Breaking News
Home / ರಾಜಕೀಯ (page 203)

ರಾಜಕೀಯ

SC/ST ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್ ಎಲ್ಲರಿಗೂ ಸಿಗಲಿದೆ ‘ಪ್ರೋತ್ಸಾಹ ಧನ’

ಬೆಂಗಳೂರು: ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಕಾರ್ಯಕ್ರಮ ಸಂಬಂಧ ಹಾಲಿ ಇರುವ ಆದೇಶವನ್ನು ಮಾರ್ಪಡಿಸಿ ಆದೇಶವನ್ನು ಹೊರಡಿಸಿದೆ. ಹೊಸ ಆದೇಶದಲ್ಲಿ ಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ ಜಾತಿಯ ವಿದ್ಯಾರ್ಥಿಗಳು ಶೇ.60 ರಿಂದ ಶೇ.74.99 ಅಂಕ ಪಡೆದಲ್ಲಿ ರೂ.7000/-ಗಳನ್ನು ಮತ್ತು ಶೇ.75 ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.15000/- ಗಳನ್ನು ಒಂದು …

Read More »

ಬಿಜೆಪಿ ಗ್ಯಾರಂಟಿ ಘೋಷಿಸಿದ್ದು ಅದರ ಗೆಲುವಿಗೆ ಕಾರಣ: ಎಂ.ಬಿ ಪಾಟೀಲ್

ವಿಜಯಪುರ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿರೋಧಿಸಿದವರೇ ಗ್ಯಾರಂಟಿ ಘೋಷಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪು ಒಪ್ಪಲೇಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ್ದಾರೆ.   ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಕೆಲಸ ಮಾಡಿದೆ ಎಂದಾಯಿತಲ್ಲವೇ. ಇದೀಗ ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು ಕೂಡ ಗೆಲುವಿಗೆ ಕಾರಣ ಅಲ್ಲವೇ ಎಂದು ಪ್ರಶ್ನಿಸಿದರು. ಮೂರು ರಾಜ್ಯಗಳಲ್ಲಿ ಬಿಜೆಪಿ …

Read More »

ಚಳಿಗಾಲದ ಅಧಿವೇಶನಸೋಮವಾರ ಪ್ರಾರಂಭವಾಗಲಿದ್ದು, ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ “ಕೆಟ್ಟ ಫಲಿತಾಂಶ” ಎದುರಿಸಬೇಕಾಗುತ್ತದೆ :

ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಲಿದ್ದು, ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ “ಕೆಟ್ಟ ಫಲಿತಾಂಶ” ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಭಾನುವಾರ ಹೇಳಿದ್ದಾರೆ.   ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ, ಇಂದು ಬಂದಿರುವುದಕ್ಕಿಂತ ಕೆಟ್ಟ ಫಲಿತಾಂಶವನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದರು. ಸಂಸತ್ ನ ಚಳಿಗಾಲದ ಅಧಿವೇಶನವು ಡಿಸೆಂಬರ್ 4ರಿಂದ 22ರವರೆಗೆ ನಡೆಯಲಿದೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ‘ನಗದು-ಪ್ರಶ್ನೆ’ ಆರೋಪಗಳು ಸೇರಿ …

Read More »

ಬಿಜೆಪಿಗೆ ಉತ್ತರ ಭಾರತದ ಮೂರು ರಾಜ್ಯಗಳ ಚುನಾವಣ ಫಲಿತಾಂಶ ಉತ್ಸಾಹ ಇಮ್ಮಡಿಗೊಳಿಸಿದೆ.

ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪೂರ್ಣ ಬಹುಮತ ಪಡೆದು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಹವಣಿಕೆಯಲ್ಲಿರುವ ಬಿಜೆಪಿಗೆ ಉತ್ತರ ಭಾರತದ ಮೂರು ರಾಜ್ಯಗಳ ಚುನಾವಣ ಫಲಿತಾಂಶ ಉತ್ಸಾಹ ಇಮ್ಮಡಿಗೊಳಿಸಿದೆ. ಎಲ್ಲ ಸವಾಲುಗಳನ್ನು, ಸಮೀಕ್ಷೆಗಳನ್ನೂ ಮೀರಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ದಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಉತ್ತರ ಭಾರತದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಹಾಕಿಯೇ ಜಿದ್ದಿಗೆ ಬಿದ್ದು ರಣತಂತ್ರ …

Read More »

ಅಧಿವೇಶನದ ಹಿನ್ನೆಲೆ ಪ್ರತಿಭಟನೆ: ಟೆಂಟ್ ಪಕ್ಕದ ರೈತರ ಗೋಳು ಕೇಳುವರ್ಯಾರು?

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಯಿತು ಎಂದರೆ ಸಾಕು ಪ್ರತಿಭಟನೆಗಳ ಪರ್ವ ಆರಂಭವಾಗುತ್ತದೆ. ಇನ್ನು ಪ್ರತಿಭಟನಾ ಟೆಂಟ್​ಗಳ ಪಕ್ಕದ ಹೊಲಗಳಲ್ಲಿ ಜನರ ಓಡಾಟದಿಂದ ಅವರು ಬೆಳೆದಿದ್ದ ಬೆಳೆಗಳು ಹಾಳಾಗುವ ಆತಂಕ ಕಾಡುತ್ತಿದೆ. ಹೌದು ಪ್ರತಿವರ್ಷವೂ ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿಯ ಹಲಗಾ, ಬಸ್ತವಾಡ, ಕೊಂಡಸಕೊಪ್ಪ ಗ್ರಾಮಗಳ ರೈತರಿಗೆ ಈ ಗೋಳು ತಪ್ಪಿದ್ದಲ್ಲ. ಈ ಭಾರಿ ಅಧಿವೇಶನ ಹಿನ್ನೆಲೆ ಎರಡು ಕಡೆ ಪ್ರತಿಭಟನಾ ಟೆಂಟ್​​​ ಹಾಕಲಾಗಿದ್ದು, ಒಂದು ಹಲಗಾ ಸುವರ್ಣ …

Read More »

ನಾಳೆಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜಂಗಿಕುಸ್ತಿಗೆ ವೇದಿಕೆಯಾಗಲಿದೆ

ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದ್ದು, ಆಡಳಿತ-ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ವೇದಿಕೆಯಾಗುವ ಸೂಚನೆ ದೊರೆತಿದೆ.   ಪ್ರತಿಪಕ್ಷದ ನಾಯಕರಿಲ್ಲದೆ ಶಕ್ತಿಹೀನವಾಗಿದ್ದ ಬಿಜೆಪಿ ಇದೀಗ ಆರ್.ಅಶೋಕ್ ನಾಯಕತ್ವದಲ್ಲಿ ಕಲರವ ಮಾಡಲಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಖಚಿತವಾಗಿರುವುದರಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸೇರಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸರ್ಕಾರದ ವಿರುದ್ಧ ಹೋರಾಡುವ ಸಂಬಂಧ ಶುಕ್ರವಾರ ಆರ್.ಅಶೋಕ್ ನಿವಾಸದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …

Read More »

ಗುಂಡು ಸೂಜಿ ನುಂಗಿದ ಬಾಲಕ: ಬ್ರಾಂಕೋಸ್ಕೋಪ್ ಮೂಲಕ ಹೊರತೆಗೆದ ರಿಮ್ಸ್ ವೈದ್ಯರು

ರಾಯಚೂರು: ಆಟವಾಡುವ ಭರದಲ್ಲಿ ಬಾಲಕನೊಬ್ಬ ಗುಂಡು ಸೂಜಿ ನುಂಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳ‌ಗುಡ್ಡ ಕ್ಯಾಂಪ್​ನ 13 ವರ್ಷದ ಬಾಲಕ ಶಿವಕುಮಾರ ದೇವರಾಜ ಶಾಲೆಯಲ್ಲಿ ಆಟವಾಡುವ ವೇಳೆ ನೋಟಿಸ್​ ಬೋರ್ಡ್ ಅಂಟಿಸುವ ಗುಂಡು ಸೂಜಿಯನ್ನು ಬಾಯಿಯಲ್ಲಿ ಇಟ್ಟುಕೊಂಡಾಗ ಆಕಸ್ಮಿಕವಾಗಿ ನುಂಗಿದ್ದಾನೆ. ಪರಿಣಾಮ ಗುಂಡು ಸೂಜಿಯು ಬಲ ಶ್ವಾಸಕೋಶದೊಳಗಡೆ ಸೇರಿತ್ತು. ಹೀಗಾಗಿ ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಬಾಲಕನ ಶ್ವಾಸಕೋಶದ ಎಕ್ಸ್​ ರೇ ಮಾಡಿಸಿದಾಗ …

Read More »

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ:

ನವದೆಹಲಿ: ರಾಜಸ್ಥಾನ ಹಾಗೂ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಗಣನೀಯ ಮುನ್ನಡೆ ಸಾಧಿಸುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ.         ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಇದು ಬಿಜೆಪಿಗೆ ಸಕರಾತ್ಮಕ ಬೆಳವಣಿಗೆಯನ್ನು ಸೂಚಿಸುತ್ತಿದೆ. ಪಕ್ಷವು ಪ್ರತಿ ರಾಜ್ಯದಲ್ಲೂ ಮುನ್ನಡೆ ಸಾಧಿಸುತ್ತಿದೆ. ಮತ ಹಂಚಿಕೆ ಮತ್ತು ಸೀಟು ಹಂಚಿಕೆ ಎರಡರಲ್ಲೂ ನಾವು ಎಲ್ಲಾ ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ” ಎಂದು …

Read More »

ಅಂಬಾರಿ ಡಬಲ್ ಡೆಕ್ಕರ್ ಬಸ್‌ ಬೆಳಗಾವಿ ಜಿಲ್ಲೆಯಲ್ಲಿ ಶೀಘ್ರದಲ್ಲೇ ಪ್ರಯಾಣ ಆರಂಭ

ಬೆಳಗಾವಿ, : ಬೆಳಗಾವಿ ಜಿಲ್ಲೆಯ ಜನತೆಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, ಶೀಘ್ರದಲ್ಲೇ ಅಂಬಾರಿ ಡಬಲ್ ಡೆಕ್ಕರ್ ಬಸ್‌ ಬೆಳಗಾವಿ ಜಿಲ್ಲೆಯಲ್ಲಿ ಪ್ರಯಾಣ ಆರಂಭಿಸಲಿದೆ. ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವವರು ಶೀಘ್ರದಲ್ಲೇ ಅಂಬಾರಿ ಡಬಲ್ ಡೆಕ್ಕರ್ ಬಸ್‌ನಲ್ಲಿ ಪ್ರಯಾಣಿಸುವ ಅವಕಾಶವನ್ನು ಪಡೆಯಲಿದ್ದಾರೆ.   ಪ್ರಸ್ತುತ ರಾಜ್ಯ ಪ್ರವಾಸೋದ್ಯಮ ಇಲಾಖೆಯಡಿ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ವಿಶಿಷ್ಟ ಬಸ್‌ಗಳು ಬೆಳಗಾವಿಗೆ ತೆರಳಿದ್ದು, ಶೀಘ್ರದಲ್ಲೇ ಬೆಳಗಾವಿ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ. ವಿಶೇಷವಾಗಿ ರಚನೆ ಮಾಡಿರುವ ಅಂಬಾರಿ …

Read More »

ಲೋಕಸಭೆನೂ ಗೆಲ್ತಿವಿ ರಾಹುಲ್‌ ಪ್ರಧಾನಿಯಾಗ್ತಾರೆ:ಸಲೀಂ ಅಹಮ್ಮದ್ ಭವಿಷ್ಯ

ದಾವಣಗೆರೆ, ಡಿಸೆಂಬರ್‌ 03: ಪಂಚರಾಜ್ಯ ಚುನಾವಣೆ ಸೆಮಿ ಫೈನಲ್. ಇಲ್ಲಿ ಗೆದ್ದು ಲೋಕಸಭೆನೂ ಗೆಲ್ಲುತ್ತೇವೆ, ನಮ್ಮ ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ , ಕಾಂಗ್ರೆಸ್ ಪಕ್ಷಕ್ಕೆ ಒಳ್ಳೇಯ ದಿನ. ಐದರಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಎಲ್ಲಾ ಸಮೀಕ್ಷೆಗಳು ಕೂಡ ನಮ್ಮ ಪರವಾಗಿ ಬಂದಿವೆ. ಪಂಚರಾಜ್ಯ …

Read More »