Breaking News
Home / ರಾಜಕೀಯ (page 242)

ರಾಜಕೀಯ

ಆಡಳಿತ ವೈಫಲ್ಯ ಖಂಡಿಸಿ ಸರ್ಕಾರದ ವಿರುದ್ಧ 3 ದಿನ ಧರಣಿ;B.S.Y.

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಖಂಡಿಸಿ ಹಾಗು ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ವಿರೋಧಿಸಿ ತಿಂಗಳಾಂತ್ಯಕ್ಕೆ ಮೂರು ದಿನ ಸರ್ಕಾರದ ವಿರುದ್ಧ ಧರಣಿ ನಡೆಸಲಿದ್ದು ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರವನ್ನು ಇರಿಸಿಕೊಂಡು ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಆರ್.ಆರ್. ನಗರದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ವೀಕ್ಷಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಈ ರೀತಿಯ …

Read More »

ಸಚಿವ ಸತೀಶ್​ ಜಾರಕಿಹೊಳಿ ಭೇಟಿ ಬಳಿಕ ಸಂಸದ ಡಿ ಕೆ ಸುರೇಶ್ ಹೇಳಿದ್ದೇನು​?

ಬೆಂಗಳೂರು: ಸಂಸದ ಡಿ ಕೆ ಸುರೇಶ್ ಅವರು ಇಂದು ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ. ಮೊನ್ನೆಯಷ್ಟೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಠಾತ್ ಆಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಅಚ್ಚರಿ ಮೂಡಿಸಿದ್ದರು. ಇದೀಗ ಸಂಸದ ಸುರೇಶ್​ ಅವರ ಭೇಟಿ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ನಮ್ಮ ಕಾರ್ಯಾಧ್ಯಕ್ಷರ ಜೊತೆಗೆ ಮಹತ್ತರವಾದ ಖಾತೆ ಹೊಂದಿದ್ದಾರೆ. ಮಳೆಯಿಂದ ರಸ್ತೆಗೆ ಗುಂಡಿಗಳು ಬಿದ್ದು, …

Read More »

ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

ಬೆಂಗಳೂರು:ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌ ಕಾಂತರಾಜು ನೇತೃತ್ವದ ಸಮೀಕ್ಷಾ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.   ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಕಾಂತರಾಜು ವರದಿಯನ್ನು ಜಾತಿ ಗಣತಿ ಎಂದು ಕರೆಯಲಾಗುತ್ತಿದೆ. ಮೂಲವಾಗಿ ಇದು ಜಾತಿಗಣತಿ ಸಮೀಕ್ಷೆ ಅಲ್ಲವೇ, ಅಲ್ಲ.‌ ಇದು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸರಿಪಡಿಸುವ ಹಿನ್ನೆಲೆಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ಅದನ್ನು ಹೊರತುಪಡಿಸಿ ಜಾತಿ …

Read More »

ಮಂಗಳೂರು: ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ, ಕಾರಣ ನಿಗೂಢ

ಮಂಗಳೂರು: ಬ್ಯಾಂಕ್​ನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಬ್ಯಾಂಕ್ ಅಧಿಕಾರಿ ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡವರು. ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಯವರು ಬಂದು ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ. ವಾದಿರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದರು. ಪತ್ನಿ ಕೂಡಾ …

Read More »

ನಾನೊಬ್ಬ ಸ್ವಾಭಿಮಾನಿ ರಾಜಕಾರಣಿ, ಸ್ವಾರ್ಥ ರಾಜಕಾರಣಿ ನಾನಲ್ಲ:D.V.S.

ಮಂಡ್ಯ: ನಾನೊಬ್ಬ ಸ್ವಾಭಿಮಾನಿ ರಾಜಕಾರಣಿ, ಸ್ವಾರ್ಥ ರಾಜಕಾರಣಿ ನಾನಲ್ಲ. ಸಾಯುವವರೆಗೂ ಹೆಣದ ಮೇಲೆ ಫ್ಲಾಗ್ ಹಾಕುವವರಗೆ ರಾಜಕಾರಣದಲ್ಲಿರಬೇಕು ಎನ್ನುವವರ ಸಂಖ್ಯೆ ಹೆಚ್ಚಾಗ್ತಿದೆ. ನನ್ನ ಚುನಾವಣಾ ರಾಜಕೀಯ ನಿವೃತ್ತಿ ಸಯಂಪ್ರೇರಿತ ನಿರ್ಧಾರ ಯಾರ ಒತ್ತಡವು ಇಲ್ಲ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡ ತಿಳಿಸಿದ್ದಾರೆ.   ಬರ ಅಧ್ಯಯನ ಮಾಡಲು ಮಂಡ್ಯಕ್ಕೆ ಆಗಮಿಸಿದ ವೇಳೆ ಮದ್ದೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮನುಷ್ಯನಿಗೆ ಕೆಲವು ಇತಿಮಿತಿ ಇರಬೇಕು. ಮೂವತ್ತು ವರ್ಷದಿಂದ ಎಲ್ಲ ಸ್ಥಾನಮಾನ …

Read More »

ಜಾಮೀನು ರಹಿತ ವಾರಂಟ್​​​​​​​ನಿಂದ ರಣ್​ದೀಪ್​ ಸುರ್ಜೇವಾಲಾಗೆ 5 ವಾರ ಬಿಗ್​ ರಿಲೀಫ್​

ನವದೆಹಲಿ : ಕಾಂಗ್ರೆಸ್​ ವಕ್ತಾರ ರಣ್​ದೀಪ್​ ಸುರ್ಜೇವಾಲಾ ಅವರಿಗೆ ಸುಪ್ರೀಂ ಕೋರ್ಟ್​ ಇಂದು ರಿಲೀಫ್​ ನೀಡಿದೆ. 23 ವರ್ಷಗಳ ಹಿಂದಿನ ಪ್ರಕರಣದಲ್ಲಿ ಅವರ ವಿರುದ್ಧ ಜಾರಿಯಾಗಿದ್ದ ಜಾಮೀನು ರಹಿತ ವಾರಂಟ್​​ನಿಂದ ಸರ್ವೋಚ್ಛ ನ್ಯಾಯಾಲಯವು ಐದು ವಾರಗಳ ಕಾಲ ರಕ್ಷಣೆ ನೀಡಿದೆ. ವಾರಾಣಸಿಯ ವಿಭಾಗೀಯ ಆಯುಕ್ತರ ನ್ಯಾಯಾಲಯ ಮತ್ತು ಕಚೇರಿ ಆವರಣದಲ್ಲಿ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 7ರಂದು ವಾರಾಣಸಿಯ ವಿಶೇಷ ನ್ಯಾಯಾಧೀಶರು (ಸಂಸದರು, ಶಾಸಕರ ಪ್ರಕರಣಗಳ ನ್ಯಾಯಾಲಯ) ಜಾಮೀನು …

Read More »

21 ದಿನಕ್ಕೆ 21 ಲಕ್ಷ ರೂ ಕರೆಂಟ್ ಬಿಲ್..

ಮೈಸೂರು: ನಾಡ ಹಬ್ಬ ಮೈಸೂರು ದಸರಾ ನಿಮಿತ್ತ ಮೈಸೂರಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ದೀಪಾಲಂಕಾರದಿಂದ ಇಡೀ ಮೈಸೂರನ್ನು ಝಗಮಗಿಸುವಂತೆ ಮಾಡಲಾಗಿತ್ತು. ಇದು ದಿನಕ್ಕೆ ಒಂದು ಲಕ್ಷ ರೂಪಾಯಿಯಂತೆ ಕರೆಂಟ್ ಬಿಲ್ ಬಂದಿದ್ದು. ಒಟ್ಟು 21 ದಿನಕ್ಕೆ 21 ಲಕ್ಷ ರೂಪಾಯಿ ವಿದ್ಯುತ್​​​​​ ವೆಚ್ಚವಾಗಿದೆ. ಇದು ಎಲ್ಲಾ ರಸ್ತೆಗಳು, ವೃತ್ತಗಳು, ಹಲವು ಕಲಾಕೃತಿಗಳ ದೀಪಾಲಂಕಾರ ಸೇರಿದಂತೆ ನಗರದ ದೀಪಾಲಂಕಾರಕ್ಕೆ ತಗುಲಿದೆ ಒಟ್ಟು ಖರ್ಚಾಗಿದೆ. ಈ ಬಾರಿಯ ದಸರಾ ದೀಪಾಲಂಕಾರಕ್ಕೆ ಒಟ್ಟು 1.45 ಲಕ್ಷ ಯುನಿಟ್ …

Read More »

ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಬೆಂಗಳೂರು : ನಗದು ಹಾಗೂ ಚೆಕ್ ರೂಪದಲ್ಲಿ ಲಂಚ ಸ್ವೀಕರಿಸುತ್ತಿದ್ದ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಮತ್ತು ಆತನ ಆಪ್ತನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಕಂದಾಯ ನಿರೀಕ್ಷಕನನ್ನು ವಸಂತ್​ ಎಂದು ಗುರುತಿಸಲಾಗಿದೆ. ವಸಂತ್​ 3.5 ಲಕ್ಷ ರೂ. ನಗದು ಹಾಗೂ 4 ಲಕ್ಷ ಚೆಕ್ ರೂಪದಲ್ಲಿ ಪಡೆದಿದ್ದ ಎಂದು ತಿಳಿದುಬಂದಿದೆ. ಕಂದಾಯ ನಿರೀಕ್ಷಕ ವಸಂತ್​ ಅವರು ಬೆಟ್ಟಸ್ವಾಮಿ ಗೌಡ ಎಂಬುವವರಿಗೆ ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ …

Read More »

ಗ್ರಾಮ ಪಂಚಾಯಿತಿಗಳಿಗೂ ಬಂತು ಕ್ಯೂಆರ್ ಕೋಡ್ ವ್ಯವಸ್ಥೆ!, ಈ ಕ್ರಾಂತಿಕಾರಕ ಬದಲಾವಣೆಗೆ ಗ್ರಾಮಸ್ಥರು ಮೆಚ್ಚುಗೆ

ಮೈಸೂರು: ಈವರೆಗೆ ಕೇವಲ ನಗರ ಪ್ರದೇಶಗಳಿಗಷ್ಟೇ ಸಿಮಿತವಾಗಿದ್ದ ಡಿಜಿಟಲ್​ ಪೇ ಹಾಗೂ ಕ್ಯೂಆರ್ ಕೋಡ್ ವ್ಯವಸ್ಥೆ ಈಗ ಗ್ರಾಮೀಣ ಭಾಗಕ್ಕೂ ಕಾಲಿಟ್ಟಿದೆ. ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ಡಿಜಿಟಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ತೆರಿಗೆ ಸೇರಿದಂತೆ ಇತರ ಸೇವಾ ಶುಲ್ಕವನ್ನು ಕ್ಯೂಆರ್ ಕೋಡ್ ಮೂಲಕ ಪಾವತಿಸಲಾಗುತ್ತಿದೆ. ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಚಯಿಸಿದ ಪ್ರಥಮ ಪ್ರಯೋಗ ಇದಾಗಿದ್ದು, ಈ ವಿನೂತನ ಸೌಲಭ್ಯದಿಂದ ಸ್ಥಳೀಯರಿಗೆ ತುಂಬಾ ಅನುಕೂಲವಾಗಿದೆ. ಈ ಕ್ರಾಂತಿಕಾರಕ …

Read More »

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಕೊಲೆ. ಹಳೆ ವೈಷಮ್ಯದಿಂದ ಹತ್ಯೆ ಶಂಕೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ 9:30ರ ಸುಮಾರಿಗೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಸಹದೇವ್ ಕೊಲೆಯಾದ ರೌಡಿಶೀಟರ್​​​​. ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳ ಗುಂಪು, ​ಸಹದೇವ್ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಡಿದ್ದಾರೆ. ಕೊಲೆಯಾದ ವ್ಯಕ್ತಿ ಕೋಣನಕುಂಟೆ …

Read More »