Breaking News

ರಾಜಕೀಯ

ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ: ಸಚಿವ ಸೋಮಶೇಖರ್ ಉಡಾಫೆ ಉತ್ತರ

ಬೆಂಗಳೂರು. ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಉಡಾಫೆ ಉತ್ತರ ನೀಡಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರನ್ನ ಭೇಟಿಯಾದ ನಂತರ ಎಸ್.ಟಿ.ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿ, ಎಲ್ಲರಂತೆ ಸರ್ಕಾರವನ್ನು ಸಮರ್ಥಿಸಿಕೊಂಡರು. ಸಂಜೆ ಸಭೆ ಬಳಿಕ ಅಲ್ಲಿ ಚರ್ಚೆ ಮಾಡುತ್ತೇವೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳು ಇರ್ತಾರೆ. ಅವರು ಕೆಲಸ ಮಾಡದೇ ಹೋದ್ರೆ ಸರ್ಕಾರಕ್ಕೆ ಕೆಟ್ಟ ಹೆಸರು. ಅಧಿಕಾರಿಗಳ ನಿರ್ಲಕ್ಷ್ಯ ಇದರಲ್ಲಿದೆ ಎಂದು ಹೇಳಿ …

Read More »

ಜೀವ ತೆಗೆಯೋಕೆ ವ್ಯಾಕ್ಸಿನ್ ಮಾಡಿದ್ದಾರೆ, ಹಾಕಿಸಿಕೊಂಡ್ರೆ ಮಕ್ಕಳಾಗಲ್ಲ ಅಂದ್ರು, ಅವರೇ ಕದ್ದು ಹಾಕಿಸಿಕೊಂಡ್ರು: ಸಿಟಿ ರವಿ

ಚಿಕ್ಕಮಗಳೂರು: ಬಿಜೆಪಿ ವ್ಯಾಕ್ಸಿನ್, ಜೀವ ತೆಗೆಯುವುದಕ್ಕೆ ಮಾಡಿದ್ದಾರೆ. ಈ ವ್ಯಾಕ್ಸಿನ್ ತಗೊಂಡ್ರೆ ಮಕ್ಕಳಾಗಲ್ಲ ಎಂದು ಅಪಪ್ರಚಾರ ಮಾಡಿದರು. ನಂತರ ಅವರೇ ಕದ್ದು ಹೋಗಿ ವ್ಯಾಕ್ಸಿನ್ ತಗೆದುಕೊಂಡರು. ಆದರೆ ಈಗ ಜನರು ಸಾಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವ್ಯಾಕ್ಸಿನ್ ಕುರಿತು ರಾಜಕೀಯ ಅಪಪ್ರಚಾರ ಮಾಡಿದರು. ಈ ಹಿಂದೆ ಟಾರ್ಗೆಟ್ ರೀಚ್ ಆಗುತ್ತಿರಲಿಲ್ಲ. ಈಗ ವ್ಯಾಕ್ಸಿನ್ ಗೆ …

Read More »

ಸೋನು ಸೂದ್ ಮೋಸಗಾರ ಎಂಬ ಟ್ವಿಟ್ಟರ್ ಪೋಸ್ಟ್ ಗೆ ಲೈಕ್ ಕೊಟ್ಟು ಟ್ರೋಲ್ ಆದ ಕಂಗನಾ..!

ನವದೆಹಲಿ : ನಟಿ ಕಂಗನಾ ರಣಾವತ್ ಸುಖಾಸುಮ್ಮನೆ ತನಗೆ ಸಂಬಂಧವಿಲ್ಲದೇ ಇರುವ ವಿಚಾರವಾಗಿ ಮಾತನಾಡಿ ಟ್ವೀಟ್ ಮಾಡಿ ಸದಾ ಕಾಂಟ್ರವರ್ಸಿ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಎಲ್ಲಾ ವಿಚಾರಗಳಲ್ಲೂ ಮೂಗು ತೂರಿಸಿ ವಿವಾದ ಮೈಮೇಲೆ ಎಳೆದುಕೊಳ್ಳುವ ಕಂಗನಾ ಅನೇಕ ಶತ್ರುಗಳನ್ನ ಸಂಪಾದಿಸಿಕೊಂಡಿದ್ಧಾರೆ. ಬಹುತೇಕ ಎಲ್ಲಾ ತಾರಯರ ಜೊತೆಗೂ ಕಂಗನಾ ಕಿರಿಕ್ ಮಾಡಿಕೊಂಡಿದ್ದಾರೆ. ಹಾಗೆಯೇ ಬಡವರ ಪಾಲಿನ ರಿಯಲ್ ಹೀರೋ ಸೋನು ಸೂದ್ ಜೊತೆಗೂ ಗಲಾಟೆ ಮಾಡಿಕೊಂಡು ಸೋನು ಸೂದ್ ಅವರನ್ನ ಮಣಿಕರ್ಣಿಕಾ ಸಿನಿಮಾದಿಂದಲೇ …

Read More »

ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ …

Read More »

ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಹನ ಚಾಲಕರಿಗೆ ಶಾಕ್ ಕೊಟ್ಟ ಕೇಂದ್ರ

ನವದೆಹಲಿ: ಪಂಚರಾಜ್ಯ ಚುನಾವಣೆಗೂ ಮುಂಚೆ ದಿನನಿತ್ಯ ಪೆಟ್ರೋಲ್ ಡಿಸೇಲ್ ಬೆಲೆ ಏರುತ್ತಲೇ ಇತ್ತು. ಚುನಾವಣೆ ಹೊತ್ತಲ್ಲಿ ಸ್ಥಿರವಾಗಿದ್ದ ದರ ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 15 ಪೈಸೆ ಏರಿಕೆಯಾಗಿದ್ದು, ಡಿಸೇಲ್ ದರ 16 ಪೈಸೆ ಏರಿಕೆ ಮಾಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪ್ರತಿ …

Read More »

ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಮಾಂಗಲ್ಯ ಸರ ಕಳವು

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನಿಂದ ಮೃತಳಾದ ಮಹಿಳೆಯ ಮಾಂಗಲ್ಯ ಸರಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ನಡೆದಿದೆ. ಅಂದಾರ್ಲಹಳ್ಳಿ ಗ್ರಾಮದ ಲಕ್ಷ್ಮಮ್ಮ ಕೊರೊನಾ ದಿಂದ ಮೃತಪಟ್ಟಿದ್ದರು. ಮೃತದೇಹ ಪಡೆಯಲು ಬಂದ ಸಂಬಂಧಿಕರು ಮೃತ ಮಹಿಳೆಯ ಮೈಮೇಲೆ ಇದ್ದ ಆಭರಣಗಳನ್ನು ಕೇಳಿದ್ದಾರೆ. ಈ ವೇಳೆ ಮೊದಲು ಬೆಳ್ಳಿ ಕಾಲು ಚೈನ್ ತದನಂತರ ಬಂಗಾರದ ಕಿವಿ ಒಲೆ ತಂದುಕೊಟ್ಟಿದ್ದಾರೆ. ಆದರೆ ಮಾಂಗಲ್ಯ ಸರ ಎಲ್ಲಿ ಅಂತ ಕೇಳಿದ್ರ ಯಾರ ಬಳಿಯೂ ಉತ್ತರ …

Read More »

ನೆಲಮಂಗಲ ಬಳಿ ಬಿಜೆಪಿಯ ಪೋಸ್ಟರ್ ಶೋಕಿ- ಫೋಟೋ ವೈರಲ್ ಆಗ್ತಿದ್ದಂತೆ ಫ್ಲೆಕ್ಸ್ ತೆರವ

ನೆಲಮಂಗಲ: ಅಂತ್ಯಸಂಸ್ಕಾರ ವ್ಯವಸ್ಥೆಯಲ್ಲೂ ಬಿಜೆಪಿ ಶೋಕಿಗೆ ಇಳಿದಿದೆ. ಕೋವಿಡ್‍ನಿಂದ ಮೃತಪಟ್ಟವರ ಉಚಿತ ಅಂತ್ಯಸಂಸ್ಕಾರಕ್ಕೆ ಗಿಡ್ಡೇನಹಳ್ಳಿಯಲ್ಲಿ ಸ್ಮಶಾನ ನಿರ್ಮಿಸಲಾಗಿದೆ. ಈ ಸ್ಮಶಾನಕ್ಕೆ ಹೋಗುವ ದಾರಿಯ ಮಾರ್ಗವನ್ನ ಸೂಚಿಸುವ ಫ್ಲೆಕ್ಸ್ ನಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕಂದಾಯ ಸಚಿವ ಆರ್ ಅಶೋಕ್, ಬಿಡಿಎ ಅಧ್ಯಕ್ಷ ಎಸ್. ಆರ್ ವಿಶ್ವನಾಥ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ಫೋಟೊ ಹಾಕಲಾಗಿತ್ತು. ಅಲ್ಲದೆ ಕೊರೊನಾ ಶವಸಂಸ್ಕಾರಕ್ಕೆ ಬರುವ ಸಂಬಂಧಿಕರು, ಅಂಬುಲೆನ್ಸ್ ಚಾಲಕರು ಹಾಗೂ …

Read More »

ರಾಜ್ಯದ ಜನರಿಗೆ ಶಾಕ್ ನೀಡಿದ ವೈದ್ಯರು; ಸೋಂಕಿತರ ಸಂಖ್ಯೆ ಇನ್ನೂ ಏರಿಕೆಯಾಗಲಿದೆಯಂತೆ..!!!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯು ಜೋರಾಗಿದ್ದು, ಇದು ಇನ್ನೂ 15 ದಿನಗಳ ಕಾಲ ಹೀಗೆ ಮುಂದುವರೆಯುತ್ತದೆ ಎಂದು ಹೇಳುವ ಮೂಲಕ ಮಣಿಪಾಲ ಆಸ್ಪತ್ರೆಗಳ ಮುಖ್ಯಸ್ಥ ಡಾ. ಸುದರ್ಶನ್ ಬಲ್ಲಾಳ್ ರಾಜ್ಯದ ಜನರಿಗೆ ಶಾಕ್ ಕೊಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕೋವಿಡ್ 2 ನೇ ಅಲೆಯ ತೀಕ್ಷ್ಣತೆ ಇನ್ನೂ 15 ದಿನ ಇರಲಿದ್ದು, ನಂತರ ಕಡಿಮೆಯಾಗಬಹುದು. ಕೊರೊನಾದ 2 ನೇ ಅಲೆಯು ಬಹಳ ವೇಗವಾಗಿ ವ್ಯಾಪಿಸುತ್ತಿದ್ದು, …

Read More »

ಸೋಂಕಿತರ ಚಿಕಿತ್ಸೆಗೆ ಬಳಸಿದ ರೆಮ್ ಡೆಸಿವಿರ್ ಮಾರಾಟ ಮಾಡಲು ಯತ್ನ: ಮೂವರು ಅಂದರ್

ದೇವಾಸ್ : ಕೋವಿಡ್ 19 ಸೋಂಕಿತರ ಚಿಕಿತ್ಸೆ ನೀಡಲು ಬಳಸಿದ ರೆಮ್‌ ಡೆಸಿವಿರ್ ಇಂಜೆಕ್ಶನ್ ನನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ದಾದಿಯರು ಮತ್ತು ಮೆಡಿಕಲ್ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಧ‍್ಯಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋವಿಡ್ 19 ಸೋಂಕು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರೆಮ್ ಡೆಸಿವಿರ್ ಗೆ ಬೇಡಿಕೆ ಹೆಚ್ಚಾದ ಕಾರಣದಿಂದ ಇಂತಹ ಪ್ರಕರಣಗಳು ಹೆಚ್ಚಾಗಿವೆ. ದುಬಾರಿ ಬೆಲೆಗೆ ಹಾಗೂ ಸೋಂಕಿತರಿಗೆ ಬಳಸಲಾದ …

Read More »

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅಣ್ಣ ಕೋವಿಡ್‌ನಿಂದ ನಿಧನ

ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅವರ ಅಣ್ಣ ಕಿರಣ್‌(44), ಕೋವಿಡ್‌-19ನಿಂದ ಮೃತಪಟ್ಟಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅರ್ಜುನ್‌ ಜನ್ಯ, ‘ಅಣ್ಣ ಕೋವಿಡ್‌ನಿಂದ ಮೃತಪಟ್ಟಿದ್ದಾನೆ. ನೀನಿಲ್ಲದೆ ಇರುವ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎನ್ನುವುದು ತಿಳಿಯುತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ನನ್ನ ಉಸಿರಲ್ಲಿರುವೆ’ ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣ 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್‌ ಅವರು, ಭಾನುವಾರ ರಾತ್ರಿ ಮೃತಪಟ್ಟಿದ್ದರು. ಕಳೆದ …

Read More »