Breaking News

ರಾಜಕೀಯ

ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಕರಂದ್ಲಾಜೆ ಎದುರಿಗೆ ಕಣ್ಣೀರಿಟ್ಟ ಕಾರ್ಯಕರ್ತೆ!

ಕಲಬುರಗಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎದುರಿಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಕ್ಷದಲ್ಲಿ ಸೂಕ್ತ ಸ್ಥಾನ ಕೊಡದಿದ್ದಕ್ಕೆ ಸಾವಿತ್ರಿ ಕುಳಗೇರಿ ಶೋಭಾ ಕರಂದ್ಲಾಜೆ ಮುಂದೆ ಕಣ್ಣೀರು ಇಟ್ಟಿದ್ದಾರೆ. ಸಾವಿತ್ರಿ ಕುಳಗೇರಿ ಬಿಜೆಪಿ ರಾಜ್ಯ ಮಹಿಳಾ ಕಾರ್ಯಕಾರಣಿ ಸದಸ್ಯೆಯಾಗಿದ್ದಾರೆ. 25 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ಈ ಬಾರಿ ನಡೆದ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ …

Read More »

ಬೆಚ್ಚಿಬಿದ್ದ ರಾಯಚೂರು; ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ

ರಾಯಚೂರು: ಕಣ್ಣಿಗೆ ಖಾರದಪುಡಿ ಎರಚಿ ಯುವಕನೋರ್ವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ನಡೆದಿದೆ. ಹಾಡಹಗಲೇ ಪಟ್ಟಣದ ನಡುಬೀದಿಯಲ್ಲಿ ಈ ಕೊಲೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ ಹೊಸ ಬಸ್ ನಿಲ್ದಾಣದ ಹತ್ತಿರ ಬರ್ಬರ ಹತ್ಯೆ ನಡೆದಿದ್ದು ಸಾವನ್ನಪ್ಪಿದವನನ್ನ ದಿಲ್​ಬರ್​ (30) ಎಂದು ಗುರುತಿಸಲಾಗಿದೆ. ಘಟನಾ‌ ಸ್ಥಳಕ್ಕೆ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲು

ವಿಜಯಪುರ : ಶನಿವಾರ ತಡರಾತ್ರಿ ವಿಜಯ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ ದಾಖಲಾದ ಲಘು ತೀವ್ರತೆ ಭೂಕಂಪ ಎಂಬುದನ್ನು ಜಿಲ್ಲಾಡಳಿತ ದೃಢೀಕರಿಸಿದೆ. ಭೂಕಂಪನ ಅಗಿದ್ದು‌ ರಿಕ್ಟರ್ ಮಾಪಕದಲ್ಲಿ ದಾಖಲು 3.9 ತೀವ್ರತೆಯ ಭೂಕಂಪನ ಆಗಿದೆ.ಮಹಾರಾಷ್ಟ್ರದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂಧುವಾಗಿತ್ತು. ಕೆ.ಎಸ್.ಎನ್. ಡಿ.ಎಂ.ಸಿ. ಮೂಲಕ ಮಾಹಿತಿ ಸಂಗ್ರಹಿಸಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುತೇಕ ಎಲ್ಲ …

Read More »

ಶಾ ಹೇಳಿಕೆಯಿಂದ ಬಿಜೆಪಿಯಲ್ಲಿ ಅತೃ‍‍ಪ್ತಿಯ ಹೊಗೆ: ಬಿಎಸ್‌ವೈ-ಶೆಟ್ಟರ್ ಚರ್ಚೆ

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದು, ಅವರ ನೇತೃತ್ವದಲ್ಲೇ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಬಿಜೆಪಿಯಲ್ಲಿ ಅತೃಪ್ತಿಯ ಹೊಗೆ ಎಬ್ಬಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಬಿಜೆ‍ಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾದ ಮತ್ತೊಬ್ಬ ನಾಯಕ ಜಗದೀಶ ಶೆಟ್ಟರ್ ಅವರು, ಸುಮಾರು ಅರ್ಧತಾಸಿಗೂ ಹೆಚ್ಚಿನ ಹೊತ್ತು ಸಮಾಲೋಚನೆ ನಡೆಸಿದ್ದಾರೆ. ಹೊರಗಿನಿಂದ ಬಂದವರಿಗೆ ಏಕಾಏಕಿ …

Read More »

ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ

ಬೆಂಗಳೂರು: ಸರ್ಕಾರಕ್ಕೆ ಮುಜುಗರವಾಗಬಹುದಾದ ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಕೆಲ ಸಚಿವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದ ‘ಅಷ್ಟೊತ್ತಿನಲ್ಲಿ ಹೆಣ್ಣುಮಕ್ಕಳು ಯಾಕೆ ಅಲ್ಲಿಗೆ ಹೋಗಬೇಕಿತ್ತು’ ಎಂಬ ಮಾತನ್ನು ನೆನಪಿಸಿದ್ದಾರೆ. ಸೆಕೆಂಡ್ ಶಿಫ್ಟ್​ನಲ್ಲಿ ಹೆಣ್ಣುಮಕ್ಕಳು ಕೆಲಸ ಮಾಡುವುದಿಲ್ಲವಾ? ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆಯಿಂದ ವಿವಾದವಾಗಿತ್ತು. ಎಂಬ ಮಾತು ಸಭೆಯಲ್ಲಿ ಕೇಳಿಬಂದಿದೆ. ಮುಖ್ಯಮಂತ್ರಿ ಬಸವರಾಜ …

Read More »

ಕರೋಡ್ ಪತಿಯಲ್ಲಿ ಸೆಹ್ವಾಗ್-ಗಂಗೂಲಿ: ಕ್ರಿಕೆಟ್ ದಿಗ್ಗಜರು ಗೆದ್ದಿದ್ದೆಷ್ಟು?

ಕ್ರಿಕೆಟ್ ದಿಗ್ಗಜರಾದ ಸೌರವ್ ಗಂಗೂಲಿ ಮತ್ತು ವೀರೇಂದ್ರ ಸೆಹ್ವಾಗ್ ಇತ್ತೀಚಿಗಷ್ಟೆ ಕೌನ್ ಬನೇಗಾ ಕರೋಡ್ ​ಪತಿ ಸೀಸನ್ 13 ನಲ್ಲಿ ಭಾಗಿಯಾಗಿದ್ದರು. ವಾರದ ಮೊದಲೇ ಪ್ರೋಮೋ ಬಿಡುಗಡೆ ಮಾಡಿ ಕುತೂಹಲ ಮೂಡಿಸಿದ್ದ ಕೌನ್ ಬನೇಗಾ ಕರೊಡ್ ಪತಿ 13 ತಂಡ ಎಪಿಸೋಡ್ ನೋಡಲು ಕಾತರರಾಗಿದ್ದರು. ಇದೀಗ ಕಾರ್ಯಕ್ರಮ ಪ್ರಸಾರವಾಗಿದ್ದು ಇದೀಗ ವೈರಲ್ ಆಗುತ್ತಿದೆ. ಶಾಂದರ್ ಶುಕ್ರವಾರ್ ದ ಮೊದಲ ಸೆಲೆಬ್ರಿಟಿ ಅತಿಥಿಗಳಾಗಿ ಸೆಹ್ವಾಗ್ ಮತ್ತು ಗಂಗೂಲಿ ಭಾಗವಹಿಸಿದ್ದರು. ಇಬ್ಬರು ಸಖತ್ತಾಗಿ ಆಟವಾಡಿದ್ದಾರೆ. …

Read More »

E- KYC: ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರ ‘ರೇಷನ್’ಗೆ ಕಿರಿಕಿರಿ!

ಕಾರವಾರ, ಸೆಪ್ಟೆಂಬರ್ 4: ಪಡಿತರ ಪಡೆದುಕೊಳ್ಳಲು ರೇಷನ್ ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ- ಕೆವೈಸಿ ಮಾಡಿಸಬೇಕೆಂದು ರಾಜ್ಯ ಸರಕಾರದ ಆಹಾರ ಇಲಾಖೆ ಆದೇಶಿಸಿದೆ. ಅದರಂತೆ ಬಹುತೇಕ ತಾಲೂಕುಗಳ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಕಾರ್ಯಾರಂಭಗೊಂಡು ಒಂದು ವಾರ ಕಳೆದಿದೆ. ಆದರೆ ಹಲವೆಡೆ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ಇ- ಕೆವೈಸಿಗೆ ಪರದಾಡುವಂತಾಗಿದೆ. ದಿನಗಟ್ಟಲೆ ಕಾದರೂ ನೋಂದಣಿ ಕಷ್ಟ- ಸಾಧ್ಯವಾಗಿದೆ. ಇ- ಕೆವೈಸಿ ಮಾಡಲು ಬಯೋಮೆಟ್ರಿಕ್ ನೀಡಬೇಕಿದೆ. ಸರ್ವರ್ ಸಮಸ್ಯೆಯಿಂದ …

Read More »

ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ; ಕಾರ್ಯಕರ್ತರ ಜೊತೆ ಸಭೆ, ಪ್ರತಿಭಟನೆ ನಡೆಸುತ್ತೇವೆ: ಡಿ ಕೆ ಶಿವಕುಮಾರ್

ಕಾಂಗ್ರೆಸ್​ಗೆ ಪದಾಧಿಕಾರಿಗಳ ನೇಮಕದ ಬಗ್ಗೆ ಸೂಚಿಸಿದ್ದೇನೆ. ಮಾಸಾಂತ್ಯದಲ್ಲಿ ಎಲ್ಲಾ ಘಟಕಗಳಿಗೆ ನೇಮಕಾತಿ ಮಾಡುತ್ತೇವೆ. ಕಾಂಗ್ರೆಸ್​ನಿಂದ ಸಾಂಸ್ಕೃತಿಕ, ಸಾರಿಗೆ ವಿಭಾಗ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ. ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ನಾವು ಸಿದ್ಧತೆ ನಡೆಸುತ್ತಿದ್ದೇವೆ. ಜಿಲ್ಲಾ ಕಾಂಗ್ರೆಸ್​ ನಾಯಕರ ಅಭಿಪ್ರಾಯವನ್ನು ಕೇಳಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಶನಿವಾರ (ಸಪ್ಟೆಂಬರ್ 4)​ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್​ …

Read More »

ಮಕ್ಕಳಿಂದಲೇ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ.. ಹೆತ್ತ ತಪ್ಪಿಗೆ ಕಣ್ಣೀರಿಟ್ಟ ಅಪ್ಪ

ಹಾವೇರಿ: ವೃದ್ಧ ತಂದೆಯನ್ನ ನಡು ಬೀದಿಯಲ್ಲಿ ಎಳೆದಾಡಿ ಮಕ್ಕಳಿಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ವಡ್ಡರ ಎಂಬ 70 ವರ್ಷದ ವೃದ್ಧನ ಮೇಲೆ ಮಕ್ಕಳು ಹಲ್ಲೆ ನಡೆಸಿದ್ದಾರೆ. ಮಕ್ಕಳಾದ ಆನಂದ, ಜಗದೀಶ ಎಂಬುವರಿಂದ ಮನಬಂದಂತೆ ಹಲ್ಲೆ ನಡೆದಿದ್ದು.. ಒಬ್ಬರಾದ ಮೇಲೆ ಒಬ್ಬರು ಬಂದು ಕಾಲಲ್ಲಿ ಒದ್ದಿದ್ದಾರೆ. ಹಡೆದ ತಪ್ಪಿಗಾಗಿ ತಂದೆ ರಸ್ತೆಯಲ್ಲಿ ಕಣ್ಣೀರು ಹಾಕಿದ್ದಾರೆ. ನಂತರ ಪ್ರಜ್ಞಾಹೀನನಾಗಿ ನರಳುತ್ತಾ ದಾರಿಯಲ್ಲಿ …

Read More »

ಕೊಪ್ಪಳದಲ್ಲೂ ಮಕ್ಕಳಲ್ಲಿ ಕಾಣಿಸಿಕೊಂಡ ವೈರಲ್ ಫೀವರ್.. ಆಸ್ಪತ್ರೆಗಳ ಮುಂದೆ ಕ್ಯೂ ನಿಂತ ಪೋಷಕರು

ಕೊಪ್ಪಳ: ಜಿಲ್ಲೆಯಲ್ಲಿ ಪುಟ್ಟ ಪುಟ್ಟ ಮಕ್ಕಳಿಗೆ ವೈರಲ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತಿದ್ದು ಕೆಮ್ಮು, ಕಫಾ, ಜ್ವರದಿಂದ ಮಕ್ಕಳು ನಿತ್ರಾಣರಾಗಿದ್ದಾರೆ. ಅದ್ರಲ್ಲೂ ಗ್ರಾಮೀಣ ಭಾಗದ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಕಾಡುತ್ತಿದ್ದು ಪೋಷಕರು ಆತಂಕಗೊಂಡಿದ್ದಾರೆ. ಆಸ್ಪತ್ರೆಗಳು ಫುಲ್ ಆಗಿದ್ದು ಮಕ್ಕಳಿಗೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮುಂದೆ ಪೋಷಕರು ಕ್ಯೂ ನಿಂತ ದೃಶ್ಯಗಳು ಕಂಡುಬಂದಿವೆ. ದೂರದ ಊರುಗಳಿಂದ ಆಸ್ಪತ್ರೆಗಳ ಬಳಿಗೆ ಪೋಷಕರು ಮಕ್ಕಳನ್ನು ಚಿಕಿತ್ಸೆಗಾಗಿ ಕರೆತಂದಿದ್ದಾರೆ. ಇನ್ನು ಇತ್ತೀಚೆಗೆ ಬಳ್ಳಾರಿ ಮತ್ತು ಗದಗ ಜಿಲ್ಲೆಗಳಲ್ಲೂ …

Read More »