Breaking News
Home / ರಾಜಕೀಯ (page 244)

ರಾಜಕೀಯ

ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಡಿ.ವಿ .ಸದಾನಂದ ಗೌಡ

ಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿದ್ದಾರೆ.ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ ಎಂದರು. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ …

Read More »

ಸೌಜನ್ಯ ಪ್ರಕರಣ : ಸಂತೋಷ್ ರಾವ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು, ನ 08 ): 11 ವರ್ಷದ ಹಿಂದೆ ನಡೆದ ಸೌಜನ್ಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್‌ ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇದೀಗ ಮತ್ತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ ನಾಲ್ಕು ತಿಂಗಳ ಬಳಿಕ ಇದೀಗ ಸಿಬಿಐ ಸೌಜನ್ಯಾಳನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿ ಸಂತೋಷ್‌ ರಾವ್‌ …

Read More »

ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ನ  ): ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಬಿಡಬ್ಲ್ಯುಎಸ್ಎಸ್ ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತರಬೇತಿ ಕುರಿತು ಸಚಿವರು …

Read More »

ಮುರುಘಾಶರಣರಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್,ಜಾಮೀನು ಸಿಕ್ಕರೂ ಸದ್ಯಕ್ಕೆ ಮುರುಘಾಶ್ರೀ ಬಿಡುಗಡೆ ಇಲ್ಲ

ಬೆಂಗಳೂರು : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಆಲಿಸಿದ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. …

Read More »

ಶೀಘ್ರದಲ್ಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲುನಳಿನ್ ಕಟೀಲ್

ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್‌” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ ನಳಿನ್ x ಮಾಡಿದ್ದು ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು …

Read More »

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಯೂನಿವರ್ಸಿಟಿ ಬ್ಲೂ ಆಯ್ಕೆ ಪಾರದರ್ಶಕವಾಗಿಲ್ಲ:ತಮಗೆ ಅನ್ಯಾಯವಾಗಿದೆ ಎಂದು ನೊಂದ ಕ್ರೀಡಾಪಟು ಕಾಂತು

ಬೆಳಗಾವಿ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಪುರುಷರ ಕಬಡ್ಡಿ ತಂಡದ ಯೂನಿವರ್ಸಿಟಿ ಬ್ಲೂ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿಲ್ಲ. ತಮಗೆ ಬೇಕಾದ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕ್ರೀಡಾಪಟುವೊಬ್ಬರು ಆರೋಪಿಸಿದ್ದಾರೆ. ಕಬಡ್ಡಿ ಆಯ್ಕೆ ಪ್ರಕ್ರಿಯೆಯನ್ನು ಕಳೆದ ನ.1 ಮತ್ತು 2 ರಂದು ವಿಜಯಪುರದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ತಮಗೆ ಅನ್ಯಾಯವಾಗಿದೆ ಎಂದು ನೊಂದ ಕ್ರೀಡಾಪಟು ಕಾಂತು ಕೂಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. , ”ನಾನು ಚೆನ್ನಾಗಿಯೇ ಆಡಿರುವೆ. ನನ್ನ ಆಟವನ್ನು ಪರಿಗಣಿಸದಯೇ ಅರ್ಹತೆ …

Read More »

ಗೋಕಾಕ   ತಾಲೂಕ ಪಂಚಾಯತಿನಲ್ಲಿ ಲೋಕಾ ಯುಕ್ತ ಅಧಿ ಕಾರಿ ಗಳಿಂದ ಸಭೆ

ಗೋಕಾಕ್ ನ ತಾಲೂಕಾ ಪಂಚಾಯತಿನಲ್ಲಿ  ಲೋಕಾಯುಕ್ತ ಅಧಿಕಾರಿಗಳಿಂದಸಭೆ ಗೋಕಾಕ: ನಗರದಲಿ ಹಾಗೂ ಇನ್ನಿತರ ಕಡೆ ಲೋಕಾ ಯುಕ್ತ ಇಲಾಖೆ ಜಾಗ್ರತಿ ಮೂಡಿಸುವ ಕಾರ್ಯ ವನ್ನ ಎಲ್ಲಡೆ ಮಾಡುತ್ತಿದೆ, ಇಂದು ಗೋಕಾಕ ಪಟ್ಟಣ ದ ತಾಲೂಕಾ ಪಂಚಾಯತಿನಲ್ಲಿ   ಅಧಿ ಕಾರಿ ವರ್ಗ ಹಾಗೂ ಜನರಿಗೆ ಕಾನೂನು ಅ ರಿವು ಮೂಡಿಸುವ ಸಲುವಾ ಗಿ ಸಭೆ ಯನ್ನ ಮಾಡಿದ್ದರು ಇದರ ಲ್ಲಿ ಎಲ್ಲ ಜನ ಹಾಗೂ ಸಿಬ್ಬಂ ದಿ ಗಳ ಉಪ …

Read More »

ವಿಧಾನಸಭೆ ಚುನಾವಣೆ: ಛತ್ತೀಸ್‌ಗಢದಲ್ಲಿ ಶೇ.71, ಮಿಜೋರಾಂನಲ್ಲಿ ಶೇ.78ರಷ್ಟು ಮತದಾನ

ಛತ್ತೀಸ್‌ಗಢ/ಮಿಜೋರಾಂ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನದಲ್ಲಿ 20 ಸ್ಥಾನಗಳಿಗೆ ನಡೆದ ಮತದಾನದ ಅಂಕಿಅಂಶಗಳನ್ನು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. 20 ವಿಧಾನಸಭೆಗಳ ಪೈಕಿ ಭಾನುಪ್ರತಾಪುರದಲ್ಲಿ ಅತಿ ಹೆಚ್ಚು ಶೇ.79 ರಷ್ಟು ಮತದಾನ ದಾಖಲಾಗಿದೆೆ. ಬಿಜಾಪುರದಲ್ಲಿ ಅತಿ ಕಡಿಮೆ ಶೇ.40.98 ರಷ್ಟು ಮತದಾನ ದಾಖಲಾಗಿದೆ. ಒಟ್ಟಾರೆ ಶೇ.71.48 ರಷ್ಟು ಮತದಾನವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 18 ಸ್ಥಾನಗಳಿಗೆ ಶೇ.76.47ರಷ್ಟು ಮತದಾನವಾಗಿತ್ತು. ಆದರೆ ಈ ಬಾರಿ ಮೊದಲ ಹಂತದಲ್ಲಿ ಮತ್ತೆರಡು …

Read More »

4 ಗ್ಯಾರಂಟಿಗಳಿಗೆ ರಾಜ್ಯ ಸರ್ಕಾರ ಈವರೆಗೆ ಬಿಡುಗಡೆ ಮಾಡಿದ ಅನುದಾನವೆಷ್ಟು? ಸಂಪೂರ್ಣ ವಿವರ

ಬೆಂಗಳೂರು: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಕೇಂದ್ರೀಕೃತ ಆಡಳಿತ ನಡೆಸುತ್ತಿದೆ‌. ಇವುಗಳ ಅನುಷ್ಠಾನಕ್ಕೆ ಹಣ ಕೊರತೆಯಾಗದಂತೆ ಕಸರತ್ತು ನಡೆಸುತ್ತಿದೆ. ಇತ್ತ ಕೆಲವು ಗ್ಯಾರಂಟಿಗಳ ಹಣ ಫಲಾನುಭವಿಗಳಿಗೆ ತಲುಪದೇ ಇರುವ ಆರೋಪಗಳ ಮಧ್ಯೆ ಸರ್ಕಾರವು ಅಕ್ಟೋಬರ್​ವರೆಗೆ ನಾಲ್ಕು ಗ್ಯಾರಂಟಿಗಳಿಗೆ ಮಾಡಿದ ವೆಚ್ಚ, ಅನುದಾನ ಬಿಡುಗಡೆ ವಿವರದ ಸಮಗ್ರ ವರದಿ ಇಲ್ಲಿದೆ. 2023-24ನೇ ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ರಾಜ್ಯ ಸರ್ಕಾರ ಸುಮಾರು 40,000 ಕೋಟಿ ರೂ.‌ ಅನುದಾನ ಹಂಚಿಕೆ ಮಾಡಿದೆ. ಶಕ್ತಿ, ಅನ್ನಭಾಗ್ಯ, ಗೃಹ …

Read More »

ನಿಖಿಲ್ ಕುಂದಗೋಳ ಆತ್ಮಹತ್ಯೆ ಪ್ರಕರಣದಲ್ಲಿ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಕುಟುಂಬಸ್ಥರ ಆಗ್ರಹ

ಹುಬ್ಬಳ್ಳಿ: ನಿಖಿಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಮಗೆ ಸೂಕ್ತ ನ್ಯಾಯ‌ ಒದಗಿಸಬೇಕು.‌ ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಾದ ಸಾತೇನಹಳ್ಳಿ, ಜಯಶ್ರೀ ಅವರನ್ನು ಅಮಾನತು ಮಾಡಬೇಕು ಹಾಗೂ ನಿಖಿ‌ಲ್ ಪತ್ನಿ ಮನೆಯವರನ್ನು ಕೂಡಲೇ ಬಂಧಿಸಬೇಕು ಎಂದು ನಿಖಿಲ್ ಕುಂದಗೋಳ ಕುಟುಂಬಸ್ಥರು ಒತ್ತಾಯಿಸಿದರು.   ನಗರಲ್ಲಿಂದು ನಿಖಿಲ್ ತಾಯಿ ಗೀತಾ ಕುಂದಗೋಳ, ಸಹೋದರ ರಘುವೀರ್ ಕುಂದಗೋಳ ಹಾಗೂ ತಂದೆ ಮೋಹನ್ ಕುಂದಗೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೌಟುಂಬಿಕ ಜಗಳವನ್ನು ನಾವು ಹಿರಿಯ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳುತ್ತಿದ್ದೆವು . ಆದರೆ …

Read More »