Breaking News
Home / ರಾಜಕೀಯ (page 21)

ರಾಜಕೀಯ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಕಲಬುರಗಿ: ವರ್ಷಕ್ಕೆ ಎರಡು ಕೋಟಿ ಉದ್ಯೋಗ, ರೈತರ ಆದಾಯ ದುಪ್ಪಟ್ಟು, ಎಂಎಸ್ಪಿ ಬೆಲೆ ಹೆಚ್ಚಳದಂತಹ ಗ್ಯಾರಂಟಿಗಳನ್ನೇ ಮಾಡದಿರುವ ಪ್ರಧಾನಿ ನರೇಂದ್ರ ಮೋದಿ ಈಗೇನು ಗ್ಯಾರಂಟಿ ಕೊಡ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಕಲಬುರಗಿ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರವಾಗಿ ಆಯೋಜಿಸಲಾ ಕಾಂಗ್ರೆಸ್ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅವುಗಳನ್ನು ಈಗಾಗಲೇ ರಾಜ್ಯದಲ್ಲಿ ಕಾರ್ಯಾನುಷ್ಠಾನ ತರಲಾಗಿದೆ. ಆದರೆ ಮೋದಿ ಗ್ಯಾರಂಟಿ ಬರೀ …

Read More »

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಯತ್ನಾಳ್​

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಪರವಾಗಿ ಮತಯಾಚಿಸಿದ ಬಳಿಕ ಅಥಣಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಮುಂದಿನ ಮುಖ್ಯಮಂತ್ರಿ ನಾನೇ ಎಂದಿದ್ದಾರೆ.     , : ರಾಜ್ಯದಲ್ಲಿ ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda …

Read More »

ಚುನಾವಣೆಯ ನಂತರ ಮೊಬೈಲ್‌ ರಿಚಾರ್ಜ್‌ ಶುಲ್ಕ ಶೇ.17 ಹೆಚ್ಚಳ?

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಅನಂತರ ಏರ್‌ಟೆಲ್‌, ಜಿಯೋ ಮತ್ತು ವಿಐ(ವೋಡೋಫೋನ್‌ ಐಡಿಯಾ) ಟ್ಯಾರಿಫ್ ಪ್ಲ್ರಾನ್‌ಗಳ ದರವನ್ನು ಶೇ.15ರಿಂದ 17ರಷ್ಟು ಹೆಚ್ಚಳವಾಗಲಿವೆ ಎಂದು ದೂರಸಂಪರ್ಕ ಕ್ಷೇತ್ರದ ವರದಿಯೊಂದು ಹೇಳಿದೆ. ಜೂ.4ರಂದು ಲೋಕಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾಗಲಿದೆ.ಚುನಾವಣೆ ಬಳಿಕ ಶೀಘ್ರದಲ್ಲೇ ದೂರಸಂಪರ್ಕ ಕಂಪೆನಿಗಳು ದರ ಹೆಚ್ಚಳ ಮಾಡಲಿವೆ. ಟ್ಯಾರಿಫ್ ಪ್ಲ್ರಾನ್‌ಗಳ ದರದಲ್ಲಿ ಶೇ.15  ರಿಂದ 17ರಷ್ಟು ಹೆಚ್ಚಳ ನಿರೀಕ್ಷಿಸಲಾಗಿದೆ. ಭಾರ್ತಿ ಏರ್‌ಟೆಲ್‌ ಅತೀ ದೊಡ್ಡ ಫ‌ಲಾನುಭವಿಯಾಗಲಿದೆ’ ಎಂದು ಆಂಟಿಕ್ಯು ಸ್ಟಾಕ್‌ ಬ್ರೋಕಿಂಗ್‌ ವರದಿ ತಿಳಿಸಿದೆ.

Read More »

ಇಂದು ನಾಮಪತ್ರ ಸಲ್ಲಿಕೆ, ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ: ಈಶ್ವರಪ್ಪ

ಶಿವಮೊಗ್ಗ: ಏ.12ರಂದು ನಾಮಪತ್ರ ಸಲ್ಲಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಠೇವಣಿ ಹಣವಾಗಿ ನಗರದ ಮಹಿಳೆಯರು ಮತ್ತು ಮುತ್ತೆçದೆಯರು ಸೇರಿ 24 ಸಾವಿರ ರೂ.ಮತ್ತು ತೀರ್ಥಹಳ್ಳಿಯ ಭೀಮನಕಟ್ಟೆ ಮಠದ ಶ್ರೀಗಳು 1 ಸಾವಿರ ರೂ. ನೀಡಿ ಹರಿಸಿದ್ದಾರೆ. ನಾಮಪತ್ರದ ಸಲ್ಲಿಕೆಗೆ ಆಗಮಿಸಲು ಯಾವ ದೊಡ್ಡ ನಾಯಕರೂ ನನಗಿಲ್ಲ. ಸಾಮಾನ್ಯ ಕಾರ್ಯಕರ್ತರೇ ನನ್ನ ಸ್ಟಾರ್‌ ಪ್ರಚಾರಕರು.   ಹಿಂದೂ ಭಕ್ತನಿಗೆ ರಾಷ್ಟ್ರಭಕ್ತ ಮುಸಲ್ಮಾನರು …

Read More »

ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ತಲುಪದ ಕಾರಣ ಸೋತೆ: ಎಂಟಿಬಿ ನಾಗರಾಜ್

ಹೊಸಕೋಟೆ: ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಹಲವು ಕಾರಣಗಳಿರಬಹುದು. ಆದರೆ, ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ಸರಿಯಾಗಿ ಹಂಚಿಕೆಯಾಗಲಿಲ್ಲ. ಹಾಗಾಗಿ ನಾನು ಸೋಲಬೇಕಾಯಿತು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.   ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮತದಾರರಿಗೆ ಹಂಚಿಕೆಯಾಗಬೇಕಿದ್ದ ಹಣ ಅವರನ್ನು ತಲುಪಿಲ್ಲ ಎಂಬ ಕುರಿತು ನನಗೆ ಹಲವು ದೂರು ಬಂದಿದ್ದವು.ಈ ಲೋಕಸಭಾ ಚುನಾವಣೆಯಲ್ಲಿ ಹಾಗೇ …

Read More »

ಸಿಡಿಲಿಗೆ ಎಮ್ಮೆ ಸಾವು

ಅಫಜಲಪುರ: ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಗುರುವಾರ ಸಂಜೆ ಮಳೆ ಸುರಿಯಿತು. ಬಿಸಿಲಿನ ಧಗೆಯಿಂದ ಕಂಗಲಾಗಿದ್ದ ಜನರಿಗೆ ಮಳೆ ತಂಪು ನೀಡಿತು. ಸಿಡಿಲಿಗೆ ಆನೂರು ಗ್ರಾಮದಲ್ಲಿ ಮನೋಹರ್ ಕಲ್ಲಪ್ಪ ಹಿಪ್ಪರಗಿ ಅವರ ತೋಟದಲ್ಲಿ ಕಟ್ಟಿದ್ದ ಎಮ್ಮೆಯೊಂದು ಮೃತಪಟ್ಟಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವು ಗ್ರಾಮಗಳಲ್ಲಿ ಬಿರುಗಾಳಿಗೆ ಬಾಳೆ ಗಿಡಗಳು ಮತ್ತು ಮೇವಿನ ಬಣವಿ ಹಾಳಾದ ಬಗ್ಗೆ ವರದಿಯಾಗಿದೆ.ತಾಲ್ಲೂಕಿನ ಆನೂರು ಗ್ರಾಮದ ರೈತ ಮನೋಹರ್ ಕಲ್ಲಪ್ಪ ಹಿಪ್ಪರಗಿ …

Read More »

ಇದು ಬಡವರು – ಶತಕೋಟಿ ಒಡೆಯರ ನಡುವಿನ ಚುನಾವಣೆ: ರಾಹುಲ್ ಗಾಂಧಿ

ಇದು ಬಡವರು – ಶತಕೋಟಿ ಒಡೆಯರ ನಡುವಿನ ಚುನಾವಣೆ: ರಾಹುಲ್ ಗಾಂಧಿ ಜೈಪುರ: ‘ದೇಶದ ರೈತರು ತಮ್ಮ ಬೆಳಗೆ ಕನಿಷ್ಠ ಬೆಂಬಲ ಬೆಲೆ ಕೇಳುತ್ತಿದ್ದಾರೆ, ಯುವಕರು ಉದ್ಯೋಗ ಹುಡುಕುತ್ತಿದ್ದಾರೆ, ಮಹಿಳೆಯರು ಹಣದುಬ್ಬರದಿಂದ ಬೇಸತ್ತಿದ್ದಾರೆ. ಆದರೆ ಇವರ ಕೂಗನ್ನು ಯಾರು ಕೇಳಿಸಿಕೊಳ್ಳುತ್ತಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು.   ರಾಜಸ್ಥಾನದ ಬಿಕಾನೇರ್ ಲೋಕಸಭಾ ಕ್ಷೇತ್ರದ ಅನುಪ್‌ಗಢದಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, ‘ನಿರುದ್ಯೋಗ, ಹಣದುಬ್ಬರ ಈ ದೇಶದ ಅತಿದೊಡ್ಡ …

Read More »

ರಂಜಾನ್ ಹಬ್ಬದ ದಿನವೇ ಸಲ್ಮಾನ್ ಖಾನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್

ರಂಜಾನ್ ಹಬ್ಬದ ದಿನವೇ ಸಲ್ಮಾನ್ ಖಾನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳು ಮುಂಬೈನಲ್ಲಿರುವ ತಮ್ಮ ನೆಚ್ಚಿನ ಸೂಪರ್ ಸ್ಟಾರ್ ಮನೆಗಳಿಗೆ ಧಾವಿಸಿದ್ದಾರೆ. ಗುರುವಾರ ಇಡೀ ದಿನ, ಬಾಂದ್ರಾದಲ್ಲಿರುವ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ಮನೆಗಳ ಹೊರಗೆ ಅಭಿಮಾನಿಗಳು ಜಮಾಯಿಸಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಸಲ್ಮಾನ್ ನಿವಾಸಕ್ಕೆ ಆಗಮಿಸಿದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ

Read More »

ಲೋಕಸಭೆ ಚುನಾವಣೆ; 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಶುಕ್ರವಾರ ಆರಂಭ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಲಿದ್ದು, ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ರಂಗೇರಿರುವ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆ ಹೊರಡಿಸಲಿದೆ. ರಾಜ್ಯದ ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏ.19 ಕೊನೆ …

Read More »

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ

ಬೆಂಗಳೂರು: ಹಳೇ ಪಿಂಚಣಿ ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್‌ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. 01.04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು …

Read More »