Breaking News

ರಾಜಕೀಯ

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,949 ಕೋವಿಡ್ ಪ್ರಕರಣ ಪತ್ತೆ, 542 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕಳೆದ 24ಗಂಟೆಯಲ್ಲಿ 39,949 ಕೋವಿಡ್ ಪ್ರಕರಣ ವರದಿಯಾಗಿದೆ. ಅಲ್ಲದೇ 542 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.   ದೇಶದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 4,30,422ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 542 ಮಂದಿ ಸಾವನ್ನಪ್ಪಿದ್ದು, 40,026 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ …

Read More »

ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ -ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೇಕೆದಾಟು ಜಲಾಶಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಿಎಮ ಚರ್ಚಿಸಲಿದ್ದಾರೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ, ಡಿಸಿಎಂ ಗೋವಿಂದ …

Read More »

ವಿದ್ಯುತ್ ಕಂಬಕ್ಕೆ ಟಾಟಾ ಸುಮೋ ಡಿಕ್ಕಿ – ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವರನಹೊಂಡ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ನೀಲಮ್ಮ (60) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆಗೆ ಆಗಮಿಸುತ್ತಿದ್ದ ಟಾಟಾ …

Read More »

ಸುಮಲತಾ ಹೋರಾಟಕ್ಕೆ ರೈತ ಸಂಘದಿಂದ ಸಂಪೂರ್ಣ ಬೆಂಬಲ: ಚಾಮರಸ ಮಾಲಿಪಾಟೀಲ್

ರಾಯಚೂರು: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಹೋರಾಟಕ್ಕೆ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಚಾಮರಸ ಮಾಲಿಪಾಟೀಲ್‍ರವರು, ರಾಜ್ಯದ ಹಲವೆಡೆ ಅಕ್ರಮ ಕಲ್ಲುಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ಬೇಬಿಬೆಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಅದೂ ಕೆಆರ್‍ಎಸ್ ನಿಂದ 5-6 ಕಿ.ಮೀನಲ್ಲಿ ಗಣಿಗಾರಿಕೆ ನಡೆಯುತ್ತಿದೆ. 20 ಕಿ.ಮೀ ಒಳಗೆ …

Read More »

16 ವರ್ಷ ತಲೆಮರೆಸಿಕೊಂಡಿದ್ದ ಮಂಗಳೂರಿನ ಆರೋಪಿ ಮುಂಬೈನಲ್ಲಿ ಬಂಧನ

ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಗ್ರಾಮದಲ್ಲಿ ನಡೆದ ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ಮೂಲ್ಕಿ ನಿವಾಸಿ, ಸದ್ಯ ಮುಂಬೈನ ಸಕಿ ನಾಕಾದಲ್ಲಿ ವಾಸವಿರುವ ಚಂದ್ರಕಾಂತ್ ಪೂಜಾರಿ ಯಾನೆ ಅಣ್ಣು(55) ಬಂಧಿತ ಆರೋಪಿ ಎಂದು ವರದಿಯಾಗಿದೆ. ಏನಿದು ಪ್ರಕರಣ? ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10 ರಂದು ರಾತ್ರಿ ವಿಶ್ವನಾಥ್, ಅಮೀನ್ ಎಂಬವರ …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಬೆಳಗಾವಿ : ಬೆಳಗಾವಿ ನಗರದ ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜು. ೧೯ ರಿಂದ ಜು. ೨೨ ರಂದು ಮುಂಜಾನೆ ೦೯ ಗಂಟೆಯಿಂದ ಸಾಯಂಕಾಲ ೬ ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲು ೨೦೦ ಮೀಟರ್ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಾದ ಡಾ ಕೆ.ತ್ಯಾಗರಾಜನ್ ಆದೇಶ ಹೊರಡಿಸಿರುತ್ತಾರೆ. ನಿಷೇಧಾಜ್ಞೆ ಜಾರಿ ಪ್ರದೇಶದಲ್ಲಿ ಸಿ.ಆರ‍್ಪಿ.ಸಿ ಕಲಂ ೧೪೪ ರ ಪ್ರಕಾರ ಈ ಕೆಳಕಂಡ ಷರತ್ತುಗಳನ್ನು …

Read More »

ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …

Read More »

ನಳಿನ್ ಕುಮಾರ್ ಕಟೀಲ್ ನೇರ ಚರ್ಚೆಗೆ ಬರಲಿ: ಡಿ ಕೆ ಶಿವಕುಮಾರ್ ಸವಾಲು

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನುಡಿದಂತೆ ನಡೆದಿದ್ದಾರೆ, ಮಾತು ತಪ್ಪಿಲ್ಲ. ಬಸವ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿ ವಿಧಾನಸೌಧ ಪ್ರವೇಶ ಮಾಡಿದ್ದ ಅವರು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪೈಕಿ ಶೇ.99ರಷ್ಟು ಕೆಲಸ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಕಿದ್ದರೆ ಈ ಬಗ್ಗೆ ನೇರ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಹ್ವಾನ ನೀಡಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ …

Read More »

ಮಗು ಹೆಣ್ಣಾಗಿದ್ದಕ್ಕೆ ದೇವಾಲಯದಲ್ಲೇ ಬಿಟ್ಟು ನಡೆದ ಪೋಷಕರು

ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ …

Read More »

ಈ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿದ್ರೆ ಅವರ ಹೆಸರಲ್ಲಿ FD ಇಡ್ತಾರೆ ಟೀಚರ್, ಮಕ್ಕಳಿಗಾಗಿ ವಿಶೇಷ ಆಫರ್ !

ಕೊಪ್ಪಳ:ಈಗ ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೆ ಹೆಚ್ಚು, ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವುದಕ್ಕಿಂತ ಖಾಸಗಿ ಶಾಲೆಯತ್ತ ಪಾಲಕರು ಮುಖ ಮಾಡಿದ್ದಾರೆ, ಈ ಮಧ್ಯೆ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಇಲ್ಲೊಬ್ಬ ಶಿಕ್ಷಕರು ವಿಭಿನ್ನ ಪ್ರಯತ್ನ ಮಾಡಿದ್ದಾರೆ, ಈ ಶಾಲೆಗೆ ಸೇರುವ ಮಕ್ಕಳು 18 ವಯಸ್ಸಾದ ನಂತರ ಮುಂದಿನ ಶಿಕ್ಷಣಕ್ಕೆ ಒಂದಿಷ್ಟು ಸಹಕಾರವಾಗಲಿದೆ, ಈ ಶಿಕ್ಷಕನ ಸಾಧನೆಗೆ ಗ್ರಾಮಸ್ಥರು ಕೊಂಡಾಡುತ್ತಿದ್ದಾರೆ. ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯಲ್ಲಿರುವ ರೋಟರಿನಗರದ ಸರಕಾರಿ ಕಿರಿಯ ಪ್ರಾಥಮಿಕ …

Read More »