Breaking News

ರಾಜಕೀಯ

ನಾಳೆ ಸಂಜೆ ಪುನೀತ್ ಅಂತ್ಯಕ್ರಿಯೆ : ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ

ಬೆಂಗಳೂರು : ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವ ನಗರ ನಿವಾಸಕ್ಕೆ ತರಲಾಗಿದೆ. ಕುಟುಂಬ ಸದಸ್ಯರೊಂದಿಗೆ ಕನ್ನಡ ಚಿತ್ರ ರಂಗದ ಹಲವಾರು ಗಣ್ಯರು ಮನೆಯಲ್ಲಿದ್ದಾರೆ. …

Read More »

ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಅನಾರೋಗ್ಯದಿಂದ ವಿಧಿವಶ.

ಬೆಂಗಳೂರು: ಇಂದು ಇಡೀ ಕನ್ನಡ ನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಜಿಮ್ ಮಾಡುವ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ವರನಟ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಕಿರಿಯ ಪುತ್ರನಾಗಿ 1975ರಲ್ಲಿ ಜನಿಸಿದ್ದ ಪುನೀತ್ ರಾಜ್ …

Read More »

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿ ಸಂಪುಟ ದರ್ಜೆ ಸಚಿವ ಸ್ಥಾನಮಾನ ಹೊಂದಿರುವ ವಿಜಯಪುರ ‌ಜಿಲ್ಲೆ ಮುದ್ದೇಬಿಹಾಳದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿಯವರು ಗುರುವಾರ ವಿದ್ಯಾರ್ಥಿಗಳೊಂದಿಗೆ ಸಹ ಪಂಕ್ತಿಯಲ್ಲಿ ಕುಳಿತು ಸರ್ಕಾರಿ ಶಾಲೆಯ ಮದ್ಯಾಹ್ನದ ಬಿಸಿಯೂಟ ಸೇವಿಸಿ ಗುಣಮಟ್ಟ ಖಚಿತಪಡಿಸಿಕೊಂಡರು. ಗುಡದಿನ್ನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ತಮ್ಮ ಕುಟುಂಬದಿಂದ ಉಚಿತ ನೋಟಬುಕ್ ವಿತರಿಸಿದ ನಂತರ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಮತ್ತು ಎಲ್ಲ …

Read More »

ಪುನೀತ್ ರಾಜ್ ಕುಮಾರ್ ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು

ಬೆಂಗಳೂರು: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪುನೀತ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

Read More »

ಶಾಸಕ ಶ್ರೀಮಂತ ಪಾಟೀಲ್‌ ಮತ್ತವರ ಇಬ್ಬರು ಮಕ್ಕಳ ವಿರುದ್ಧ ಕೇಸ್ ದಾಖಲು

ಬೆಳಗಾವಿ: ಶಾಸಕ ಶ್ರೀಮಂತ ಪಾಟೀಲ್‌ ಮತ್ತು ಅವರ ಮಗ ಶ್ರೀನಿವಾಸ ಯೋಗೇಶ್ ಪಾಟೀಲ್​ ಸೇರಿದಂತೆ ಒಟ್ಟು 8 ಮಂದಿಯ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಕಾಗವಾಡ ತಾಲ್ಲೂಕಿನ ನವಿಲೇಹಾಳ ಗ್ರಾಮದ ನಿವಾಸಿ ದೇವದಾಸ ದೊಂಡಿಬಾ ಶೇರಖಾನೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ‘ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಶಾಸಕ ಶ್ರೀಮಂತ ಪಾಟೀಲ ಅವರಿಂದ ಜೀವ ಬೇದರಿಕೆ ಇದೆ. ಜನಸಾಮಾನ್ಯರ ಜಮೀನು ಕಸಿದುಕೊಳ್ಳಲು ಅವರು …

Read More »

ದಕ್ಷಿಣ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಮ್ಮೇಳನದಲ್ಲಿ ಕನ್ನಡ ಕಡೆಗಣಿಸಿದ ಅಧಿಕಾರಿಗಳು!

ಬೆಂಗಳೂರು: 66ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ನಡೆಯುತ್ತಿರುವ ಹೊತ್ತಿನಲ್ಲೇ ನಗರದಲ್ಲಿ ಆಯೋಜಿಸಿದ್ದ ದಕ್ಷಿಮ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಕನ್ನಡ ಕಡೆಗಣನೆ ಮಾಡಿದ ಘಟನೆ ನಡೆದಿದೆ. ದಕ್ಷಿಣ ಭಾರತದ 8 ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪ, ಪುದುಚೇರಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಈ …

Read More »

ಸಿನಿಮಾ ಪೈರಸಿ ಮಾಡಲು ಬಿಡುವುದಿಲ್ಲ,ಕಣ್ಣಿಡುತ್ತೇವೆ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ‘ಪೈರಸಿ ಮಾಡಲು ಯತ್ನಿಸುವವರ ಮೇಲೆ ಕಣ್ಣಿಡುತ್ತೇವೆ. ಬಿಡುವುದಿಲ್ಲ, ಶಿಕ್ಷೆ ಆಗುತ್ತದೆ ಸಿನಿಮಾ ತಯಾರಕರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡುತ್ತೇವೆ’ ಎಂದು ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ 1964 ರ ನಂತರ 2014 ರಲ್ಲಿ ನಿಯಮಾವಳಿ ರೂಪಿಸಿತ್ತು. ಇದಕ್ಕೀಗ ತಿದ್ದುಪಡಿ ತರುವ ಪ್ರಸ್ತಾವನೆ ಇದೆ” ಎಂದು ತಿಳಿಸಿದರು. ”ಮೊದಲೆಲ್ಲ ಚಿತ್ರಮಂದಿರದಲ್ಲಿ ಪ್ರೊಜೆಕ್ಟರ್ ಗೆ ಪ್ರತ್ಯೇಕ ಕೊಠಡಿ, …

Read More »

ರಾಜ್ಯದಲ್ಲಿ ಮೊಳಗಿದ ಕನ್ನಡ ಕಂಪು.. ಒಂದು ಲಕ್ಷ ಕಂಠಸಿರಿಯಲ್ಲಿ ಕನ್ನಡ ಡಿಂಡಿಮ..

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ಕನ್ನಡಕ್ಕಾಗಿ ನಾವು ಅಭಿಯಾನ’ ಎಂಬ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಬೆಳಗ್ಗೆ 11.06 ನಿಮಿಷಕ್ಕೆ ಸರಿಯಾಗಿ ರಾಜ್ಯಾದ್ಯಂತ ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಬರೋಬ್ಬರಿ ಗಂಟೆಗೆ ಒಂದು ಲಕ್ಷ ಕಂಠಗಳಲ್ಲಿ ಕನ್ನಡದ ಮೂರು ಗೀತೆಗಳನ್ನ ಹಾಡಲಾಯಿತು. ಯಾವ ಹಾಡು ಹಾಡಲಾಯಿತು..? ರಾಷ್ಟ್ರಕವಿ ಕುವೆಂಪು ರಚಿತ ‘ಬಾರಿಸು ಕನ್ನಡ ಡಿಂಡಿಮವ’, ಕೆ.ಎಸ್. ನಿಸಾರ್ ಅಹಮದ್ ರಚಿತ ‘ಜೋಗದ …

Read More »

ಜಮೀನು ವಿವಾದ; ಎರಡು ಗ್ರಾಮಗಳ ನಡುವೆ ಮಾರಾಮಾರಿ; ಆಸ್ಪತ್ರೆ ಸೇರಿದ 13 ಮಂದಿ

ದಾವಣಗೆರೆ: ಜಮೀನು ವಿವಾದಕ್ಕೆ ಎರಡು ಗ್ರಾಮಗಳ ನಡುವೆ ಮಾರಾಮಾರಿ ಸಂಭವಿಸಿದೆ. ದೊಣ್ಣೆ, ಕುಡುಗೋಲುಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡು ಬಡಿದಾಡಿಕೊಂಡಿದ್ದಾರೆ. ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ, ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದಿದೆ. ಕಂಚಿಕೊಪ್ಪ ಗ್ರಾಮದ 30 ದಲಿತ ಕುಟುಂಬಗಳು ತುಗ್ಗಲಹಳ್ಳಿ ಗ್ರಾಮದ ಬಳಿ ಇರುವ ಸರ್ವೇ ನಂಬರ್ 29- 30 ರಲ್ಲಿ 40 ಎಕರೆ ಜಮೀನನಲ್ಲಿ ಉಳುಮೆ ಮಾಡುತ್ತಿದ್ದರು. ಇದು ತುಗ್ಗಲಹಳ್ಳಿ ಗ್ರಾಮದ ಗೋಮಾಳ ಜಾಗ ಅಂತ ಬೆಳೆ ನಾಶ …

Read More »

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಬಿಸಿಯೂಟಕ್ಕೆ ಪೌಷ್ಠಿಕಾಂಶವಿರುವ ಸಾರವರ್ಧಿತ ಅಕ್ಕಿ

ರಾಜ್ಯಾದ್ಯಂತ 1 ರಿಂದ 10 ನೇ ತರಗತಿ ಆರಂಭವಾಗಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಆರಂಭಿಸಲಾಗಿದೆ. ಮಕ್ಕಳಿಗೆ ಅಗತ್ಯವಾದ ಪೌಷ್ಠಿಕ ಅಂಶ ಒಳಗೊಂಡ ಸಾರವರ್ಧಿತ ಅಕ್ಕಿಯನ್ನು ಸಾಮಾನ್ಯ ಅಕ್ಕಿಯೊಂದಿಗೆ ಮಿಶ್ರಣ ಮಾಡಿ ಬಿಸಿಯೂಟದಲ್ಲಿ ನೀಡಲಾಗುತ್ತದೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದು, ಇದರಲ್ಲಿ ಸಾರವರ್ಧಿತ ಅಕ್ಕಿ ಬಳಕೆ ಮಾಡಲಾಗುವುದು. ಒಂದರಿಂದ ಎಂಟನೇ ತರಗತಿ ಮಕ್ಕಳ ಬಿಸಿಯೂಟಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿದ್ದು, ಪ್ರತಿ ಕ್ವಿಂಟಲ್ ಗೆ 10 ಕೆಜಿಯಂತೆ …

Read More »