Breaking News

ರಾಜಕೀಯ

1200 ಕೋಟಿ ರೂ.ಗಳ ಹಗರಣ : ಯಡಿಯೂರಪ್ಪ ರಾಜೀನಾಮೆಗೆ ಡಿಕೆಶಿ ಆಗ್ರಹ

ಬೆಂಗಳೂರು, ಏ.1- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅವರ ಸಂಪುಟದಲ್ಲೇ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಅವರು 1200 ಕೋಟಿ ರೂ.ಗಳ ಹಗರಣದ ಆರೋಪ ಮಾಡಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ಸಂಪುಟದ ಸಚಿವರೊಬ್ಬರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿ ಗಂಭೀರ ಆರೋಪ ಮಾಡಿದ್ದಾರೆ. 1200 ಕೋಟಿ ರೂ.ಗಳ ಹಗರಣ …

Read More »

ಈಶ್ವರಪ್ಪ ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ ಕಿಡಿ

ಬೆಂಗಳೂರು: ಕೆ.ಎಸ್. ಈಶ್ವರಪ್ಪನವರಂತಹ ಹಿರಿಯ ಸಚಿವರೇ ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಇದನ್ನು ಬಗೆ ಹರಿಸಿಕೊಳ್ಳಬೇಕಿತ್ತು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರು ಹೀಗೆ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗೋದಿಲ್ವಾ ಎಂದು ಅಸ‌ಮಾಧಾನ ವ್ಯಕ್ತಪಡಿಸಿದ್ದಾರೆ. ನಾವು 60 ಮಂದಿ ಶಾಸಕರು ಮುಖ್ಯಮಂತ್ರಿಗಳನ್ನು …

Read More »

ಹಾಲು ಖರೀದಿಸಲು ಹೋದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಡೈರಿ ಮಾಲೀಕ..!

ಉತ್ತರಪ್ರದೇಶ : ಹಾಲು ಖರೀದಿ ಮಾಡಲು ಹೋದ 16 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಡೈರಿ ಮಾಲೀಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಬಾಲಕಿ ಆರೋಪ ಮಾಡಿದ್ದಾಳೆ. ಸಂತ್ರಸ್ತೆ ಹಾಲು ಖರೀದಿಸಲು ಹೋದಾಗ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಈ ಹಿನ್ನಲೆ ಗಾಬರೊಗೊಂಡ ಮಾಲೀಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಆಕೆಯನ್ನ ಬಿಟ್ಟು ಕಳುಹಿಸಿದ್ದಾನೆ ಎನ್ನಲಾಗಿದೆ. ಆದ್ರೆ ಬೆದರಿಕೆ ಹೆದರದ …

Read More »

ಯುವತಿಗೆ ಕೊರೊನಾ ನೆಗೆಟಿವ್ – ಧ್ವನಿ ಪರೀಕ್ಷೆ ವೇಳೆ ಯುವತಿ ಹೇಳಿದ್ದೇನು..?

ಬೆಂಗಳೂರು: ಸಿಡಿ ರಾಡಿ ಎಪಿಸೋಡ್ ಮುಂದುವರಿದಿದೆ. ಸಿಡಿ ಯುವತಿಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಮುಕ್ತ ಅನ್ನೋ ಮೆಡಿಕಲ್ ಟೀಂ 3 ಗಂಟೆಗಳ ಕಾಲ ತಪಾಸಣೆ ನಡೆಸ್ತು. ಅತ್ಯಾಚಾರ, ಹಲ್ಲೆ, ದೇಹದ ಪರಿಶೀಲನೆ, ಮಾಸಿಕ ಖಿನ್ನತೆ ಸೇರಿದಂತೆ ಬೇರೆ ಖಾಯಿಲೆ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಮುಕ್ತ ತಂಡದಲ್ಲಿ ಸ್ತ್ರೀ ರೋಗ ತಜೆ, ತುರ್ತ ಚಿಕಿತ್ಸಾ ವಿಭಾಗ ವೈದ್ಯರು, ಮಾನಸಿಕ ರೋಗ ತಜ್ಞರು ಮತ್ತು ಮೆಡಿಸನ್ …

Read More »

ಯಡಿಯೂರಪ್ಪನವ್ರೇ, ರಾಜಿನಾಮೆ ನೀಡಿ.. ಇಲ್ಲವೇ ಈಶ್ವರಪ್ಪನ್ನ ಸಂಪುಟದಿಂದ ವಜಾ ಮಾಡಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವ್ರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ್ರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿಡುವ ಡಿಕೆಶಿ, ‘ಬಿಜೆಪಿ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಅವ್ರು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡ್ಬೇಕು. ಇಲ್ಲವೇ …

Read More »

ಸತೀಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್,ಒಂದೇ ವಾಹನದಲ್ಲಿ ತೆರಳಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ

ಬೆಳಗಾವಿ: ಲೋಕಸಭಾ ಉಪಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಮರೆತು ಒಂದಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಬೆಳಿಗ್ಗೆ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಕೆಲ ಕಾಲ ಚರ್ಚೆ ನಡೆಸಿದರು. ಬಳಿಕ ಇಬ್ಬರೂ ಒಂದೇ ವಾಹನದಲ್ಲಿ ತೆರಳಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಎಲ್ಲ ಸಮಾಜಗಳ ಮತದಾರರನ್ನು …

Read More »

ನಿನ್ನೆ ಸಿಡಿ ಸಂತ್ರಸ್ತೆ ಬಂದ ಕಾರ್ ಯಾರದ್ದು ಗೊತ್ತಾ..? ಇದಕ್ಕೂ ನಲಪಾಡ್​ಗೂ ಏನ್​ ಸಂಬಂಧ..?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಧೀಶರ ಎದುರು ಮತ್ತು ಎಸ್​ಐಟಿ ಎದುರು ಹೇಳಿಕೆ ನೀಡಿದ್ದ ಯುವತಿ ನಂತರ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಈ ಮಧ್ಯೆ ಸಂತ್ರಸ್ತ ಯುವತಿಗೆ ಕಾಂಗ್ರೆಸ್ ನಾಯಕರು ರಕ್ಷಣೆ ಕೊಡ್ತಿದ್ದಾರಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ  ಎಕ್ಸ್​ಕ್ಲೂಸಿವ್ ಮಾಹಿತಿ ಲಭ್ಯವಾಗಿದೆ. ನಿನ್ನೆ ಸಂತ್ರಸ್ತೆ ಯುವತಿ ಹೇಳಿಕೆ ನೀಡಲು ಟೊಯೋಟಾ ಫಾರ್ಚೂನರ್ ಸಿಗ್ಮಾ-4 ಕಾರ್​ನಲ್ಲಿ ಆಗಮಿಸಿದ್ದರು.. ಆ ಕಾರ್​ ನಂ KA 04 MU 9232 …

Read More »

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರುಮುಖ

ಬೆಂಗಳೂರು, ಮಾರ್ಚ್ 30: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕರ್ನಾಟಕದಲ್ಲಿ ದಿನೇದಿನೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2975 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 992779ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 21 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12541ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಮಂಗಳವಾರದ …

Read More »

ಅತ್ಯಾಚಾರ ಎಂದಾದರೆ ‘VIDEO’ ಚಿತ್ರೀಕರಿಸಿದ್ದು ಯಾಕೆ ? : ‘CD’ ಲೇಡಿಗೆ ‘SIT’ ಅಧಿಕಾರಿಗಳ ಪ್ರಶ್ನೆ

ಬೆಂಗಳೂರು : ಸಿಡಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 2 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ನೀಡಿದಂತ ಸಿಡಿ ಲೇಡಿಯನ್ನು, ಮುಂದಿನ ವಿಚಾರಣೆಗಾಗಿ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದು, . ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಕರೆದೊಯ್ಯುದಂತಹ ಎಸ್ ಐಟಿ ತಂಡದ ಅಧಿಕಾರಿಗಳು, ಯುವತಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸಿಡಿ …

Read More »

ಯುವತಿ ಹೇಳಿಕೆ ದಾಖಲು ; ನ್ಯಾಯಾಧೀಶರ ಮುಂದೆ ಹಾಜರು

ಬೆಂಗಳೂರು: ಇಪ್ಪತ್ತೂಂಬತ್ತು ದಿನಗಳಿಂದ ರಾಷ್ಟ್ರಾದ್ಯಂತ ಸುದ್ದಿಯಾಗಿರುವ ರಮೇಶ್‌ ಜಾರಕಿಹೊಳಿ ಅವರ ವಿವಾದಿತ ಸಿ.ಡಿ. ಪ್ರಕರಣದ ಕಣ್ಣಾಮುಚ್ಚಾಲೆ ಆಟಕ್ಕೆ ಮಂಗಳವಾರ ಬಹುತೇಕ ತೆರೆಬಿದ್ದಿದೆ. ಸಿ.ಡಿ.ಯಲ್ಲಿದ್ದಳು ಎನ್ನಲಾದ ಯುವತಿ ಮಂಗಳವಾರ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಎಸ್‌ಐಟಿ ಸಂಜೆ ವೇಳೆಗೆ ಯುವತಿಯನ್ನು ಆಡುಗೋಡಿಯಲ್ಲಿ ಇರುವ ಟೆಕ್ನಿಕಲ್‌ ಸೆಲ್‌ಗೆ ಕರೆದೊಯ್ದು ವಿಚಾರಣೆ ನಡೆಸಿತು. ಈ ವೇಳೆ ಅವರು ರಮೇಶ್‌ ಜಾರಕಿಹೊಳಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬುಧವಾರ ಬೆಳಗ್ಗೆ 10 ಗಂಟೆಗೆ …

Read More »