Breaking News
Home / ರಾಜಕೀಯ (page 239)

ರಾಜಕೀಯ

2A ಮೀಸಲು ಹೋರಾಟ; ಇಷ್ಟಲಿಂಗ ಪೂಜೆ ನೆರವೇರಿಸಿ ಹೆದ್ದಾರಿಯಲ್ಲಿ ಪ್ರತಿಭಟಿಸಿದ ಬಸವ ಜಯಮೃತ್ಯುಂಜಯ ಶ್ರೀ

ದಾವಣಗೆರೆ: ಪಂಚಮಸಾಲಿ ಸಮಾಜದ 2 ಎ ‌ಮೀಸಲಾತಿ ಹಾಗೂ ಸಮಾಜದ ಎಲ್ಲ ಉಪಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕೆಂದು ಆಗ್ರಹಿಸಿ ಇಂದಿನಿಂದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಏಳನೇ ಹಂತದ ಹೋರಾಟವನ್ನು ದಾವಣಗೆರೆಯಲ್ಲಿ ನಡೆಸಿದರು. ನಗರದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕೂತು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಹಾಗೂ ಭಕ್ತರು ಕೈಯಲ್ಲಿ ಲಿಂಗ ಹಿಡಿದು ಇಷ್ಟಲಿಂಗ ಪೂಜೆ ನೆರವೇರಿಸುವ …

Read More »

ಬೆಂಗಳೂರಲ್ಲಿ ಇಸ್ಟೀಟ್ ಜೂಜು ಅಡ್ಡೆ ಮೇಲೆ ದಾಳಿ; 150ಕ್ಕೂ ಹೆಚ್ಚು ಜೂಜುಕೋರರು ಪೊಲೀಸ್ ವಶಕ್ಕೆ

ಬೆಂಗಳೂರು: ಅಕ್ರಮವಾಗಿ ನಡೆಯುತ್ತಿದ್ದ ಇಸ್ಟೀಟ್ ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿದ ನಗರ ಪಶ್ಚಿಮ ವಿಭಾಗದ‌ ಪೊಲೀಸರು 150ಕ್ಕೂ ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ‌ ಕ್ಲಬ್​ನಲ್ಲಿ ಅಕ್ರಮ ಚಟುವಟಿಕೆ ಕುರಿತು ಖಚಿತ ಮಾಹಿತಿ ಮೇರೆಗೆ ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ದಾಳಿ ನಡೆಸಿದ್ದಾರೆ‌.‌ ಕ್ಲಬ್​ನಲ್ಲಿ‌ 150ಕ್ಕೂ ಹೆಚ್ಚು ಮಂದಿ ಇಸ್ಟೀಟ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ಎಲ್ಲರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ದಾಳಿ ಲಕ್ಷಾಂತರ ರೂಪಾಯಿ …

Read More »

ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಈಗೇನಾದ್ರು ಮಾತನಾಡಿದ್ರೆ ನಮಗೇ ತಿರುಗುಬಾಣವಾಗುತ್ತೆ; ಸಿ ಟಿ ರವಿ

ಬೆಂಗಳೂರು: ಬಹುದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರ ಇದೀಗ ಪೂರ್ಣಗೊಂಡಿದೆ. ಬಿಜೆಪಿ ಹೈಕಮಾಂಡ್​ ಕೊನೆಗೂ ಅಳೆದು ತೂಗಿ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಿದೆ. ಇನ್ನು ರಾಜ್ಯಾಧ್ಯಕ್ಷರ ರೇಸ್​ನಲ್ಲಿ ಸಿ ಟಿ ರವಿ ಸೇರಿದಂತೆ ಹಲವು ನಾಯಕರ ಹೆಸರು ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಸ್ವತಃ ಬಿಜೆಪಿ ನಾಯಕ ಸಿ ಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಧ್ಯಪ್ರದೇಶದಿಂದ ಬೆಂಗಳೂರಿಗೆ ಆಗಮಿಸಿದ ಸಿ ಟಿ ರವಿ ಅವರು ಈ …

Read More »

ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮ

ಮೈಸೂರು : ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ಇಲ್ಲಿನ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಸೌತ್ ಇಂಡಿಯಾ ಪೇಪರ್ ಮಿಲ್​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುದ್ದಿ ತಿಳಿದಾಕ್ಷಣ ಅಗ್ನಿಶಾಮಕ ದಳದವರು ತಕ್ಷಣ ಘಡನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನಂಜನಗೂಡು ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಸೌತ್ ಇಂಡಿಯಾ ಪೇಪರ್ ಮಿಲ್ …

Read More »

ಹಬ್ಬಗಳ ಸೀಸನ್‌: ರಾಜ್ಯವಾರು ಬ್ಯಾಂಕ್‌ ರಜಾ ದಿನಗಳ ಮಾಹಿತಿ

ಹೈದರಾಬಾದ್​(ತೆಲಂಗಾಣ): ಭಾರತದಲ್ಲಿ ಪ್ರಸ್ತುತ ಹಬ್ಬದ ಸೀಸನ್ ನಡೆಯುತ್ತಿದೆ. ದೀಪಾವಳಿ, ಭಯ್ಯಾ ದೂಜ್ ಮತ್ತು ಛತ್‌ನಂತಹ ಹಬ್ಬಗಳು ಮುಂದಿನ ವಾರ ಬರಲಿವೆ. ನವೆಂಬರ್ 10ರಿಂದ ಸತತ 6 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಿರುತ್ತವೆ. ದೀಪಾವಳಿಯ ಜೊತೆಗೆ ಗೋವರ್ಧನ ಪೂಜೆ, ಬಲಿ ಪ್ರತಿಪದ ಮತ್ತು ಭಾಯಿ ದೂಜ್ ಸಂದರ್ಭದಲ್ಲಿ ದೇಶದ ಅನೇಕ ನಗರಗಳಲ್ಲಿ ನವೆಂಬರ್ 10ರಿಂದ 15ರವರೆಗೆ ಬ್ಯಾಂಕುಗಳಿಗೆ ರಜೆ ಇರಲಿದೆ. ನವೆಂಬರ್ ತಿಂಗಳಲ್ಲಿ ಒಟ್ಟು 15 ದಿನಗಳವರೆಗೆ ಬ್ಯಾಂಕುಗಳು ಮುಚ್ಚಿರುತ್ತವೆ. ಈ …

Read More »

ಮಂಡ್ಯ: ಸಹಪಾಠಿಗಳಿಂದಲೇ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಮಾಡಿ ಬ್ಲ್ಯಾಕ್​​ಮೇಲ್!

ಮಂಡ್ಯ: 17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಬಾಲಕಿ ಮೇಲೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮದ್ದೂರಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಆರೋಪಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವಿಡಿಯೋ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಮೊಬೈಲ್‌ಗೆ ವಿಡಿಯೋ ಕಳುಹಿಸಿ ಬೆದರಿಕೆ ಹಾಕಿದ್ದಲ್ಲದೇ ಕರೆದಾಗ ಬರುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಇದಾದ ನಂತರ …

Read More »

ಬಿಡದಿಗೆ ‘ನಮ್ಮ ಮೆಟ್ರೋ’ : ಡಿಸಿಎಂ ಡಿಕೆ ಶಿವಕುಮಾರ್​ ಘೋಷಣೆ

ರಾಮನಗರ: ಬಿಡದಿಯು ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ ಬಿಡದಿಗೆ ನಮ್ಮ ಮೆಟ್ರೋ ಘೋಷಣೆ ಮಾಡಲಾಗಿದೆ. ಹಾಗೆಯೇ ಇನ್ನು ಮುಂದೆ ಬಿಡದಿ ಪ್ರಾಧಿಕಾರ ಹೆಸರಿಗೆ ಬದಲಾಗಿ ಗ್ರೇಟರ್ ಬೆಂಗಳೂರು ಎಂಬ ಹೊಸ ನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ನಮ್ಮ ಮೆಟ್ರೋ ಮಾಡುವ ಬಗ್ಗೆ ಇಲ್ಲಿನ ಎಂಎಲ್‌ಎ …

Read More »

15 ದಿನಗಳೊಳಗಾಗಿ 100 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: “ತಹಶೀಲ್ದಾರ್ ನ್ಯಾಯಾಲಯದಲ್ಲಿರುವ ತಕರಾರು ಅರ್ಜಿಗಳನ್ನು ಜನವರಿ ಒಳಗಾಗಿ ಸಂಪೂರ್ಣವಾಗಿ ನ್ಯಾಯಯುತ ವಿಲೇವಾರಿ ಮಾಡಬೇಕು. ಅಧಿಕಾರಿಗಳು ಈ ಸೂಚನೆಯನ್ನು ಪಾಲಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಕಂದಾಯ ಇಲಾಖೆಯ ನಾಲ್ಕೂ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದಲೂ ಹಲವು ಸೂಚನೆಗಳನ್ನು ನೀಡಿದ್ದಾಗ್ಯೂ ಉತ್ತಮ ನಿರ್ವಹಣೆ ತೋರದ ತಹಶೀಲ್ದಾರ್​ಗಳಿಗೆ ಎಚ್ಚರಿಕೆ ನೀಡಿದ ಸಚಿವರು, “ಜನಸಾಮಾನ್ಯರು ಅವರ ದೈನಂದಿನ …

Read More »

ದೀಪಾವಳಿ ಹಣತೆಗಳಿಗೆ ಬಣ್ಣದ ಸ್ಪರ್ಶ ನೀಡಿದ ವಿಶೇಷ ಚೇತನರು

ಮಂಗಳೂರು: ನಾಡಿನೆಲ್ಲೆಡೆ ದೀಪಾವಳಿ ಹಬ್ಬಕ್ಕೆ ಬಿರುಸಿನ ತಯಾರಿ ನಡೆಯುತ್ತಿದೆ. ದೀಪಾವಳಿ ದಿನ ಪಟಾಕಿ ಸಿಡಿಸುವುದರ ಜೊತೆಗೆ ಹಣತೆಯ ಮೂಲಕ ದೀಪವನ್ನು ಬೆಳಗುವುದು ಸಾಮಾನ್ಯ. ದೀಪಾವಳಿ ದಿನ ಹೀಗೆ ಬೆಳಗುವ ಹಣತೆಗೆ ಮಂಗಳೂರಿನಲ್ಲಿ ವಿಶೇಷ ಚೇತನರು ವಿಶೇಷ ರಂಗು ನೀಡುತ್ತಿದ್ದಾರೆ. ನಗರದ ಶಕ್ತಿನಗರದಲ್ಲಿರುವ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ ಸಾನಿಧ್ಯ ಸ್ಕಿಲ್ ಡೆವಲಪ್ಮೆಂಟ್ ವಿಭಾಗದಲ್ಲಿನ ಇಪ್ಪತ್ತೈದು ವರ್ಷ ಮೇಲ್ಪಟ್ಟ ವಿಶೇಷ ಚೇತನರು ಹಣತೆಗಳಿಗೆ ರಂಗು ರಂಗಿನಿನ ಬಣ್ಣ ಬಳೆಯುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಕುಂಬಾರರಿಂದ …

Read More »

ಬೌರಿಂಗ್ ಆಸ್ಪತ್ರೆಯ ಡಾ ಶ್ರೀಕಾಂತ್ ಅಮಾನತುಗೊಳಿಸಿ: ಸಚಿವ ಡಾ ಶರಣ ಪ್ರಕಾಶ್ ಪಾಟೀಲ್​ಗೆ ದೂರು

ಬೆಂಗಳೂರು : ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಡುವೆ ವೈದ್ಯಸೇವೆ ಬಿಟ್ಟು ಡಿ ದರ್ಜೆ ನೌಕರನಂತೆ ಕೆಲಸ ನಿರ್ವಹಣೆ ಮಾಡುತ್ತಿರುವ ಬೌರಿಂಗ್ ಸಂಸ್ಥೆಯ ಡಾ. ಹೆಚ್. ಎಂ ಶ್ರೀಕಾಂತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ದೂರು ಸಲ್ಲಿಕೆ ಮಾಡಲಾಗಿದೆ. ನಗರದಲ್ಲಿಂದು ಜನತಾ ಪಕ್ಷದ ಕರ್ನಾಟಕ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್. ನಾಗೇಶ್ ಅವರು ದೂರು ಸಲ್ಲಿಕೆ ಮಾಡಿದ್ದು, ರಾಜಧಾನಿ …

Read More »