Breaking News
Home / ರಾಜಕೀಯ (page 200)

ರಾಜಕೀಯ

ಅಮಟೂರು ಬಾಳಪ್ಪನ ರಾಜ್ಯ ಮಟ್ಟದ ಸರ್ಕಾರಿ ಉತ್ಸವ ಆಚರಣೆ ಕನಸಾಗಿಯೇ ಉಳಿದಿರುವುದು ಗ್ರಾಮಸ್ಥರಲ್ಲಿ ನೋವು

ಬೈಲಹೊಂಗಲ: ಐತಿಹಾಸಿಕವಾಗಿ ಕಿತ್ತೂರು ಸಂಸ್ಥಾನದೊಂದಿಗೆ ಬೆಸೆದುಕೊಂಡಿರುವ ತಾಲ್ಲೂಕಿನ ಅಮಟೂರು ಗ್ರಾಮದಲ್ಲಿ ಡಿ. 4ರಂದು ವೀರಕೇಸರಿ ಅಮಟೂರು ಬಾಳಪ್ಪನ ಉತ್ಸವ ಆಚರಣೆ ನಡೆಯಲಿದೆ. ಆದರೆ ಅಮಟೂರು ಬಾಳಪ್ಪನ ರಾಜ್ಯ ಮಟ್ಟದ ಸರ್ಕಾರಿ ಉತ್ಸವ ಆಚರಣೆ ಕನಸಾಗಿಯೇ ಉಳಿದಿರುವುದು ಗ್ರಾಮಸ್ಥರಲ್ಲಿ ನೋವು ಉಂಟು ಮಾಡಿದೆ.   ಗ್ರಾಮಸ್ಥರಲ್ಲಿ ನಿರಾಸೆ: ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಉತ್ಸವದಂತೆ ಅಮಟೂರು ಬಾಳಪ್ಪನ ಉತ್ಸವ ಆಚರಣೆ ನಡೆಯುತ್ತದೆ. ಸಾಕಷ್ಟು ಅನುದಾನ ಬರುತ್ತದೆ. ಗ್ರಾಮದಲ್ಲಿ ಬಾಳಪ್ಪನ …

Read More »

ಕಾಡಾನೆ ದಾಳಿಗೆ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಬಲಿ

ಹಾಸನ : ಕಾಡಾನೆ ದಾಳಿಗೆ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಬಲಿಯಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಇಂದು ನಡೆದಿದೆ. ಅರ್ಜುನ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ವೇಳೆ ಘಟನೆ ಸಂಭವಿಸಿದೆ. ಅಂಬಾರಿ ಹೊತ್ತು ಗಾಂಭೀರ್ಯದ ನಡೆಯೊಂದಿಗೆ ಅರ್ಜುನಅರಣ್ಯ ಇಲಾಖೆ ಸಿಬ್ಬಂದಿ ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಆ ಆನೆ ಅರ್ಜುನನ ಮೇಲೆ ದಾಳಿ ನಡೆಸಿದೆ. ಒಂಟಿ …

Read More »

ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ …

Read More »

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹ

ಬೆಳಗಾವಿ : ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದು ರಾತ್ರಿಯೇ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ಬೀದಿಗಳಿಯಬೇಕಾಗುತ್ತದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ‌ ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಸ್ಸಿ ಮೋರ್ಚಾ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಅವರ …

Read More »

ಅರಣ್ಯದಲ್ಲಿ ಶೇ.40ರಷ್ಟು ಕಳೆ, ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿರುವುದು ನಿಜ : ಈಶ್ವರ ಖಂಡ್ರೆ

ಬೆಳಗಾವಿ/ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕಳೆ ಹೆಚ್ಚಾಗುತ್ತಿರುವುದರಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿದ್ದು, ಕಳೆ ತೆರವು ಮಾಡಿ ವನ್ಯಜೀವಿಗಳ ಸಂಚಾರ ಮತ್ತು ಆಹಾರ ಲಭ್ಯತೆ ಹೆಚ್ಚಿಸಲು ಬೇಕಾದ ಎಲ್ಲ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ. ಅದೇ ರೀತಿ ಆನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಶಾಶ್ವತ ಪರಿಹಾರವಾಗಿದ್ದು, ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಕ್ರಮವಹಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಪ್ರಶ್ನೆಗೆ …

Read More »

ಬಡ್ಡಿ ವಸೂಲಿ, ಜೀವ ಬೆದರಿಕೆ ಮೂವರ ವಿರುದ್ಧ ದೂರು

ಬಡ್ಡಿ ವಸೂಲಿ, ಜೀವ ಬೆದರಿಕೆ ಮೂವರ ವಿರುದ್ಧ ದೂರು ಗೋಕಾಕ: ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ತಾವು 2018-19ರಲ್ಲಿ ಪಡೆದಿದ್ದ ₹3. 5 ಲಕ್ಷ ಸಾಲಕ್ಕೆ ಅಸಲು-ಬಡ್ಡಿ ಸೇರಿಸಿ ಒಟ್ಟು ₹17 ಲಕ್ಷ ಪಾವತಿಸಿದ್ದರೂ ಸಾಲ ಮತ್ತು ಬಡ್ಡಿವಸೂಲಿಗೆ ಮನೆಗೆ ಬಂದು ಜೀವ ಬೆದರಿಕೆ ಹಾಕಿದ್ದಾರೆ . ಎಂದು ಮೂವರ ವಿರುದ್ಧ ಗೋಕಾಕ್ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗಪ್ಪ ಸಿದ್ದಪ್ಪ ಮಂಗಿ ಮತ್ತು ಸಹೋದರರಾದ ಸಿದ್ದಪ್ಪ ಮತ್ತು …

Read More »

ರಮೇಶ್​ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ , ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಪ್ರಕರಣ ದಾಖಲ

ಬೆಳಗಾವಿ : ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಆಪ್ತ ಹಾಗೂ ಬಿಜೆಪಿ ಮುಖಂಡನ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸೋಮವಾರ ಸಂಜೆ ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಐದಾರು ಜನರು ಏಕಾಏಕಿ ಬಂದು, ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪೃಥ್ವಿ ಸಿಂಗ್ ಅವರು ಕೆಲವರ ಜೊತೆಗೆ ಮಾತನಾಡುತ್ತಿರುವುದು ಅವರ ಮನೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ತಕ್ಷಣ ಪೃಥ್ವಿ …

Read More »

ಭವಾನಿ ಸಿಟ್ಟಿನಿಂದ ಮಾತನಾಡಿದ್ದಾರೆ, ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ: ಹೆಚ್ ಡಿ ರೇವಣ್ಣ

ಬೆಳಗಾವಿ : ಭವಾನಿ ಅವರ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ. ತಾವಿದ್ದ ಕಾರಿಗೆ ಗುದ್ದಿದ ಬೈಕ್ ಸವಾರನಿಗೆ ಭವಾನಿ ರೇವಣ್ಣ ಬೈದಿರುವ ಬಗ್ಗೆ ಪ್ರತಿಕ್ರಿಯಿಸಿ, ಬೈಕ್ ಸವಾರನೇ ಒಂದು ಬದಿಯಿಂದ ಬಂದು ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು?. ಅವರು ಏನೂ ಅಹಂಕಾರದಿಂದ ಮಾತಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಹೀಗಾಗಿ ಅವರು ಸಿಟ್ಟಲ್ಲಿ ಮಾತನಾಡಿದ್ದಾರೆ. …

Read More »

ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ

ಬೆಳಗಾವಿ/ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ ನಡೆಸಲಾಯಿತು. ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 18 ಮಸೂದೆ ಮಂಡನೆ ಸಂಬಂಧ ಚರ್ಚೆ ನಡೆಸಲಾಯಿತು. ಮುಂದಿನ ವಾರದಿಂದ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಮಧ್ಯಾಹ್ನದ ಬಳಿಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬರ ನಿರ್ವಹಣೆ ಸಂಬಂಧ ಸದನಕ್ಕೆ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿಪಕ್ಷಗಳು …

Read More »

ನಿಷೇಧದ ನಡುವೆ ಎಂಇಎಸ್ ಮುಖಂಡರ ಪ್ರತಿಭಟನೆ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಈ ನಡುವೆ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘೋಷಣೆ ಕೂಗುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿನ ಹುತಾತ್ಮ ಸ್ಮಾರಕಕ್ಕೆ ಭೇಟಿ ನೀಡಿದ ಎಂಇಎಸ್ ನಾಯಕರು, ಗೌರವ ಸಲ್ಲಿಸಿದರು. ನಿಷೇಧಾಜ್ಞೆ ಹೇರಿದ್ದರಿಂದ ಕರ್ನಾಟಕದಲ್ಲಿ ಅನುಮತಿ ಸಿಗದ ಹಿನ್ನೆಲೆ ಮಹಾರಾಷ್ಟ್ರದ ಶಿನೊಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಶಿನೊಳ್ಳಿಗೆ ತೆರಳುವ ಮುನ್ನ ಹುತಾತ್ಮರ ಸ್ಮಾರಕಕ್ಕೆ ಎಂಇಎಸ್ ನಾಯಕರು …

Read More »