ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಇಂದು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಎರಡೂ ಕ್ಷೇತ್ರಗಳ ಉಸ್ತುವಾರಿ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಸ್ಥಾನ ಸಿಗದಿರುವುದು ಇದೀಗ ಗಮನ ಸೆಳೆಯುತ್ತಿದೆ. ಸಿಂಧಗಿ ವಿಧಾನ ಸಭೆ ಕ್ಷೇತ್ರಕ್ಕೆ ಗೋವಿಂದ್ ಕಾರಜೋಳ, ವಿ.ಸೋಮಣ್ಣ, ಸಿ.ಸಿ ಪಾಟೀಲ್, ಶಶಿಕಲಾ ಜೊಲ್ಲೆ, ರಮೇಶ್ ಜಿಗಜಿಣಗಿ, ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ …
Read More »ಮಾಂಜ್ರಾ ನದಿ: 60 ಅಡಿ ಮೇಲಿಂದ ಧುಮುಕಿ ಯುವಕನ ಹುಚ್ಚಾಟ
ಬೀದರ್: ಮಹಾರಾಷ್ಟ್ರದಿಂದ ಭಾರೀ ನೀರು ಬಿಟ್ಟ ಕಾರಣ ಮಾಂಜ್ರಾ ನದಿ ಮೈದುಂಬಿ ಹರಿಯುತ್ತಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ. ಉಕ್ಕಿ ಹರಿಯುತ್ತಿರುವ ಈ ನದಿಯಲ್ಲಿ ಯುವಕರು ಜೀವವನ್ನು ಲೆಕ್ಕಿಸದೇ ದುಸ್ಸಾಹಸಕ್ಕೆ ಮುಂದಾಗುತ್ತಿದ್ದು ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುವ ಭರದಲ್ಲಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಸುರಿದ ಮಳೆ ಮತ್ತು ನೆರೆಯ ರಾಜ್ಯದಿಂದ ನೀರಿ ಬಿಟ್ಟ ಕಾರಣ ಮಾಂಜ್ರಾ ನದಿ ತುಂಬಿ ತುಳುಕುತ್ತಿದೆ. ಕಳೆದ ತಿಂಗಳು ಈ ನದಿಯಲ್ಲಿ ದುಸ್ಸಾಹಸಕ್ಕೆ ಮುಂದಾಗಿದ್ದ ವ್ಯಕ್ತಿಯೋರ್ವ ನದಿಪಾಲಾಗಿದ್ದ. ಆ …
Read More »ಭಾರತ್ ಬಂದ್ ವೇಳೆ ಪೊಲೀಸರ ವಾಕಿಟಾಕಿಯೇ ಕಳವು
ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …
Read More »ಆನಂದ್ ಸಿಂಗ್‍ರನ್ನು ಉಡಕ್ಕೆ ಹೋಲಿಸಿದ ಬೊಮ್ಮಾಯಿ
ವಿಜಯನಗರ: ರಾಜ್ಯದ ನೂತನ ಜಿಲ್ಲೆಯಾಗಿ ವಿಜಯನಗರ ಅಧಿಕೃತವಾಗಿ ಇಂದು ಉದ್ಘಾಟನೆಯಾಗಿದೆ. ಜಿಲ್ಲಾ ಕೇಂದ್ರ ಹೊಸಪೇಟೆಯ ಮುನಿಸಿಪಲ್ ಕ್ರೀಡಾಂಗಣದಲ್ಲಿ ರಚಿಸಿದ್ದ ಭವ್ಯ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‍ವೈ ಅಧಿಕೃತವಾಗಿ ಜಿಲ್ಲೆಯ ಉದ್ಘಾಟನೆಯನ್ನು ಮಾಡಿದ್ದಾರೆ. ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಆನಂದ್ ಸಿಂಗ್ ಹಠವಾದಿ. ಅವರು ಒಂದು ಕೆಲಸ ಹಿಡಿದರೆ ಮಾಡದೇ ಬಿಡಲ್ಲ. ಅವರು ಉಡದ ಹಾಗೆ ಕೆಲಸ ಮುಗಿಯುವವರೆಗೂ ಬಿಡಲ್ಲ. ನೂತನ ಜಿಲ್ಲೆಯ ಅಭಿವೃದ್ಧಿಗೆ ಇಡೀ …
Read More »ಎರಡು ಉಪಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಖಚಿತ: ಎಸ್‍ಆರ್ ಪಾಟೀಲ್
ಬಾಗಲಕೋಟೆ: ಸಿಂಧಗಿ, ಹಾನಗಲ್ ಎರಡು ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಬಿಜೆಪಿ ಧೂಳಿಪಟವಾಗಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಎಸ್‍ಆರ್ ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತೆ, ಬಿಜೆಪಿ ಸೋಲುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ ವಿಚಾರವಾಗಿ ಭಿನ್ನಾಭಿಪ್ರಾಯ ಶುರುವಾಗಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ನಮ್ಮ ಪಕ್ಷದಲ್ಲಿ ಒಮ್ಮತದಿಂದ …
Read More »ಬೆಳಗಾವಿ ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ : ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ರನಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಲಾಯಿತು. ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ, ಹುಟ್ಟುಹಬ್ಬದ ಆಚರಣೆಯಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಜನ ಪಾಲ್ಗೊಂಡಿದ್ದರು. ಅಷ್ಟೇ …
Read More »ಸಂಜಯ್ ಪಾಟೀಲ್, ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು
ಬೆಳಗಾವಿ; ಮಾಜಿ ಶಾಸಕ, ಬಿಜೆಪಿ ನಾಯಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿರುವ ಅವಹೆಳನಕಾರಿ ಹೇಳಿಕೆಯನ್ನು ಇಡೀ ಪಂಚಮಸಾಲಿ ಸಮಾಜ ಖಂಡಿಸುತ್ತದೆ, ತಕ್ಷಣ ಸಂಜಯ್ ಪಾಟೀಲ್ ಕ್ಷಮೆಯಾಚಿಸಬೇಕು ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಅವಹೇಳಕಾರಿ, ಅಸಹನೀಯ ಶಬ್ದ ಬಳಸಿ ಅವಮಾನಿಸಿರುವುದನ್ನು ಇಡೀ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಇಂತಹ ಹೇಳಿಕೆ ಪುನರಾವರ್ತನೆಯಾದರೆ …
Read More »ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಿಯಾಂಕಾ ತಿಬ್ರೇವಾಲ್ 26,320, ಸಿಪಿಎಂನ ಶ್ರೀಜಿಬ್ ಬಿಸ್ವಾಸ್ 4,201 ಮತಗಳನ್ನು ಪಡೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಸುವೇಂಧು ಅಧಿಕಾರಿಯ ವಿರುದ್ಧ ಸೋತಿದ್ದರು. ಮಂತ್ರಿಸ್ಥಾನವನ್ನು ಪಡೆದವರು 6 ತಿಂಗಳ ಒಳಗಡೆ ಚುನಾಯಿತರಾಗಬೇಕು. ಹೀಗಾಗಿ ಉಪಚುನಾವಣೆಯಲ್ಲಿ ಮಮತಾ …
Read More »ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ, ಐದಕ್ಕೇರಿದ ಸಾವಿನ ಸಂಖ್ಯೆ
ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಇತ್ತೀಚಿಗೆ ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ ಬೆನ್ನಲ್ಲೆ ಮತ್ತೇ ಮೂರು ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆ 5 ಕ್ಕೇರಿದೆ. ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿ ಬೇಧಿ ಚಿಕಿತ್ಸೆಗಾಗಿ ಬಳ್ಳಾರಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಾವನೂರು ಬಸಮ್ಮ, ಲಕ್ಷ್ಮಮ್ಮ, ಅಂಗೂರುಗಟ್ಟಿ ಗೋಣೆಪ್ಪ ಎಂಬಾತರು ಅಸುನೀಗಿದ್ದಾರೆ. ಜೊತೆಗೆ ಮೊನ್ನೆ ಬಂಧುಗಳ ಮನೆಗೆ ಭೇಟಿ ನೀಡಿದ ಮಹಾದೇವಪ್ಪ ಹೆಳ್ಳಪ್ಪ ಎಂಬುವವರು ಕೂಡ …
Read More »ಹೈವೇಯಲ್ಲಿ ದರೋಡೆಗಿಳಿದಿದ್ದ ಡಕಾಯಿತರಿಗೆ ಗೂಸಾ ನೀಡಿದ ಗ್ರಾಮಸ್ಥರು
ಬೆಂಗಳೂರು: ಕಾಡಿನಲ್ಲಿ ಟೆಂಟ್ ಹಾಕಿ ಹೆದ್ದಾರಿಯಲ್ಲಿ ಪ್ರಯಾಣಿಸುವ ಸವಾರರ ದರೋಡೆಗಿಳಿದಿದ್ದ ಡಕಾಯಿತರಿಗೆ ಗ್ರಾಮಸ್ಥರು ಗೂಸಾ ನೀಡಿದ ಘಟನೆ ನಗರದ ಹೊರವಲಯದ ಬೆಂಗಳೂರು-ಶಿವಮೊಗ್ಗ ಹೈವೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗಗಳಲ್ಲಿ ಹೋಗುವ ಪ್ರಯಾಣಿಕರನ್ನ ಟಾರ್ಗೆಟ್ ಮಾಡ್ತಿದ್ದ ಗ್ಯಾಂಗ್ ವಾಹನಗಳನ್ನು ಅಡ್ಡಗಟ್ಟಿ ಕಾರಿನ ಗ್ಲಾಸ್ ಗಳನ್ನ ಒಡೆದು ದರೋಡೆ ಮಾಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದರು ಎನ್ನಲಾಗಿದೆ. ಕಳ್ಳರು ಗುಬ್ಬಿ ಫಾರೆಸ್ಟ್ ನಲ್ಲಿ ಟೆಂಟ್ …
Read More »
Laxmi News 24×7