Home / ರಾಜಕೀಯ (page 243)

ರಾಜಕೀಯ

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-1ಕ್ಕೆ ನೋಂದಣಿಗೆ ನ.15ರ ವರೆಗೆ ಅವಕಾಶ

ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅವಧಿ ಯನ್ನು ನ.15ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಈ ಅವಕಾಶವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದಾಗಿದೆ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಲ್ಲಿ ಪರೀಕ್ಷೆ-1 ಕ್ಕೆ ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್‌ ನಲ್ಲಿ ಶಾಲಾ ಲಾಗಿನ್‌ ಮೂಲಕ ಪಡೆಯಲು ತಿಳಿಸಲಾಗಿದೆ. ಈ ಹಿಂದೆ ಆನ್ ಲೈನ್ …

Read More »

ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಮುಂದಿನ ವರ್ಷ?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಡಲು 30 ಇಲಾಖೆಗಳಿಂದ ಪ್ರಸ್ತಾವನೆ ಬಂದಿದ್ದು, ಸುಮಾರು ಮೂರು ಸಾವಿರ ಹುದ್ದೆಗಳು ಇವೆ. ಈ ಹುದ್ದೆಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಪ್ರಸಕ್ತ ವರ್ಷಾಂತ್ಯಕ್ಕೆ ಮುಂದಿನ ವರ್ಷದಲ್ಲಿ ನಡೆಸಬೇಕಾಗಿರುವ ನೇಮಕಾತಿ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ನೇಮಕಾತಿ ಬಗ್ಗೆ ಮಾಹಿತಿ …

Read More »

ಮಹಿಳೆಯರಿಗೆ ಸರ್ಕಾರದಿಂದ ಹೊಸ ಉಳಿತಾಯ ಯೋಜನೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಗ್ಯಾರಂಟಿ ಯೋಜನೆಯಡಿ ಮಹಿಳೆಯರ ಹಣಕಾಸಿನ ನೆರವಿನ ಉಳಿತಾಯಕ್ಕೆ ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸುತ್ತಿದ್ದು, ಶೀಘ್ರದಲ್ಲೇ ಆಯಪ್​ವೊಂದನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಪ್ರತಿ ಕುಟುಂಬ ಪ್ರತಿ ತಿಂಗಳು ಅಂದಾಜು 4 ಸಾವಿರದಿಂದ 5 ಸಾವಿರ ರೂ. ಹಣಕಾಸು ನೆರವು ಪಡೆಯುತ್ತಿದ್ದು, ಜನರಲ್ಲಿ ಉಳಿತಾಯ ಮನೋಭಾವ ಬೆಳೆಸಿ ಆರ್ಥಿಕ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 93 ಲಕ್ಷ ಮಹಿಳೆಯರು ಪ್ರತಿ ತಿಂಗಳು 2,000 ರೂ.ಪಡೆಯುತ್ತಿದ್ದು, ಉಚಿತ ಬಸ್ …

Read More »

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಕುರಿತ ಚರ್ಚೆಗೆ ಎರಡು ದಿನ‌ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ: ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ವಿಧಾನ ಪರಿಷತ್​ನಲ್ಲಿ ಎರಡು ದಿನ‌ ಮೀಸಲಿಡುವುದರ ಜೊತೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರ ಜೊತೆಗೆ ಅಧಿವೇಶನ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮೊದಲ ವಾರದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನ …

Read More »

ಸಿದ್ದರಾಮಯ್ಯರಿಂದ ಹಾಸನಾಂಬೆ, ಸಿದ್ದೇಶ್ವರಸ್ವಾಮಿ ದೇವರ ದರ್ಶನ; ಮಳೆಗಾಗಿ ಸಿಎಂ ಪ್ರಾರ್ಥನೆ

ಹಾಸನ: ಸಿಎಂ ಸಿದ್ದರಾಮಯ್ಯನವರು ಮಂಗಳವಾರ ಹಾಸನಾಂಬೆ ದೇವಿ ಮತ್ತು ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದು ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿದರು. ದೇವರ ದರ್ಶನದ ಬಳಿಕ ಮಾತನಾಡಿ, ಉಸ್ತುವಾರಿ ಸಚಿವ ರಾಜಣ್ಣ ಅವರು ನನಗೆ ಹಾಸನಾಂಬೆ ದೇವಿಯ ಪೂಜೆ ಇದೆ, ಆಶೀರ್ವಾದ ಪಡೆಯಿರಿ ಎಂದು ಹೇಳಿದರು. ಹೀಗಾಗಿ ಇದೇ ಮೊದಲ ಬಾರಿಗೆ ಹಾಸನಾಂಬೆ ದರ್ಶನ ಪಡೆದಿದ್ದೇನೆ. ರಾಜಣ್ಣ ಅವರ ಮಾರ್ಗದರ್ಶನದಲ್ಲಿ ಹಾಸನಾಂಬೆ ಪೂಜೆ ಚೆನ್ನಾಗಿ ಆಗಿದೆ. ಲಕ್ಷಾಂತರ ಜನರು ಭಾಗಿಯಾಗಿ ಹಾಸನಾಂಬೆಯ ಕೃಪೆಯನ್ನು …

Read More »

ಬ್ರಹ್ಮಾವರದ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ

ಉಡುಪಿ, ನ.7: ಡಿಎಸ್​ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಸೇರಿದಂತೆ ಮತ್ತಿತರರು ಯಾವುದೇ ಅನುಮತಿ ಪಡೆಯದೆ ಅಂಬೇಡ್ಕರ್ ಭವನದಲ್ಲಿ (Ambedkar Bhavan) ಮದ್ಯ ಸೇವಿಸಿ ಪಾರ್ಟಿ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿ ನಡೆದಿದೆ.   ಡಿಎಸ್ ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಅವರ ಮಗ ಕ್ರೀಡಾಕೂಟಕ್ಕೆ ಆಯ್ಕೆಯಾದ ಸಂಭ್ರಮಕ್ಕೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಗ್ರಂಥಾಲಯವನ್ನು ಒಳಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಯಾವುದೇ ಪೂರ್ವಾನುಮತಿ …

Read More »

ನಾನು ಭ್ರಷ್ಟನಲ್ಲ‌, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ ಮೆರೆದ ಸರ್ಕಾರಿ ಅಧಿಕಾರಿ

ನವೆಂಬರ್ 7: ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡ ಸರ್ಕಾರಿ ಅಧಿಕಾರಿಯೊಬ್ಬರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಎಲ್ಲೆಡೆ ಲಂಚ, 30 %, 40 % , 45 % ಲಂಚ, ಕಮೀಷನ್ (Corruption)​​​ ಎಂಬ ಆರೋಪ-ಪ್ರತ್ಯಾರೋಪಗಳೇ ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಮತ್ತು ಅನಾದಿ ಕಾಲದಿಂದಲೂ ಸರ್ಕಾರಿ ಕಛೇರಿಗಳಲ್ಲಿ ಲಂಚ (Bribe) ಇಲ್ಲದೆ ಏನೂ ಕೆಲಸ ಆಗಲ್ಲ, ಒಂದೇ ಒಂದು ಕಡತ ಅಲುಗಾಡಲ್ಲ ಎನ್ನೋ ನೋವು …

Read More »

ಮಹಾರಾಷ್ಟ್ರ ಪಂಚಾಯತ್ ಚುನಾವಣೆ ಫಲಿತಾಂಶ: ಮರಾಠಾ vs ಒಬಿಸಿ ಧ್ರುವೀಕರಣ ಸ್ಪಷ್ಟ ಎಂದ ವಿಶ್ಲೇಷಕರು

ನವೆಂಬರ್ 7: ಮಹಾರಾಷ್ಟ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿಕೂಟ ಉತ್ತಮ ಫಲಿತಾಂಶ ಕಂಡುಕೊಂಡಿರುವುದು ಜಾತಿ ಆಧಾರದಲ್ಲಿ ಧ್ರುವೀಕರಣದತ್ತ ಬೊಟ್ಟು ಮಾಡಿದೆ. ಮರಾಠಾ (Maratha) ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಚಳವಳಿಗಾರರನ್ನು ನಿಭಾಯಿಸುವಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂಬ ಭಾವನೆ ಮೂಡಿರುವಾಗಲೇ ಈ ಫಲಿತಾಂಶ ಹೊರಬಿದ್ದಿದೆ. 2359 ಗ್ರಾಮ ಪಂಚಾಯಿತಿಗಳಿಗೆ ಭಾನುವಾರ ಚುನಾವಣೆ ನಡೆದಿತ್ತು. ಸೋಮವಾರ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಖುಷಿಗೆ ಕಾರಣವಾಗಿದೆ. ಬಿಜೆಪಿ 724 ಗ್ರಾಮ ಪಂಚಾಯತಿಗಳಲ್ಲಿ, ಎನ್‌ಸಿಪಿ …

Read More »

ಸತೀಶ್ ಜಾರಕಿಹೊಳಿ ಬೆಂಗಳೂರು ಸರ್ಕಾರಿ ನಿವಾಸಕ್ಕೆ ತೆರಳಿದ ಡಿ.ಕೆ .ಶಿ.:

ಬೆಂಗಳೂರು: ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಎಂದು ಆರೋಪಿಸಿ ಸಚಿವ ಸತೀಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಮುನಿಸಿಕೊಂಡಿದ್ದರು. ಇದರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈ ಮಧ್ಯೆ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ ಸತೀಶ್ ಜಾರಕಿಹೊಳಿ ಬೆಂಗಳೂರು ಸರ್ಕಾರಿ ನಿವಾಸಕ್ಕೆ ತೆರಳಿದ ಡಿಕೆ ಶಿವಕುಮಾರ್, ಕೆಲ ಹೊತ್ತು ಮಾತುಕತೆ ನಡೆಸಿದರು. ಇಬ್ಬರ ನಡುವಿನ ವೈಮನಸ್ಸು ಮಧ್ಯೆ ಪರಸ್ಪರ ಭೇಟಿ ಮಹತ್ವ ಪಡೆದುಕೊಂಡಿದೆ. ಆ …

Read More »

ಆರ್ಥಿಕ ಸಂಕಷ್ಟದ ನಡುವೆ ಪಂಚ ಗ್ಯಾರಂಟಿಗಳ ಅನುಷ್ಠಾನ ಮತ್ತು ಬರದ ಸಮಸ್ಯೆಗಳು ಕರ್ನಾಟಕ ಸರ್ಕಾರಕ್ಕೆ ಸವಾಲಾಗಿವೆ.

ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಕೇಂದ್ರೀಕೃತ ಆಡಳಿತ ನಡೆಸುತ್ತಿದೆ. ಪಂಚ ಗ್ಯಾರಂಟಿಯ ಪೈಕಿ ನಾಲ್ಕು ಗ್ಯಾರಂಟಿಗಳು ಈಗಾಗಲೇ ಅನುಷ್ಠಾನವಾಗಿವೆ. ಆರ್ಥಿಕ ತೊಂದರೆಗಳ ಮಧ್ಯೆ ಹಣಕಾಸು ನಿರ್ವಹಿಸಿ ಇವುಗಳನ್ನು ಜಾರಿ ಮಾಡಲಾಗುತ್ತಿದೆ. ಇದರ ನಡುವೆ ಸರ್ಕಾರಕ್ಕೆ ಬರ ಬರೆ ಎಳೆದಿದೆ. ರಾಜ್ಯ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದೆ. ಒಟ್ಟು 236 ತಾಲೂಕುಗಳ ಪೈಕಿ 223 ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗೂ ಅಧಿಕ ಬರ …

Read More »