Breaking News

ರಾಜಕೀಯ

ಬೆಂಗಳೂರಿಗೆ ಪ್ರತ್ಯೇಕ ಟಫ್ ರೂಲ್ಸ್ – ಪ್ಲಾನ್ ಏನು? ರಿಲೀಫ್ ಪ್ಲಾನ್ ಏನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ತಪ್ಪಿರುವುದು ಗೊತ್ತಿದ್ದರೂ ಕೂಡ ಚುನಾವಣೆ ನೆಪದಲ್ಲಿ ಇಷ್ಟು ದಿನ ನಾನಾ ನೆಪ ಹೇಳ್ತಾ, ನಾಮ್ ಕಾ ವಾಸ್ತೆಗೆ ಎಂಬಂತೆ ಕೆಲವೊಂದಿಷ್ಟು ನಿಯಮಗಳನ್ನು ಪ್ರಕಟಿಸಿದ್ದ ಸರ್ಕಾರ ಈಗ ಇದಕ್ಕೆ ತಕ್ಕ ಬೆಲೆ ತೆರುತ್ತಿರುವಂತಿದೆ. ದಿನೇ ದಿನೇ ಕೊರೊನಾ ಸಾವು ನೋವುಗಳು ಹೆಚ್ಚುತ್ತಿವೆ. ಅದ್ರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಘನಘೋರವಾಗಿದೆ. ಹೀಗಾಗಿ ರಾಜ್ಯಸರ್ಕಾರ ನಿದ್ದೆಯಿಂದ ಎಚ್ಚೆತ್ತಂತೆ ತರಾತುರಿಯಲ್ಲಿ ಸಭೆ ಮೇಲೆ ಸಭೆ ಮಾಡುತ್ತಿದೆ. ಬೆಂಗಳೂರಿಗೆ ಅನ್ವಯ ಆಗುವಂತೆ …

Read More »

24ಕ್ಕೂ ಹೆಚ್ಚು IAS ಅಧಿಕಾರಿಗಳಿಗೆ ಕೊರೊನಾ ಸೋಂಕು; ಆಡಳಿತದ ಮೇಲೆ ಎಫೆಕ್ಟ್

ನವದೆಹಲಿ: ಕೊರೊನಾ ವೈರಸ್​ ದೇಶದ ಸಿವಿಲ್ ಸರ್ವೀಸ್ ಅಧಿಕಾರಿಗಳ ಮೇಲೆ ಸವಾರಿ ಮಾಡ್ತಿದೆ. ಆತಂಕಕಾರಿ ವಿಚಾರ ಏನಂದ್ರೆ ಕೇಂದ್ರ ಆರೋಗ್ಯ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳ ಪ್ರಮುಖ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 2 ಡಜನ್​​ಗೂ ಹೆಚ್ಚು ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿದೆ ಅಂತಾ ವರದಿಯಾಗಿದೆ. ಇದರಿಂದಾಗಿ ಕೊರೊನಾ ವಿರುದ್ಧದ ಹೋರಾಟಕ್ಕೆ ಹಾಗೂ ಸುಭದ್ರ ಆಡಳಿತಕ್ಕೆ ದೊಡ್ಡ ಮಟ್ಟದಲ್ಲಿಯೇ ಹೊಡೆತ ಬೀಳುತ್ತಿದೆ. ಕಳೆದ 15 ದಿನಗಳಲ್ಲಿ ಕೇಂದ್ರ ಸರ್ಕಾರದ ಪ್ರಮುಖ ಅಧಿಕಾರಿ …

Read More »

ಅಬ್ಬರಿಸಿದ ಮ್ಯಾಕ್ಸ್‌ವೆಲ್‌, ಎಬಿಡಿ : ಕೋಲ್ಕತ್ತಾಗೆ 205 ರನ್ ಗಳ ಗುರಿ ನೀಡಿದ ರಾಯಲ್ ಚಾಲೆಂಜರ್ಸ್

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2021 ಟೂರ್ನಿಯ 10ನೇ ಪಂದ್ಯವು ಇಂದು ಚೆನ್ನೈನ ಎಮ್.ಎ. ಚಿದಂಬರಂ ಮೈದಾನದಲ್ಲಿ ನಡೆಯುತ್ತಿದೆ. ಎರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್, ಕೋಲ್ಕತ್ತಾ ವಿರುದ್ಧ ಸೆಣೆಸಾಡುತ್ತಿದೆ. ಹತ್ತು ರನ್‌ ಗಳಿಸಸೋ ಮೊದಲೇ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್‌ಸಿಬಿ ತಂಡಕ್ಕೆ ಗ್ಲೆನ್‌ ಮ್ಯಾಕ್ಸ್‌ವೆಲ್‌ ಆಸರೆಯಾಗಿ ನಿಂತು 49 ಎಸೆತಗಳಲ್ಲಿ 9 ಫೋರ್‌ ಮತ್ತು 3 ಸಿಕ್ಸರ್‌ …

Read More »

ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೋರೋನಾ ಸೋಂಕು ದೃಢಪಟ್ಟಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಚಾರಕ್ಕೆ ಆಗಮಿಸಿದ್ದ …

Read More »

ಕೊರೊನಾ ಮಧ್ಯೆ 3 ಕ್ಷೇತ್ರಗಳಿಗೆ ಉಪ ಚುನಾವಣೆ- ಕರ್ತವ್ಯಕ್ಕೆ ಬಾರದ 29 ಮಂದಿ ವಿರುದ್ಧ ಎಫ್‍ಐಆರ್

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಾದ ಬೆಳಗಾವಿ, ಮಸ್ಕಿ, ಬಸವಕಲ್ಯಾಣದ ಉಪಚುನಾವಣೆಗೆ ತೆರೆ ಬಿದ್ದಿದೆ. ಬೆಳಗಾವಿಯಲ್ಲಿ ಶೇ.60, ಬಸವಕಲ್ಯಾಣ ಶೇ.65 ಹಾಗೂ ಮಸ್ಕಿಯಲ್ಲಿ ಶೇ.71ರಷ್ಟು ಮತದಾನವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಸೇರಿದಂತೆ ಕುಟುಂಬಸ್ಥರು ಮತ ಚಲಾಯಿಸಿ, ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ರು. ಗೋಕಾಕ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮತದಾನ ಮಾಡಿದ್ರು. ಸೋಂಕು ಪೀಡಿತ ಸವದತ್ತಿ ಶಾಸಕ ಆನಂದ್ ಮಾಮನಿ ಪಿಪಿಇ ಕಿಟ್ ಧರಿಸಿ ಓಟ್ ಮಾಡಿದ್ರು. …

Read More »

ಕೊರೊನಾದಿಂದ ಬಳಲುತ್ತಿರೋ ಸಿಎಂ ಆರೋಗ್ಯ ಸ್ಥಿರ

ಬೆಂಗಳೂರು: ಕೋವಿಡ್ ನಿಂದ ಮಣಿಪಾಲ್ ಆಸ್ಪತ್ರೆ ಸೇರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಲವಲವಿಕೆಯಿಂದ ಇದ್ದಾರೆ ಅಂತ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಹೇಳಿದೆ. ತಜ್ಞ ವೈದ್ಯರ ತಂಡ ಶ್ವಾಸಕೋಶದ ಮೇಲೂ ನಿಗಾ ಇರಿಸಲಾಗಿದೆ ಅಂದಿದೆ. ಸಿಎಂ ಮೊಮ್ಮಗಳು ಸೌಂದರ್ಯ ಮತ್ತು ಅವರ ಪತಿ ಡಾ.ನಿರಂಜನ್‍ರಿಗೂ ಪಾಸಿಟಿವ್ ಆಗಿದ್ದು, ಮಣಿಪಾಲದಲ್ಲಿ ಸಿಎಂ ಪಕ್ಕದ ವಾರ್ಡ್‍ನಲ್ಲೇ ದಾಖಲಿಸಲಾಗಿದೆ. ಸಿಎಂ ಪ್ರಾಥಮಿಕ ಸಂಪರ್ಕಿತರಾಗಿರೋ ಡಿಸಿಎಂ ಲಕ್ಷ್ಮಣ ಸವದಿ ಗನ್‍ಮ್ಯಾನ್‍ಗೂ ಸೋಂಕು ದೃಢವಾಗಿದೆ. …

Read More »

ಕರೊನಾ ಇಷ್ಟು ಪ್ರಮಾಣದಲ್ಲಿ ಹೆಚ್ಚಾಗಲು ಎರಡು ಪ್ರಮುಖ ಕಾರಣ ನೀಡಿದ ದೆಹಲಿ ಏಮ್ಸ್​​ ನಿರ್ದೇಶಕ

ನವದೆಹಲಿ: ದೇಶದಲ್ಲಿ ಕರೊನಾವೈರಸ್​​ನ ಎರಡನೇ ಅಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಇದಕ್ಕೆ ಪ್ರಮುಖ ಎರಡು ಕಾರಣಗಳನ್ನು ದೆಹಲಿಯ ಏಮ್ಸ್​ ವೈದ್ಯರು ಕಂಡುಕೊಂಡಿದ್ದಾರೆ. ಏಮ್ಸ್​ ನ ನಿರ್ದೇಶಕ ರಂದೀಪ್ ಗುಲೇರಿಯಾ ಅವರು ಹೇಳುವ ಪ್ರಕಾರ ಕಳೆದ ನಾಲ್ಕು ತಿಂಗಳಿನಿಂದ ಕೋವಿಡ್ ಕಡಿಮೆಯಾಗಿದೆಯಂದು ಜನ ಮುನ್ನೆಚ್ಚರಿಕೆ ಕ್ರಮಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದು ಹಾಗೂ ರೂಪಾಂತರಗೊಂಡಿರುವ ಕರೊನಾವೈರಸ್​​ನ ಆರ್ಭಟದಿಂದ ಇವತ್ತು ವ್ಯಾಪಕ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಡಿಸೆಂಬರ್​ನಿಂದ ಏಪ್ರಿಲ್​ವರೆಗೆ …

Read More »

ಸತೀಶ್ ಜಾರಕಿಹೊಳಿ ಒಂದು ಲಕ್ಷದಷ್ಟು ಗೆಲುವಿನ ಅಂತರ ಕಾಯ್ದುಕೊಳ್ಳಲಿದ್ದಾರೆ: ಹೆಬ್ಬಾಳಕರ್

ಬೆಳಗಾವಿ – ಶನಿವಾರ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕನಿಷ್ಠ 80 ಸಾವಿರದಿಂದ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ಭವಿಷ್ಯ ಹೆಳುವುದಿಲ್ಲ. ಆದರೆ ಕ್ಷೇತ್ರದ ಎಲ್ಲ ಕಡೆಯಿಂದ ಮಾಹಿತಿ ಪಡೆದು ಹೇಳುತ್ತಿದ್ದೇನೆ. ಸತೀಶ್ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೆ ಸಂಶಯವಿಲ್ಲ. ಒಂದು ಲಕ್ಷದಷ್ಟು ಗೆಲುವಿನ ಅಂತರ ಕಾಯ್ದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮತದಾನ …

Read More »

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಇಬ್ಬರ ಸಾವು

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ಬೈರೆ ಗ್ರಾಮದ ಬಳಿ ಕಾರೊಂದು ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾದ ಪರಿಣಾಮ ಇಬ್ಬರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ. ಬೆಂಗಳೂರು ಮೂಲದವರು ಪ್ರಯಾಣಿಸುತ್ತಿದ್ದ ಕಾರು ಬೈರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಸೈಯದ್(35) ಮತ್ತು ತಾಯವ್ವ ದುರ್ಮರಣಕ್ಕೀಡಾಗಿದ್ದಾರೆ. ಇನ್ನುಳಿದ ಐವರಿಗೆ ಗಾಯಗಳಾಗಿದ್ದು, ಉತ್ತರ ಕನ್ನಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಹಳಗಾ ಗ್ರಾಮದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ …

Read More »

ಕಳೆದ 24 ಗಂಟೆಗಳಲ್ಲಿ 3 ಬಾರಿ ಆಮ್ಲಜನಕ ಪೂರೈಕೆಗೆ ಸರ್ಕಾರದಿಂದ ಆರ್ಡರ್

ನವದೆಹಲಿ, : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರವು ಕಳೆದ 24 ಗಂಟೆಗಳಲ್ಲಿ 3 ಬಾರಿ ಆರ್ಡರ್ ಮಾಡಿದೆ. ಕಳೆದ 10 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ತೀವ್ರವಾಗುತ್ತಿದ್ದು, ಆಕ್ಸಿಜನ್ ಪೂರೈಕೆಯಿಲ್ಲದೆ ರೋಗಿಗಳು ಮೃತಪಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದೀಗ ಸರ್ಕಾರವು ಆಕ್ಸಿಜನ್ ಸಿಲಿಂಡರ್‌ಗಾಗಿ ಒಂದೇ ದಿನದಲ್ಲಿ ಮೂರು ಬಾರಿ ಆರ್ಡರ್ ಮಾಡಿದೆ. ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ …

Read More »