ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಸದನದ ವಿಶ್ವಾಸ ಕಳೆದುಕೊಂಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಅವಿಶ್ವಾಸ ಪ್ರಸ್ತಾಪಕ್ಕೆ ಅನುಮತಿ ಸಿಕ್ಕಿದೆ. ಕೋವಿಡ್‌ನಿಂದಾಗಿ ಆಡಳಿತಾರೂಢ ಬಿಜೆಪಿಯ ಹಲವು ಸಚಿವರು ಹಾಗೂ ಶಾಸಕರು ಸದನಕ್ಕೆ ಆಗಮಿಸುವುದು ಕಷ್ಟವಿರುವುದರಿಂದ ಈ ನಿರ್ಣಯ ಎದುರಿಸಿ ಗೆಲ್ಲುವುದು ಸಹಜವಾಗಿಯೇ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಾಗಿ ಪರಿಣಮಿಸಿದೆ. ಗುರುವಾರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ನೋಟಿಸ್ ನೀಡಲಾಗಿದ್ದು, …
Read More »ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಸಿಗಲಿದೆ ‘ಜನನ- ಮರಣ ಪ್ರಮಾಣ ಪತ್ರ’
ಮಂಗಳೂರು : ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. 2015 …
Read More »ಗೋಕರ್ಣದ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ- ಭಾರೀ ಅನಾಹುತ ತಪ್ಪಿಸಿದ ಮರ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಪುರಾಣ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತವಾಗಿದ್ದು, ಅದೃಷ್ಟವಶಾತ್ ದೇವಸ್ಥಾನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗೋಕರ್ಣದ ಮಾಣೇಶ್ವರ ದೇವಸ್ಥಾನದ ಮೇಲ್ಭಾಗದಲ್ಲಿರುವ ಗುಡ್ಡ ಕುಸಿದಿದ್ದು, ಈ ವೇಳೆ ದೊಡ್ಡ ಕಲ್ಲುಬಂಡೆ ಜಾರಿದೆ. ಆದರೆ ಪಕ್ಕದಲ್ಲೇ ಬೃಹದಾಕಾರದ ಮರವಿದ್ದ ಕಾರಣ ಗುಡ್ಡದಿಂದ ಜಾರಿದ ಕಲ್ಲುಬಂಡೆ ಮರದ ಬಳಿ ನಿಂತಿದ್ದು, ದೊಡ್ಡ ಅನಾಹುತ …
Read More »ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತ
ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ಕಲಾವತಿ (65), ಲೋಹಿತ್ (36) ಮತ್ತು ಶಶಾಂಕ್ (10) ಎಂದು ಗುರುತಿಸಲಾಗಿದೆ. ರಿಪ್ಪನ್ ಪೇಟೆ ನಿವಾಸಿಗಳಾದ ಇವರು ಎರಡು ದಿನದ ಹಿಂದೆ ರಿಪ್ಪನ್ ಪೇಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದರು. ಟಾಟಾ ಇಂಡಿಕಾ ಕಾರಿನಲ್ಲಿ …
Read More »ನಿನ್ನಗಲಿಕೆ ನೋವು ಹೇಳತೀರದು – ಪ್ರೀತಿಯ ಸುಬ್ಬಿ ಸಾವಿಗೆ ಡಾಲಿ ಸಂತಾಪ
ಬೆಂಗಳೂರು: ಚಿತ್ರೀಕರಣ ನಡೆಯುತ್ತಿದ್ದ ವೇಳೆ ಹೃದಯಾಘಾತವಾಗಿ ಖ್ಯಾತ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ. ಇವರ ಅಗಲಿಗೆ ನಟ ಧನಂಜಯ್ ಸಂತಾಪ ಸೂಚಿಸಿದ್ದಾರೆ. ನಟ ಧನಂಜಯ್ ಇನ್‍ಸ್ಟಾಗ್ರಾಂನಲ್ಲಿ ಅವರ ಜೊತೆಗಿರುವ ಫೋಟೋವೊಂದನ್ನು ಪೋಸ್ಟ್ ಮಾಡಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಪ್ರೀತಿಯ ಸುಬ್ಬಿ, ಸಿಕ್ಕಾಗಲೆಲ್ಲ ನಗಿಸುತ್ತ, ಬದುಕಿನ ಫಿಲಾಸಫಿಗಳ ನಿನ್ನದೇ ರೀತಿಯಲ್ಲಿ ಅದ್ಭುತವಾಗಿ ಹೇಳುತ್ತ, ಪ್ರೀತಿಯಿಂದ ತಬ್ಬಿ ಒಳ್ಳೆಯದೆ ಆಗುತ್ತದೆ ಎಂದು ಹರಸುತ್ತಿದ್ದೆ. ನಿನ್ನಗಲಿಕೆಯ ನೋವು ಹೇಳತೀರದು. ಶಾಂತಿಯಿಂದ ನಿದ್ರಿಸು …
Read More »ಬಿಜೆಪಿ ಪೌರೋಹಿತ್ಯದಲ್ಲಿ ಶಶಿಕಲಾ-ಅಣ್ಣಾಡಿಎಂಕೆ ವಿಲೀನ?
ಚೆನ್ನೈ : ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಬೆಂಗಳೂರು ಜೈಲಿನಿಂದ 2021ರ ಜನವರಿಯಲ್ಲಿ ಬಿಡುಗಡೆ ಆಗುವುದು ಖಚಿತವಾಗುತ್ತಿದ್ದಂತೆಯೇ, ರಾಜ್ಯ ರಾಜಕೀಯದಲ್ಲಿ ಹೊಸ ಚಟುವಟಿಕೆಗಳು ಗರಿಗೆದರಿವೆ. ಅಣ್ಣಾ ಡಿಎಂಕೆ ಪಕ್ಷ ಹಾಗೂ ಅಣ್ಣಾ ಡಿಎಂಕೆ ತೊರೆದಿದ್ದ ಶಶಿಕಲಾ ಅವರ ನಡುವೆ ಸಂಧಾನಕ್ಕೆ ಬಿಜೆಪಿ ಯತ್ನಿಸುತ್ತಿದ್ದು, ಉಭಯ ಬಣಗಳ ವಿಲೀನಕ್ಕೆ ಪ್ರಕ್ರಿಯೆಗೆ ಕೈಹಾಕಿದೆ. ಅಣ್ಣಾ ಡಿಎಂಕೆಯಿಂದ ಹೊರಬಂದು ಎಂಎಂಎಂಕೆ ಪಕ್ಷ ಸ್ಥಾಪಿಸಿರುವ ಶಶಿಕಲಾ ಬಂಧು ಟಿಟಿವಿ …
Read More »ಇಂದು ಸಂಜೆ 4 ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ
ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ಸಂಜೆ 4ಕ್ಕೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ‘ಅವರ ಬೀಗರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ಬುಧವಾರ ತಡರಾತ್ರಿ ನವದೆಹಲಿ ತಲುಪಿದ ನಂತರ ಗುರುವಾರ ನಸುಕಿನ 3ರವರೆಗೂ ಚರ್ಚೆಯಾಯಿತು. ಅಂತಿಮವಾಗಿ ದೆಹಲಿಯಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಪ್ರಕ್ರಿಯೆ ನೆರವೇರಲಿದೆ. ಮರಣೋತ್ತರ ಪರೀಕ್ಷೆಯ ನಂತರವೂ ಕೋವಿಡ್ ಪಾಸಿಟಿವ್ ಬಂದಿದೆ. …
Read More »ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸುರೇಶ ಅಂಗಡಿ ಕೊಡುಗೆ
ಬೆಳಗಾವಿ: ಬೆಳಗಾವಿ- ಕಿತ್ತೂರು-ಧಾರವಾಡ ನಡುವೆ ರೈಲು ಮಾರ್ಗ ನಿರ್ಮಿಸಲು ₹927.40 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈಚೆಗೆ ತಿಳಿಸಿ, ಈ ಭಾಗಕ್ಕೆ ದೊಡ್ಡ ಕೊಡುಗೆ ತಂದಿರುವುದಾಗಿ ಹರ್ಷ ವ್ಯಕ್ತಪಪಡಿಸಿದ್ದರು. ’73 ಕಿ.ಮೀ. ಉದ್ದದ ಈ ಯೋಜನೆ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಬೆಳಗಾವಿ, ದೇಸೂರು, ಕಣವಿಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹುಲಿಕಟ್ಟಿ, …
Read More »ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು. ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು …
Read More »ಅಸಂಸದೀಯ ಪದ ಬಳಕೆ: ರಮೇಶ್ ಕುಮಾರ್- ಸುಧಾಕರ್ ಜಟಾಪಟಿ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಕಾಂಗ್ರೆಸ್‌ನ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್‌ಗಳ ಖರೀದಿ ಮಾಡಲಾಗುತ್ತಿದೆ’ ಎಂದರು. ಆಗ ಎದ್ದು ನಿಂತ ರಮೇಶ್ ಕುಮಾರ್, ‘ಪಿಪಿಇ ಕಿಟ್‌ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್‌ಗಳನ್ನು ₹300ಕ್ಕೆ …
Read More »
Laxmi News 24×7