Breaking News

ರಾಜಕೀಯ

ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ ಅಸಮಾನಧವನ್ನು ಹೊರಹಾಕಿದರು

ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಆರೋಗ್ಯ ಖಾತೆ ಕಿತ್ತುಕೊಂಡು ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಶ್ರೀರಾಮುಲು ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ಮೂಲಕ ಬಗೆಹರಿಸಿದ್ದಾರೆ. ಆದ್ರೆ, ಶ್ರೀರಾಮುಲು ಅಸಮಾಧಾನ ಶಮನವಾಗಿಲ್ಲ. ತಮಗೆ ಒಂದು ಮಾತು ತಿಳಿಸದೇ ಏಕಾಏಕಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಶ್ರೀರಾಮುಲು, ಯಡಿಯೂರಪ್ಪನವರ ಮುಂದೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಮಂಗಳವಾರ ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ …

Read More »

ನಂದಿ ಗಿರಿಧಾಮ ತೋಟಗಾರಿಕಾ ಇಲಾಖೆಯ ಕೈಜಾರುತ್ತದಾ? ಮುಂದೇನು?

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ತೋಟಗಾರಿಕೆ ಸಚಿವ ನಾರಾಯಣ ಗೌಡ, ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ್ರು. ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ ಸಚಿವ ನಾರಾಯಣ ಗೌಡ ರಾತ್ರಿಯೇ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂ‌ಬೆಳಿಗ್ಗೆ ಎದ್ದು ನಂದಿ ಗಿರಿಧಾಮದ ರಸ್ತೆಗಳಲ್ಲಿ ರೌಂಡ್ಸ್ ಹಾಕಿದರು. ಇದೇ ಮೊದಲ‌ ಬಾರಿಗೆ ನಾನು ಸಚಿವನಾದ ನಂತರ ನಂದಿ ಗಿರಿಧಾಮಕ್ಕೆ ಆಗಮಿಸಿದ್ದೇನೆ. …

Read More »

ರಾಜ್ಯ-ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತೇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು: ‘ರಾಜರಾಜೇಶ್ವರಿ …

Read More »

ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ …

Read More »

RR ನಗರಕ್ಕೆ BJP ಅಭ್ಯರ್ಥಿ ನಾನೇ: ಚುನಾವಣೆ ಹೊಸ್ತಿಲಲ್ಲಿ ಹೀಗಂದಿದ್ದು ಯಾರು?

ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ! ಇಲ್ಲಿ ಯಾವ ಬಂಡೆ, ಕಲ್ಲು ಇಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಆರ್.ಅಶೋಕ್, ಪಕ್ಷದ ಅಧಿಕೃತ ಅಭ್ಯರ್ಥಿ ಮುನಿರತ್ನಗೆ ಶಕ್ತಿ ತುಂಬಲು ಹೀಗೆ ಹೇಳಿರುವುದಾಗಿ ತಿಳಿದುಬಂದಿದೆ. ಜೊತೆಗೆ ತನ್ಮೂಲಕ ಪ್ರತಿಪಕ್ಷದ ಪಾಳಯಕ್ಕೆ ಖಡಕ್ ಸಂದೇಶವನ್ನೂ ರವಾನಿಸಿರುವುದಾಗಿ ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಮುನಿರತ್ನ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕಂದಾಯ ಸಚಿವ ಅಶೋಕ್ ಅವರು …

Read More »

7 ಬಾರಿಯ ಸಂಸದ ಕೆ.ಹೆಚ್. ಮುನಿಯಪ್ಪ ರಾಜ್ಯ ರಾಜಕಾರಣಕ್ಕೆ? ಕ್ಷೇತ್ರ ಯಾವುದು?

ಕೋಲಾರ: ನಿರಂತರವಾಗಿ 1991ರಿಂದ ಕಾಂಗ್ರೆಸ್​ ಪಕ್ಷದ ವತಿಯಿಂದ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿರುವ ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಪರಾಜಯಗೊಂಡ ಕೆ.ಹೆಚ್. ಮುನಿಯಪ್ಪ ಇದೀಗ ರಾಜ್ಯ ರಾಜಕಾರಣಕ್ಕೆ ಬರಲು ಒಲವು ತೋರಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು. ಕ್ಷೇತ್ರ ಯಾವುದು, ಡಿಕೆಶಿ ಮಾಸ್ಟರ್ ಪ್ಲ್ಯಾನ್​ ಏನು? ಕೇಂದ್ರದ ಮಾಜಿ ಸಚಿವ, 72 ವರ್ಷದ ಕೆ.ಎಚ್. ಮುನಿಯಪ್ಪ ರಾಜ್ಯ ರಾಜಕಾರಣದತ್ತ ಮರಳಲು ಕೆಪಿಸಿಸಿ ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಒತ್ತಾಯ ಕಾರಣ ಎನ್ನಲಾಗಿದೆ. …

Read More »

ಇಂದು ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿರೀಕ್ಷೆಯಂತೆ ಮಾಜಿ ಶಾಸಕ ಮುನಿರತ್ನ ನಾಯ್ಡುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇನ್ನು ಶಿರಾದಿಂದ ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ಡಾ.ರಾಜೇಶ್ ಗೌಡಗೂ ಟಿಕೆಟ್ ನೀಡಲಾಗಿದೆ.  ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿ ಫಾರಂ ನೀಡಲಿದ್ದಾರೆ. ಇಂದು ಸುಪ್ರೀಂಕೋಟ್9 ನಲ್ಲಿ …

Read More »

14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ,ಕೇಂದ್ರದ ನಿರ್ಧಾರ ಕ್ರೂರ ಎಂದು ಕಿಡಿ

ಶ್ರೀನಗರ: ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿಯರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮೆಹಬೂಬಾ ಮುಫ್ತಿ ಕಿಡಿ ಕಾರಿದ್ದಾರೆ. ಪೂರ್ತಿ ಕಪ್ಪು ಬಣ್ಣದ ವಿಡಿಯೋವನ್ನು ಹಂಚಿಕೊಂಡಿರುವ ಅವರು, ಆಡಿಯೋ ಮೆಸೇಜ್ ಮೂಲಕ ಕಿಡಿಕಾರಿದ್ದಾರೆ. ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ …

Read More »

ರಾಜ್ಯದ ನಗರಗಳ ಹವಾಮಾನ ವರದಿ: 14-10-2020

ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಇನ್ನುಳಿದಂತೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. …

Read More »

ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..

ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್‍ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು. ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ …

Read More »