Breaking News

ರಾಜಕೀಯ

ಮಗು ಅಪಹರಣದ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪಣಜಿ: ಮಗುವಿನ ಅಪಹರಣ ಪ್ರಕರಣದಲ್ಲಿ ಶಂಕಿತ ಆರೋಪಿ ವಿಶ್ರಾಂತಿ ಗಾವಡೆಗೆ ಬಾಲ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತನಿಖಾ ಕಾರ್ಯ ಪೂರ್ಣಗೊಳ್ಳುವ ವರೆಗೆ ಮಗುವಿನ ಪಾಲಕರು ವಾಸಿಸುವ ಪರಿಸರಕ್ಕೆ ತೆರಳಬಾರದು ಎಂದು ನ್ಯಾಯಾಲಯವು ಶಂಕಿತ ಆರೋಪಿಗೆ ಷರತ್ತು ವಿಧಿಸಿದೆ. ಬಾಲ ನ್ಯಾಯಾಲಯದ ನ್ಯಾಯಾಧೀಶ ವಿಜಯಾ ಆಮರೆ ರವರು ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡು, 10,000 ರೂ ಮೌಲ್ಯದ ವಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ. ಈ ಪ್ರಕರಣದ ಸಾಕ್ಷೀದಾರರಾಗಿರುವ …

Read More »

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

ಬನಹಟ್ಟಿ: ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ ಸಂಜೆ 97000 ಕ್ಯೂಸೆಕ್ ನೀರು ಬಂದಿದೆ. ಜಲಾಶಯದ ಹೊರ ಹರಿವು 96 ಸಾವಿರ ಕ್ಯೂಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ …

Read More »

ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಶಾಸಕ ಬೆಲ್ಲದ್ ಅವರಿಗೆ ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬುವವರಿಂದ ಕರೆ ಬಂದಿದ್ದು, ಫೋನ್ ಕದ್ದಾಲಿಕೆ ಮಾಡುತ್ತಿರುವ ಬಗ್ಗೆ ಸ್ವತಃ ಶಾಸಕರು ಆರೋಪಿಸಿದ್ದರು. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಡಿಜಿ, ಐಜಿಪಿ ಕಚೇರಿಯಿಂದ …

Read More »

ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಮಹಾಲಿಂಗಪುರ: ಬಾಗಲಕೋಟ ಜಿಲ್ಲೆಯ ಮುಧೋಳ ಮತ್ತು ನೂತನ ರಬಕ” ಬನಹಟ್ಟಿ ತಾಲೂಕಿನಲ್ಲಿ ಪ್ರಸಕ್ತ ವರ್ಷ ನೀರಿಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ, ಆದರೂ ಈ ಭಾಗದ ಜನತೆಗೆ ಪ್ರವಾಹದ ಪರಿಣಾಮ ಬೀರಿದೆ. ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಂದಾಗಿ “ರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಗುರುವಾರ “ಡಕಲ್ ಜಲಾಶಯಕ್ಕೆ ಸುಮಾರು 17114 ಕ್ಯೂಸೆಕ್ ಒಳಹರಿವು ಇದೆ. “ಡಕಲ್ ಜಲಾಶಯದಿಂದ …

Read More »

2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ , ಮತ್ತೆ ಸಿಎಂ ನಾವೇ: H.D.K.

ಮಂಡ್ಯ: 2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾವು ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಜೆಡಿಎಸ್ ಪಕ್ಷ ಹೋರಾಡುತ್ತಿರುವುದು ಅಧಿಕಾರಕ್ಕಾಗಿ ಅಲ್ಲ, ನಿಮ್ಮ ಗೌರವಯುತ ಬದುಕು, ನಾಡಿನ ಸಮಸ್ಯೆ ಬಗೆಹರಿಸಲು. ರಾಷ್ಟ್ರೀಯ ಪಕ್ಷಗಳು ಕಿತ್ತಾಟದಲ್ಲಿ ತೊಡಗಿದ್ದು, ರಾಜ್ಯದ ಸಂಪತ್ತು ಲೂಟಿ ಮಾಡಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು.   ರಾಜ್ಯ ಬಿಜೆಪಿ …

Read More »

ಹಳ್ಳಿಗಳ ಜನರಿಗೆ ಲಸಿಕೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕ್‌ ಖರ್ಗೆ ಕಿಡಿ

ಕಲಬುರ್ಗಿ: ‘ಜಿಲ್ಲೆಯ ಜನಸಂಖ್ಯೆಯಲ್ಲಿ ಇನ್ನೂ ಕೇವಲ ಶೇ 10ರಷ್ಟು ಮಂದಿಗೆ ಮಾತ್ರ ಕೋವಿಡ್‌ ಲಸಿಕೆ ನೀಡಲಾಗಿದೆ. ಅದರಲ್ಲೂ ಹಳ್ಳಿಗಳ ಜನರಿಗೆ ಲಸಿಕೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಕಿಡಿ ಕಾರಿದರು. ‘ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಸೇನಾನಿಗಳಿಗೇ ಪೂರ್ಣವಾಗಿ ಲಸಿಕೆ ನೀಡಿಲ್ಲ. ಇನ್ನು ನಾಗರಿಕರಿಗೆ ಯಾವಾಗ ನೀಡುತ್ತಾರೆ? ಲಸಿಕೆ ನೀಡುವಲ್ಲಿ ರಾಜ್ಯ ಸರ್ಕಾರ ಕಲಬುರ್ಗಿ ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತಾಳಿದ್ದೇ ಈ ಹಿನ್ನಡೆಗೆ ಕಾರಣ’ …

Read More »

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …

Read More »

ಮನೆ ಕಾಂಪೌಂಡ್​​ನಲ್ಲಿದ್ದ ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ, ಸ್ಥಳೀಯರಲ್ಲಿ ಆತಂಕ

ಹಾಸನ: ಮನೆಯ ಕಾಂಪೌಂಡ್​​ನಲ್ಲಿದ್ದ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಭೈರನಾಯಕನಹಳ್ಳಿಯಲ್ಲಿ ನಡೆದಿದೆ.‌ ತಡರಾತ್ರಿ 2.30ರ ಸಮಯದಲ್ಲಿ ಗ್ರಾಮದೊಳಗೆ ಬಂದಿರುವ ಚಿರತೆ ಗರುಡನಗಿರಿ ರಸ್ತೆಯ ಮಲ್ಲೇಗೌಡ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಮಲಗಿದ್ದ ನಾಯಿಯನ್ನು ಎಳೆದೊಯ್ದಿದೆ. ಬೆಳಗ್ಗೆ ನಾಯಿ ಕಾಣಿಸದಿದ್ದಾಗ ಮಲ್ಲೇಗೌಡರು ಸಿಸಿಟಿವಿ ಪರಿಶೀಲಿಸಿದ್ದಾರೆ. ಚಿರತೆ ನಾಯಿಯನ್ನು ಹೊತ್ತೊಯ್ಯವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಾಗಾಗಿ ಕೂಡಲೇ ಚಿರತೆಯನ್ನು …

Read More »

ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ

ರಾಯಚೂರು: ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭಗೊಳ್ಳಲಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಠಕ್ಕೆ ಬರಲಾಗದ ಭಕ್ತರು https://www.srsmatha.org/online ಮೂಲಕ ರಾಯರ ದರ್ಶನ ಪಡೆಯಬಹುದು ಎಂದು ಮಠದ …

Read More »