ ಶರಣರಿಗೆ ಸೂಚಿಸಿದೆ. ಕಳೆದ ವರ್ಷ ನ. 8ರಂದು ಕರ್ನಾಟಕ ಹೈಕೋರ್ಟ್‌ ಶರಣರಿಗೆ ಜಾಮೀನು ನೀಡಿತ್ತು. ಈಗ ಈ ಆದೇಶವನ್ನು 4 ತಿಂಗಳ ಕಾಲ ಅಮಾನತಿನಲ್ಲಿಟ್ಟಿರುವ ಸುಪ್ರೀಂ ಕೋರ್ಟ್‌, 4 ತಿಂಗಳೊಳಗೆ ಪ್ರಮುಖ ಸಾಕ್ಷ್ಯಗಳ ವಿಚಾರಣೆ ನಡೆಸಬೇಕು …

Read More »

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು ತಿಂಗಳಿನಿಂದ ರಾಜಕೀಯ ನಾಯಕರು, ಅಭ್ಯರ್ಥಿಗಳು ಪ್ರಚಾರ ಕಣಕ್ಕಿಳಿದು ತಂತಮ್ಮ ಸಾಮರ್ಥ್ಯ, ಸಾಧನೆ, ಎದುರಾಳಿಯ ಅಸಾಮರ್ಥ್ಯ, ವೈಫ‌ಲ್ಯಗಳನ್ನು ಹೇಳುವ ಮೂಲಕ ಮತದಾರರ ಮನವೊಲಿಸಲು ಶತಪ್ರಯತ್ನ ನಡೆಸಿದ್ದರು. ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿ ರಂಗ ಪ್ರಚಾರಕ್ಕೆ ಬುಧವಾರ ತೆರೆ ಬೀಳ ಲಿದ್ದು, ಧ್ವನಿವರ್ಧಕ, ಪ್ರಚಾರ ವಾಹನ, ಭಾಷಣ, ಬಹಿರಂಗ ಸಮಾವೇಶ, …

Read More »

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದ್ದು, ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ ಚಾಲನೆ ನೀಡಲಾಗಿದೆ. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಗಿದೆ. ಬಳಿಕ ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ …

Read More »

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ?

ಬೆಂಗಳೂರು: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು ಚಟವಾಗಿ ಮಾರ್ಪಟ್ಟಿದೆ ಎಂದರೆ ಖಂಡಿತ ತಪ್ಪಾಗಲಾರದು. ಮದ್ಯ ಪ್ರಿಯರಿಗೆ ಇದನ್ನು ಸೇವಿಸುವುದರಿಂದ ಅದೇನೋ ಒಂದು ರೀತಿಯ ಖುಷಿ, ಉತ್ಸಾಹ ಲಭಿಸುತ್ತದೆ. ಕೆಲವರು ಆಲ್ಕೋಹಾಲ್ ಸೇವಿಸುವುದನ್ನು ದಿನನಿತ್ಯ ಅಭ್ಯಾಸ ಮಾಡಿಕೊಂಡರೆ, ಇನ್ನೂ ಕೆಲವರು ಟಾನಿಕ್ ರೀತಿ ರಾತ್ರಿಯ ವೇಳೆ ಕುಡಿಯುತ್ತಾರೆ. ಈ ಮಧ್ಯೆ ಇತ್ತೀಚಿನ ವರದಿಯೊಂದು ಎಷ್ಟು ಪ್ರಮಾಣದಲ್ಲಿ ಕುಡಿಯುವುದರಿಂದ ಲಿವರ್ ಆರೊಗ್ಯ ಕಾಪಾಡಿಕೊಳ್ಳಬಹುದು ಹಾಗೂ ಎಷ್ಟು …

Read More »

HSRP ‘ ನಂಬರ್ ಪ್ಲೇಟ್ ಗುಡುವು ವಿಸ್ತರಣೆ ಇಲ್ಲ

ಬೆಂಗಳೂರು: ವಾಹನಗಳಿಗೆ ಹೈಸೆಕ್ಯುರಿಟಿ ನಂಬ‌ರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾಗಿರುವ ಗಡುವನ್ನು ಮತ್ತೆ ವಿಸ್ತರಣೆ ಮಾಡುವ ಅವಕಾಶ ಇಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಎಚ್‌ಎಸ್‌ಆರ್‌ಪಿ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ್ದು ಇನ್ನು ಮುಂದೆ ಆದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ.   ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು …

Read More »

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಮಂಗಳೂರು: ನಗರದ ಅತ್ತಾವರದ ವಸತಿಗೃಹವೊಂದರ ಬಳಿಯಿಂದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿ ಬಸವರಾಜ್‌ ಅಲ್ಲಪ್ಪ ಮಡಿವಾಳರ್‌ಗೆ ಮಂಗಳೂರಿನ ನ್ಯಾಯಾಲಯ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2022ರ ಡಿ.13ರಂದು ಬಸವರಾಜ್‌ ಬಾಲಕಿಯನ್ನು ಪುಸಲಾಯಿಸಿ ಧರ್ಮಸ್ಥಳಕ್ಕೆ ಕರೆಯಿಸಿ ಅಲ್ಲಿಂದ ಬಸ್‌ನಲ್ಲಿ ಬಿಜಾಪುರಕ್ಕೆ ಕರೆದೊಯ್ದಿದ್ದ.ಅಲ್ಲಿಂದ ತಿರುಪತಿಗೆ ಕರೆದೊಯ್ದು ಡಾಬಾವೊಂದರಲ್ಲಿ ಕೆಲಸಕ್ಕೆ ಸೇರಿಸಿ ರೂಮ್‌ನಲ್ಲಿ ವಾಸವಿದ್ದ. ಈ ಸಂದರ್ಭ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಲವು ಬಾರಿ ಅತ್ಯಾಚಾರ ನಡೆಸಿ ಜೀವ …

Read More »

ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

2024: ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್‌ ಅನ್ನು ನೇತುಹಾಕಲಾಗುವುದು. ಏ. 26ರ ಮತದಾನದ ದಿನಕ್ಕೆ ಮಾತ್ರ ಈ ನಿರ್ಬಂಧ ಅನ್ವಯವಾಗಲಿದೆ. 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಇದು ಅನ್ವಯವಾಗಲಿದೆ. ಮತ ಹಾಕದೆ ಅರಮನೆ ನೋಡಲು ಬಂದರೆ ಪ್ರವೇಶ ನಿರಾಕರಿಸಲು ಚಿಂತನೆ ನಡೆಸಲಾಗಿದೆ.ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.

Read More »

ಕುಡಿಯುವ ನೀರಿಗಾಗಿ ಹಲ್ಲೆ ; ಐಪಿಎಸ್ ಅಧಿಕಾರಿ ಸೇರಿ 14 ಜನರ ಮೇಲೆ ಪ್ರಕರಣ ದಾಖಲು

ಬೆಳಗಾವಿ : ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಬಾವಿಯ ಕುಡಿಯುವ ನೀರು ಬಳಕೆ ಮಾಡಿರುವ ಕುರಿತಂತೆ ಹಲ್ಲೆ, ಬೇದರಿಕೆಯ ಆರೋಪದ ಮೇಲೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಗಳಿ ಗ್ರಾಮದ ಸೈದಪ್ಪಾ ಗಡಾದಿ ಕುಟುಂಬದವರು ಸಾರ್ವಜನಿಕರ ಬಾವಿಯ ನೀರನ್ನು ಬಳಕೆ ಮಾಡುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರು …

Read More »