Breaking News

ರಾಜಕೀಯ

16.80 ಲಕ್ಷದ ಸ್ಟಾಂಪ್ ಡ್ರಗ್ಸ್ ವಶ- ಕಿಂಗ್ ಪಿನ್ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಐಷಾರಾಮಿ ವ್ಯಕ್ತಿಗಳಿಗೆ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಮೂಲಕ ಡ್ರಗ್ಸ್ ವಿರುದ್ಧದ ಸಮರವನ್ನು ಮುಂದುವರಿಸಿದ್ದಾರೆ. ನಿಷೇಧಿತ ಮಾದಕವಸ್ತು ಎಲ್‍ಎಸ್‍ಡಿ ಮಾರಾಟ ಮಾಡುತ್ತಿದ್ದ ಕೇರಳದ ಕ್ಯಾಲಿಕಟ್ ಮೂಲದ ಆರೋಪಿ ಮೊಹಮ್ಮದ್ ಅಜಿನಾಸ್ ನನ್ನು ಖೆಡ್ಡಾಕೆ ಬೀಳಿಸಿದ್ದಾರೆ. ಈತ ವಿದ್ಯಾರ್ಥಿಯಾಗಿದ್ದು, ಪಿ.ಜಿಯಲ್ಲಿ ವಾಸವಾಗಿದ್ದ. ನಗರದ ಕದ್ರಿ ಮೈದಾನದಲ್ಲಿ ಗ್ರಾಹಕರ ಬರುವಿಕೆಗಾಗಿ ಕಾಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು. 16.80ಲಕ್ಷ …

Read More »

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು. …

Read More »

ವೈದ್ಯಕೀಯ ವಸ್ತುಗಳ ಮೇಲಿನ ತೆರಿಗೆ ಕಡಿತ: ನಿರ್ಮಲಾ ಸೀತಾರಾಮನ್

ನವದೆಹಲಿ: ಇಂದು ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಹಾಗೂ ವೈದ್ಯಕೀಯ ಆಮ್ಲಜನಕದ ಸರಕುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಕುರಿತು ಚರ್ಚಿಸಲಾಗಿದೆ. Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ. ಈ ಕುರಿತು ಮಾತನಾಡಿದ …

Read More »

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ ಮಹಮೈತ್ರಿ ಅಗತ್ಯವಿದೆ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್

ಮುಂಬೈ: 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ “ಮಹಾಮೈತ್ರಿ” ರಚಿಸುವ ಅವಶ್ಯಕತೆಯಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ. ಕಿಶೋರ್ ಅವರು ಮುಂಬೈನ ನಿವಾಸದಲ್ಲಿ ಶುಕ್ರವಾರ ಪವಾರ್ ಅವರನ್ನು ಭೇಟಿಯಾಗಿದ್ದು, ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಸಭೆ ರಾಜಕೀಯ ವಲಯಗಳಲ್ಲಿ …

Read More »

ಕೋವಿಡ್‌: ಕರ್ನಾಟಕದಲ್ಲಿ 42 ಮಕ್ಕಳು ಅನಾಥ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಹಲವು ಕುಟುಂಬಗಳ ಖುಷಿ ಕಸಿದುಕೊಂಡಿದೆ. ಈ ಪಿಡುಗಿನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು 42 ಮಂದಿ ಮಕ್ಕಳು ಹೆತ್ತವರನ್ನು ಕಳೆದುಕೊಂಡಿದ್ದಾರೆ. ಇವರ ಬದುಕು ಡೋಲಾಯಮಾನವಾಗಿದೆ. ರಾಯಚೂರಿನಲ್ಲಿ ನಾಲ್ಕು ಮಕ್ಕಳು ತಬ್ಬಲಿಗಳಾಗಿದ್ದಾರೆ. ಬಾಗಲಕೋಟೆ, ಬೀದರ್‌, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ, ಕೊಡಗು ಹಾಗೂ ಕೋಲಾರದಲ್ಲಿ ತಲಾ ಮೂವರು, …

Read More »

ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

ಬನಹಟ್ಟಿ: ತೈಲ ಬೆಲೆ ಹಾಗೂ ಅದರ ಉತ್ಪನ್ನಗಳ ಬೆಲೆಗಳ ಏರಿಕೆಯಿಂದಾಗಿ ದೇಶದ ರೈತರು, ವ್ಯಾಪಾರಸ್ಥರು ಕೂಲಿ ಕಾರ್ಮಿಕರು ದಾರುಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಇವರೆಲ್ಲರ ಮೇಲೆ ಕಾಳಜಿ ಇಲ್ಲ. ಕೇಂದ್ರ ಸರ್ಕಾರದವರು ಸೇವಕರಲ್ಲ, ಅವರು ವ್ಯಾಪಾರಿಗಳು. ಅವರು ಜನರ ರಕ್ತ ಹೀರುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವೆ ಹಾಗೂ ರಾಜ್ಯ ಕಾಂಗ್ರೆಸ್ ವಕ್ತಾರರಾದ ಉಮಾಶ್ರೀ ಆರೋಪಿಸಿದರು. ಅವರು ಶನಿವಾರ ಬನಹಟ್ಟಿಯ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ …

Read More »

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ

ದೆಹಲಿ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ದುಃಖದ ವಿಚಾರ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಈ ಬಗ್ಗೆ ಕಾಂಗ್ರೆಸ್ ಮರುಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ. ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೋದಿ ಶಾ ಆಳ್ವಿಕೆಯ ಅಂತ್ಯಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಹೋರಾಟ ನಡೆಸುತ್ತಿದ್ದಾರೆ ಎಂದು …

Read More »

ಪತಿ ಜೊತೆ ಕಿರಿಕ್: 4 ವರ್ಷದ ಮಗನೊಂದಿಗೆ ನೂರು ಕಿ.ಮೀ ನಡೆದ ತಾಯಿ

ದಾವಣಗೆರೆ, ಜೂನ್ 12: ಪತಿಯೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಸುಮಾರು ನೂರಕ್ಕೂ ಹೆಚ್ಚು ಕಿಲೋಮೀಟರ್‌ವರೆಗೆ ನಾಲ್ಕು ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ಕಾಲ್ನಡಿಗೆಯಲ್ಲಿ ಬಂದ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದ ನಾಗರತ್ನ ಅವರೇ ತನ್ನ ಪುಟ್ಟ ಮಗುವಿನೊಂದಿಗೆ ನಡೆದುಕೊಂಡು ಬಂದ ಮಹಿಳೆಯಾಗಿದ್ದಾಳೆ. ನಂತರ ದಾವಣಗೆರೆಯ ಕೆಟಿಜೆ ನಗರ ಪೊಲೀಸರು ಮಹಿಳೆಗೆ ತನ್ನ ಮಗುವಿನೊಂದಿಗೆ ಕಾರಿನಲ್ಲಿ ಹೋಗಲು ಅನುವು ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆ ಹಿನ್ನೆಲೆ ಶಿವಮೊಗ್ಗದ …

Read More »

ಊರು-ಕೇರಿ’ ಬಿಟ್ಟು ತೆರಳಿದ ಡಾ. ಸಿದ್ದಲಿಂಗಯ್ಯ: ಬೆಂಗಳೂರಿನ ಕಲಾಗ್ರಾಮದಲ್ಲಿ ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

ಬೆಂಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ನಿಧನರಾದ ದಲಿತ ಸಾಹಿತಿ, ಕವಿ ಡಾ ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ಬೌದ್ಧ ಧರ್ಮದ ಸಂಪ್ರದಾಯದಂತೆ ಬೆಂಗಳೂರಿನ ಕಲಾ ಗ್ರಾಮದಲ್ಲಿ ನೆರವೇರಿತು. ಕಲಾಗ್ರಾಮದಲ್ಲಿ ಡಾ ಯು ಆರ್ ಅನಂತ ಮೂರ್ತಿಯವರ ಸಮಾಧಿ ಪಕ್ಕ ಡಾ ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಕೋವಿಡ್-19 ನಿರ್ಬಂಧಗಳ ನಡುವೆ ಕುಟುಂಬಸ್ಥರು, ಸಮೀಪದ ಬಂಧುಗಳು, ಗಣ್ಯರು ಅಂತ್ಯಕ್ರಿಯೆ ವೇಳೆ ಹಾಜರಿದ್ದರು. ಸಮಾಜದಲ್ಲಿ ಹೋರಾಟದ ಕಿಚ್ಚನ್ನು …

Read More »

ಆರೋಪಿ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣ ಬಹಿರಂಗವಾದಾಗಿನಿಂದ ಕಳೆದ 100 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಬೆಂಗಳೂರಿನ ಆಡುಗೋಡಿ ಎಸ್ ಐಟಿ ಟೆಕ್ನಿಕಲ್ ಸೆಲ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ಹಾಗೂ ಶ್ರವಣ್ ವಿರುದ್ಧ ರಮೇಶ್ ಜಾರಕಿಹೊಳಿ ಹನಿ ಟ್ರ್ಯಾಪ್, ಬ್ಲ್ಯಾಕ್ …

Read More »