ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …
Read More »ಭಾರತ್ ಬಂದ್‍ಗೆ ಕಾಂಗ್ರೆಸ್ -ಟಿಎಸ್‍ಆರ್ ಬೆಂಬಲ
ನವದೆಹಲಿ, ಡಿ.6- ಕೃಷಿಗೆ ಸಂಬಂಧಪಟ್ಟ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಕರೆ ನೀಡಲಾರಿಗುವ ಭಾರತ್ ಬಂದ್‍ಗೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜ್ಯಗಳು ಬೆಂಬಲ ಘೋಷಿಸಿವೆ. ಕೃಷಿ ಕಾನೂನುಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು. ಅವುಗಳನ್ನು ಸಂಸತ್‍ನಲ್ಲಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪಂಜಾಬ್‍ನ ರೈತರು ದೆಹಲಿಗೆ ತೆರಳಿ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೂ ಕೇಂದ್ರ …
Read More »ಗ್ರಾಪಂ.ಚುನಾವಣೆಗೆ ಡಿ.7 ಮತ್ತು 11ರಂದು ಅಧಿಸೂಚನೆ : ಚುನಾವಣಾ ಅಕ್ರಮ ತಡೆಗೆ-ಬಿಗಿ ಬಂದೋಬಸ್ತ್
ಬೆಳಗಾವಿ: ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಧಿಸೂಚನೆ ಹೊರಡಿಸಿದ ಬಳಿಕ ನಾಮಪತ್ರಗಳನ್ನು ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11; ಎರಡನೇ ಹಂತಕ್ಕೆ ಡಿ.16 ಕಡೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಮೊದಲನೇ ಹಂತಕ್ಕೆ ಡಿ.12; …
Read More »ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?
ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …
Read More »ಸೋಮವಾರದಿಂದ ಚಳಿಗಾಲದ ಅಧಿವೇಶನ ಪ್ರಾರಂಭ
ಬೆಂಗಳೂರು, ಡಿ.5- ಸೋಮವಾರದಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು,ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಮಾತಿನ ಚಕಮಕಿ ಹಾಗೂ ಆರೋಪ ಪ್ರತ್ಯರೋಪಕ್ಕೆ ವೇದಿಕೆಯಾಗಲಿದ್ದು, ಹೀಗಾಗಿ ಎಲ್ಲರಲ್ಲೂ ಭಾರೀ ಕುತೂಹಲ ಮೂಡಿಸಿದೆ. ಸದನದ ಕಲಾಪ ವೇಳೆ ಪ್ರಶ್ನೋತ್ತರ ಅವಧಿ, 10 ಮಸೂದೆಗಳ ಮಂಡನೆಯಾಗಲಿವೆ.ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು. ಕೋವಿಡ್ ಕಾರಣದಿಂದಾಗಿ ಮುಂಗಾರು ಅಧಿವೇಶನ ಪೂರ್ಣ ಪ್ರಮಾಣದಲ್ಲಿ ನಡೆಯಲು ಸಾಧ್ಯವಾಗಿರಲಿಲ್ಲ. ಸಾಕಷ್ಟು ಮುನ್ನೆಚ್ಚರಿಕೆಯ …
Read More »ಸಚಿವ ಸಂಪುಟ ಬಗ್ಗೆ ಯಾವುದೇ ಮಾತುಕತೆ ಇಲ್ಲ, ಶಾಸಕರಿಗೆ ಬಹಿರಂಗ ಹೇಳಿಕೆ ಕೊಡಲು ಅವಕಾಶ ಇಲ್ಲ,
ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ನಡೆಯಲಿರುವ ಭಾರತೀಯ ಜನತಾಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕೋರ್ ಕಮಿಟಿ ಸಭೆ ನಡೆಯಿತು. ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಸೇರಿದಂತೆ ಕೋರ್ ಕಮಿಟಿ 14 ಸದಸ್ಯರು ಭಾಗವಹಿಸಿದ್ದರು. ಸಭೆಯ ಬಳಿಕ ಅರವಿಂದ ಲಿಂಬಾವಳಿ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ಶನಿವಾರ ನಡೆಯಲಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಸಂಬಂಧ ಚರ್ಚಿಸಿ, ಲವ್ …
Read More »ಪಲ್ಟಿ ಹೊಡೆದ ಲಾರಿ: ಭೀಕರ ಅಪಘಾತದಲ್ಲಿ ಚಾಲಕ ಸಾವು
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ರಸ್ತೆ ಪಕ್ಕ ನಿಂತಿದ್ದ ಓಮ್ನಿ ಚಾಲಕ ಬಲಿ ಪಡೆದಿದೆ. ಜಿಲ್ಲೆಯ ವಿರಾಜಪೇಟೆ ಮಡಿಕೇರಿ ರಸ್ತೆಯ ಭೇತ್ರಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತನನ್ನು ಮೂರ್ನಾಡುವಿನ ಹರೀಶ್ ಎಂದು ಗುರುತಿಸಲಾಗಿದೆ. ಲಾರಿ ಮುಗುಚಿಬಿದ್ದು, ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬಿದ್ದ ಪರಿಣಾಮ ಓಮ್ನಿ ವಾಹನ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮೂರ್ನಾಡು ಪೋಲಿಸರು …
Read More »ಬೆಳಗಾವಿ ಉಪಚುನಾವಣೆ ಬಿಜೆಪಿ ಆಕಾಂಕ್ಷಿ ಪಟ್ಟಿಯಲ್ಲಿ ಮತ್ತೊಂದು ಹೆಸರು !
ಬೆಂಗಳೂರು : ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ಈಗ ಬಿಜೆಪಿಯಿಂದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿ ಬಂದಿದೆ. ವಿವಿಧ ಹಿಂದೂಪರ ಸಂಘಟನೆಯ ಮುಖಂಡರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮುತಾಲಿಕ್ ಕೊಡುಗೆ ಬಹಳಷ್ಟಿದೆ. ಬೆಳಗಾವಿ ಜಿಲ್ಲೆಯಲ್ಲೇ ಮುತಾಲಿಕ್ …
Read More »ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.
ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 150 ಸ್ಥಾನಗಳ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ 73 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) 28 ಸೀಟುಗಳಲ್ಲಿ ಮತ್ತು ಕಾಂಗ್ರೆಸ್ 2 ವಾರ್ಡ್ ನಲ್ಲಿ ಮುನ್ನಡೆಯಲ್ಲಿದೆ @10.06 AM. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದ್ರೆ ಮ್ಯಾಜಿಕ್ ನಂಬರ್ 76 ಅಗತ್ಯವಿದೆ. 2023ರ …
Read More »ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.
ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …
Read More »
Laxmi News 24×7