ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ. ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಿರುವ ರಾಜ್ಯ ಸರ್ಕಾರ ಮುಂಬರುವ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಪ್ರಸ್ತಾಪಿತ ಮಸೂದೆಯಲ್ಲೇನಿದೆ ಎಂಬ ವಿಶೇಷ ವರದಿ ಇಲ್ಲಿದೆ. ಆನ್ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ರಾಜ್ಯಾದ್ಯಂತ ಯುವ ಜನಾಂಗದ ಬದುಕನ್ನೇ ಕಸಿಯುತ್ತಿದೆ. ಅದೆಷ್ಟು ಮಂದಿ ಈ ಆನ್ಲೈನ್ ಬೆಟ್ಟಿಂಗ್ ಆಟಕ್ಕೆ ಸಿಲುಕಿ ಕೋಟ್ಯಾಂತರ ರೂ. ಸಾಲ ಮಾಡಿ …
Read More »ಹಿಂದು ಮುಸ್ಲಿಂ ಎಂದು ಬಡೆದಾಡಿಕೊಳ್ಳುವ ಇಂದಿನ ದಿನಗಳಲ್ಲಿ ಗ್ರಾಮಸ್ಥರಿಂದ ಭಾವೈಕ್ಯತೆಯಿಂದ ಮೊಹರಂ ಆಚರಣೆ
ಗ್ರಾಮಸ್ಥರಿಂದ ಭಾವೈಕ್ಯತೆಯಿಂದ ಮೊಹರಂ ಆಚರಣೆ ಹಿಂದು ಮುಸ್ಲಿಂ ಎಂದು ಬಡೆದಾಡಿಕೊಳ್ಳುವ ಇಂದಿನ ದಿನಗಳಲ್ಲಿ ಜಾಗೃತ ಫಾತಿಮಾ ದರ್ಗಾದಲ್ಲಿ ಭಾವೈಕತೆಯ ಮೊಹರಂ ಹಬ್ಬವನ್ನು ಗ್ರಾಮಸ್ಥರೆಲ್ಲರೂ ಕೂಡಿಕೊಂಡು ಶೃದ್ಧಾ ಭಕ್ತಿಯಿಂದ ಕುಣ್ಣಿದು ಕುಪ್ಪಳಿಸಿ ಆಚರಿಸಿದರು ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ ಹೌದು ಇದು ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಬಾಂಧವರು ಭಾವೈಕ್ಯತೆ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೆ ಪ್ರತಿವರ್ಷದಂತೆ ಈ ಬಾರಿಯೂ ಅತ್ಯಂತ ಭಕ್ತಿಭಾವದಿಂದ …
Read More »ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನ
ಬೆಂಗಳೂರು/ ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಶನಿವಾರ ನಡೆದಿದೆ. ಕನಕಪುರ ಮೂಲದ ಚಿನ್ನಾರಿ ಗೌಡ (65) ಗ್ರಾಹಕರ ನ್ಯಾಯಾಲಯದಲ್ಲಿ ಮೃತಪಟ್ಟ ವ್ಯಕ್ತಿ. ಶಾಂತಿ ನಗರದ ಬಿಎಂಟಿಸಿ ಸಂಕೀರ್ಣದ ಮೊದಲ ಮಹಡಿಯಲ್ಲಿರುವ ಗ್ರಾಹಕರ ನ್ಯಾಯಾಲಯಕ್ಕೆ ಇಂದು ಮುಂಜಾನೆ ಚಿನ್ನಾರಿ ಗೌಡ ಹಾಜರಾಗಿದ್ದರು. ಬೆಳಗ್ಗೆ 10.30ರ ಸುಮಾರಿಗೆ ಕುಳಿತಿದ್ದಲ್ಲೇ ಅವರು ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಸ್ಥಳದಲ್ಲಿದ್ದವರ …
Read More »ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್ಡಿಕೆಗೆ ಪಾಟೀಲ್ ಪ್ರತಿಸವಾಲು
ಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಪ್ರತಿಸವಾಲು ಹಾಕಿದರು. ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಐದೇ ನಿಮಿಷದಲ್ಲಿ ಅನುಮೋದನೆ ಪಡೆಯುವುದಾಗಿ ಹೇಳಿರುವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಗದಗದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಹೆಚ್.ಕೆ.ಪಾಟೀಲ್, ”ಯೋಜನೆಗೆ ತಮಿಳುನಾಡಿನ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ. ಅಂತಾರಾಜ್ಯ ಜಲ ವಿವಾದ ಕಾಯ್ದೆಯಡಿ …
Read More »ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!
ಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. ಈ ಕುರಿತು ಎಸ್ಪಿ ಡಾ. ಬಿ. ಟಿ. ಕವಿತಾ ಅವರು ಮಾತನಾಡಿದ್ದು, ಮಹಿಳೆಯ ಕೊಲೆ ಕುರಿತು ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ನಂತರ ನಮ್ಮ ಠಾಣಾ ವ್ಯಾಪ್ತಿಗೆ ಬಂದಿದ್ದರಿಂದಾಗಿ ನಾವು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದೆವು. ಅಲ್ಲಿ ಶುಭಾ(38) ಎಂಬ ಮಹಿಳೆ ಮನೆ ಮುಂದೆ ಕೊಲೆಯಾಗಿ ಬಿದ್ದಿದ್ದರು ಎಂದು ತಿಳಿಸಿದರು.ಮೃತ ಮಹಿಳೆ …
Read More »ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ
ಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು. ”ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು …
Read More »ಹುಲಿ ಸಾವು ಪ್ರಕರಣ – ಇಬ್ಬರು ಅಧಿಕಾರಿಗಳ ಅಮಾನತು
ಕಲಬುರಗಿ : ಹುಲಿಗೆ ವಿಷಪ್ರಾಶನ ಮಾಡಿರುವುದು ವರದಿಗಳಲ್ಲಿ ದೃಢಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಈ ಕುರಿತು ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಅಧಿಕಾರಿಯ ಅಮಾನತಿಗಾಗಿ DPAR (ಡಿಪಿಎಆರ್)ಗೆ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗಿದ್ದು, ಕ್ರಮದ ಪ್ರಕ್ರಿಯೆ ಮುಂದುವರೆದಿದೆ ಎಂದು ಹೇಳಿದರು. ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು …
Read More »ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ!
ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ! ಅಥಣಿ, ಜುಲೈ 2:ತಾಲೂಕಿನ ಹಲವು ಸರಕಾರಿ ಶಾಲೆಗಳಲ್ಲಿ ಹಾಜರಾತಿ ತಪ್ಪಿಸುತ್ತಿರುವ ಹಾಗೂ ಕರ್ತವ್ಯ ಮರೆತ ಶಿಕ್ಷಕರು, ಈ ಬಾರಿ ತರಗತಿ ಕೊಠಡಿಗೆ ಅಲ್ಲ, ಬದಲಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾಗಿ ಗಮನಸೆಳೆದಿದ್ದಾರೆ. ಅಥಣಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹೊಸ ಬಿಇಒ ಎಂ. ಆರ್. ಮುಂಜೆ ಅವರು ಅಧಿಕಾರ ಸ್ವೀಕರಿಸಿದರು. ಅವರನ್ನು ಅಭಿನಂದಿಸಲು ಹಲವಾರು ಶಾಲೆಗಳ …
Read More »ಶಾರ್ಟ್ ಸರ್ಕೀಟ್’ನಿಂದ ಸುಟ್ಟು ಕರಕಲಾದ ಹೊಟೇಲ್…!!!
ಶಾರ್ಟ್ ಸರ್ಕೀಟ್’ನಿಂದ ಸುಟ್ಟು ಕರಕಲಾದ ಹೊಟೇಲ್…!!! ಬೆಳಗಾವಿಯ ಗೋವಾವೇಸ್’ನಲ್ಲಿ ಶಾರ್ಟ್ ಸರ್ಕೀಟ್’ನಿಂದ “ಹೋಟೆಲ್ ಒಂದು ಅಗ್ನಿಗಾಹುತಿಯಾಗಿ ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳಗಾವಿಯ ಗೋವಾವೇಸ್ನಲ್ಲಿ ಇರುವ “ಹೋಟೆಲ್ ಅನುಗ್ರಹ”ನಲ್ಲಿ ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಹೋಟೆಲ್ನ ಫರ್ನಿಚರ್ ಸುಡುತ್ತಿರುವ ಶಬ್ದದಿಂದ ಎಚ್ಚರಗೊಂಡ ಸ್ಥಳೀಯ ನಿವಾಸಿಗಳು ತಕ್ಷಣ ಹೋಟೆಲ್ ಮಾಲೀಕರಾದ ಸುಧಾಕರ್ ಪುಜಾರಿ ಅವರಿಗೆ ಮಾಹಿತಿ ನೀಡಿದರು. ಅಲ್ಲದೇ, ಅಗ್ನಿಶಾಮಕ ದಳವನ್ನು ಸಂಪರ್ಕಿಸಿದರು. ಅಗ್ನಿಶಾಮಕ ದಳಕ್ಕೆ …
Read More »ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ
ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ ಇತ್ತೀಚೆಗಷ್ಟೇ ಚೆನ್ನೈನಲ್ಲಿ ನಡೆದ 16ನೇ ಭಾರತೀಯ ಸಾರ್ವಜನಿಕ ಆರೋಗ್ಯ ದಂತವೈದ್ಯ ಶಾಸ್ತ್ರ (IAPHD) ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್ಇ ವಿಕೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ನ ಸಾರ್ವಜನಿಕ ಆರೋಗ್ಯ ದಂತವೈದ್ಯ ಶಾಸ್ತ್ರ ವಿಭಾಗವು ಅತ್ಯುತ್ತಮ ಸಾಧನೆಯೊಂದಿಗೆ ರಾಜ್ಯದ ಗೌರವವನ್ನು ಹೆಚ್ಚಿಸಿದೆ. ಈ ಸಮಾವೇಶದಲ್ಲಿ ಡಾ. ಅಪೂರ್ವ ಮತ್ತು ಡಾ. ಹೃದಯಾ ಅವರು …
Read More »
Laxmi News 24×7