Breaking News
Home / ರಾಜಕೀಯ (page 20)

ರಾಜಕೀಯ

ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’

ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ಬೆಂಗಳೂರು : ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ …

Read More »

ಇಸ್ಟೀಟ್​ ಅಡ್ಡೆ ಮೇಲೆ ದಾಳಿ: ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಕೋಲಾರ, ಜೂ.12: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಇಸ್ಪೀಟ್​(Gambling) ಆಡುತ್ತಿದ್ದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ತನ್ನ ಜೀವವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ನರಸಿಂಹ (45) ಮೃತ ರ್ದುದೈವಿ. ಗುಡಸವಾರ ಪಲ್ಲಿ ಗ್ರಾಮದ ಕೊಂಡರೆಡ್ಡಿಚೆರವು ಎನ್ನುವ ಕೆರೆಯ ದಡದಲ್ಲಿ ಇಸ್ಪೀಟ್​ ಅಡ್ಡೆ ನಡೆಯುತ್ತಿದ್ದು, ಅಲ್ಲಿ ಹತ್ತು ಹನ್ನೆರಡು ಜನ ಇಸ್ಪೀಟ್​ ಆಡುತ್ತಿದ್ದರು. ಈ ವೇಳೆ ಪೊಲೀಸರು ಬರ್ತಿದ್ದಾರೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಅಲ್ಲಿದ್ದವರೆಲ್ಲ ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದಾರೆ. ಅದರಲ್ಲಿ …

Read More »

ರೇಣುಕಾಸ್ವಾಮಿ ಹತ್ಯೆ; ಕಠಿಣ ಶಿಕ್ಷೆಗೆ ಒತ್ತಾಯ

ಹುಬ್ಬಳ್ಳಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ವತಿಯಿಂದ ಆಗ್ರಹಿಸಲಾಯಿತು. ನಗರದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್‌ ಕಚೇರಿ ಸಿಬ್ಬಂದಿಗೆ ಸಂಘಟನೆಯ ಮುಖಂಡರು ಈ ಕುರಿತು ಬುಧವಾರ ಮನವಿ ಸಲ್ಲಿಸಿದರು. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ₹1 ಕೋಟಿ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಯುವ …

Read More »

ತೋಟದಲ್ಲಿ ಮೊಸಳೆ ಕುಟುಂಬ

ಚಿಕ್ಕೋಡಿ: ತಾಲ್ಲೂಕಿನ ಕಲ್ಲೋಳ ಗ್ರಾಮದ ಹೊರ ವಲಯದಲ್ಲಿ ಕೃಷ್ಣಾ ಹಾಗೂ ದೂಧಗಂಗಾ ನದಿ ದಡದ ಗ್ರಾಮಗಳಲ್ಲಿ ಮತ್ತೆ ಮೊಸಳೆ ಉಪಟಳ ಹೆಚ್ಚಾಗಿದೆ. ಪ್ರತಿ ಬಾರಿ ಮುಂಗಾರು ಮಳೆ ಆರಂಭಕ್ಕೆ ಕೃಷ್ಣಾ ನದಿ ನೀರಿನೊಂದಿಗೆ ಹರಿದುಬರುವ ಮೊಸಳೆಗಳು ಗ್ರಾಮಸ್ಥರ ನಿದ್ದೆಗೆಡಿಸಿವೆ. ಸಂಗಮ ಸ್ಥಳದಿಂದ 500 ಮೀಟರ್ ದೂರದಲ್ಲಿ ಒಂದು ಹೆಣ್ಣು ಹಾಗೂ ಒಂದು ಗಂಡು ಮೊಸಳೆ ಪತ್ತೆಯಾಗಿವೆ. ಅಲ್ಲದೇ ಏಳು ಮೊಸಳೆ ಮರಿಗಳು ಕೂಡ ಪತ್ತೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. 5-6 …

Read More »

ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!

ಚನ್ನಮ್ಮನ ಕಿತ್ತೂರು: ಕಾಲು ದಾರಿ ಮೇಲೆ ಮುಷ್ಟಿಗಾತ್ರದ ಚೂಪನೆಯ ಕಲ್ಲುಗಳು ಎದ್ದು ಕುಳಿತಿವೆ. ಸ್ಮಶಾನಕ್ಕೂ ಇದೇ ದಾರಿ ಅವಲಂಬನೆ. ಮಳೆಯಾದರೆ ಸಾಕು ಮನೆಯೊಳಗೆ ನೀರು ನುಗ್ಗಿ ಬದುಕೇ ಯಾತನಾಮಯ ಆಗುತ್ತದೆ. ಇದು ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿಮ್ಮಾಪುರ ಗ್ರಾಮದ ಅಂಬೇಡ್ಕರ್ ಕಾಲೊನಿ ಮಕ್ಕಳು ಮತ್ತು ನಾಗರಿಕರ ಗೋಳು.   ‘ಕಾಲೊನಿಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಮಕ್ಕಳು ರಸ್ತೆ ಮೇಲೆ ಎದ್ದು …

Read More »

ಕುಡಿಯುವ ನೀರು ಪೂರೈಕೆಗೆ ₹8.40 ಕೋಟಿ ಮಂಜೂರು

ಚಿಕ್ಕೋಡಿ: ‘ತಾಲ್ಲೂಕಿನ ನವಲಿಹಾಳ, ಸಂಕನವಾಡಿ ಹಾಗೂ ತಪಕರವಾಡಿ ಗ್ರಾಮಗಳ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರದಿಂದ ₹8.40 ಕೋಟಿ ಅನುದಾನ ಮಂಜೂರು ಮಾಡಿಸಿಕೊಂಡು ಬರಲಾಗಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಯೋಜನೆಗೆ ಸಂಬಂಧಿಸಿದ ಆದೇಶ ಪ್ರತಿ ವಿತರಿಸಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರಯತ್ನ …

Read More »

ಬೈಕ್‌ ಡಿಕ್ಕಿ: ಸವಾರ ಸಾವು

ಹಂದಿಗುಂದ: ಸಮೀಪದ ಪಾಲಬಾವಿಯಲ್ಲಿ ಸೋಮವಾರ ರಾತ್ರಿ ಬೈಕುಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಒಬ್ಬ ಮೃತಪಟ್ಟಿದ್ದಾನೆ. ಸುಲ್ತಾನಪುರ ಗ್ರಾಮದ ರಾಘವೇಂದ್ರ ರಾಮಪ್ಪ ಹಾದಿಮನಿ (28) ಮೃತ ವ್ಯಕ್ತಿ. ಹಾರೂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪಾಲಬಾವಿ ಗ್ರಾಮದಲ್ಲಿ ಸೋಮವಾರ ರಾತ್ರಿ 8 ಗಂಟೆಗೆ ಅಪಘಾತ ನಡೆದಿದೆ. ಹಿಂಬದಿಯ ಸವಾರ ಸೌರಭ ತುಕಾರಾಮ ಮಾದರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾರೂಗೇರಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾರೂಗೇರಿ ಸಿಪಿಐ ರವಿಚಂದ್ರನ ಬಡಪಕೀರಪ್ಪನವರ, ಪಿಎಸ್‌ಐ …

Read More »

ಗ್ಯಾರಂಟಿಗಳು ನಿಲ್ಲಲ್ಲ: ಅಶೋಕ್‌ಗೆ ಸಿಎಂ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಮತ್ತೆ ವ್ಯಂಗ್ಯಾಸ್ತ್ರ ಪ್ರಯೋಗ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಶೋಕ್‌ ಆಗಾಗ ತಮ್ಮ ಅಜ್ಞಾನ ಪ್ರದರ್ಶನ ಮಾಡುತ್ತ ರಾಜ್ಯದ ಜನರಿಗೆ ಮನೋರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್‌ಗೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ ಎಂದು ಟೀಕಿಸಿದ್ದಾರೆ.   ಜತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ದೃಢವಾಗಿ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ಅವರು ತೆರೆ ಎಳೆದಿದ್ದಾರೆ. ಸಾಲ ಮಾಡಿ ಸಂಬಳ ಕೊಡುವ …

Read More »

ಇಳಕಲ್ | ಶೌಚಾಲಯ ನಿರ್ಮಾಣಕ್ಕೆ ಆಗ್ರಹ: ಚೊಂಬು ಹಿಡಿದು ಪ್ರತಿಭಟನೆ

ಇಳಕಲ್: ಇಲ್ಲಿಯ ಗೌಳೇರಗುಡಿ (ನವನಗರ ) ಯಲ್ಲಿ ವೈಯಕ್ತಿಕ ಶೌಚಾಲಯ ಹಾಗೂ ಸಾರ್ವಜನಿಕ ಶೌಚಾಲಯಗಳಿಲ್ಲ. ಹೀಗಾಗಿ ಬಹಿರ್ದೆಸೆಗೆ ತೊಂದರೆಯಾಗಿದೆ ಎಂದು ಪ್ಲಾಸ್ಟಿಕ್‌ ಚೊಂಬು (ತಂಬಿಗೆ) ಹಿಡಿದು ಮಹಿಳೆಯರು ಮಂಗಳವಾರ ಪ್ರತಿಭಟನೆ ಮಾಡಿದರು. ಈವರೆಗೆ ನವನಗರದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಮಹಿಳೆಯರು ಬಹಿರ್ದೆಸೆಗೆ ಹೋಗುತ್ತಿದ್ದರು. ಈಗ ಆ ಸ್ಥಳದ ಮಾಲೀಕ ಅಲ್ಲಿ ನಿವೇಶನಗಳನ್ನು ಮಾಡಿ, ಬೇಲಿ ಹಾಕಿದ್ದರಿಂದ ಬಹಿರ್ದೆಸೆಗೆ ಹೋಗಲು ತೊಂದರೆಯಾಗಿದೆ. ಒಳಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಲು …

Read More »

ನನಗೇನು ಗೊತ್ತಿಲ್ಲ, ನಾನೇನು ಮಾಡಿಲ್ಲ: ವಕೀಲರ ಮುಂದೆ ನಟ ದರ್ಶನ್ ಕಣ್ಣೀರು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ದರ್ಶನ್ ಅವರನ್ನು ವಕೀಲ ಅನಿಲ್ ಭೇಟಿ ಮಾಡಿದರು. ಈ ವೇಳೆ ದರ್ಶನ್ ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಂಬಂಧಿ ಸುಶಾಂತ್ ದರ್ಶನ್ ಅವರನ್ನು ಭೇಟಿಯಾದರು. ನಂತರ ಸಂಬಂಧಿ ಫೋನ್ ಮೂಲಕ ದರ್ಶನ್ ಪತ್ನಿ …

Read More »