ಮೈಸೂರು: ಹುಲಿಯೊಂದು ಹೆಬ್ಬಾವನ್ನ ಬೇಟೆಯಾಡುವ ಅಪರೂಪದ ದೃಶ್ಯ ನಾಗರಹೊಳೆಯ ಕಬಿನಿ ಭಾಗದಲ್ಲಿ ಸಫಾರಿ ಮಾಡುತ್ತಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಮಾನ್ಯವಾಗಿ ಹೆಬ್ಬಾವುಗಳು ಆನೆ, ಸಿಂಹದಂತಹ ದೈತ್ಯ ಪ್ರಾಣಿಗಳನ್ನ ಸಲೀಸಾಗಿ ಬೇಟೆಯಾಡುತ್ತದೆ. ಹೆಬ್ಬಾವಿನ ಬಿಗಿ ಹಿಡಿತಕ್ಕೆ ಸಿಲುಕಿದ ಪ್ರಾಣಿಗಳು ಅಲ್ಲಿಂದ ಹೊರಬರಲಾಗದೇ ಅವುಗಳಿಗೆ ಆಹಾರವಾಗಿಬಿಡುತ್ತದೆ. ಆದರೆ ಇಲ್ಲಿ ಹುಲಿಯೊಂದು ತಾನೇ ಬಂದು ಮಲಗಿದ್ದ ಹೆಬ್ಬಾವನ್ನ ಬೇಟೆಯಾಡಿರೋದೆ ವಿಶೇಷ ಎನ್ನಲಾಗಿದೆ. ಈ ಹಿಂದೆ ಹಾವು ಮಲಗಿರುವುದನ್ನ ನೋಡಿ ಹುಲಿ ಹೆದರಿಕೊಂಡಿದ್ದ ವಿಡಿಯೋ ಸಾಮಾಜಿಕ …
Read More »ಶಂಕಿತ ಆರೋಪಿಯ ವಾಯ್ಸ್ ಸ್ಯಾಂಪಲ್ ಪಡೆದು ಎಫ್ ಎಸ್ ಎಲ್ ಗೆ ರವಾನೆ :ಇಂದು ವರದಿ ಸಾಧ್ಯತೆ
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್ ಅನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಇಂದು ವರದಿ ಹೊರ ಬೀಳುವ ನಿರೀಕ್ಷೆಯಿದೆ. ಒಂದು ವೇಳೆ ಸಿಡಿಯಲ್ಲಿರುವ ಧ್ವನಿಗೂ ಮತ್ತು ನೀಡಿರುವ ಧ್ವನಿಗೂ ಹೊಲಿಕೆ ಕಂಡು ಬಂದರೆ ಎಸ್‌ಐಟಿ ಬಂಧಿಸುವ ಸಾಧ್ಯತೆಯಿದೆ. ವಿಡಿಯೋದಲ್ಲಿನ ಹಿನ್ನೆಲೆ ಧ್ವನಿ ಚಿಕ್ಕಮಗಳೂರಿನ ವ್ಯಕ್ತಿಯದ್ದು ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೆ ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಬಳಿಕ ಆತನ …
Read More »ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾಗಿದ್ದ ರಮೇಶ್ ಜಾರಕಿಹೊಳಿ, ಸದ್ಯ ರಾಜಕೀಯದಲ್ಲಿ ಹಿನ್ನಡೆ ಅನುಭವಿಸುತ್ತಿರಲು ಕಾರಣ ಏನು?
ರಾಜಕೀಯದಲ್ಲಿ ಒಬ್ಬರ ವಿರುದ್ದ ಇನ್ನೊಬ್ಬರು ಕತ್ತಿ ಮಸೆಯುವುದು ನೋಡಿದ್ದೇವೆ, ತಂತ್ರ ಷಡ್ಯಂತ್ರ ರೂಪಿಸುವುದು ಇದ್ದಿದ್ದೇ. ಇದಕ್ಕೆ ರಾಜ್ಯದ ಯಾವ ಪಕ್ಷವೂ ಹೊರತಾಗಿಲ್ಲ. ಜಾರಕಿಹೊಳಿ ಸಿಡಿ ಪ್ರಕರಣದ ಸತ್ಯಾಸತ್ಯತೆಯನ್ನು ಅರಿಯಲು ಸರಕಾರ ವಿಶೇಷ ತನಿಖಾ ದಳವನ್ನು ರಚಿಸಿದೆ. ತನಿಖೆ ವೇಗವನ್ನು ಪಡೆದುಕೊಳ್ಳುತ್ತಿದ್ದು ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವುದರಿಂದ, ಬಿಜೆಪಿ ಮತ್ತು ಕಾಂಗ್ರೆಸ್ ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿವೆ. ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ …
Read More »ಎಸ್ ಐ ಟಿ ತನಿಖೆಯಿಂದ ಸಿಡಿ ಸತ್ಯಾಂಶ ಬಯಲು : ಸತೀಶ ಜಾರಕಿಹೊಳಿ
ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ನಡೆಸುತ್ತಿದೆ. ತನಿಖೆಯ ಬಳಿಕ ಸತ್ಯಾಂಶ ಬಯಲಾಗಲಿದೆ. ಹೀಗಾಗಿ ಸಿಬಿಐ ತನಿಖೆಗೆ ಆಗ್ರಹಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ. ಮೌಢ್ಯ ನಿವಾರಣೆಗಾಗಿ ಜಿಲ್ಲೆಯ ಜುಮನಾಳ ಗ್ರಾಮದಲ್ಲಿ ಭಾನುವಾರ ಸ್ಮಶಾನ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದರಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೈವಾಡ ಕೇಳಿಬರುತ್ತಿದೆ, ಅವರನ್ನು …
Read More »ನನಗೆ SIT ಮೇಲೆ ನಂಬಿಕೆ ಇಲ್ಲ , ಅಲ್ಲಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ..!
ವಿಜಯಪುರ : ನನಗೆ SIT ಮೇಲೆ ನಂಬಿಕೆ ಇಲ್ಲ ಎಷ್ಟು ಪಾರದರ್ಶಕತೆಯಿಂದ ನಡಿಯುತ್ತೋ ನನಗೆ ಸಂಶಯವಿದೆ ಎಂದು ಬಿಜೆಪಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ರಾಜ್ಯಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ಹೌದು ಇಂದು ವಿಜಯಪುರ ನಗರದಲ್ಲಿ ಮಾದ್ಯಮ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ ನನಗೆ SIT ಮೇಲೆ ಸಂಶಯವಿದೆ ಯಾಕಂದ್ರೆ ಅಲ್ಲಿರುವಂತಹ ಒಬ್ಬ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ಈ ಹಿಂದೆ ಡ್ರಗ್ಸ್ …
Read More »ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ
ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …
Read More »ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು
ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು. ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.
Read More »ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…
ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …
Read More »ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.
ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.
Read More »ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ.
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಬುಧವಾರ ಮತ್ತಷ್ಟು ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ …
Read More »
Laxmi News 24×7