ಮಂಗಳೂರು: ರೈತರಿಗೆ ಮೋಸ ಮಾಡುತ್ತಿದ್ದ ಮಧ್ಯವರ್ತಿಗಳು, ಖರೀದಿದಾರರ ಪರವಾಗಿರುವ ಪ್ರತಿಪಕ್ಷಗಳು ಈ ರೈತಪರ ಕಾಯ್ದೆಯನ್ನು ವಿರೋಧಿಸುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಸ್ವತಂತ್ರ ಭಾರತದಲ್ಲಿ ಮೊದಲಬಾರಿಗೆ ರೈತರು ತಮ್ಮ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ದೇಶದ ಯಾವುದೇ ಭಾಗದಲ್ಲಿ ಉತ್ತಮ ಬೆಲೆಗೆ ಮಾರಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದ್ದು ರೈತರು ಆಹಾರ ತಯಾರಿಕಾ …
Read More »ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ
ಬೆಂಗಳೂರು: ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಅಂಗೀಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಬೆನ್ನುಮೂಳೆ ಮುರಿಯುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಂಸತ್ ನಲ್ಲಿ ವಿರೋಧಪಕ್ಷಗಳ ಅಭಿವ್ಯಕ್ಕಿ ಸ್ವಾತಂತ್ರ್ಯದ ಕೊರಳನ್ನು ಹಿಚುಕಿ, ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು …
Read More »ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್!
ಬೆಂಗಳೂರು : ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ. ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡಅವರನ್ನು ಅನುದಾನದ ವಿಚಾರವಾಗಿ ಏಕವಚನದಲ್ಲೇ ನಿಂದಿಸಿದ್ದಾರೆ. ಬಳಿಕ ಮಾತಿನ ಚಕಮಕಿ ತಾರಕಕ್ಕೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ತೋಟಗಾರಿಕೆ ಇಲಾಖೆಯಿಂದ ನೀಡಬೇಕಿದ್ದ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ …
Read More »ಜೆಡಿಎಸ್‌ಗೆ ತಲೆನೋವಾದ ಶಿರಾ ಕ್ಷೇತ್ರ
ಶಿರಾ : ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾದ ಶಿರಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಯಾರಿಗೆ ಟಿಕೇಟ್ ನೀಡಬೇಕು ಎಂಬುದು ಪಕ್ಷದ ವರಿಷ್ಠರಿಗೆ ತಲೆನೋವಾಗಿದೆ. ಶಾಸಕ ಸತ್ಯನಾರಾಯಣ ಮೃತಟ್ಟ ನಂತರ ಮಾಜಿ ಪ್ರಧಾನಿ ದೇವೇಗೌಡ ಅವರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಗೊಂದಲ ಮೂಡಿದೆ. ಸತ್ಯನಾರಾಯಣ ಪತ್ನಿ ಅಥವಾ ಮಗನಿಗೆ ಟಿಕೆಟ್ ಕೊಟ್ಟರೆ ಅನುಕಂಪದಿಂದ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿದ್ದರು. ದಿನ ಕಳೆದಂತೆ ಅನುಕಂಪದ ಅಲೆ ಕಡಿಮೆಯಾಗುತ್ತಿದ್ದು, …
Read More »ಧಾರವಾಡದ ಹೆಸರು-ಉದ್ದು ಖರೀದಿಗೆ ಕೇಂದ್ರ ಗ್ರೀನ್ ಸಿಗ್ನಲ್
ನವದೆಹಲಿ, – ಧಾರವಾಡ ಜಿಲ್ಲಾಯ ರೈತರ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಧಾರವಾಡ ಜಿಲ್ಲಾಯಲ್ಲಿ ಖರೀದಿ ಕೇಂದ್ರಗಳ ಮೂಲಕ ಹೆಸರುಕಾಳು ಹಾಗೂ ಉದ್ದು ಖರೀದಿಯನ್ನು ಕೂಡಲೇ ಆರಂಭಿಸಲು ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಆದೇಶ ಪ್ರತಿ ಹೊರಡಿಸಿದ್ದು , ರೈತರಿಗೆ ಸಂತಸ ತಂದಿದೆ. ಈ ವಿಷಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದು ಜಿಲ್ಲಾಯ ರೈತರು …
Read More »ತರಗತಿ ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಶಾಲೆಗಳು ಗರಂ
ಬೆಂಗಳೂರು, : ಇಂದಿನಿಂದ ಕೇಂದ್ರ ಸರ್ಕಾರ 9 ರಿಂದ 12ನೆ ತರಗತಿಗಳನ್ನು ಆರಂಭಿಸಲು ಸೂಚನೆ ನೀಡಿದ ಹೊರತಾಗಿಯೂ ವಿದ್ಯಾರ್ಥಿಗಳನ್ನು ಶಾಲೆಯಿಂದ ದೂರ ಇಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಶಾಲೆಗಳು ವ್ಯಾಪಕ ವಿರೋಧ ವ್ಯಕ್ಯಪಡಿಸಿವೆ. ಈ ಹಿಂದೆ ಇಂದಿನಿಂದ ಶಾಲೆಗಳನ್ನು ತೆರೆದು 9 ರಿಂದ 12 ತರಗತಿ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿತ್ತು. ಆದರೆ, ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟಿದೆ. ಇದೇ …
Read More »ರಾಜ್ಯದ ಇತಿಹಾಸದಲ್ಲೇ ಇದೆ ಮೊದಲ ಬಾರಿ ಅಧಿವೇಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ
ಬೆಂಗಳೂರು, :- ಅಧಿವೇಶನಕ್ಕೆ ಇದೇ ಮೊದಲ ಬಾರಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ವಿಧಾನಸಭೆ, ವಿಧಾನಪರಿಷತ್‍ನ ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ಕೆಳ ಮಟ್ಟದ ಅಧಿಕಾರಿ, ನೌಕರರಿಗೆ ಹಾಗೂ ಪತ್ರಿಕಾ ಮಾಧ್ಯಮದವರಿಗೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಆಸನದ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪ್ರತಿ ಅಧಿವೇಶನ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ದೇಶಗಳಿಂದ ಆಗಮಿಸುವ ಗಣ್ಯರು ಸೇರಿದಂತೆ ಎಲ್ಲರಿಗೂ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿತ್ತು. ಆದರೆ ಈ …
Read More »ಮೂರೇ ದಿನಕ್ಕೆ ಅಧಿವೇಶನ ಮುಗಿಸಲು ಸರ್ಕಾರ ತೀರ್ಮಾನ
ಬೆಂಗಳೂರು, – ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲಾಪವನ್ನು ಮೂರೇ ದಿನಕ್ಕೆ ಮೊಟಕಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೊದಲು ತಿಂಗಳ ಅಂತ್ಯದವರೆಗೆ ಮಳೆಗಾಲದ ಅಧಿವೇಶನ ನಡೆಸಲು ಉದ್ದೇಶಿಸಲಾಗಿತ್ತು. ಅದರೆ ಜನ ಪ್ರತಿನಿಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೇವಲ ಮೂರನೇ ದಿನಕ್ಕೆ (ಬುಧವಾರ) ಕ್ಕೆ ಮುಕ್ತಾಯಗೊಳಿಸಲು ಸರ್ಕಾರ ಮುಂದಾಗಿದೆ. ಭಾರೀ ವಿವಾದಕ್ಕೆ ಕಾರಣವಾಗಿರುವ ಭೂ- ಸುಧಾರಣಾ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಈ ಅಧಿವೇಶನದಲ್ಲಿ ಮಂಡಿಸದೇ, …
Read More »‘ಬೆಂಗಳೂರು ಅಭಿವೃದ್ಧಿ ಕುರಿತು ಮೋದಿಗಿರುವ ಕಲ್ಪನೆ ಅದ್ಭುತ’
ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರು ವ್ಯಕ್ತಿಯಲ್ಲ, ದೇವಮಾನವ. ಅವರನ್ನು ನಾನು ರಾಜರ್ಷಿ ಎಂದು ಕರೆಯುತ್ತೇನೆ. ಬೆಂಗಳೂರು ಅಭಿವೃದ್ಧಿ ಕುರಿತು ಅವರ ಕಲ್ಪನೆ, ಅವರಿಗಿರುವ ಮಾಹಿತಿ ನನ್ನನ್ನು ಅಚ್ಚರಿಗೊಳಿಸಿದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಭಾನುವಾರ ಹುಬ್ಬಳ್ಳಿ ಹಾಗೂ ಬೆಂಗಳೂರು ನಡುವಿನ ವರ್ಚುವಲ್ ರಾರಯಲಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅವರ ಜನ್ಮದಿನದ ನಿಮಿತ್ತ ದೆಹಲಿಗೆ ತೆರಳಿ ಭೇಟಿಯಾಗಿ 40 ನಿಮಿಷ ಅವರೊಡನೆ ಮಾತನಾಡಿದ್ದೆ. …
Read More »ಉದಾಸೀನ ಬೇಡ, ಕೈ ಮುಗಿದು ಕೇಳ್ಕೋತೀನಿ ಕೊರೊನಾ ಬಗ್ಗೆ ಎಚ್ಚರವಿರಲಿ -CM ಮನವಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ. ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ …
Read More »
Laxmi News 24×7