Breaking News

ರಾಜಕೀಯ

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ನವದೆಹಲಿ – ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಈ ಆದೇಶ ಹೊರಡಿಸಿದ್ದಾರೆ. 7 ಜನ ಉಪಾಧ್ಯಕ್ಷರು, 3 ಪ್ರಧಾನ ಕಾರ್ಯದರ್ಶಿ, 7 ಕಾರ್ಯದರ್ಶಿ ಸೇರಿದಂತೆ ಒಟ್ಟೂ 22 ಜನರು ಪಟ್ಟಿಯಲ್ಲಿದ್ದಾರೆ.  

Read More »

ನಾಡ ಪಿಸ್ತೂಲು ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್ ಸೆರೆ

ಬೆಂಗಳೂರು, ಜು. 14: ಮಹಾರಾಷ್ಟ್ರದ ಶಿರಡಿಯಿಂದ ನಾಡ ಪಿಸ್ತೂಲು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್‌ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗಡೆ ನಗರದ ನಿವಾಸಿಗಳಾದ ಫಯಾಜ್ ಉಲ್ಲಾ, ಮಹಮದ್ ಆಲಿ, ಸಯ್ಯದ್ ಸಿರಾಜ್ ಅಹಮದ್ ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಫಯಾಜ್ ವುಲ್ಲಾ ವಿರುದ್ಧ ಈಗಾಗಲೇ ಆರು ಪ್ರಕರಣ ದಾಖಲಾಗಿವೆ. …

Read More »

ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ಮತ್ತು 4 ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರವು ಇದುವರೆಗೂ ಕೂಡ ಅಧಿವೇಶನ ನಡೆಸಲು ಯಾವುದೆ ಕ್ರಮಗಳನ್ನು ಕೈಗೊಳ್ಳದಿರುವುದು …

Read More »

ಖಾಲಿ ಜಾಗದಲ್ಲಿ ಗುಡಿಸಲು ಹಾಕಿ, ಕೈಯಲ್ಲಿ ದೊಣ್ಣೆ ಹಿಡಿದು ಡಿ.ಸಿ ಕಚೇರಿ ಮುಂದೆ ಈ ಬಡವರು ಪ್ರತಿಭಟನೆ ನಡೆಸುತ್ತಿರುವುದು ಏಕೆ?

ದಾವಣಗೆರೆ: ಬಡವರಿಗಾಗಿ ಮೀಸಲಿಟ್ಟ ಸೈಟ್​ಗಳನ್ನು ಬೇರೆಯವರಿಗೆ ನೀಡಲು ಮುಂದಾದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಖಾಲಿ ಜಾಗದಲ್ಲಿ ತಮ್ಮ ಗುಡಿಸಲು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಬಸಾಪುರ ಹಳ್ಳದ ಬಳಿ ಇರುವ ಜಾಗದಲ್ಲಿ ಬಡವರಿಗೆ ಉಚಿತ ಸೈಟ್​ ನೀಡುವುದಾಗಿ ಹಲವು ವರ್ಷಗಳ ಹಿಂದೆಯೇ ತಿಳಿಸಲಾಗಿತ್ತು. ಹೀಗಾಗಿ ಈ ಭಾಗದ ಜನರು ಮಹಾನಗರ ಪಾಲಿಕೆಗೆ ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಇವರೆಗೂ ಯಾವುದೇ ಸೈಟ್​ …

Read More »

ನೆಗೆಟಿವ್ ರಿಪೋರ್ಟ್ ಇಲ್ಲದಿದ್ದಲ್ಲಿ ಬಸ್ ವಾಪಸ್

ಮಹಾರಾಷ್ಟ್ರದಲ್ಲಿ ಕೊರೋನಾ, ಡೆಲ್ಟಾ ಪ್ಲಸ್ ವೈರಸ್ ಆತಂಕ ಹೆಚ್ಚುತ್ತಿದ್ದಂತೆ ಬೆಳಗಾವಿ ಗಡಿಯಲ್ಲಿ ತಪಾಸಣೆ ಹೆಚ್ಚಿಸಲಾಗಿದೆ. ಮಹಾರಾಷ್ಟ್ರದಿಂದ ಬರುವ ಪ್ರತಿಯೊಂದು ವಾಹನವನ್ನೂ ತಪಾಸಿಸಲಾಗುತ್ತಿದೆ. ವಾಹನದಲ್ಲಿದ್ದವರು ನೆಗೆಟಿವ್ ರಿಪೋರ್ಟ್ ಹೊಂದಿದ್ದಾರಾ ಎನ್ನುವುದನ್ನು ಚೆಕ್ ಮಾಡಲಾಗುತ್ತಿದೆ. ನೆಗೆಟಿವ್ ರಿಪೋರ್ಟ್ ಇಲ್ಲದಿದ್ದಲ್ಲಿ ಅವರನ್ನು ಕೆಳಗಿಳಿಸಲಾಗುತ್ತಿದೆ. ಮಿರಜ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಬಸ್ ನಲ್ಲಿ ಸಾಮಾಜಿಕ ಅಂತರ ಪಾಲಿಸದಿರುವ ಮತ್ತು ಕೆಲವರಲ್ಲಿ ನೆಗೆಟಿವ್ ರಿಪೋರ್ಟ್ ಇಲ್ಲದ ಹಾಗೂ ವ್ಯಾಕ್ಸಿನೇಶನ್ ಮಾಡಿಸದ ಕಾರಣಕ್ಕಾಗಿ ಬಸ್ ವಾಪಸ್ …

Read More »

3 ತಿಂಗಳ ಲಸಿಕೆ ಬದಲಾಗಿ ಕೊರೊನಾ ವ್ಯಾಕ್ಸಿನ್ ಕೊಟ್ಟ ಆರೋಪ; ಕೋಲಾರದಲ್ಲಿ ಮಗು ಸಾವು

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಆರೋಗ್ಯದಿಂದ ಇದ್ದ ಮೂರು ತಿಂಗಳ ಮಗು ಸಾವನ್ನಪ್ಪಿದ್ದು, ಆರೋಗ್ಯ ಇಲಾಖೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಂಜಲಿ ಹಾಗೂ ನಾಗರಾಜ್ ಎಂಬುವರ ಮೂರು ತಿಂಗಳ ಮಗು ಸಾವನ್ನಪ್ಪಿದೆ. ಗ್ರಾಮಸ್ಥರು ಹಾಗೂ ಮಗುವಿನ ಪೋಷಕರು ಮಾಡಿರುವ ಆರೋಪದ ಪ್ರಕಾರ.. ಆರೋಗ್ಯ ಸಿಬ್ಬಂದಿ ಮಕ್ಕಳಿಗೆ ನೀಡುವ ಮೂರು ತಿಂಗಳದ ಲಸಿಕೆ ಬದಲಾಗಿ, ಕೊರೊನಾ ವ್ಯಾಕ್ಸಿನ್ ನೀಡಲಾಗಿದೆ ಎಂದಿದ್ದಾರೆ. ನಿನ್ನೆ ಗ್ರಾಮದಲ್ಲಿ ಕೊರೊನಾ ವ್ಯಾಕ್ಸಿನ್ ಜೊತೆಗೆ …

Read More »

‘ಒಂದಾಗಿದ್ವಿ, ಒಂದಾಗಿರೋಣ’: ಒಟ್ಟಿಗೆ ಕಾಣಿಸಿಕೊಂಡ ದರ್ಶನ್-ಉಮಾಪತಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಹೆಸರಿನಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ತೆರೆಬೀಳುವ ಸಾಧ್ಯತೆ ಇದೆ. ನಿನ್ನೆಯಿಂದ ಭಾರಿ ಸದ್ದು ಮಾಡಿದ್ದ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಇಬ್ಬರು ಫುಲ್‌ಸ್ಟಾಪ್ ಇಟ್ಟಿದ್ದಾರೆ. ಈ ಪ್ರಕರಣದಿಂದ ದರ್ಶನ್ ಮತ್ತು ಉಮಾಪತಿ ನಡುವಿನ ಸ್ನೇಹ ಸಂಬಂಧ ಮುರಿದು ಬಿತ್ತು ಎನ್ನುವ ಅನುಮಾನ ಎಲ್ಲರಲ್ಲೂ ಕಾಡಿತ್ತು. ಆದರೀಗ ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳುವ ಒಂದಾಗಿದ್ವಿ, ಒಂದಾಗಿರೋಣ ಎಂಡಿದ್ದಾರೆ. ಮೈಸೂರಿನಿಂದ …

Read More »

‘ಲವ್ 360’ಗಾಗಿ ಮೇಘಾ ಶೆಟ್ಟಿಯನ್ನು ಸಂಪರ್ಕಿಸಿದ ನಿರ್ದೇಶಕ ಶಶಾಂಕ್

ನಿರ್ದೇಶಕ ಶಶಾಂಕ್ ತಮ್ಮ ಮುಂದಿನ ಸಿನಿಮಾ “ಲವ್ 360” ನಲ್ಲಿ ನವ ನಾಯಕ ಪ್ರವೀಣ್ ಅವರನ್ನು ತೆರೆಗೆ ತರಲಿದ್ದಾರೆ. ಈ ಚಿತ್ರಕ್ಕಾಗಿ ನಾಯಕಿಯ ಆಯ್ಕೆ ಅಂತಿಮಗೊಳಿಸಲು ನಿರ್ದೇಶಕರು ಹುಡುಕಾಟದಲ್ಲಿದ್ದಾರೆ. ಮತ್ತು, ಇತ್ತೀಚಿನ ಮಾಹಿತಿಯಂತೆ ಈ ಪಾತ್ರಕ್ಕಾಗಿ ಜನಪ್ರಿಯ ಕಿರುತೆರೆ ನಟಿ ಮೇಘಾ ಶೆಟ್ಟಿ ಅವರ ಸಂಪರ್ಕ ಮಾಡಿದ್ದಾರೆ. ಮೇಘಾ ತನ್ನ ಚೊಚ್ಚಲ ಟಿವಿ ಧಾರಾವಾಹಿ “ಜೊತೆ ಜೊತೆಯಲಿ”ಮೂಲಕ ಖ್ಯಾತರಾಗಿದ್ದಾರೆ. ಇದೀಗ ಅವರು ಗಣೇಶ್ ಅಭಿನಯದ “ತ್ರಿಬಲ್ ರೈಡಿಂಗ್” ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. …

Read More »

ತೆರೆಮೇಲೆ ಸೌರವ್ ಗಂಗೂಲಿ ಜೀವನಚರಿತ್ರೆ: ದಾದಾ ಪಾತ್ರದಲ್ಲಿ ಸ್ಟಾರ್ ನಟ

ಟೀಂ ಇಂಡಿಯಾದ ಮಾಜಿ ನಾಯಕ, ಖ್ಯಾತ ಕ್ರಿಕೆಟಿಗ, ದಾದಾ ಎಂದೇ ಖ್ಯಾತಿಗಳಿಸಿರುವ ಸೌರವ್ ಗಂಗೂಲಿ ಜೀವನಚರಿತ್ರೆ ತೆರೆಮೇಲೆ ಬರಲು ಸಜ್ಜಾಗುತ್ತಿದೆ. ತನ್ನ ಜೀವನವನ್ನು ಸಿನಿಮಾ ಮಾಡಲು ದಾದಾ ಗಂಗೂಲಿ ಅನುಮತಿ ನೀಡಿದ್ದಾರೆ. ಈಗಾಗಲೇ ಸಾಕಷ್ಟು ಕ್ರಿಕೆಟ್ ಆಟಗಾರರ ಜೀವನ ತೆರೆಮೇಲೆ ಬಂದಿದೆ ಮತ್ತು ಬರಲು ಸಿದ್ಧವಾಗುತ್ತಿದೆ. ಇದೀಗ ಗಂಗೂಲಿ ಬಯೋಪಿಕ್ ಕೂಡ ಸೇರಿಕೊಂಡಿದ್ದಾರೆ. ಇತ್ತೀಚಿಗೆ ಮತ್ತೋರ್ವ ಖ್ಯಾತ ಆಟಗಾರ ಸುರೇಶ್ ರೈನಾ ಬಯೋಪಿಕ್ ಸುದ್ದಿಯಲ್ಲಿತ್ತು. ಅಲ್ಲದೆ ತನ್ನ ಬಯೋಪಿಕ್ ಸೌತ್ …

Read More »

ಟೂರಿಸ್ಟ್​ ವ್ಯಾನ್​ ಸುತ್ತುವರೆದ ದೈತ್ಯಾಕಾರದ 3 ಹುಲಿಗಳು

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವೊಂದಿಷ್ಟು ಕ್ಯೂಟ್​ ವಿಡಿಯೋಗಳಾಗಿದ್ದರೆ ಇನ್ನು ಕೆಲವು ಬೆಚ್ಚಿಬೀಳಿಸುವ ಕಥೆಯನ್ನು ಹೇಳುತ್ತವೆ. ಕೆಲವು ಭಯಾನಕ ಸನ್ನಿವೇಶಗಳೂ ಸಹ ಭಾರೀ ಚರ್ಚೆಯಾಗುತ್ತವೆ. ಇದೀಗ ವೈರಲ್ ಆಗುತ್ತಿರುವ ವಿಡಿಯೋ(Viral Video) ಕೂಡಾ ಅಂಥದ್ದೇ! ವಿಡಿಯೋ ನೋಡಿದಾಕ್ಷಣ ಒಮ್ಮೆಲೆ ಭಯವಾಗುತ್ತದೆ. ಕೆಲವರು ಇಂಥಹ ಭಯಾನಕ ದೃಶ್ಯವನ್ನು ಇನ್ನೂ ನೋಡಿಲ್ಲ ಎಂದು ಹೇಳಿದ್ದರೆ ಇನ್ನೊರ್ವರು, ನಾನಲ್ಲಿದ್ದಿದ್ದರೆ ಹೃದಯ ಬಡಿತವೇ ನಿಂತೋಗ್ಬಿಟ್ತಿತ್ತೇನೋ.. ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಿಡಿಯೋ ಭಾರೀ ಸುದ್ದಿಯಲ್ಲಿರುವುದಂತೂ …

Read More »