Breaking News

ರಾಜಕೀಯ

ಕೊವಿಡ್ ವ್ಯಾಕ್ಸಿನ್ ಬಗ್ಗೆ ಬಿಲ್ ಗೇಟ್ಸ್ ಅವರೇ ಮೆಚ್ಚಿದ್ದಾರೆ; ಕಾಂಗ್ರೆಸ್ ಟೀಕೆ ಮಾಡಿಕೊಂಡು ಕೂತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಕೋವಿಡ್​ ವಿರುದ್ಧದ ಸಮದಲ್ಲಿ ಭಾರತ ಸರ್ಕಾರ ಸಾಧಿಸಿರುವ ಶತಕೋಟಿ ಕೋವ್ಯಾಕ್ಸಿನ್ ವಿರುದ್ಧ ಕಾಂಗ್ರೆಸ್ ಟೀಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯೆ ನೀಡಿದ್ದು, ಕೊವಿಡ್ ವ್ಯಾಕ್ಸಿನ್ ಬಗ್ಗೆ ಬಿಲ್ ಗೇಟ್ಸ್ ಅವರೇ ಮೆಚ್ಚಿದ್ದಾರೆ. ಆ ಬಗ್ಗೆ ಟ್ವಿಟ್‌ ಮಾಡಿದ್ದಾರೆ. ಅಂತಹುದರಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ಟೀಕೆ ಮಾಡಿಕೊಂಡು ಕೂತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ. ಒಂದು ದೇಶವಾಗಿ ಶತಮಾನದ …

Read More »

ಕಿತ್ತೂರಿನಲ್ಲಿ ಮನಸೂರೆಗೊಂಡ ಜನಪದ ಕಲಾವಾಹಿನಿ

ಬೆಳಗಾವಿ: ಚನ್ನಮ್ಮನ‌ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜ್ಯೋತಿ ಸ್ವಾಗತದ ಬಳಿಕ ಚನ್ನಮ್ನ ಕಿತ್ತೂರಿನ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜ ಯೋಗೀಂದ್ರ ಸ್ವಾಮೀಜಿ ಅವರು ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು. ನವಿಲು ನೃತ್ಯ, ಕೇರಳ ತೆಯಮ್ ನೃತ್ಯ, ಚೆಂಡೆ ಮದ್ದಳೆ, ಪೂಜಾ ಕುಣಿತ, ನಂದಿಧ್ವಜ, ಪಟಾಕುಣಿತ, ಚಿಟ್ಟೆಮೇಳ, ಗೊಂಬೆ ಕುಣಿತ, ಝಾಂಜ್ ಪಥಕ ಸೇರಿದಂತೆ ವಿವಿಧ ಕಲಾತಂಡಗಳ ನೂರಾರು ಕಲಾವಿದರು ಕಲಾವಾಹಿನಿಯಲ್ಲಿ ಪಾಲ್ಗೊಂಡಿದ್ದರು. ಜನಪದ ಗೀತೆಗಳನ್ನು ಹಾಡುತ್ತಾ ಸಾಗಿದ …

Read More »

ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯ : ಬಿ.ವೈ.ವಿಜಯೇಂದ್ರ

ವಿಜಯಪುರ: ಹಾನಗಲ್, ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ದಿನೇ ದಿನೇ ಬಿಜೆಪಿ ಗೆಲುವು ನಿಶ್ಚಿತ ಎಂಬ ಸ್ಥಿತಿ ನಿರ್ಮಾಣವಾಗಿದೆ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಆತಂಕದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಮೇಲ್ನೋಟದ ಹೋರಾಟ ನಡೆಸಿದ್ದಾರೆ ಅಷ್ಟೇ ಎಂದರು. ಜನರ ಮುಂದೆ ಮಂಡಿಸಲು ವಿಷಯಗಳೇ ಇಲ್ಲದ ವಿಪಕ್ಷಗಳು …

Read More »

‘ಹಣ ಹಂಚುವಷ್ಟು ಕೆಳಮಟ್ಟಕ್ಕೆ ಇಳಿದವರು ನಾವಲ್ಲ’ ; ಕಾಂಗ್ರೆಸ್​ ಆರೋಪಕ್ಕೆ ಸವದಿ ತಿರುಗೇಟು

ಬೈ ಎಲೆಕ್ಷನ್​ ಭರಾಟೆ ಜೋರಾಗಿರುವ ಬೆನ್ನಲ್ಲೇ ರಾಜಕೀಯ ಕೆಸರೆರೆಚಾಟ ಕೂಡ ಹೆಚ್ಚಾಗಿದೆ. ಬಿಜೆಪಿ ನಾಯಕರು ಹಣ ಹಂಚಿ ಮತ ಬೇಟೆ ಮಾಡುತ್ತಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆರೋಪಕ್ಕೆ ವಿಜಯಪುರದ ಸಿಂದಗಿಯಲ್ಲಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ರು . ಹಣ ಹಂಚಿಕೆ ಮಾಡಿ ಮತ ಪಡೆದು ನಮಗೆ ರೂಢಿ ಇಲ್ಲ. ನಮ್ಮ ಪಕ್ಷ ಅಷ್ಟೊಂದು ಕೆಳ ಮಟ್ಟಕ್ಕೆ ಇಳಿದೂ ಇಲ್ಲ. ಕಾಂಗ್ರೆಸ್​ ಪಕ್ಷದವರೇ ಮೂಟೆ ಮೂಟೆ ಹಣ ತಂದು …

Read More »

ಭಗತ್‌ಸಿಂಗ್‌ 114ನೇ ಜಯಂತ್ಯುತ್ಸವದ ಅಂಗವಾಗಿ ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ

ಗದಗ : ಭಗತ್‌ಸಿಂಗ್‌ ಅವರ 114ನೇ ಜಯಂತ್ಯುತ್ಸವದ ಅಂಗವಾಗಿ ನಗರದ ಭಗತ್‌ ಸಿಂಗ್‌ ಅಭಿಮಾನಿ ಬಳಗವು ನೆವೆಂಬರ್‌ 1ರಂದು ಸ್ವಾತಂತ್ರ್ಯೋತ್ಸವ ಸಂಭ್ರಮ, ಕನ್ನಡ ರಾಜ್ಯೋತ್ಸವ, ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ ಹಾಗೂ ಆಂಬುಲೆನ್ಸ್‌ ಸೇವೆಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಳಗದ ಅಧ್ಯಕ್ಷ ಶಿವಕುಮಾರ ತಡಕೋಡ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಭಗತ್‌ ಸಿಂಗ್‌ ಅಭಿಮಾನಿ ಬಳಗವು ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಲಿಷ್ಠ …

Read More »

ಒಂದೇ ವೇದಿಕೆಯಲ್ಲಿ ಸತ್ಯ ಗೊತ್ತಾಗಲಿ: ಸಿಎಂಗೆ ಸಿದ್ದರಾಮಯ್ಯ ಸವಾಲು

ಅಕ್ಕಿಆಲೂರ: ‘ಮಿಸ್ಟರ್ ಬಸವರಾಜ್ ಬೊಮ್ಮಾಯಿ ಒಂದೇ ವೇದಿಕೆಗೆ ನೀವೂ ಬನ್ನಿ, ನಾನೂ ಬರುತ್ತೇನೆ. ಹಾನಗಲ್ ಕ್ಷೇತ್ರದಲ್ಲಿ ನನ್ನ ಸರ್ಕಾರ ಇದ್ದಾಗ ಎಷ್ಟು ಕೆಲಸ ಆಗಿವೆ? ಎಷ್ಟು ಅನುದಾನ ಕೊಟ್ಟಿದ್ದೇನೆ ಎನ್ನುವುದನ್ನೆಲ್ಲಾ ಹೇಳುತ್ತೇನೆ. ನಿಮ್ಮ ಕೊಡುಗೆ ಏನು ಎನ್ನುವುದನ್ನು ನೀವೂ ಹೇಳಿ. ಜನರಿಗೆ ಸತ್ಯ ಗೊತ್ತಾಗಲಿ’ ಎಂದು ಶಾಸಕ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ನರೇಗಲ್, ಆಡೂರು, ಅಕ್ಕಿಆಲೂರು ಮತ್ತು ಹಿರೂರು ಗ್ರಾಮಗಳಲ್ಲಿ ಶುಕ್ರವಾರ ನಡೆದ …

Read More »

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

ಬೆಂಗಳೂರು :ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ ಎಂದು ರಾಜ್ಯ ಬಿಜೆಪಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿ ಶುಕ್ರವಾರ ಟ್ವೀಟ್ ಮಾಡಿದೆ. ನೂರು ಕೋಟಿ ಲಸಿಕೆ ಪೂರ್ಣಗೊಳಿಸಿದ ಬಳಿಕ ಟೀಕಿಸಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಗಳನ್ನು ಮಾಡಿದೆ. ‘ವಿವಿಧ ದೇಶಗಳು ವಿತರಿಸಿದ ಲಸಿಕೆ ಪ್ರಮಾಣ ಅಮೆರಿಕಾ – 41.01ಕೋಟಿ ಜಪಾನ್ – 18.21ಕೋಟಿ ಜರ್ಮನಿ – 11.12ಕೋಟಿ ರಷ್ಯಾ – 9.98ಕೋಟಿ ಬ್ರಿಟನ್ – …

Read More »

ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಮಾಡಿದ ರಮೇಶ್​ ಜಾರಕಿಹೊಳಿ,

ಬೆಳಗಾವಿ: ಕಳೆದುಕೊಂಡ ಮಂತ್ರಿಗಿರಿಯನ್ನು ಮತ್ತೆ ಪಡೆಯಲು ಹರಸಾಹಸ ಪಡುತ್ತಿರುವ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಟೆಂಪಲ್​ ರನ್​ ಮುಂದುವರಿಸಿದ್ದಾರೆ. ಕಳೆದ ವಾರ ಪುತ್ರ ಅಮರನಾಥ ಸೇರಿದಂತೆ ಆಪ್ತರೊಂದಿಗೆ ಕೇದಾರನಾಥನ ದರ್ಶನ ಮಾಡಿದ್ದ ಜಾರಕಿಹೊಳಿ, ಇದೀಗ ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಪಡೆದಿದ್ದಾರೆ. ನಿನ್ನೆ ಶುಕ್ರವಾರ ಹಿನ್ನೆಲೆಯಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದಹಾಗೆ ಕೊಲ್ಲಾಪುರ ಮಹಾಲಕ್ಷ್ಮಿ, ರಮೇಶ್ ಜಾರಕಿಹೊಳಿ ಅವರ ಮನೆದೇವರು. ಭೇಟಿ …

Read More »

ನಳಿನ್ ಕುಮಾರ್ ಕಟೀಲ್ ಗಂಡೊ ಹೆಣ್ಣೊ ಎಂಬ ಬಗ್ಗೆಯೇ ಅನುಮಾನವಾಗುತ್ತದೆ : ಬೆಳೂರು ಗೋಪಾಲಕೃಷ್ಣ ಕಿಡಿ

ಶಿವಮೊಗ್ಗ : ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಯಾವ ಅರ್ಹತೆಯೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೆಳೂರು ಗೋಪಾಲಕೃಷ್ಣ ಹರಿಹಾಯ್ದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಕಟೀಲ್ ವಿರುದ್ಧ ಕಟುವಾಗಿ ಟೀಕಿಸಿದ ಅವರು, ಈ ಕಟೀಲ್ ಗಂಡೊ ಹೆಣ್ಣೊ ಎಂಬ ಬಗ್ಗೆಯೇ ಅನುಮಾನವಾಗುತ್ತದೆ. ಬಿಜೆಪಿಯಲ್ಲಿಯೇ ಕೊಳೆತು ನಾರುವಷ್ಟು ವಿಷಯಗಳಿದ್ದರೂ ಕೂಡ ಕಾಂಗ್ರೇಸ್ ನಾಯಕರ ಬಗ್ಗೆ ತಮ್ಮ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ. ರೇಪ್ ಮಾಡಿದವರು ಸದನದಲ್ಲಿ ಬ್ಲೂ …

Read More »

ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚಟುವಟಿಕೆ ತಪ್ಪಿಸಲು ನೂತನ ತಂತ್ರಗಾರಿಕೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನೂತನ ತಂತ್ರಗಾರಿಕೆ ಬಳಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಪರಪ್ಪನ ಅಗ್ರಹಾರದಲ್ಲಿ ಖೈದಿಗಳಿಗೆ ಗಾಂಜಾ ಸಹಿತ ಎಲ್ಲಾ ವಸ್ತುಗಳೂ ಸಿಗುತ್ತಿವೆ. ಅಲ್ಲಿಂದಲೇ ಕರೆ ಮಾಡಿ ಸಾರ್ವಜನಿಕರಿಗೆ, ಉದ್ಯಮಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಇತ್ತು. ಹಾಗಾಗಿ ಪರಪ್ಪನ ಅಗ್ರಹಾರದಲ್ಲಿ ವಿಮಾನ ನಿಲ್ದಾಣಗಳಲ್ಲಿ ಇರುವಂತಹ ತಪಾಸಣಾ ವ್ಯವಸ್ಥೆ ಜಾರಿಗೆ ತರಲಾಗಿದೆ. ಅಲ್ಲಿನ ಸಿಬ್ಬಂದಿಗಳನ್ನೂ …

Read More »