Home / ರಾಜಕೀಯ (page 222)

ರಾಜಕೀಯ

ಅಟ್ರಾಸಿಟಿ ಕೇಸ್ ರದ್ದತಿಗೆ ನಕಾರ: ಆಧುನಿಕ ಯುಗದಲ್ಲೂ ಅಸ್ಪೃಶ್ಯತೆ ಆಚರಣೆಗೆ ಹೈಕೋರ್ಟ್ ಬೇಸರ

ಬೆಂಗಳೂರು: ಆಧುನಿಕ ಯುಗದಲ್ಲಿಯೂ ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ಕುರಿತು ಆಘಾತ ವ್ಯಕ್ತಪಡಿಸಿರುವ ಹೈಕೋರ್ಟ್, ಸಾರ್ವಜನಿಕ ಸ್ಥಳದಂತಿರುವ ದೇವಾಲಯಕ್ಕೆ ದಲಿತ ಕುಟುಂಬ ಪ್ರವೇಶಕ್ಕೆ ಅಡ್ಡಿಪಡಿಸಿ, ಜಾತಿ ಹೆಸರಿನಲ್ಲಿ ನಿಂದಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿತು.   ತಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸುವಂತೆ ಕೋರಿ ಪಾಂಡುರಗ ಭಟ್ ಸೇರಿದಂತೆ ಇತರೆ ಏಳು ಮಂದಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪಪೀಠ, …

Read More »

ಬಾಲಕ ಸಾವು ಪ್ರಕರಣ: ಶಾಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೋಸಂಬೆ ಭೇಟಿ, ಪರಿಶೀಲನೆ

ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬುಧವಾರ ಶಾಲಾ ಕಟ್ಟಡದಲ್ಲಿ ನೀರಿನ ವಾಟರ್​ ಫಿಲ್ಟರ್​ ಟ್ಯಾಂಕ್‌ ಮಗುವಿನ ಮೇಲೆ ಬಿದ್ದು ಬಾಲಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಅವರೊಂದಿಗೆ ಇನ್ನಿತರ ಅಧಿಕಾರಿಗಳು ಜೊತೆಗಿದ್ದರು. ಬಳಿಕ ಮೃತ ಬಾಲಕನ ಮನೆಗೆ ಭೇಟಿ ನೀಡಿ ಆ ಬಾಲಕನ ತಾಯಿಗೆ ಸಾಂತ್ವನ ಹೇಳಿದರು. …

Read More »

ನ.28ಕ್ಕೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಎಲೆಕ್ಷನ್‍

ಬಳ್ಳಾರಿ ನ.11: ಬಳ್ಳಾರಿ (Bellari) ಜಿಲ್ಲೆ ಕಾಂಗ್ರೆಸ್ (Congress)​ ಹಿಡಿತದಲ್ಲಿದೆ. ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಕಾಂಗ್ರೆಸ್​ ಶಾಸಕರಿದ್ದಾರೆ. ಇದೀಗ ಬಳ್ಳಾರಿ ಮಹಾನಗರ ಪಾಲಿಕೆ (Bellari City Corporation) ಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದು “ಕೈ” ಗೆ ಪ್ರತಿಷ್ಠೆಯಾಗಿದೆ. ನ.28ರಂದು ಬಳ್ಳಾರಿ ಪಾಲಿಕೆ ಮೇಯರ್​, ಉಪಮೇಯರ್ ಚುನಾವಣೆ ನಡೆಯಲಿದೆ. ರಾಜ್ಯದ ಕಿರಿಯ ಮೇಯರ್ ಹೆಗ್ಗಳಿಕೆಗೆ ಪಾತ್ರವಾಗಿದ್ದ 23 ವರ್ಷದ ಡಿ.ತ್ರಿವೇಣಿ ಏಳು ತಿಂಗಳು ಆಡಳಿತ ನಡೆಸಿ, ನವೆಂಬರ್​​ 4ರಂದು ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ …

Read More »

ಮದ್ವೆ ಮಂಟಪಕ್ಕೆ ಹೋಗುತ್ತಿದ್ದಾಗ ವರ ಎಸ್ಕೇಪ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪ್ರಿಯಕರ

ತುಮಕೂರು, (ನವೆಂಬರ್ 08): ಬೆಂಗಳೂರಿನ ನೆಲಗದರನಹಳ್ಳಿ ಹಾಗೂ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ(Love). ಬಳಿಕ ಬೆಂಗಳೂರಿನ (Bengaluru) ನೆಲಗದರನಹಳ್ಳಿ ಮೂಲಕ ಗಜೇಂದ್ರ, ಮದುವೆಯಾಗುವುದಾಗಿ (Marriage) ಎರಡು ವರ್ಷಗಳಿಂದ ಯುವತಿಯನ್ನು ಕರೆದುಕೊಂಡು ಎಲ್ಲೊಂದರಲ್ಲಿ ಸುತ್ತಾಡಿದ್ದಾನೆ. ಆದ್ರೆ, ಇದೀಗ ಮದುವೆ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಗಜೇಂದ್ರ ಎಸ್ಕೇಪ್ ಆಗಿದ್ದಾನೆ. ಹೌದು…ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯದಲ್ಲಿ ಇಬ್ಬರ ಮದುವೆ ಫಿಕ್ಸ್ ಆಗಿತ್ತು. ಆದ್ರೆ, …

Read More »

ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತ: ಸರ್ಕಾರದ ವಿರುದ್ಧ ಯತ್ನಾಳ್ ಆಕ್ರೋಶ

ಬೆಂಗಳೂರು, ನವೆಂಬರ್ 22: ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ (Siddi community) ವಿಶೇಷ ಗಿರಿಜನ ಯೋಜನೆಯಡಿ ನೀಡಲಾಗುತ್ತಿದ್ದ ಪೌಷ್ಠಿಕಾಹಾರವನ್ನು ಅನುದಾನ ಕೊರತೆಯ ಕಾರಣ ಸ್ಥಗಿತಗೊಳಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತಗೊಂಡ ವಿಷಯಕ್ಕೆ ಸಂಬಂಧಿಸಿದ ವರದಿಯೊಂದನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​ ಪೋಸ್ಟ್​​ನಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ …

Read More »

ಇನ್ನೂ 2000 ರೂ. ಜಮೆ ಆಗಿಲ್ವಾ? ಗೃಹಲಕ್ಷ್ಮಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೊಂಡು ಹಲವು ತಿಂಗಳು ಕಳೆದರೂ ಇನ್ನೂ ಅನೇಕ ಗೃಹಿಣಿಯ ಖಾತೆಗೆ 2,000 ರೂ. ಜಮೆಯಾಗಿಲ್ಲ. ಕೊನೆಗೂ ಈ ಸಮಸ್ಯೆಗೆ ಅಂತ್ಯ ಹಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಒಟ್ಟು 1.10 ಕೋಟಿ ಗೃಹಲಕ್ಷ್ಮಿಯರಿಗೆ ಹಣ ಜಮೆಯಾಗಿದ್ರೂ 5-6 ಲಕ್ಷದಷ್ಟು ಮಹಿಳೆಯರಿಗೆ ತಾಂತ್ರಿಕ ದೋಷದಿಂದ ಹಣ ಜಮೆಯಾಗಿರಲಿಲ್ಲ. ಇದೀಗ ಗೃಹಲಕ್ಷ್ಮಿಯರಿದ್ದಡೆಗೆ ಅಧಿಕಾರಿಗಳು ತೆರಳಿ ಅದಾಲತ್ ನಡೆಸಲಿದ್ದಾರೆ. ಇನ್ನೊಂದು …

Read More »

ಪೆಟ್​​ ಕ್ಲಿನಿಕ್​ನಲ್ಲಿ ಲ್ಯಾಬ್ರಡಾರ್ ಶ್ವಾನ ಸಾವು: ವೈದ್ಯರು ಸೇರಿ ನಾಲ್ವರ ವಿರುದ್ಧ ಕೇಸ್

ಪುಣೆ (ಮಹಾರಾಷ್ಟ್ರ): ಸಾಕು ಪ್ರಾಣಿಗಳ ಕ್ಲಿನಿಕ್​ (Pet Clinic)ನಲ್ಲಿ ಸಾಕು ನಾಯಿಯೊಂದು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್​ ಕೇಸ್​ ದಾಖಲಾಗಿದೆ. ಶ್ವಾನದ ಮಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೆಟ್ ಕ್ಲಿನಿಕ್​ನ ವೈದ್ಯರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಇಲ್ಲಿನ ಪಾಶಾನ್‌ ಉಪನಗರದಲ್ಲಿರುವ ಪೆಟ್ ಕ್ಲಿನಿಕ್‌ಗೆ ನವೆಂಬರ್ 17ರಂದು ಸಂಜೆ 35 ವರ್ಷದ ಮಹಿಳೆಯೊಬ್ಬರು ತಮ್ಮ ‘ಹನಿ’ ಎಂಬ ಲ್ಯಾಬ್ರಡಾರ್ ಶ್ವಾನವನ್ನು ಕರೆತಂದಿದ್ದರು. ವಾರ್ಷಿಕ …

Read More »

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡವಾಳ ಬಯಲು: ಎಸ್ ಎ ರಾಮದಾಸ್

ಹಾಸನ: ”ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಬಂಡವಾಳವು ಮೇ ತಿಂಗಳಲ್ಲಿ ನಡೆಯುವ ಲೋಕಾಸಭಾ ಚುನಾವಣೆಯಲ್ಲಿ ಬಯಲಾಗಲಿದೆ” ಎಂದು ಮಾಜಿ ಸಚಿವ ಎಸ್ ಎ ರಾಮದಾಸ್ ಹೇಳಿದ್ದಾರೆ.   ಬಿಜೆಪಿ ಕಚೇರಿಗೆ ಭೇಟಿ ನೀಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ರಾಷ್ಟ್ರ ನಾಯಕರು ಅಂತ ಬಂದಾಗ ಅವರ ಘನತೆ, ಗೌರವದಲ್ಲಿ ನಾನೇನು ಮಾತನಾಡುತ್ತಿದ್ದೀನಿ ಎಂಬುದರ ಅರಿವು ಇಟ್ಟುಕೊಂಡು ಮಾತನಾಡುವುದು ಒಳ್ಳೆಯದು. ಇದೇನು ಅವರಿಗೆ ಹೊಸತಲ್ಲ. ಈ ರೀತಿ …

Read More »

ಸ್ತಿಗಾಗಿ ತಂದೆಯ‌ ಕಣ್ಣು ಕಿತ್ತ ಮಗ

ಬೆಂಗಳೂರು: ಆಸ್ತಿಗಾಗಿ ಹೆತ್ತ ತಂದೆಯ ಕಣ್ಣುಗಳನ್ನೇ ಕಿತ್ತು ಹಾಕಿದ್ದ ಮಗನಿಗೆ ಇಲ್ಲಿನ ಕೋರ್ಟ್ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿತು. 44 ವರ್ಷದ ಅಭಿಷೇಕ್ ಶಿಕ್ಷೆಗೊಳಗಾದ ಅಪರಾಧಿ. ಬನಶಂಕರಿ ಶಾಕಾಂಬರಿ ನಗರದಲ್ಲಿ ಅಪರಾಧಿಯ ತಂದೆ ಪರಮೇಶ್ವರ್ (66) ವಾಸವಾಗಿದ್ದರು. ಆಸ್ತಿ ಪತ್ರಕ್ಕೆ ಸಹಿ ಹಾಕಿಲ್ಲ ಎಂಬ ಕಾರಣಕ್ಕಾಗಿ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಭಿಷೇಕ್ ಕೊಲೆ ಯತ್ನ ನಡೆಸಿದ್ದ.‌ …

Read More »

ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಯಾರೂ ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ನೀಡಲಾದ ವಿಧಾನಸೌಧ ಕಚೇರಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ರಮೇಶ್ ಜಾರಕಿಹೊಳಿ ನಿವಾಸಕ್ಕೆ ವಿಜಯೇಂದ್ರ ಹೋಗಿದ್ದರ ಬಗ್ಗೆ ಪ್ರತಿಕ್ರಿಯಿಸಿದರು. ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರ್.ಅಶೋಕ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೂಡ ಮಾತನಾಡುತ್ತೇವೆ. …

Read More »