Home / ರಾಜಕೀಯ (page 229)

ರಾಜಕೀಯ

ರಾಮನಗರ: ದರ್ಗಾದಲ್ಲಿ ವಿತರಿಸಿದ ಸಿಹಿ ಪ್ರಸಾದ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಮನಗರ: ನಗರದ ದರ್ಗಾದಲ್ಲಿ ನೀಡಿದ ಸಿಹಿ ಪ್ರಸಾದ ತಿಂದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧ ಮಹೋತ್ಸವದಲ್ಲಿ ಪ್ರಸಾದ ವಿತರಿಸಲಾಗಿದೆ. ಪ್ರಸಾದ ಸೇವಿಸಿ ಸ್ವಲ್ಪ ಸಮಯದ ನಂತರ ಜನರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಕೆಲವರು ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹಾಗು ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Read More »

600 ಕೋಟಿ ರೂ. ಭ್ರಷ್ಟಾಚಾರ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (Department of Women and Child Welfare) 600 ಕೋಟಿ ರೂ.ಗಿಂತಲೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ನಟರಾಜ್ ಶರ್ಮಾ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ (Lakshmi Hebbalkar) ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ನಡೆದಿದೆ. ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ (Nutritious Food) ಸರಬರಾಜಿನಲ್ಲಿ ಅವ್ಯವಹಾರ …

Read More »

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸ್ವಕ್ಷೇತ್ರದಲ್ಲೇ ಮುಖಭಂಗ: ಶಿಕಾರಿಪುರದ ತರಲಘಟ್ಟ ಗ್ರಾ.ಪಂಚಾಯತಿ ಕಾಂಗ್ರೆಸ್​ ತೆಕ್ಕೆಗೆ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮ ಪಂಚಾಯತಿಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್​ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ಬೆನ್ನಲ್ಲೇ ಸ್ವಕ್ಷೇತ್ರ ಶಿಕಾರಿಪುರದಲ್ಲೇ ಅವರಿಗೆ ಮುಖಭಂಗವಾಗಿದೆ. ತರಲಘಟ್ಟ ಗ್ರಾಮ ಪಂಚಾಯತಿ 30 ವರ್ಷದ ನಂತರ ಕಾಂಗ್ರೆಸ್​ ತೆಕ್ಕೆ ಸೇರಿದೆ. ತರಲಘಟ್ಟ ಗ್ರಾಮ ಪಂಚಾಯತಿಯು ಒಟ್ಟು 16 ಗ್ರಾಮ ಪಂಚಾಯತಿ ಸದಸ್ಯರನ್ನು ಒಳಗೊಂಡಿದೆ. ಇದರಲ್ಲಿ ಕಾಂಗ್ರೆಸ್​ ಬೆಂಬಲಿತ 8 ಹಾಗೂ ಬಿಜೆಪಿ ಬೆಂಬಲಿತ 8 ಸದಸ್ಯರು ಇದ್ದಾರೆ. …

Read More »

ನಮ್ಮ ಗ್ಯಾರಂಟಿ ಯೋಜನೆ ಕದ್ದು ಮೋದಿ ಪಂಚರಾಜ್ಯ ಚುನಾವಣೆ ಎದುರಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್‌

ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿ ಭಾರತ್‌ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸು ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು …

Read More »

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಕಲಬುರಗಿ: ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆಗೈದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ರಾಠೋಡ ಜೊತೆಗಿದ್ದ ಆಪ್ತ ಸಹಾಯಕನಿಗೂ ಗಾಯಗಳಾಗಿದೆ. ಇಬ್ಬರನ್ನೂ ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಚಿತ್ತಾಪುರ ತಾಲೂಕಿನ ಶಂಕರ್‌ವಾಡಿ ಬಳಿ ಘಟನೆ ನಡೆದಿದೆ. ಮಾಲಗತ್ತಿ ಬಳಿಯ ನ್ಯಾಷನಲ್ ಹೈವೆ ಸಮೀಪದ ತಮ್ಮ ಫಾರಂಹೌಸ್​ನಿಂದ ತಡರಾತ್ರಿ ಕಲಬುರಗಿಗೆ ಬರುತ್ತಿದ್ದಾಗ ಮಾರ್ಗಮಧ್ಯೆ ಶಂಜರ್ ವಾಡಿ ಬಳಿ ದುಷ್ಕರ್ಮಿಗಳು ಮದ್ಯದ ಬಾಟಲಿ, …

Read More »

ನಮ್ಮ ಗ್ಯಾರಂಟಿ ಯೋಜನೆ ಕದ್ದು ಮೋದಿ ಪಂಚರಾಜ್ಯ ಚುನಾವಣೆ ಎದುರಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್‌

ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿ ಭಾರತ್‌ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸು ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು …

Read More »

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಬೇಕು: ಬಸವಜಯ ಮೃತ್ಯುಂಜಯ ಸ್ವಾಮೀಜಿ

ವಿಜಯಪುರ: “ಜಿಲ್ಲೆಯ ನೂತನ ತಾಲೂಕು ತಿಕೋಟಾದ ಕನಮಡಿಯಲ್ಲಿ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ” ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತಿಕೋಟಾ ತಾಲೂಕಿನಲ್ಲಿ ಅತೀ ಹೆಚ್ಚು ಪಂಚಮಸಾಲಿ ಸಮಾಜದವರು ಇರುವ ಗ್ರಾಮವೆಂದರೆ ಅದು ಕನಮಡಿ ಗ್ರಾಮ, ಇಲ್ಲಿಯೇ ಪಂಚಮಸಾಲಿ ಸಮಾಜದ ಮೀಸಲಾತಿ ಹಕ್ಕೊತ್ತಾಯ ಬೃಹತ್ ಸಮಾವೇಶ ಮಾಡಲಿದ್ದೇವೆ” ಎಂದರು. “ರಾಣಿ ಚೆನ್ನಮ್ಮ ಅವರ ಜಯಂತ್ಯುತ್ಸವ ಮಾಡಬೇಕೆಂದು …

Read More »

ಬರಲಿದೆ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಕಠಿಣ ಕಾಯ್ದೆ; ಅಕ್ರಮ ಎಸಗಿದ್ರೆ ಆಸ್ತಿ ಮುಟ್ಟುಗೋಲು

ಬೆಂಗಳೂರು : ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ರಾಜ್ಯ ಸರ್ಕಾರದ ನಿದ್ದೆಗೆಡಿಸುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪರೀಕ್ಷೆ ಅಕ್ರಮ ಸಾಕಷ್ಟು ಸದ್ದು ಮಾಡಿತ್ತು. ಸಾಲು ಸಾಲು ನೇಮಕಾತಿ ಪರೀಕ್ಷೆ ಅಕ್ರಮಗಳಿಂದ ಅನೇಕ ಯೋಗ್ಯ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮ ತಡೆಯಲು ರಾಜ್ಯ ಸರ್ಕಾರ ಇದೀಗ ಪ್ರತ್ಯೇಕ ಕಾಯ್ದೆ ತರಲು ತೀರ್ಮಾನಿಸಿದೆ. ಅಷ್ಟಕ್ಕೂ ಈ ಉದ್ದೇಶಿತ ಕಾಯ್ದೆಯಲ್ಲಿನ ಕಠಿಣ ನಿಯಮಗಳೇನು? ಎಂಬ ವರದಿ ಇಲ್ಲಿದೆ. ಪಿಎಸ್​ಐ ನೇಮಕಾತಿ …

Read More »

ನನಗೆ ರಾಜಾಧ್ಯಕ್ಷ ಸ್ಥಾನ ನೀಡಿ ಟಿ20 ಮ್ಯಾಚ್ ​ಆಡಲು ಅವಕಾಶ ಮಾಡಿಕೊಟ್ಟಿದ್ದಾರೆ: ಬಿ ವೈ ವಿಜಯೇಂದ್ರ

ಮೈಸೂರು: ನಮ್ಮ ರಾಷ್ಟ್ರೀಯ ಅಧ್ಯಕ್ಷರು ನನಗೆ ರಾಜಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನ ನೀಡಿ ಟಿ20 ಮ್ಯಾಚ್ ಆಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕ್ರಿಕೆಟ್​ನಂತೆ ರಾಜಕೀಯದಲ್ಲೂ ಟೀಂ ವರ್ಕ್​ ಇರಬೇಕು ಎಂದು ಹೇಳುತ್ತಾರೆ. ನಾವು ಒಂದು ತಂಡವಾಗಿ ಕೆಲಸ ಮಾಡಿದರೆ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು. ಬರುವ ದಿನಗಳಲ್ಲಿ ನನ್ನ ಟಿ20 ಮ್ಯಾಚ್​ ಅನ್ನು ನೀವೇ ನೋಡಲಿದ್ದೀರಿ. ರಾಜಕೀಯವಾಗಿ ನನ್ನನ್ನು ಗುರುತಿಸಿದ್ದು …

Read More »

ವಿದ್ಯುತ್‌ ತಂತಿ ತುಳಿದು ತಾಯಿ-ಮಗಳು ಸಾವು: ಐವರು ಸಿಬ್ಬಂದಿ ಅಮಾನತು

ಬೆಂಗಳೂರು: ವೈಟ್‌ ಫೀಲ್ಡ್‌ ವಿಭಾಗ ವ್ಯಾಪ್ತಿಯ ಕಾಡುಗೋಡಿಯ 4ನೇ ಪೂರ್ವ ಉಪ ವಿಭಾಗದ ಕಾಡುಗೋಡಿ ಹೋಪ್‌ ಫಾರ್ಮ್‌ ಸಿಗ್ನಲ್‌ ಸಮೀಪ ಪಾದಚಾರಿ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ 11ಕೆವಿ ವಿದ್ಯುತ್‌ ತಂತಿ ತುಳಿದು ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕರ್ತವ್ಯಲೋಪ ಕಂಡ ಬಂದ ಹಿನ್ನೆಲೆಯಲ್ಲಿ ಬೆಸ್ಕಾಂನ ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಿ, ಇಬ್ಬರು ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ಶೋಕಾಸ್‌ ನೊಟೀಸ್‌ ಜಾರಿಗೊಳಿಸಲಾಗಿದೆ.   ಭಾನುವಾರ ನಸುಕಿನ …

Read More »