Breaking News

ರಾಜಕೀಯ

ಕೋವಿಡ್‌-19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯದ ಕರ್ಫ್ಯೂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ. ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆ ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೇವೆಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಪಡೆಯಬೇಕು. ತುರ್ತು, ಅಗತ್ಯ ಸೇವೆಗಳು, ನಿರಂತರ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು, …

Read More »

1 ಕೋಟಿ ಮಂದಿಗೆ ಲಸಿಕೆ! : ಲಸಿಕೆ ಪಡೆದವರಲ್ಲಿ ಸ್ತ್ರೀಯರೇ ಹೆಚ್ಚು

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಂದು ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ. ಅಭಿಯಾನದಲ್ಲಿ ಒಟ್ಟು 84.6 ಲಕ್ಷ ಮಂದಿ ಲಸಿಕೆ ಪಡೆದಿದ್ದು, 18.5 ಲಕ್ಷ ಮಂದಿ ಎರಡೂ ಡೋಸ್‌ ಪೂರ್ಣಗೊಳಿಸಿದ್ದಾರೆ. ಲಸಿಕೆ ಅಭಿಯಾನ ಆರಂಭವಾಗಿ 110 ದಿನಗಳಾಗಿವೆ. ಗುರುವಾರದ ಅಂತ್ಯಕ್ಕೆ ಒಟ್ಟು 84.6 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಈ ಪೈಕಿ 18.5 ಲಕ್ಷ ಮಂದಿ 2ನೇ ಡೋಸ್‌ ಪೂರ್ಣಗೊಳಿಸಿದ್ದಾರೆ. ಒಟ್ಟು 1,03,01,805 ಡೋಸ್‌ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ …

Read More »

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲಿ ಬಿಸಿಯೂಟದ ಬದಲು ಪಡಿತರ ವಿತರಣೆ!

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …

Read More »

ಆಕ್ಸಿಜನ್ ಸಮಸ್ಯೆಯಿಂದ ಬೀದರ್‌ನಲ್ಲಿ ವ್ಯಕ್ತಿ ಸಾವು

ಬೀದರ್: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೆ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ. ಅಬ್ದುಲ್ ಮನ್ನಾನ್ ಸೇಠ್(63) ಆಕ್ಸಿಜನ ಸಿಗದೆ ಇಂದು ಸಾವನ್ನಪ್ಪಿದ್ದಾರೆ. ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಬಿಬಿಎಸ್ ಆಸ್ಪತ್ರೆಯಲ್ಲಿ ತಡರಾತ್ರಿ ಆಕ್ಸಿಜನ್ ಮುಗಿದರು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯ ಮಹಾ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ.   ವಿಷಯ ತಿಳಿದು ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಆಕ್ಸಿಜನ್ ವ್ಯವಸ್ಥೆಮಾಡಿ 13 …

Read More »

ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ವಲಸೆ ಕಾರ್ಮಿಕರ ನೆರವಿಗೆ

ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ನಿಂದ ಭಾರತ ನಲುಗುತ್ತಿದೆ. ಇದರ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಕೆಲವೆಡೆ ಲಾಕ್ ಡೌನ್ ಮಾಡಿರುವ ಪರಿಣಾಮ ಅನೇಕ ಮಂದಿ ವಲಸೆ ಕಾರ್ಮಿಕರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಇಂತವರಿಗೆ ಅನೇಕ ಮಂದಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅಂತೆಯೇ ಇದೀಗ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದಾರೆ. ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುತ್ತಾರೆ. ಸದಾ ಕಷ್ಟಕ್ಕೆ ಮಿಡಿಯುವ ಸನ್ನಿ …

Read More »

ಚಾಮರಾಜನಗರ ದುರಂತ :ಯಾರೂ ಸಹ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ.- ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ಚಾಮರಾಜನಗರದಲ್ಲಿ ನಿನ್ನೆ ಬುಧವಾರ ಬೆಳಿಗ್ಗೆ 9 ಗಂಟೆಯಿಂದ ಇಂದು ಗುರುವಾರ ಬೆಳಿಗ್ಗೆ 9 ಗಂಟೆಯ ಅವಧಿಯಲ್ಲಿ 15 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಇದಲ್ಲದೆ ಕೋವಿಡ್ ಅಲ್ಲದ ಆದರೆ ಕೋವಿಡ್ ಲಕ್ಷಣವುಳ್ಳ 5 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಇವರ್ಯಾರೂ ಸಹ ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಕೊರೋನಾ ರೋಗಿಗಳು ಸತ್ತಿದ್ದಾರೆ. …

Read More »

ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಬಲಿಯಾಗ್ತಿದ್ದಾರೆ. ಈಗ ಮತ್ತೊಬ್ಬ ನಟಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ. ವರದಿ ಪ್ರಕಾರ, ಅಭಿಲಾಶಾ ಪಾಟೀಲ್, ವಾರಣಾಸಿಯಲ್ಲಿ ಸಿನಿಮಾ ಶೂಟಿಂಗ್ ಮಾಡ್ತಿದ್ದರು. ಶೂಟಿಂಗ್ ಮುಗಿಸಿ ಮುಂಬೈಗೆ ವಾಪಸ್ ಆದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಆರಂಭಿಕ ರೋಗಲಕ್ಷಣ ಕಾಣಿಸಿಕೊಂಡ ನಂತ್ರ ಪರೀಕ್ಷೆ ಮಾಡಲಾಗಿತ್ತು. ಮನೆಯಲ್ಲಿಯೇ ನಟಿ ಚಿಕಿತ್ಸೆ …

Read More »

ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭ

ಚಿಕ್ಕೋಡಿ: ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭಿಸಲಾಗಿದ್ದು, ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಹಿತ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ವತಿಯಿಂದ ಆರಂಭಿಸಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದರು. ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ತೆರೆಯಲಾಗಿದೆ. ಈ ಆಸ್ಪತ್ರೆಯಲ್ಲಿ ಕೊವಿಡ್ …

Read More »

ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ

ಹೊಸಪೇಟೆ (ವಿಜಯನಗರ): ಕೋವಿಡ್‌ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ನಗರದ ರೋಟರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಕ್ಷನ್‌ 144 ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನ ಒಂದೆಡೆ ಗುಂಪು ಗೂಡುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದರು. ಎಲ್ಲರೂ ಮಾಸ್ಕ್‌ ಧರಿಸಿದ್ದರು. ಆದರೆ, ಅಂತರವಿರಲಿಲ್ಲ. ಪಟ್ಟಣ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ರೋಟರಿ ವೃತ್ತದಲ್ಲಿ ಏಕಾಏಕಿ ಪ್ರತಿಭಟನೆ ನಡೆಸಿದ್ದರು. ‘ಪೊಲೀಸ್‌ ಇಲಾಖೆಯಿಂದ ಅನುಮತಿ …

Read More »

ಕೊರೊನಾ ಸೋಂಕಿತೆಗೆ ಬೆಡ್ ಕೊಡಿಸಿದ್ದಕ್ಕೆ 1.20 ಲಕ್ಷ ರೂ. ಸುಲಿಗೆ

ಬೆಂಗಳೂರು, ಮೇ 5: ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ. ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ …

Read More »