ಮೈಸೂರು: ಆಶ್ರಯ ಮನೆಗಾಗಿ ವಾಸ ದೃಢೀಕರಣ ಪತ್ರ ಕೇಳಿದ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ (Mysuru City Corporation) ಜೋನಲ್ ಅಧಿಕಾರಿಗೆ ಮಹಿಳೆಯರು ಧರ್ಮದೇಟು ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜೋನಲ್ ಅಧಿಕಾರಿ ವಿಷಕಂಠೇಗೌಡ ಎನ್ನುವವರು ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಆರೋಪ ಎದುರಿಸುತ್ತಿದ್ದು, ಅವರ ವರ್ತನೆಯಿಂದ (Misbehave) ಕುಪಿತರಾದ ಮಹಿಳೆಯರು ಶಾರದಾದೇವಿ ನಗರದ ವಲಯ ಕಚೇರಿಗೆ ನುಗ್ಗಿ ಥಳಿಸಿದ ವಿಡಿಯೋ ಇದೀಗ ವೈರಲ್ (Viral Video) …
Read More »ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಮನೆ: ಗಂಡ ಸಜೀವ ದಹನ, ಪತ್ನಿ ಸ್ಥಿತಿ ಗಂಭೀರ
ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆಯೊಂದು ಹೊತ್ತಿ ಉರಿದಿದ್ದು, ಮಲಗಿದ್ದಲ್ಲೇ ವ್ಯಕ್ತಿಯೊಬ್ಬ ಸಜೀವ ದಹನ ಆಗಿದ್ದಾರೆ. ಪ್ರಕಾಶ್ (55) ಮೃತ ದುರ್ದೈವಿ. ಇವರ ಪತ್ನಿ ಗಂಭೀರ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕಾಶ್ ಮನೆಯಲ್ಲೇ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಬೆಳಗಿನ ಜಾವ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನಿದ್ರೆ ಮಾಡುತ್ತಿದ್ದ ಪ್ರಕಾಶ್ ಅಲ್ಲೇ ಸುಟ್ಟುಕರಕಲಾಗಿದ್ದಾರೆ. ಕಿರಾಣಿ ಅಂಗಡಿಯಲ್ಲಿದ್ದ ಸಾಮಗ್ರಿ ಸಂಪೂರ್ಣ ಸುಟ್ಟು ಬೂದಿಯಾಗಿದೆ. …
Read More »ಮಳೆಗೆ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ದಾರುಣ ಸಾವು
ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ಮೂಲದ ಕಾವ್ಯ (19) ಹಾಗೂ ವೇಣುಗೋಪಾಲ್ (22) ಮೃತರು. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿದ್ದ ಮನೆ ಮೇಲೆ ಕುಸಿದಿದ್ದು, ಘಟನೆಯಲ್ಲಿ ಸಂಪ್ರಥ್ (22) ಎಂಬ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ …
Read More »ರಾಜ್ಯದ 27 ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ
ಬೆಂಗಳೂರು – ರಾಜ್ಯದ 27 ವಲಯ ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಜುಲೈ 22ರ ವರೆಗೆ ವರ್ಗಾವಣೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ವಲಯಾರಣ್ಯಾಧಿಕಾರಿಗಳ ವರ್ಗಾವಣೆ ವಿವರ ಇಲ್ಲಿದೆ –
Read More »ನದಿಯಲ್ಲಿ ಹುಚ್ಚು ಸಾಹಸ; ಸೇತುವೆ ಕೆಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್
ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯ ರಭಸಕ್ಕೆ ಸೇತುವೆಯ ಕೆಳಗೆ ಟ್ರ್ಯಾಕ್ಟರ್ ಉರುಳಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗುಂಡಕಾನಾಳ ಗ್ರಾಮದ ಮಧುಗೌಡ ಪಾಟೀಲ ಅವರ ಎಂಬುವವರಿಗೆ ಸೇರಿದ್ದ ಟ್ರ್ಯಾಕ್ಟರ್ ಹಡಗಿನಾಳ ಮಾರ್ಗದಲ್ಲಿ ಡೋಣಿ ಸೇತುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೆಲಮಟ್ಟದ ಸೇತುವೆಯ ಮೇಲೆ ವಾಹನ ಚಲಾಯಿಸುತ್ತಿರುವಾಗ ಟ್ರ್ಯಾಕ್ಟರ್ ಸೇತುವೆಯ ಕೆಳಗೆ ಉರುಳಿದೆ. ತಾಳಿಕೋಟಿ ಪಟ್ಟಣದಿಂದ ಮೂಕಿಹಾಳ ಗ್ರಾಮದತ್ತ ಹೊರಟಿದ್ದ ಟ್ರ್ಯಾಕ್ಟರ್ ಡೋಣಿ ನದಿಯ ಮೇಲೆ ಪ್ರವಾಹದ ನೀರು ಇದ್ದರೂ …
Read More »ಅಪ್ಪ ಅಮ್ಮನ ಜೊತೆಗೆ ಖುಷಿ ಖುಷಿಯಾಗಿ ಮಾತನಾಡಿದ್ದ ಯೋಧ ಮಾತನಾಡಿದ ಒಂದೇ ಗಂಟೆಯಲ್ಲಿ ಯೋಧನ ಹುತಾತ್ಮನಾದ ಸುದ್ದಿ ಬರಸಿಡಿಲಂತೆ ಬಡಿದಿದೆ.
ಗದಗ: ಆತ 12 ವರ್ಷಗಳಿಂದ ಸೈನಿಕನಾಗಿ ದೇಶ ಕಾಯ್ತಿದ್ದ. ಒಂದು ತಿಂಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದ. ಬಳಿಕ ಮೇಲಾಧಿಕಾರಿಗಳ ಕರೆ ಮೇಲೆ ಮತ್ತೆ ಸೇವೆಗೆ ಹಾಜರಾದ. ಆದ್ರೆ ಬೆಳಿಗ್ಗೆ ಅಪ್ಪ ಅಮ್ಮನ ಜೊತೆಗೆ ಖುಷಿ ಖುಷಿಯಾಗಿ ಮಾತನಾಡಿದ್ದ ಯೋಧ ಮಾತನಾಡಿದ ಒಂದೇ ಗಂಟೆಯಲ್ಲಿ ಯೋಧನ ಹುತಾತ್ಮನಾದ ಸುದ್ದಿ ಬರಸಿಡಿಲಂತೆ ಬಡಿದಿದೆ. ಇಂದು ಛತ್ತೀಸ್ಘಡದಲ್ಲಿ ಗದಗ ಮೂಲದ ಯೋಧ ಹುತಾತ್ಮನಾಗಿರೋ ಸುದ್ದಿ ತಿಳಿದು ಗೊಜನೂರು ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. …
Read More »ಹಾವೇರಿ: ಇನ್ನೂ ಕೈಸೇರದ ‘ಕೋವಿಡ್ ರಿಸ್ಕ್ ಭತ್ಯೆ’
ಹಾವೇರಿ: ಕೋವಿಡ್ ಸೇವೆಯಲ್ಲಿ ಜೀವ ಒತ್ತೆಯಿಟ್ಟು ಕರ್ತವ್ಯ ನಿರ್ವಹಿಸಿದ ‘ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ’ಗಳಿಗೆ (ಲ್ಯಾಬ್ ಟೆಕ್ನಿಷಿಯನ್) ರಾಜ್ಯ ಸರ್ಕಾರ ಘೋಷಿಸಿದ ‘ಕೋವಿಡ್ ರಿಸ್ಕ್ ಭತ್ಯೆ’ ಕಾಗದದಲ್ಲೇ ಉಳಿದಿದ್ದು, ಸಿಬ್ಬಂದಿಗಳಿಗೆ ಇನ್ನೂ ದೊರೆತಿಲ್ಲ. ಕೋವಿಡ್ ಸೇವೆಯಲ್ಲಿ ಕರ್ತವ್ಯ ನಿರ್ವಹಿಸಿದ ವೈದ್ಯರಿಗೆ ₹10 ಸಾವಿರ, ಶುಶ್ರೂಷಕ ಅಧಿಕಾರಿಗಳಿಗೆ ₹8 ಸಾವಿರ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕರ್ತವ್ಯ ನಿರ್ವಹಿಸುವ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳಿಗೆ ₹5 ಸಾವಿರ ‘ಕೋವಿಡ್ ರಿಸ್ಕ್ ಭತ್ಯೆ’ಯನ್ನು 2021ರ …
Read More »ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಆದೇಶ: B.S.Y.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ತಕ್ಷಣ ಹಿಂದಿನ ಬಾಕಿಯೂ ಸೇರಿ ಶೇ.11 ತುಟ್ಟಿ ಭತ್ಯೆಯನ್ನು ಜುಲೈ 1ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಈ ಆದೇಶದಿಂದ 6 ಲಕ್ಷ …
Read More »ವಿಶೇಷ ಜಿಲ್ಲಾಧಿಕಾರಿ: ಐಎಎಸ್ ಅಧಿಕಾರಿ ನೇಮಕಕ್ಕೆ ಸೂಚನೆ
ಕೆಎಎಸ್ ಅಧಿಕಾರಿಗಳಾದ ಎಂ. ಕೆ.ಜಗದೀಶ್ ಮತ್ತು ಬಸವರಾಜ್ ಅವರನ್ನು ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನಗರದ ವಕೀಲ ವಾಸುದೇವ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ಐಎಎಸ್ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಕ ಮಾಡಬೇಕು’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶನ ನೀಡಿದೆ. ‘ಕರ್ನಾಟಕ ಭೂಕಂದಾಯ …
Read More »ನಟಿ ಶಿಲ್ಪಾ ಶೆಟ್ಟಿ ಪತಿ, ರಾಜ್ ಕುಂದ್ರ ಪೋರ್ನ್ ಜಗತ್ತಿನ ಮಾಸ್ಟರ್ ಮೈಂಡ್; ಪೂನಂ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರ ಬಂಧನದ ಬಳಿಕ ಅಡಲ್ಟ್ ಸ್ಟಾರ್ ಪೂನಂ ಪಾಂಡೆ ಹೇಳಿಕೆ ವೈರಲ್ ಆಗುತ್ತಿದೆ. 2019ರಲ್ಲಿ ರಾಜ್ ಕುಂದ್ರ ವಿರುದ್ಧ ದೂರು ದಾಖಲಿಸಿದ್ದ ಪೂನಂ, ರಾಜ್ ಕುಂದ್ರರನ್ನು ‘ಬ್ಲೂ ಫಿಲ್ಮ್ ದಂಧೆಯ ಮಾಸ್ಟರ್ ಮೈಂಡ್’ ಎಂದು ಆರೋಪಿಸಿದ್ದರು ಎನ್ನುವ ಸುದ್ದಿ ಈಗ ಬಾಲಿವುಡ್ ನಲ್ಲಿ ವೈರಲ್ ಆಗುತ್ತಿದೆ. ಕಳೆದ ಒಂದು ವರ್ಷದಿಂದ ಬ್ಲೂ ಫಿಲ್ಮ್ ದಂಧೆಯ ಹಿಂದೆ ಬಿದ್ದಿದ್ದ ಮುಂಬೈ …
Read More »
Laxmi News 24×7