Breaking News
Home / ರಾಜಕೀಯ (page 230)

ರಾಜಕೀಯ

ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!

ಬೆಂಗಳೂರು: ಈವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ಮಾಡಿ ಕಾಂಗ್ರೆಸ್​ ಟೀಕೆ ಗುರಿಯಾಗಿದ್ದ ಬಿಜೆಪಿ ಕೊನೆಗೂ ಮಾಜಿ ಉಪಮುಖ್ಯಮಂತ್ರಿ ಆರ್​ ಅಶೋಕ್​ ಅವರಿಗೆ ವಿಪಕ್ಷ ನಾಯಕನಾಗಿ ಪ್ರಮುಖ ಜವಾಬ್ದಾರಿ ನೀಡಿದೆ. ಆದ್ರೆ ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.     ವಿಪಕ್ಷ ನಾಯಕ ಸಂಬಂಧ ಸರಣಿ ಎಕ್ಸ್ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ವಿರೋಧ …

Read More »

ನಾನು, ವಿಜಯೇಂದ್ರ ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆ, ಲೋಕಸಭೆಯ 28 ಸ್ಥಾನಗಳನ್ನೂ ಗೆಲ್ಲುತ್ತೇವೆ:

ಬೆಂಗಳೂರು: ವಿಜಯೇಂದ್ರ ಹಾಗೂ ನನಗಿಬ್ಬರಿಗೂ ಹೊಸ ಜವಾಬ್ದಾರಿ ಸಿಕ್ಕಿದೆ. ವರಿಷ್ಠರು ಲೋಕಸಭಾ ಕ್ಷೇತ್ರದಲ್ಲಿ ಎಲ್ಲ 28 ಕ್ಷೇತ್ರಗಳು ಎನ್.ಡಿ.ಎ ಮೈತ್ರಿಕೂಟದ ಪಾಲಾಗಬೇಕು ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಬೇಕು ಎನ್ನುವ ಟಾಸ್ಕ್ ನೀಡಿದ್ದಾರೆ. ನಾವಿಬ್ಬರೂ ಯಾವುದೇ ವಿವಾದಗಳಿಲ್ಲದೇ, ಜೋಡೆತ್ತುಗಳಂತೆ ಕೆಲಸ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ …

Read More »

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಪುನೀತ್ ಹೆಸರಿಡುವಂತೆ ಬಿಬಿಎಂಪಿಗೆ ರಾಜ್ಯ ಸರ್ಕಾರದ ಸೂಚನೆ

ಪುನೀತ್ ರಾಜ್ ​ಕುಮಾರ್ ಅವರ ಹೆಸರು ನಾಮಕರಣ ಮಾಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ಆದೇಶ ಪತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಿರಾರು ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ನಾಡು ಕಂಡ ಶೇಷ್ಠ ಕಲಾವಿದ, ಹೃದಯ ಶ್ರೀಮಂತ, ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರ ಸವಿನೆನಪಿನಲ್ಲಿ ಪುನೀತ್ ರಾಜ್​ ಕುಮಾರ್ ಶುದ್ಧ ಕುಡಿಯುವ ನೀರಿನ ಘಟಕ ಎಂದು ಈ …

Read More »

ಬ್ಲ್ಯಾಕ್​ಮೇಲ್ ಮಾಡುವವರಿಗೆ ನಾನು ಹೆದರಲ್ಲ – ವಿಜಯೇಂದ್ರ, ಬಿಎಸ್​​​ವೈ ಬಗ್ಗೆ ಮಾತಾಡಲ್ಲ: ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಹೊಂದಾಣಿಕೆ ರಾಜಕಾರಣ, ಕುಟುಂಬದ ಹಿಡಿತ, ಬ್ಲ್ಯಾಕ್​ಮೇಲ್ ರಾಜಕಾರಣವನ್ನೆಲ್ಲಾ ಹೈಕಮಾಂಡ್ ಪ್ರತಿನಿಧಿಗಳ ಮುಂದೆ ಬಯಲು ಮಾಡಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ನಾನು ಧೈರ್ಯವಾಗಿ ಇರುವ ಸತ್ಯವನ್ನೇ ಹೇಳುತ್ತೇನೆ. ಪ್ರತಿಪಕ್ಷ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ಕೊಡುವಂತೆ ಕೇಳುತ್ತೇನೆ. ಒಂದು ವೇಳೆ ಉತ್ತರ ಕರ್ನಾಟಕಕ್ಕೆ ಅವಕಾಶ ನೀಡದಿದ್ದಲ್ಲಿ ಜನರು ಮುಂದೆ ಉತ್ತರ ನೀಡಲಿದ್ದಾರೆ. ನಾನೂ ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬಿಜೆಪಿ …

Read More »

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆ ಸಿ ಎಂ ಇಬ್ರಾಹಿಂ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಅಮಾನತು ಆದೇಶಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ), ಹಿಂದಿನ ಮಹಾಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಬೋಜೇಗೌಡ ಅವರು ದಿನಾಂಕ: 19-10-2023ರ ವರದಿಯಲ್ಲಿ ಕರ್ನಾಟಕ ರಾಜ್ಯ ಪರಿಷತ್‌ ಪ್ರಸ್ತುತ ಕಾರ್ಯಕಾರಿ ಸಮಿತಿ, …

Read More »

ನರೇಗಾ ಯೋಜನೆಯಲ್ಲಿ ಮಾನವ ದಿನಗಳನ್ನ ಹೆಚ್ಚಿಸಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಬರಗಾಲವಿರುವ ಕಾರಣ ನರೇಗಾ ಯೋಜನೆಯ ಮಾನವ ದಿನಗಳನ್ನು 100 ದಿನಗಳ ಬದಲು 150 ದಿನಗಳಿಗೆ ಏರಿಕೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಜಿಕೆವಿಕೆ ಆವರಣದಲ್ಲಿ ನಡೆದ ಕೃಷಿಮೇಳ- 2023ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕನಕಪುರ ತಾಲೂಕಿನಲ್ಲಿ ಪ್ರತಿ ರೈತರಿಗೂ ನರೇಗಾ ಯೋಜನೆಯ ಲಾಭ ದೊರೆಯುವಂತೆ ಮಾಡಿದ್ದೇನೆ. ಸಾಕಷ್ಟು ಜನ ರೈತರು ಕೊಟ್ಟಿಗೆ ಸೇರಿದಂತೆ ಸಾಕಷ್ಟು ಅನುಕೂಲ ಮಾಡಿಕೊಂಡಿದ್ದಾರೆ. ಇದರಿಂದ …

Read More »

ಗರ್ಭಿಣಿ ವಕೀಲೆಗೆ ಮನೆ ಬಳಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಮನೆ ಬಳಿಯೇ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್​ನ ಬೆಂಗಳೂರು ಪೀಠದಲ್ಲಿ ಮುಖ್ಯ ಪರೀಕ್ಷೆ ನಡೆಯುತ್ತಿದೆ. ಆದರೂ ಗರ್ಭಿಣಿಯಾಗಿರುವ ವಕೀಲೆ ನೇತ್ರಾವತಿ ಎಂಬುವವರು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ನವೆಂಬರ್ 18 ಮತ್ತು 19ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಅವಕಾಶ …

Read More »

ಆಹಾರ ಸರಬರಾಜಿನಲ್ಲಿ ಗೋಲ್‌ಮಾಲ್ ಆರೋಪ: ಲೋಕಾಯುಕ್ತಕ್ಕೆ‌ ದೂರು

ಬೆಂಗಳೂರು : ಮಕ್ಕಳು ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ಅನರ್ಹ ಸಂಸ್ಥೆಗಳಿಗೆ ನೀಡಿದ ಗುತ್ತಿಗೆಯಲ್ಲಿ ಸುಮಾರು 600 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಸ್ ನಟರಾಜ ಶರ್ಮಾ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.   ಇಲಾಖೆಯಲ್ಲಿ ಜವಾಬ್ದಾರಿ ಹೊತ್ತ ಮೂವರ ವಿರುದ್ಧ ದೂರು ನೀಡಲಾಗಿದೆ. ಇಲಾಖೆಯು‌ ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ನೀಡಿರುವ ಟೆಂಡರ್ ವಿಚಾರದಲ್ಲಿ ಗೋಲ್‌ಮಾಲ್ ನಡೆದಿದೆ …

Read More »

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೂ ಮುನ್ನ ಹೋಟೆಲ್​ನಿಂದ ನಿರ್ಗಮಿಸಿದ ಯತ್ನಾಳ್​, ಜಾರಕಿಹೊಳಿ

ಬೆಂಗಳೂರು: ಪ್ರತಿಪಕ್ಷ ನಾಯಕರ ಆಯ್ಕೆ ಹಿನ್ನೆಲೆ ಕರೆಯಲಾಗಿರುವ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದ್ದು, ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಹೈಕಮಾಂಡ್​ನಿಂದ ಆಗಮಿಸಿರುವ ವೀಕ್ಷಕರು ಅಭಿಪ್ರಾಯ ಸಂಗ್ರಹ ಕಾರ್ಯ ನಡೆಸಲಿದ್ದಾರೆ. ನಂತರ ಹೈಕಮಾಂಡ್​ಗೆ ವರದಿ ಸಲ್ಲಿಸಲಿದ್ದು, ನಂತರ ಹೈಕಮಾಂಡ್​ನಿಂದ ಹೆಸರು ಪ್ರಕಟವಾಗಲಿದೆ. ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಸಭೆ ಆರಂಭಕ್ಕೂ ಮುನ್ನ ಹೋಟೆಲ್​ಗೆ ಬಂದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ …

Read More »

ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ: ಹೆಬ್ಬಾಳಕರ್

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ. ಅಲ್ಲಿ ನಾನು ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆಯೇ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.     ಈ ಕುರಿತು ಹೇಳಿಕೆ ನೀಡಿರುವ ಅವರು, ಪತ್ರಕರ್ತರು ರಾಜಕೀಯಕ್ಕಿಂತ ಅಭಿವೃದ್ಧಿ ವಿಷಯದ ಮೇಲೆ …

Read More »