Breaking News

ರಾಜಕೀಯ

ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ವೃದ್ದಾಪ್ಯ ವೇತನ

ಚಿಕ್ಕಮಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ಆಧಾರ್ ದಾಖಲೆ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಫಲಾನುಭವಿಗಳು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಜನವರಿ 27 ರಂದು ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗುವುದು ಎಂದರು. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ …

Read More »

ಸ್ಮಾರ್ಟ್ ಪೋನ್ ಗಳಿಗೆ ಭರ್ಜರಿ ಡಿಸ್ಕೌಂಟ್

ನವದೆಹಲಿ: ಹಿಂದೆಂದೂ ಕಂಡು ಕೇಳರಿಯದ ಮಾದರಿಯಲ್ಲಿ ಆಯಪಲ್ ಐಫೋನ್ 12 ಗೆ Maple ಆನ್ ಲೈನ್ ಮತ್ತು ಆಫ್ ಲೈನ್ ಸ್ಟೋರ್ ಗಳಲ್ಲಿ ಭರ್ಜರಿ ಡಿಸ್ಕೌಂಟ್ ದೊರಕುತ್ತಿದೆ. ಹೌದು ! ಮ್ಯಾಪಲ್ (Maple) ಸ್ಟೋರ್ ಗಳಲ್ಲಿ 16,000 ರೂ. ವರೆಗೂ ಡಿಸ್ಕೌಂಟ್ ನಲ್ಲಿ ಆಯಪಲ್ ಐಫೋನ್ ಗಳು ದೊರಕುತ್ತಿದೆ. ಖರೀದಿದಾರರು 8000 ರೂ.ಗಳ ಮ್ಯಾಪಲ್ ಎಕ್ಸ್‌ಕ್ಲೂಸಿವ್ ರಿಯಾಯಿತಿ ಮತ್ತು ಎಚ್‌ ಡಿಎಫ್‌ ಸಿ ಕ್ಯಾಶ್‌ಬ್ಯಾಕ್ ಆಫರ್ 9000 ರೂ.ಗಳವರೆಗೆ ಪಡೆಯಬಹುದು. …

Read More »

ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಶುಕ್ರವಾರದಂದು ಜರುಗಿದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಬಸ್ ಪಾಸ್ ಇದ್ರು ನಡೆದುಕೊಂಡು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು..!

ಗದಗ (ಜ. 24): ಕೊರೋನಾ ಹಾವಳಿಯಿಂದ ಆನ್ ಲೈನ್ ಶಿಕ್ಷಣವನ್ನು ಮನೆಯಲ್ಲಿಯೇ ಪಡೆದು, ಈಗ ತಾನೇ ಕಾಲೇಜು ಕಡೇ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಒಂದು ಕಡೇ ಕೊರೊನಾ ಆತಂಕ ಇನ್ನೊಂದೆಡೆ ಸಮರ್ಪಕ  ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಇರದಿದಕ್ಕೆ ವಿದ್ಯಾರ್ಥಿಗಳು ಪಡಬಾರದ ಕಷ್ಟವನ್ನು ಅನುಭವಿಸುತ್ತಿದ್ದಾರೆ. ತಾಲೂಕಿನ ಹಾತಲಗೇರಿ ಗ್ರಾಮದ ವಿದ್ಯಾರ್ಥಿಗಳು ನಿತ್ಯ ಗದಗ ನಗರಕ್ಕೆ ನಡೆದುಕೊಂಡು ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾತಲಗೇರಿ ಗ್ರಾಮದಲ್ಲಿ ಸುಮಾರು  40 ರಿಂದ‌ 50 ವಿದ್ಯಾರ್ಥಿಗಳು, …

Read More »

ಮಗಳಿಂದ ತಂದೆಯ ಅಂತ್ಯಸಂಸ್ಕಾರ: ‘ಕನ್ನಡತಿ’ ಧಾರವಾಹಿ ಪ್ರೇರಣೆ

ಕನ್ನಡದ ಜನಪ್ರಿಯ ಧಾರವಾಹಿ ‘ಕನ್ನಡತಿ’ ಇಂದ ಪ್ರೇರಣೆ ಪಡೆದು ಕುಟುಂಬವೊಂದು ಸಂಪ್ರದಾಯವನ್ನು ಮುರಿದು ಹೊಸ ಸಂಪ್ರದಾಯವನ್ನು ಕಟ್ಟಿದ ಘಟನೆ ನಡೆದಿದೆ. ಗಂಡು ಮಕ್ಕಳಷ್ಟೆ ಅಂತಿಮ ಸಂಸ್ಕಾರ ಮಾಡುವ ಪದ್ಧತಿ ಬಹು ಹಳೆಯ ಕಾಲದಿಂದಲೂ ಚಾಲ್ತಿಯಲ್ಲಿದೆ. ಹೆಣ್ಣು ಮಕ್ಕಳು ಅಂತ್ಯ ಸಂಸ್ಕಾರ ಮಾಡುವಂತಿಲ್ಲ. ಆದರೆ ಕನ್ನಡತಿ ಧಾರವಾಹಿಯಲ್ಲಿ ನಾಯಕಿ ತನ್ನ ತಂದೆಯ ಅಂತ್ಯ ಸಂಸ್ಕಾರ ಮಾಡುವ ದೃಶ್ಯವಿದೆ. ಬಹು ಚರ್ಚೆ-ವಿಚಾರ ವಿಮರ್ಶೆಗಳ ಬಳಿಕ ಧಾರವಾಹಿ ನಾಯಕಿ ತಂದೆಯ ಅಂತ್ಯ ಸಂಸ್ಕಾರ ಮಾಡುತ್ತಾರೆ. …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ತಪಸಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ : ಡಾ.ರಾಜೇಂದ್ರ

ಬೆಟಗೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ …

Read More »

ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.

ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.

Read More »

ಬಸವಕಲ್ಯಾಣದಲ್ಲಿ ಹಾಲಿ-ಮಾಜಿ ಸಿಎಂ ಪುತ್ರರ ಫೈಟ್ ಫಿಕ್ಸ್..!?

ಬೆಂಗಳೂರು, ಜ.24- ಯಾವುದೇ ಕ್ಷಣದಲ್ಲಾದರೂ ಚುನಾವಣಾ ಆಯೋಗ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆಯಿದ್ದು, ಬಸವ ಕಲ್ಯಾಣ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪುತ್ರರ ಅಖಾಡಕ್ಕೆ ಸಜ್ಜಾಗುತ್ತಿದೆ. ಪ್ರತಿಷ್ಠೆಯ ಕಣವಾಗಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ದಿ.ಧರಂಸಿಂಗ್ ಪುತ್ರ ವಿಜಯ್ ಸಿಂಗ್ ಮುಖಾಮುಖಿಯಾಗಲಿದ್ದಾರೆ. ಈ ಮೂಲಕ ರಾಜ್ಯದಲ್ಲೇ ಬಸವ ಕಲ್ಯಾಣ ಕ್ಷೇತ್ರವು ಹೈವೋಲ್ಟೇಜ್ …

Read More »

ಗಣರಾಜ್ಯೋತ್ಸವಕ್ಕೆ ದಿನಗಣನೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ….!?

ನೋಯ್ಡಾ,- ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ನೋಯ್ಡಾ, ಘಾಜಿಯಾಬಾದ್, ಕಾನ್ಪುರ್ ಮತ್ತು ಅಲಹಬಾದ್‍ನಲ್ಲಿ ದುಷ್ಕರ್ಮಿಗಳು ಹುಸಿ ಬೆದರಿಕೆ ಕರೆ ಮಾಡಿ ಗಣರಾಜ್ಯೋತ್ಸವದಂದು ಬಾಂಬ್ ಸ್ಪೋಟಿಸುವುದಾಗಿ ಹೆದರಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿರುವ ಪ್ರಮುಖ ಆಸ್ಪತ್ರೆಗಳು, ವಾಣಿಜ್ಯ ಕಟ್ಟಡಗಳು, ಶಾಪಿಂಗ್ ಮಾಲ್‍ಗಳನ್ನು ಸ್ಪೋಟಿಸುವ ಕರೆ ಮಾಡುತ್ತಿದ್ದು ಈ ಕುರಿತಂತೆ ಸಂಬಂಧಪಟ್ಟ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ. ನಿನ್ನೆ ನೋಯ್ಡಾದ ಜನವಸತಿ ಸೆಕ್ಟರ್ 63 ರಲ್ಲಿ ಬಾಂಬ್ ಸ್ಫೋಟದ ಬೆದರಿಕೆ …

Read More »

ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …

Read More »