ಬೆಂಗಳೂರು: ಎಂ.ಎಲ್.ಸಿ. ಹೆಚ್. ವಿಶ್ವನಾಥ್ ವಿರುದ್ಧ ಹೈಕೋರ್ಟ್ ನೀಡಿದ್ದ ಅನರ್ಹತೆ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇದೀಗ ಹೆಚ್. ವಿಶ್ವನಾಥ್ ಮತ್ತೊಂದು ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ನಾನು ಒಂಟಿಯಲ್ಲ ಎಂದು ಹೇಳಿದ್ದಕ್ಕೆ ಧನ್ಯವಾದ. ಆದರೆ ನನಗೆ ಸಚಿವರ ಸಹಾನುಭೂತಿ ಬೇಕಿಲ್ಲ. ನಮ್ಮ 17 ಜನರ ಟೀಂ ಸಿಎಂ ಯಡಿಯೂರಪ್ಪ ಜೊತೆ …
Read More »ನಾವು ಮುಂಬೈ ಪಡದೇ ತಿರುತ್ತೇವೆ : ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು : ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಲ್ಲಿಯವರೆಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈಯನ್ನು ಕರ್ನಾಟಕದ ಭಾಗ ಎಂದು ತೀರ್ಮಾನಿಸಿದ್ದೇವೆ. ಹಾಗಾಗಿ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ ಎಂದಿದ್ದಾರೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಮಹಾಜನ್ …
Read More »ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದ್ರೆ ನಾವು ಕೈಕಟ್ಟಿ ಕೂರುವುದಿಲ್ಲ : ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ ವ್ಯಕ್ತವಾಗಿದ್ದು, ಎಲ್ಲ ಪಕ್ಷದ ನಾಯಕರು ಕಿಡಿ ಕಾರಿದ್ಧಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯೂ ಸಹ ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಅವರು ಹಾಗೆ ಕೇಳಿದರೆ ನಾವೂ ಸೊಲ್ಲಾಪುರ, ಮುಂಬೈಯನ್ನು ಕೇಳ ಬೇಕಾಗುತ್ತದೆ. ನಾವು ವಿವಿಧತೆಯಲ್ಲಿ ಏಕತೆ …
Read More »ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ
ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ ಪಟ್ಟಣದ ಅವರ …
Read More »ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ
ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ …
Read More »ವಿಧಾನಮಂಡಲ ಅಧಿವೇಶನ ಆರಂಭ : ಭಿತ್ತಿಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …
Read More »5A ಕಾಲುವೆ ಅನುಷ್ಠಾನ ಜಾರಿಗಾಗಿ ಮಾಜಿ ಶಾಸಕರಿಂದ ಆಣೆ ಪ್ರಮಾಣ ಪ್ರಹಸನ
ಮಸ್ಕಿ (ರಾಯಚೂರು): ಎನ್‌ಆರ್‌ಬಿಸಿಯ 5A ಕಾಲುವೆ ಅನುಷ್ಠಾನ ಸಾಧ್ಯವಿದ್ದರೆ ಎಲ್ಲ ಪ್ರಯತ್ನಗಳಿಗೂ ನಾವು ಬದ್ಧವಿದ್ದು, ಯಾವ ದೇವರ ಮೇಲೆ ಬೇಕಾದರೂ ಪ್ರಮಾಣ ಮಾಡುವುದಾಗಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು. ಯೋಜನೆ ಜಾರಿ ಬೇಡಿಕೆಯೊಂದಿಗೆ ಕಳೆದ 69 ದಿನಗಳಿಂದ ರೈತರು ಧರಣಿ ನಡೆಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಯೋಜನೆ ಜಾರಿಗೆ ನಾವು ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಬೇಕಾದರೆ ಇನ್ನೂ ಯಾರನ್ನಾದರೂ ಭೇಟಿ ಮಾಡಬೇಕಿದ್ದರೆ ಕರೆಯಿರಿ …
Read More »ಬಿ.ಸಿ.ಪಾಟೀಲ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಉಗ್ರಪ್ಪ ಆರೋಪ
ಬೆಂಗಳೂರು: ರೈತರನ್ನು ಭಯೋತ್ಪಾದಕರು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಹಾಗೂ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಯಾವಾಗ ಭಯೋತ್ಪಾದಕರಾದರು. ಕೃಷಿ ಸಚಿವರಾಗಿ ಈ ರೀತಿಯ ಮಾತು ಆಡಬಹುದೇ ಎಂದು ಪ್ರಶ್ನಿಸಿದರು. ಬಿ.ಸಿ.ಪಾಟೀಲ್ ರೈತರ ಕ್ಷಮೆಯಾಚಿಸಬೇಕು. ಸಂಪುಟದಿಂದ ಅವರನ್ನು ಕೈ ಬಿಡಬೇಕು. ರೈತ ಸಮುದಾಯಕ್ಕೆ ಅವರು ಅವಮಾನ ಮಾಡಿದ್ದಾರೆ …
Read More »ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಏರ್ಪಡಿಸಿದ್ದ ಕೃತಕ ಗರ್ಭಧಾರಣಾ ಕಾರ್ಯಕರ್ತರಿಗೆ ಇನಾಫ್ ತಂತ್ರಾಂಶವನ್ನು ಒಳಗೊಂಡ ಟ್ಯಾಬ್ ಮತ್ತು ಒಕ್ಕೂಟದ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ ಚೆಕ್‍ಗಳನ್ನು ವಿತರಿಸಿ …
Read More »ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು
ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ. ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ …
Read More »
Laxmi News 24×7