Breaking News

ರಾಜಕೀಯ

ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ

ಬೆಂಗಳೂರು, ಜ.20- ಮರಾಠಿ ಭಾಷಿಗರ ಬಾಹುಳ್ಯ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ ಇಂದು ಮಹತ್ವದ ಸಭೆ ನಡೆಸಿತು. ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿಚಂದ್ರು, ಮಂಜುನಾಥ್ ದೇವು, ಗಿರೀಶ್ ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ ಮಹಾರಾಷ್ಟ್ರ ಮುಖ್ಯಮಂತ್ರಿ …

Read More »

ಜನರ ಆಕ್ರೋಶಕ್ಕೆ ಮಣಿದ ‘ತಾಂಡವ್’ ತಂಡ: ವಿವಾದಿತ ದೃಶ್ಯಕ್ಕೆ ಕತ್ತರಿ ಪ್ರಯೋಗ

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳೊಂದಿಗೆ ನಡೆದ 2ನೇ ಸುತ್ತಿನ ಮಾತುಕತೆಯ ನಂತರ ‘ತಾಂಡವ್’ ವೆಬ್ ಸೀರೀಸ್ ತಂಡ ಕೊನೆಗೂ ವಿವಾದದ ಕಿಡಿ ಹೊತ್ತಿಸಿದ ದೃಶ್ಯವನ್ನು ತೆಗೆದುಹಾಕಿದೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಎದುರಿಸಿ, ಬಾಲಿವುಡ್ ನಟ ಸೈಫ್ ಆಲಿಖಾನ್ ಅಭಿನಯದ ತಾಂಡವ್ ವೆಬ್ ಸೀರೀಸ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತಾಗಿ ತಾಂಡವ್ ತಂಡ ಕೂಡ ಬಹಿರಂಗವಾಗಿ ಕ್ಷಮೆಯಾಚಿಸಿತ್ತು. ಇದೀಗ ವಿವಾದದ ಕಿಡಿ ಹೊತ್ತಿಸಿದ ದೃಶ್ಯವನ್ನು …

Read More »

ಅಂತರ್‌ರಾಜ್ಯ ಕಾರ್‌ ಲೋನ್‌ ಜಾಲ ಬೇಧಿಸಿದ ಪೊಲೀಸ್‌

ಮುಂಬೈ: ಅಂತರ್‌ ರಾಜ್ಯ ಕಾರ್‌ ಲೋನ್‌ ವಂಚನೆ ಜಾಲವನ್ನು ಮುಂಬೈ ಕ್ರೈ ಬ್ರ್ಯಾಂಚ್‌ ಬೇಧಿಸಿದ್ದು, 19 ಲಕ್ಷುರಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಬ್ಯಾಂಕ್‌ ಒಂದರ ಮಾಜಿ ಲೋನ್‌ ಎಕ್ಸಿಕ್ಯೂಟಿವ್‌ ಕೂಡ ಸೇರಿದ್ದಾನೆ. ಆರೋಪಿಗಳು ಈ ಕಾರುಗಳನ್ನು ಮುಂಬೈ ಅಲ್ಲದೆ ಬೆಂಗಳೂರು, ಅಹ್ಮದಾಬಾದ್‌ನಲ್ಲಿ ಅಡ ಇಟ್ಟಿರುವ ಸಂಗತಿ ಕೂಡ ಬೆಳಕಿಗೆ ಬಂದಿದೆ. ಮರ್ಸಿಡಿಸ್‌ ಬೆನ್ ‌l, ಆಡಿ, ಟೊಯೊಟಾ ಇನ್ನೋವಾ, ಫಾರ್ಚೂನರ್‌, ಫೋರ್ಡ್‌, ಮಿನಿಕೂಪರ್‌ನಂಥ …

Read More »

ಸಿಎಂ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ. ಆದ್ರೆ ಯಾವುದೇ ರೀತಿ ರೈತರ ಬಗ್ಗೆ ಕಾಳಜಿ ಅವರಿಗಿಲ್ಲ. ಬಿಜೆಪಿ ಕಾರ್ಪೊರೇಟರ್ ಪರ ಇರುವುದರಿಂದ ಕಾಯ್ದೆ ಹಿಂಪಡೆಯಲು ಹಿಂದೆಟು ಹಾಕುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಂದು ನಡೆದ ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ಕಾರ್ಪೊರೇಟರ್ ಪರ ಇವೆ. ಆದ ಕಾರಣ ಸರ್ಕಾರ …

Read More »

ಕಾಂಗ್ರೆಸ್ ನ ಮತ್ತಿಬ್ಬರು ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪಟ್ಟ !

ಬೆಂಗಳೂರು : ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ, ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಆದೇಶ ನೀಡಿದ್ದಾರೆ. ಮೂವರು ನಾಯಕರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಗಾಗಲೇ ನೇಮಕ ಮಾಡಲಾಗಿದೆ. ನಾಯಕರು ಸಹ ರಾಜ್ಯಾದ್ಯಂತ …

Read More »

ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.

ಬೆಂಗಳೂರು: ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ರೈತ ಕಾಯ್ದೆ ರದ್ಧತಿ ಆಗ್ರಹಿಸಿ ಇಂದು ಕಾಂಗ್ರೆಸ್‌ ರಾಜಭವನ ಚಲೋವನ್ನು ಆಯೋಜಿಸಿತ್ತು. ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶದ ಬಳಿಕ ರಾಜಭನವನಕ್ಕೆ ತೆರಳಲು ಹೋಗುತ್ತಿದ್ದಾಗ ಪೊಲೀಸರು ಕಾಂಗ್ರೆಸ್‌ ನಾಯಕರನ್ನು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಪೊಲೀಸರು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ “ಹೂ ದಿ ಹೆಲ್‌” ಎಂದು ಹೇಳಿ ಮಹಿಳಾ ಸಿಬ್ಬಂದಿಯ ಮೇಲೆ …

Read More »

ಅಂಜಲಿ ನಿಂಬಾಳ್ಕರ್ ಪ್ರತಿಭಟನೆ ವೇಳೆ ಅಸ್ವಸ್ಥ

; ಬೆಂಗಳೂರು; ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ನಡೆಯುತ್ತಿದ್ದ ರಾಜಭವನ ಚಲೋ ರೈತರ ಪ್ರತಿಭಟನೆ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ. ರಾಜಭವನದತ್ತ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆಯೇ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ. ನಂತರ ಅಲ್ಲೇ ಕುಳಿತು ವಿಶ್ರಾಂತಿ ಪಡೆದುಕೊಂಡರು. ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ತಡೆದು ನಾಯಕರನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಪ್ರತಿಭಟನೆಗಳು ಭುಗಿಲೆದ್ದಿವೆ.

Read More »

ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು – ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಹಸನದ ನಂತರ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಶುರುವಾಗಿದೆ. ಪ್ರಮುಖ ಖಾತೆಗಳಿಗೆ ಪ್ರಭಾವಿ ಸಚಿವರಿಂದ ಲಾಬಿ ನಡೆಯುತ್ತಿದ್ದು, ಕೆಲವರ ಖಾತೆಯೂ ಅದಲು ಬದಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ನಾಳೆ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಖಾತೆ ಹಂಚಿಕೆ ಜೊತೆಗೆ ಸಣ್ಣ ಪ್ರಮಾಣದಲ್ಲಿ ಸಂಪುಟ ಪುನಾರಚನೆಯು ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕೆಲ ಸಚಿವರು ಪ್ರಮುಖ ಖಾತೆಗೆ ಪಟ್ಟು …

Read More »

ಕೇಂದ್ರ ಬಜೆಟ್ : ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ

ಹೊಸದಿಲ್ಲಿ : ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು …

Read More »

“ಮದುವೆಯಾಗುವುದಾಗಿ ನಂಬಿಸಿ ರೇಪ್ ಮಾಡಿದ್ದಾನೆ” : ಪೈಲಟ್ ವಿರುದ್ ನಟಿ ದೂರು

ಮುಂಬೈ, ಜ.19- ವೃತ್ತಿಪರ ಪೈಲಟ್ ತನ್ನನ್ನು ವಿವಾಹವಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ನಡೆಸಿ, ಮೋಸಗೊಳಿಸಿದ್ದಾನೆ ಎಂದು ಹಿಂದಿ ಕಿರುತೆರೆ ನಟಿ ಮತ್ತು ಮಾಡೆಲ್ ಪೊಲೀಸರಿಗೆ ದೂರು ನೀಡಿರುವ ಘಟನೆ ಇಲ್ಲಿ ನಡೆದಿದೆ. ಆಕೆ ಸಲ್ಲಿಸಿರುವ ದೂರಿನ ಮೇರೆಗೆ ಓಶಿವಾರ ಪೊಲೀಸರು ಆರೋಪಿ ಪೈಲಟ್ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಕಳೆದ ಡಿಸೆಂಬರ್‍ನಲ್ಲಿ ಆರೋಪಿಯನ್ನು ಮ್ಯಾಟ್ರಿಮೋನಿಯಲ್ ಸೈಟ್‍ನಲ್ಲಿ ಪರಿಚಯ ಮಾಡಿಕೊಂಡಿದ್ದಾಳೆ. ಆರೋಪಿ ವೃತ್ತಿಪರ ಪೈಲಟ್ ಎಂದು ಹೇಳಿಕೊಂಡು ಈಕೆ ಸಂಬಂಧ ಬೆಳೆಸಿ, …

Read More »