ಉತ್ತರ ಕನ್ನಡ ಜಿಲ್ಲೆ ಹಲವಾರು ಪ್ರಾಕೃತಿಕ ವಿಸ್ಮಯವನ್ನು ಹೊಂದಿದ್ದು, ಮಾತ್ರವಲ್ಲ ತನ್ನ ಮಡಿಲಿನಲ್ಲಿ ಹಲವಾರು ಶಕ್ತಿ ಕ್ಷೇತ್ರಗಳನ್ನು ಹೊಂದಿದೆ. ಅದರಲ್ಲಿ ಇಡಗುಂಜಿ ವಿನಾಯಕ ದೇವಸ್ಥಾನವೂ ಸಹ ಅತ್ಯಂತ ಶ್ರದ್ದಾ ಕೇಂದ್ರವಾಗಿದ್ದು ಭಕ್ತರ ಇಷ್ಟಾರ್ಥವನ್ನು ಈಡೇರಿಸುವ ಮೂಲಕ ಜನರನ್ನು ತನ್ನತ್ತ ಸೆಳೆಯುತ್ತಿದೆ. ಕರ್ನಾಟಕದ ಅತ್ಯಂತ ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರ ಮಾತ್ರವಲ್ಲ ಸುಮಾರು 1500 ವರ್ಷಕ್ಕಿಂತಲೂ ಹೆಚ್ಚು ಇತಿಹಾಸ ಹೊಂದಿದ ಇಡಗುಂಜಿ ವಿನಾಯಕ ದೇವಸ್ಥಾನ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ …
Read More »ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ ನೂರಾರು ಕೆ.ಜಿ ಅನ್ನ ಮಣ್ಣುಪಾಲಾಗಿದೆ.
ಬಳ್ಳಾರಿ: ಹಳ್ಳಿ ಹಳ್ಳಿಗೂ ಸೋಂಕು ಹಬ್ಬಿದ ಹಿನ್ನೆಲೆಯಲ್ಲಿ ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ, ಇದೀಗ ನೂರಾರು ಕೆಜಿ ಅನ್ನ ಮಣ್ಣುಪಾಲು ಮಡಿರುವ ಘಟನೆ ಬಳ್ಳಾರಿ ತಾಲೂಕಿನ ಡಿ ಕಗ್ಗಲ್ಲು ಗ್ರಾಮದಲ್ಲಿ ನಡೆದಿದೆ. ಕೊರೊನಾ ದೂರವಾಗಲಿ ಅಂಥಾ ನೂರಾರು ಕೆಜಿ ಅನ್ನ ಮಣ್ಣುಪಾಲು ಮಾಡಿದ್ದಾರೆ. ಮನೆ ಮನೆಯಲ್ಲಿ ಅನ್ನ ಮಾಡಿಸಿ ರಾತ್ರಿ ವೇಳೆಯಲ್ಲಿ ಊರ ಆಚೆ ಚೆಲ್ಲಿ ಬಂದಿದ್ದಾರೆ. ಗ್ರಾಮದಲ್ಲಿ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಹಳ್ಳಿ ಜನತೆ …
Read More »ಶವ ಕೊಡಲು ಬಿಲ್ ಬಾಕಿ ಕೇಳಿದರೆ ಆಸ್ಪತ್ರೆ ನೋಂದಣಿ ರದ್ದು: ಸರ್ಕಾರ
ಮೈಸೂರು: ಕೋವಿಡ್ ಸೋಂಕಿತರು ಆಸ್ಪತ್ರೆಗಳಲ್ಲಿ ಮೃತಪಟ್ಟರೆ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲು ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿದರೆ. ಅಂತಹ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶಿಸಿದೆ. ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ …
Read More »ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಚಾಲನೆ
ನವದೆಹಲಿ, : ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ಉತ್ಪಾದನೆಯನ್ನು ಭಾರತದಲ್ಲಿ ಸೋಮವಾರದಿಂದ ಆರಂಭಿಸಲಾಗಿದೆ. ದಿ ರಷ್ಯನ್ ಡೈರೆಕ್ಟ್ ಇನ್ವೆಸ್ಟ್‌ಮೆಂಟ್ ಫಂಡ್(ಆರ್‌ಡಿಐಎಫ್) ಸಹಯೋಗದೊಂದಿಗೆ ಭಾರತದ ಅತಿ ದೊಡ್ಡ ಲಸಿಕೆ ಮತ್ತು ಔಷಧೀಯ ಸಂಸ್ಥೆಗಳಲ್ಲಿ ಒಂದಾದ ಪನಾಶಿಯಾ ಈ ಲಸಿಕೆಯನ್ನು ಉತ್ಪಾದಿಸಲು ಆರಂಭಿಸಿದೆ. ಆರ್‌ಡಿಎಫ್ ಪ್ರಕಾರ ಭಾರತದ ಪನಾಶಿಯಾ ಸಂಸ್ಥೆ ವರ್ಷಕ್ಕೆ 10 ಕೋಟಿ ಲಸಿಕೆಯನ್ನು ಉತ್ಪಾದನೆ ಮಾಡಲಿದೆ ಎಂದು ತಿಳಿಸಿದೆ. ಭಾರತದಲ್ಲಿ ಉತ್ಪಾದನೆಯಾದ ಮೊದಲ ಬ್ಯಾಚ್‌ನ ಲಸಿಕೆಯನ್ನು ‘ಸ್ಪಿಟ್ನಿಕ್ ವಿ’ ಲಸಿಕೆಯನ್ನು …
Read More »ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ
ಮಂಗಳೂರು, : ಕೊರೊನಾ ವೈರಸ್, ಚಂಡಮಾರುತದ ಭೀಕರತೆಗೆ ಕರಾವಳಿಯಲ್ಲಿ ಮತ್ಸೋದ್ಯಮ ನಲುಗಿ ಹೋಗಿದೆ. ಮೀನುಗಾರಿಕೆ ಉತ್ತುಂಗವಿದ್ದ ಸಮಯದಲ್ಲಿಯೇ ಲಾಕ್‌ಡೌನ್ ಬರೆ ಬಿದ್ದು, ಸ್ವಲ್ಪ ಸುಧಾರಿಸುವಾಗಲೇ ಚಂಡಮಾರುತ ಹೊಡೆತಕೊಟ್ಟಿತು.ಇದೆಲ್ಲದರ ನಡುವೆ ಇದೀಗ ಮೀನುಗಾರಿಕಾ ಋತು ಅಂತಿಮವಾಗುತ್ತಿದ್ದು, ಜೂನ್ 1 ರಿಂದ ಮೀನುಗಾರಿಕೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯನುಸಾರವಾಗಿ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತೀಕೃತ ಬೋಟ್ …
Read More »ಗೌತಮ್ ಗಂಭೀರ್ ಔಷಧವನ್ನು ದಾಸ್ತಾನು ಮಾಡಿದ್ದು ಹೇಗೆ?: HC
ನವದೆಹಲಿ, ಮೇ 25: ಮಾಜಿ ಕ್ರಿಕೆಟರ್, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಫ್ಯಾಬಿಫ್ಲೂ ಔಷಧವನ್ನು ಅಕ್ರಮವಾಗಿ ದಾಸ್ತಾನು ಮತ್ತು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿಯ ಔಷಧ ನಿಯಂತ್ರಕಕ್ಕೆ ದೆಹಲಿ ಹೈಕೋರ್ಟ್‌ನಿರ್ದೇಶನ ನೀಡಿದೆ. ಕೋವಿಡ್ ಔಷಧಗಳ ಅಕ್ರಮ ದಾಸ್ತಾನಿಗೆ ಸಂಬಂಧಿಸಿದಂತೆ ಗಂಭೀರ್ ಹಾಗೂ ಎಎಪಿಯ ಇಬ್ಬರು ಶಾಸಕರ ವಿರುದ್ಧ ಎರಡು ಪ್ರತ್ಯೇಕ ಮೊಕದ್ದಮೆಗಳ ವಿಚಾರಣೆ ದೆಹಲಿ ನ್ಯಾಯಾಲಯದಲ್ಲಿ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು …
Read More »ಕೊರೊನಾಗೆ ಬೆಳಗ್ಗೆ ಪತಿ ಸಂಜೆ ಪತ್ನಿ ಬಲಿ
ಚಾಮರಾಜನಗರ: ಪ್ರೀತಿಸಿ ಮದುವೆಯಾಗಿ ಸುಖ ಸಂಸಾರ ನಡೆಸುತ್ತಿದ್ದ ದಂಪತಿ ಬಾಳಿಗೆ ಕೊರೊನಾ ಕೊಳ್ಳಿ ಇಟ್ಟಿದ್ದು ಒಂದೇ ದಿನ ಗಂಡ-ಹೆಂಡತಿ ಕೊರೊನಾಗೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಸುದರ್ಶನ(51) ಹಾಗೂ ಹೇಮಲತಾ (46) ಮೃತರು. ಕಳೆದ ಒಂದು ವಾರದ ಹಿಂದೆ ಈ ದಂಪತಿಗೆ ಕೋವಿಡ್ ದೃಢವಾಗಿತ್ತು. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ವಿಧಿಯ ಆಟವೇ ಬೆರೆಯಾಗಿತ್ತು ಅನಿಸುತ್ತೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಸುದರ್ಶನ್ ಅಸುನೀಗಿದರೇ ಸಂಜೆ ಹೇಮಲತಾ …
Read More »ಕೋವಿಡ್ 3ನೇ ಅಲೆ ಭೀತಿ: ಕರ್ನಾಟಕದಲ್ಲಿ ಮಕ್ಕಳ ಆರೈಕೆ ಕೇಂದ್ರಗಳ ಸ್ಥಾಪನೆ
ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಇನ್ನೂ ಕೊರೊನಾ ವೈರಸ್ 2ನೇ ಅಲೆ ತಾಂಡವಾಡುತ್ತಿದೆ. ಆದರೂ ದಾಖಲೆಯ ಸಂಖ್ಯೆಯಲ್ಲಿ ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವುದನ್ನು ನೋಡಿದರೆ ಆಗಲೇ ಕೋವಿಡ್ 3ನೇ ಅಲೆ ಪ್ರಾರಂಭವಾಗಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ. ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸುತ್ತಿದ್ದು, ಕೊರೊನಾ ಮೊದಲ ಅಲೆಗಿಂತ 2ನೇ ಅಲೆಯ ವೇಳೆ ಮಕ್ಕಳಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಈ …
Read More »ದಲಿತ ಯುವಕನ ಮೇಲೆ ದೌರ್ಜನ್ಯ ಪ್ರಕರಣ : ಗೋಣಿಬೀಡು ಪಿಎಸ್ ಐ ಅರ್ಜುನ್ ಅಮಾನತು
ಚಿಕ್ಕಮಗಳೂರು; ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೋಲಿಸ್ ಠಾಣೆ ವ್ಯಾಪ್ತಿಯ ಕಿರುಗುಂದ ಪರಿಶಿಷ್ಟ ಜಾತಿ ಯುವಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪೋಲಿಸ್ ಠಾಣೆ ಪಿಎಸ್ ಐ ಅರ್ಜುನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ, ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಿರಗುಂದ ಗ್ರಾಮದ ಪರಿಶಿಷ್ಟ ಜಾತಿ ಯುವಕ ಪುನೀತ್ ಎಂಬುವನನ್ನು ಮೇ 10 ರಂದು ಯಾವುದೇ ದೂರು ದಾಖಲಿಸಿಕೊಳ್ಳದೆ. ಪೋಲಿಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪಿಎಸ್ …
Read More »ಕೊರೋನ ಇಂದ ಪಾರಾಗಲು ಪಾರಿಜಾತ ಎಲೆಯ ಕಷಾಯ ಕುಡಿಯಿರಿ: ಅವಧುತ ವಿನಯ್ ಗುರೂಜಿ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಕೊರೋನಗೆ ಮದ್ದು ಒಂದನ್ನು ಹೇಳಿದ್ದು, ಪಾರಿಜಾತ ಎಲೆಯ ಕಷಾಯ ಮಾಡಿ ಕುಡಿಯಿರಿ ಎಂದಿದ್ದಾರೆ. ಎಲ್ಲರೂ ಪಾರಿಜಾತ ಎಲೆಯ ಕಷಾಯ ಕುಡಿಯುವಂತೆ ತಮ್ಮ ಭಕ್ತರಿಗೆ ಸಂದೇಶವನ್ನೂ ಅವರು ರವಾನಿಸಿರುವ ಇವರು, ಕಷಾಯ ತಯಾರಿಸುವ ವಿಧಾನವನ್ನೂ ತಿಳಿಸಿದ್ದಾರೆ . ಅವರು ತಿಳಿಸಿರುವ ಪ್ರಕಾರ ಐದು ಪಾರಿಜಾತದ ಎಲೆ , ಕಾಳುಮೆಣಸು , ಶುಂಠಿ , ಲಿಂಬೆಹಣ್ಣಿನ ರಸ ಹಾಕಿ ಕುದಿಸಿ ಕುಡಿದರೆ …
Read More »
Laxmi News 24×7