Breaking News

ರಾಜಕೀಯ

ಮೇ ೦೨ ರಂದು ಮುಂಜಾನೆ ೮ ಗಂಟೆಯಿಂದ ಬೆಳಗಾವಿR.P.D. ಮಹಾವಿದ್ಯಾಲಯದಲ್ಲಿ , ಮತ ಎಣಿಕೆ ಕೋವಿಡ್- 19 ನೆಗೆಟಿವ್ ವರದಿ ಕಡ್ಡಾಯ

ಬೆಳಗಾವಿ :  ಬೆಳಗಾವಿ ಲೋಕಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಪ ಚುನಾವಣೆ ಕುರಿತು ಮತ ಎಣಿಕೆ ಕಾರ್ಯ ಮೇ ೦೨ ರಂದು ಮುಂಜಾನೆ ೮ ಗಂಟೆಯಿಂದ ಬೆಳಗಾವಿಯ ರಾಣಿ ಪಾರ್ವತಿ ದೇವಿ ಮಹಾವಿದ್ಯಾಲಯದಲ್ಲಿ ನಡೆಯಲಿದ್ದು, ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಕೋವಿಡ್-೧೯ ನೆಗೆಟಿವ್ ವರದಿ ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಎಸ್.  ತಿಳಿಸಿದ್ದಾರೆ. ಮತ ಎಣಿಕೆ ದಿನದಂದು ಅಭ್ಯರ್ಥಿಗಳು/ ಅಧಿಕಾರಿಗಳು/ಸಿಬ್ಬಂದಿಗಳು ಹಾಗೂ ಮತ ಎಣಿಕೆ ಸಿಬ್ಬಂದಿ/ಮತ ಎಣಿಕೆ ಎಜೆಂಟರುಗಳಿಗೆ ಕೋವಿಡ್-೧೯ …

Read More »

ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ. ಬಾಲಚಂದ್ರ ಜಾರಕಿಹೊಳಿ

ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.   ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …

Read More »

ಮನೆಯಲ್ಲಿ ದಿನಸಿ ಸಂಗ್ರಹಿಸಿದ ಜನರು

ರಾಯಚೂರು: ಲಾಕ್‌ಡೌನ್‌ ದಿನಗಳಲ್ಲಿ ಅಗತ್ಯ ದಿನಸಿ ಸಿಗುತ್ತವೆಯೋ ಇಲ್ಲವೋ ಅಥವಾ ದುಬಾರಿ ಆಗಬಹುದು ಎನ್ನುವ ಆತಂಕದೊಂದಿಗೆ ಜನರು ಮುಗಿಬಿದ್ದು ಸೋಮವಾರ ದಿನಸಿ ಖರೀದಿಸುತ್ತಿರುವುದು ಕಂಡುಬಂತು. ಎಪಿಎಂಸಿ ಆವರಣ, ಚಂದ್ರಮೌಳೇಶ್ವರ ವೃತ್ತ ಹಾಗೂ ಸರ್ದಾರ್‌ ವಲ್ಲಭಾಯ್‌ ಪಟೇಲ್‌ ವೃತ್ತ ಮಾರ್ಗದಲ್ಲಿರುವ ಮಳಿಗೆಗಳಲ್ಲಿ ಖರೀದಿ ಭಾರಾಟೆ ಜೋರಾಗಿತ್ತು. ಚೀಲಗಳನ್ನು ಹಿಡಿದು ಸರದಿ ನಿಂತಿದ್ದರು. ಸಾಮಾನ್ಯ ದಿಗಳಲ್ಲಿ ಒಂದು ಚೀಲದಲ್ಲಿ ಸರಕು ಖರೀದಿಸುತ್ತಿದ್ದವರು ಈಗ ಬೈಕ್‌, ಆಟೋ ಹಾಗೂ ಕಾರುಗಳಲ್ಲಿ ದಿನಸಿಗಳನ್ನು ತುಂಬಿಸಿಕೊಂಡು ಒಯ್ಯುತ್ತಿದ್ದಾರೆ. …

Read More »

ಲಾಕ್ ಡೌನ್; ರಾತ್ರಿ 9ರ ನಂತರ ಸರ್ಕಾರಿ ಬಸ್ ಇಲ್ಲ

ಬೆಂಗಳೂರು, ಏಪ್ರಿಲ್ 27; ಕರ್ನಾಟಕ ಸರ್ಕಾರ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ. ಮಂಗಳವಾರ ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಬರಲಿದೆ. ಕರ್ನಾಟಕ ಸರ್ಕಾರದ ಮಾರ್ಗಸೂಚಿ ಅನ್ವಯ ಅಗತ್ಯ ಸೇವೆಗಳ ಸರಕು ಸಾಗಣೆಗೆ ಮಾತ್ರ ವಾಹನ ಸಂಚಾರ ಇರುತ್ತದೆ. ಖಾಸಗಿ, ಸರ್ಕಾರಿ ಬಸ್‌ಗಳ ಸಂಚಾರ ರಾಜ್ಯಾದ್ಯಂತ ಸ್ಥಗಿತಗೊಳ್ಳಲಿದೆ.   ಬೆಂಗಳೂರು ನಗರದಿಂದ ಇತರ ಪ್ರದೇಶಗಳಿಗೆ ತೆರಳುವ …

Read More »

ಹುಟ್ಟೂರಿನಲ್ಲಿ ನೆರವೇರಿದ ನಿರ್ಮಾಪಕ ರಾಮು ಅಂತ್ಯ ಸಂಸ್ಕಾರ

ತುಮಕೂರು: ಕೋವಿಡ್‌ನಿಂದ ಮೃತಪಟ್ಟ ನಿರ್ಮಾಪಕ ಹಾಗೂ ನಟಿ ಮಾಲಾಶ್ರೀ ಪತಿ ರಾಮು ಅಂತ್ಯಕ್ರಿಯೆ ಕುಣಿಗಲ್ ತಾಲ್ಲೂಕಿನ ಕೊಡಗಿಹಳ್ಳಿ ಗ್ರಾಮದಲ್ಲಿರುವ ತೋಟದಲ್ಲಿ ಮಂಗಳವಾರ ಮಧ್ಯಾಹ್ನ ನೆರವೇರಿತು. ಕೋವಿಡ್ ನಿಯಮದಂತೆ ಅಂತ್ಯ ಸಂಸ್ಕಾರ ಮಾಡಲಾಯಿತು.ರಾಮು ಪಾರ್ಥೀವ ಶರೀರಕ್ಕೆ ಮಾಲಾಶ್ರೀ ಅಂತಿಮ ನಮನ ಸಲ್ಲಿಸಿದರು. ಪುತ್ರ ಆರ್ಯನ್ ಅಂತ್ಯ ಸಂಸ್ಕಾರದ ವಿಧಿಗಳನ್ನು ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಪುತ್ರಿ ಅನನ್ಯ ಇದ್ದರು. ಕೋವಿಡ್‌ನಿಂದ ಬಳಲುತ್ತಿದ್ದ ಚಿತ್ರ ನಿರ್ಮಾಪಕ, ನಟಿ ಮಾಲಾಶ್ರೀ ಅವರ ಪತಿ …

Read More »

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

ಚಿಕ್ಕಬಳ್ಳಾಪುರ: ಮೂರು ತಿಂಗಳ ಗರ್ಭಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಾಶಾಪುರ ಗ್ರಾಮದಲ್ಲಿ ನಡೆದಿದೆ. ಪವಿತ್ರ (22) ಮೃತ ಮಹಿಳೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದುಗ್ಗಿನಾಯ್ಕನಪಲ್ಲಿ ನಿವಾಸಿ ಪವಿತ್ರಾಳನ್ನ ಇದೇ ಬಾಗೇಪಲ್ಲಿ ತಾಲೂಕಿನ ಕಾಶಪುರ ಗ್ರಾಮದ ಮಧು ಕಳೆದ 5 ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದ. ಮದುವೆಯಾದ ನಂತರ ಪವಿತ್ರಳ ಗಂಡ ಮಧು ಹಾಗೂ ಆಕೆಯ ಅತ್ತೆ ವರದಕ್ಷಿಣೆಗಾಗಿ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಹಿಯಾಳಿಸಿ …

Read More »

ಚಿತ್ರರಂಗಗಳ ಮೇಲೆ ಪರಿಣಾಮ ಬೀರುತ್ತಿರುವ ಲಾಕ್ ಡೌನ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಗೋಷಿಸಿರುವ ಹಿನ್ನಲೆಯಲ್ಲಿ ಅನೇಕ ವಿಭಾಗಗಳಿಗೆ ತೊಂದರೆ ಆಗಿದ್ದು, ಸಿನೆಮಾ ಚಿತ್ರೀಕರಣದ ಮೇಲೆ ಸರ್ಕಾರ ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ . ಇದರಿಂದ ಸಹಜವಾಗಿಯೇ ಧಾರವಾಹಿ ಮತ್ತು ಸಿನೆಮಾ ಚಿತ್ರೀಕರಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ . ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೆಲವೆ ಕೆಲವು ಚಟುವಟಿಕೆಗಳಿಗೆ ಮಾತ್ರ ಸರ್ಕಾರ ಅನುಮತಿ ನೀಡಿದೆ . ಇದರಲ್ಲಿ ಸಿನೆಮಾ ಶೂಟಿಂಗ್ ಸೇರಿಲ್ಲ . ಇದರಿಂದ ಸಹಜವಾಗಿಯೇ …

Read More »

ಬೆಡ್ ಗಾಗಿ ರಾತ್ರಿ ಇಡೀ ಪರದಾಡಿದ ಕೋವಿಡ್ ಸೋಂಕಿತ, ಕುಳಿತ ಚೇರ್ ನಲ್ಲೇ ಸಾವು

ಬೆಂಗಳೂರು : ನಗರದಲ್ಲಿ ಕೊರೋನಾ ಸೋಂಕಿತರಿಗೆ ಬೆಡ್ ಸಿಗದ ಪರಿಸ್ಥಿತಿ ಮುಂದುವರೆದಿದೆ. ಕೊರೋನಾ ಸೋಂಕಿತ ತಂದೆಗೆ ಚಿಕಿತ್ಸೆ ಕೊಡಿಸೋದಕ್ಕಾಗಿ ರಾತ್ರಿಯಿಡೀ ಪರದಾಡಿದ್ರೂ, ಬೆಡ್ ಸಿಗದೇ ಬೆಳಗಾಗೋ ವೇಳೆಗೆ ಸಾವನ್ನಪ್ಪಿರುವಂತ ಧಾರುಣ ಘಟನೆ ನಡೆದಿದೆ. ಯಲಹಂಕದ 62 ವರ್ಷದ ವ್ಯಕ್ತಿಗೆ ಕೊರೋನಾ ತಗುಲಿತ್ತು. ಇಂತಹ ತಂದೆಗೆ ಚಿಕಿತ್ಸೆಗಾಗಿ ಐಸಿಯು ಬೆಡ್ ಅವಶ್ಯಕತೆ ಇತ್ತು. ರಾತ್ರಿಯಿಡೀ ಪರದಾಡಿದ್ರೂ ಚಿಕಿತ್ಸೆಗಾಗಿ ಬೆಡ್ ಸಿಕ್ಕಿಲ್ಲ. ಯಲಹಂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಚೇರಿನಲ್ಲೇ ಕುಳಿತು, ಆಕ್ಸಿಜನ್ ಹಾಕಿಸಿಕೊಂಡು ನರಳಾಡುತ್ತಿದ್ದಂತ …

Read More »

ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ

ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ …

Read More »

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂಗೆ ಸಲಹೆ – ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು : ರಾಜ್ಯಾಧ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ತುರ್ತು ಸಂದರ್ಭ ಒದಗಿ ಬಂದಿದೆ. ಇಂತಹ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ಮಾಡಲಾಗಿದೆ. ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಪ್ರಕಟಿಸಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು …

Read More »