ಬೆಂಗಳೂರು : ತೈಲ ಬೆಲೆ, ವಿದ್ಯುತ್ ಬೆಲೆ ಏರಿಕೆ ಬಳಿಕ ರಾಜ್ಯದಲ್ಲಿ ಅಗತ್ಯ ವಸ್ತುವಾಗಿರುವ ತರಕಾರಿ ಬೆಲೆಯೂ ಗಗನಕ್ಕೇರಿದೆ. ಇದರ ಪರಿಣಾಮ ಈಗಾಗಲೇ ಕೊರೋನಾ ಸಾಂಕ್ರಾಮಿಕ ರೋಗದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ತರಕಾರಿ ಬೆಲೆ ಏರಿಕೆಯಾಗಿದೆ. ಸಾಂಕ್ರಾಮಿಕ ರೋಗ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪರಿಣಾಮ ಬೆಲೆ ಏರಿಕೆಯಾಗಿದೆ. ಕೇವಲ ಇದೊಂದೇ ಅಲ್ಲ, ಗ್ರಾಮೀಣ ಭಾಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವುದರಿಂದಲೂ ಬೆಲೆ …
Read More »ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲ : ಡಿಕೆಶಿ
ಚಿತ್ರದುರ್ಗ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗರಂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲವೆಂದು ಡಿಕೆಶಿ ಆಕ್ರೋಶ ಹೊರಹಾಕಿ, ಕಾರ್ಯಕರ್ತರಿಗೆ ಶಿಸ್ತು ಕಲಿಸಿ ಎಂದು ಜಿಲ್ಲಾಧ್ಯಕ್ಷ ತಾಜ್ ಪೀರ್ಗೆ ಸೂಚನೆ ನೀಡಿದರು. ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಮಾತನಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಮಧ್ಯದಲ್ಲಿ ಮಾತನಾಡಿದ್ದರು. ಇದಕ್ಕೆ ಸಿಟ್ಟುಗೊಂಡ ಡಿಕೆಶಿ ಕಾರ್ಯಕರ್ತರ ವಿರುದ್ಧ ಗರಂ …
Read More »ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆ ಜಾರಿಗೊಳಿಸಲು ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ : ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ (ಒಎನ್ ಒಆರ್ ಸಿ) ಯೋಜನೆಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ಪಶ್ಚಿಮ ಬಂಗಾಳ, ಛತ್ತೀಸ್ ಗಢ ಮತ್ತು ಅಸ್ಸಾಂ ಇನ್ನೂ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸುತ್ತಿದ್ದಂತೆ ಈ ಅಭಿಪ್ರಾಯ ಬಂದಿದೆ. ಈ ಯೋಜನೆಯು ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಅವರ ಕೆಲಸದ ಸ್ಥಳದಲ್ಲಿ ಮತ್ತು ಅವರ …
Read More »ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ?
ಬೆಂಗಳೂರು: ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾನು ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಮಧ್ಯೆ ಶಾಸಕ ಅರವಿಂದ ಬೆಲ್ಲದ್ ದೆಹಲಿ ಭೇಟಿಯು ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಹಿನ್ನೆಲೆಯಲ್ಲಿ ಶಾಸಕ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ. ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ, ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು …
Read More »ಧಾರಾವಾಹಿಯಲ್ಲಿ ‘ಅತ್ತಿಗೆ-ಮೈದುನ’ ನಿಜಜೀವನದಲ್ಲಿ ಪತಿ-ಪತ್ನಿ: ಧಾರಾವಾಹಿ ಬ್ಯಾನ್ ಮಾಡಲು ಒತ್ತಾಯ
ಧಾರಾವಾಹಿಯಲ್ಲಿ ಅಕ್ಕ-ತಮ್ಮನಾಗಿ ನಟಿಸಿದವರು ಮದುವೆ ಆಗಿರುವ ಉದಾಹರಣೆಗಳು ಇವೆ. ಇದೀಗ ಹಿಂದಿ ಧಾರಾವಾಹಿಯೊಂದರಲ್ಲಿ ಅತ್ತಿಗೆ-ಮೈದುನ ಪಾತ್ರ ಮಾಡುತ್ತಿರುವವರು ನಿಜ ಜೀವನದಲ್ಲಿ ಮದುವೆ ಆಗುತ್ತಿದ್ದಾರೆ. ಆದರೆ ಈ ಧಾರಾವಾಹಿಯನ್ನು ಬ್ಯಾನ್ ಮಾಡಬೇಕು ಎಂದು ವೀಕ್ಷಕರು ಒತ್ತಾಯಿಸಿದ್ದಾರೆ. ‘ಗುಮ್ ಹೈ ಕಿಸೀಕೆ ಪ್ಯಾರ್ ಮೆ’ ಹೆಸರಿನ ಧಾರಾವಾಹಿಯಲ್ಲಿ ಅತ್ತಿಗೆ ಪಾತ್ರಧಾರಿ ಐಶ್ವರ್ಯ ಶರ್ಮಾ ಹಾಗೂ ಮೈದುನ ಪಾತ್ರಧಾರಿ ಹಾಗೂ ಧಾರಾವಾಹಿ ನಾಯಕ ನೀಲ್ ಭಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೆಲವೇ ದಿನಗಳಲ್ಲಿ ಮದುವೆ ಆಗಲಿದ್ದಾರೆ. …
Read More »ಹೋಮ, ಹವನ ಮಾಡಿದ್ದಕ್ಕೆ ಪ್ರಕರಣ ; ತಹಸೀಲ್ದಾರ್ ವಿರುದ್ಧ ಜನರ ಆಕ್ರೋಶ
ದಾವಣಗೆರೆ: ಅರಬಗಟ್ಟೆಯ ಕೋವಿಡ್ ಆರೈಕೆ ಸೆಂಟರ್ನಲ್ಲಿ ಶಾಸಕ ರೇಣುಕಾಚಾರ್ಯ ಹೋಮ, ಹವನ ಮಾಡಿದ್ದಕ್ಕೆ ಶಾಸಕರ ವಿರುದ್ದ ಪ್ರಕರಣ ದಾಖಲಿಸಲು ತಹಸೀಲ್ದಾರ್ ಮುಂದಾದ ಬೆನ್ನಲ್ಲೇ ತಾಲೂಕು ಆಡಳಿತದ ವಿರುದ್ಧ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಸೋಂಕಿತರಿಂದ ವಿರೋಧ ವ್ಯಕ್ತವಾಗಿದೆ. ಸೋಂಕಿತರು ತಹಸೀಲ್ದಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕರ ಶಾಂತನಗೌಡರ ಕುಮ್ಮಕ್ಕಿನಿಂದ ತಹಸೀಲ್ದಾರ್ ಅವರು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ …
Read More »ಜಾಮೀನು ಸಿಕ್ಕರೂ ಬಂಧನದ ಭೀತಿಯಲ್ಲಿ ಸಿಡಿ ಗ್ಯಾಂಗ್!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್ ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದ ಆರೋಪಿಗಳಿಗೆ ಈಗ ನಡುಕ ಶುರುವಾಗಿದೆ. ಕೋರ್ಟ್ ನೀಡಿದ ಆದೇಶ ಪ್ರತಿಯಿಂದ ಗಾಬರಿಯಾಗಿರೋ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹೋಗಬೇಕಾ ಎಂದು ಯೋಚಿಸುತ್ತಿದ್ದಾರೆ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕರೂ ತನಿಖಾಧಿಕಾರಿಗೆ ಅಗತ್ಯ ಬಿದ್ದರೆ ಬಂಧಿಸಲು ಸ್ವತಂತ್ರ ನೀಡಿ ಕೋರ್ಟ್ ಆದೇಶವನ್ನು ನೀಡಿದೆ. ಈ ಮೂಲಕ ಜೂನ್ 12ರೊಳಗೆ ಬರಲು ಶುರುವಾಗಿದೆ ಭಯ. ಮತ್ತೊಂದೆಡೆ ತನಿಖಾಧಿಕಾರಿ ಮುಂದೆ …
Read More »ಮೊಬೈಲ್ನಲ್ಲೇ ಮಾತಾಡಿ 3 ದಿನದ ಗಂಡು ಮಗುವನ್ನೇ ಮಾರಿದ ಮಹಿಳೆ
ಮೈಸೂರು: ಇಲ್ಲೊಬ್ಬ ಮಹಿಳೆ ಮೊಬೈಲ್ನಲ್ಲೇ ವ್ಯವಹರಿಸಿ ತನ್ನ ಮೂರು ದಿನದ ಹಸುಗೂಸನ್ನೇ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ರೋಜಾ ಎಂಬಾಕೆಗೆ 7 ತಿಂಗಳ ಹಿಂದೆ ಗಂಡು ಮಗು ಆಗಿತ್ತು. ಆದರೆ ಆಕೆ ನನಗೆ ಹೆಣ್ಣು ಮಗು ಬೇಕಿತ್ತು, ಗಂಡು ಮಗು ಬೇಡ ಎಂದು ಎಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್ನ ಹಕ್ಕಿಪಿಕ್ಕಿ ಜನಾಂಗದ ದಂಪತಿಗೆ ಮಾರಾಟ ಮಾಡಿದ್ದಳು. ಅಂಬರೀಶ್ ಮತ್ತು ಮಧುಮಾಲತಿ ದಂಪತಿಯು ರೋಜಾಗೆ 1.5 ಲಕ್ಷ ರೂ. …
Read More »ವಿದ್ಯುತ್ ದರ ಏರಿಕೆ ಖಂಡಿಸಿ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ
ಚಾಮರಾಜನಗರ: ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 30 ಪೈಸೆ ಏರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಮುಖಂಡರು ಒಂಟಿ ಕಾಲಿನಲ್ಲಿ ನಿಂತು ನಗರದಲ್ಲಿ ಪ್ರತಿಭಟನೆ ನಡೆಸಿದರು. ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಚಾ.ಗು.ನಾಗರಾಜು, ನಿಜಧ್ವನಿ ಗೋವಿಂದರಾಜು ಅವರು ನಗರದ ಸೆಸ್ಕಾಂ ಕಚೇರಿ ಮುಂದೆ ಒಂಟಿ ಕಾಲಿನಲ್ಲಿ ನಿಂತು ವಿದ್ಯುತ್ ದರ ಹೆಚ್ಚಳ ವಿರೋಧಿದರು. ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೋವಿಡ್‌ನಿಂದ ಜನ ತತ್ತರಿಸಿ ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಅರಿವಿದ್ದು ಇದ್ದೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ …
Read More »ಹೆತ್ತ ಕಂದಮ್ಮಗಳ ಮೇಲೆ ತಾಯಿಯ ಕ್ರೂರತನ..!
ಬೆಂಗಳೂರು: ಹೆತ್ತ ಕಂದಮ್ಮಗಳ ಮೇಲೆ ಕ್ರೂರಿ ತಾಯಿಯೊಬ್ಬಳು ಭೀಕರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. ತಾಯಿ ಹಾಗು ಆಕೆಯ ಸ್ನೇಹಿತ ಸೇರಿ 6 ವರ್ಷ ಹಾಗೂ 7 ವರ್ಷದ ಮಕ್ಕಳ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಮಕ್ಕಳನ್ನು ಹೊಡೆದು, ಕಚ್ಚಿ, ಸುಟ್ಟ ಗಾಯಗಳನ್ನು ಮಾಡಿದ್ದಾರೆ. ಆಸ್ಪತ್ರೆಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುವ ಜಯಮ್ಮ ಈ ಪಾಪಿ ತಾಯಿ. ಪ್ರಕರಣಯೊಂದರಲ್ಲಿ ಜಯಮ್ಮನ ಪತಿ ಕಿರಣ್ ಹಾಸನದ ಜೈಲ್ ಸೇರಿದ್ದರಿಂದ ತನ್ನ …
Read More »
Laxmi News 24×7