ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರು, ಕೂಲಿ ಕಾರ್ಮಿಕರು, ಬಡವರ ಪರವಿಲ್ಲ. ಇದೊಂದು ಕಾರ್ಪೋರೆಟ್ ಕಂಪನಿಗಳ ಸರ್ಕಾರ. ಮೋದಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ ರಾಜ್ಯ ಸಭೆ ಸಂಸದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇಂದು ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಕೃಷಿ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆ ಬಳಿಕ ಮಾತನಾಡಿದ ಅವರು, ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಗೆ ತಂದಿದೆ. ಇದು ರೈತರ …
Read More »ಏರುತ್ತಿರುವ ಐಪಿಎಲ್ ಕಾವು : ಇಂದು RCBಗೆ SRH ಸವಾಲು
ದುಬೈ,ಸೆ.21- ಐಪಿಎಲ್ ಕಾವು ರಂಗೇರಿದ್ದು ಡೆಲ್ಲಿ ಹಾಗೂ ಪಂಜಾಬ್ ವಿರುದ್ಧ ನಡೆದ ಪಂದ್ಯ ಸೂಪರ್ ಓವರ್‍ನಲ್ಲಿ ಮುಗಿದ ನಂತರ ಹೊಡಿ ಬಡಿ ಆಟಕ್ಕೆ ಮತ್ತಷ್ಟು ರಂಗು ಬಂದಿದೆ ಇಂದು 2016ರ ಚಾಂಪಿಯನ್ ಸನ್‍ರೈಸರ್ಸ್ ಹೈದ್ರಾಬಾದ್ ಹಾಗೂ ರನ್ನರ್‍ಅಪ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ವಿರುದ್ಧ ಹಣಾಹಣಿ ನಡೆಯುತ್ತಿದ್ದು ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸಿದೆ. 2019ರಲ್ಲಿ ಆರ್‍ಸಿಬಿ ಪ್ಲೇಆಫ್‍ಗೇರಲು ಪ್ರಮುಖ ಪಂದ್ಯದಲ್ಲೇ ಕೇನ್‍ವಿಲಿಯಮ್ಸ್ ನಾಯಕತ್ವದ ಎಸ್‍ಆರ್‍ಎಚ್ ವಿರುದ್ಧ ಹೀನಾಯವಾಗಿ ಸೋತು …
Read More »ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ – ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್:ಇಂದ್ರಜಿತ್
ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ ಎಂದು ನಟ, ನಿರ್ದೇಶಕ ಇಂದ್ರಜಿತ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ನನಗೆ ಗೊತ್ತಿರುವ ವಿಚಾರವನ್ನು …
Read More »ಶಾಸಕ ಬೆಳ್ಳಿ ಪ್ರಕಾಶ್ ಸಚಿವರ ಮೇಲೆ ಹಲ್ಲೆಗೆ ಯತ್ನಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಶಾಸಕರನ್ನು ತಡೆದಿದ್ದಾರೆ
ಬೆಂಗಳೂರು: ಒಂದೆಡೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ ಇನ್ನೊಂದೆಡೆ ವಿಧಾನಸೌಧದ ಕ್ಯಾಂಟೀನ್ ನಲ್ಲೇ ಜನಪ್ರತಿನಿಧಿಗಳಿಬ್ಬರೂ ಹೊಡೆದಾಡಿಕೊಳ್ಳುವ ಹಂತಕ್ಕೆ ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಚಿವ ನಾರಾಯಣಗೌಡ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಡುವೆ ಗಲಾಟೆ ನಡೆದಿದ್ದು, ಇಬ್ಬರೂ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಕಡೂರು ಕ್ಷೇತ್ರದ ಅನುದಾನ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ತಿಂಗಳಿಂದ ಅಲೆದರೂ ಕೆಲಸ ಮಾಡಿಕೊಡದ ಸಚಿವರ ನಡೆ ವಿರುದ್ಧ …
Read More »ಶಾಸಕ ಐಹೊಳೆಗೆ ಕೋವಿಡ್ ದೃಢ.
ಬೆಳಗಾವಿ: ರಾಯಬಾಗ ಬಿಜೆಪಿ ಶಾಸಕ ಡಿ.ಎಂ. ಐಹೊಳೆ ಅವರಿಗೆ ಸೋಮವಾರ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದು, ಬೆಂಗಳೂರಿನ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗದಂತೆ ಬೆಂಗಳೂರಿನಿಂದಲೇ ನಿಗಾ ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.
Read More »ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೊನಾ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಬೆಂಗಳೂರು: ಇಂದಿನಿಂದ ವಿಧಾನಸಭಾ ಕಲಾಪ ಆರಂಭವಾಗಿದ್ದು, ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೊನಾ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನನಗೆ, ನನ್ನ ಹೆಂಡತಿಗೆ, ಮಗನಿಗೆ ಕೊರೊನಾ ಬಂದುಬಿಟ್ಟಿತ್ತು. ಯಾರೂ ನಮ್ಮ ನೋಡಂಗಿಲ್ಲ, ನಮ್ಮ ಹತ್ರ ಬರಂಗಿಲ್ಲ. ಯಾರಿಗೆ ಕೊರೊನಾ ಬಂದಿದೆಯೋ ಅವರು ಯಾರೂ ಭಯಪಡಬೇಕಿಲ್ಲ ಎಂದರು ಈ ಕೊರೊನಾ ಇದ್ಯಲ್ಲಾ ಇದು ಬಹಳ ಅಪಾಯಕಾರಿ. ಅದರ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಈಶ್ವರಪ್ಪನಿಗೂ ಬಂದಿತ್ತು ಅಂತ …
Read More »‘ಕೇಂದ್ರ ಸರ್ಕಾರದಿಂದ ರೈತ ಪರ ಕಾಯ್ದೆ, ಮಧ್ಯವರ್ತಿಗಳ ಪರ ಇರುವವರಿಂದ ವಿರೋಧ’
ಮಂಗಳೂರು: ರೈತರಿಗೆ ಮೋಸ ಮಾಡುತ್ತಿದ್ದ ಮಧ್ಯವರ್ತಿಗಳು, ಖರೀದಿದಾರರ ಪರವಾಗಿರುವ ಪ್ರತಿಪಕ್ಷಗಳು ಈ ರೈತಪರ ಕಾಯ್ದೆಯನ್ನು ವಿರೋಧಿಸುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಸ್ವತಂತ್ರ ಭಾರತದಲ್ಲಿ ಮೊದಲಬಾರಿಗೆ ರೈತರು ತಮ್ಮ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ದೇಶದ ಯಾವುದೇ ಭಾಗದಲ್ಲಿ ಉತ್ತಮ ಬೆಲೆಗೆ ಮಾರಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದ್ದು ರೈತರು ಆಹಾರ ತಯಾರಿಕಾ …
Read More »ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ
ಬೆಂಗಳೂರು: ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಅಂಗೀಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಬೆನ್ನುಮೂಳೆ ಮುರಿಯುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಂಸತ್ ನಲ್ಲಿ ವಿರೋಧಪಕ್ಷಗಳ ಅಭಿವ್ಯಕ್ಕಿ ಸ್ವಾತಂತ್ರ್ಯದ ಕೊರಳನ್ನು ಹಿಚುಕಿ, ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು …
Read More »ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್!
ಬೆಂಗಳೂರು : ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ. ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡಅವರನ್ನು ಅನುದಾನದ ವಿಚಾರವಾಗಿ ಏಕವಚನದಲ್ಲೇ ನಿಂದಿಸಿದ್ದಾರೆ. ಬಳಿಕ ಮಾತಿನ ಚಕಮಕಿ ತಾರಕಕ್ಕೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ತೋಟಗಾರಿಕೆ ಇಲಾಖೆಯಿಂದ ನೀಡಬೇಕಿದ್ದ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ …
Read More »ಜೆಡಿಎಸ್‌ಗೆ ತಲೆನೋವಾದ ಶಿರಾ ಕ್ಷೇತ್ರ
ಶಿರಾ : ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾದ ಶಿರಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಯಾರಿಗೆ ಟಿಕೇಟ್ ನೀಡಬೇಕು ಎಂಬುದು ಪಕ್ಷದ ವರಿಷ್ಠರಿಗೆ ತಲೆನೋವಾಗಿದೆ. ಶಾಸಕ ಸತ್ಯನಾರಾಯಣ ಮೃತಟ್ಟ ನಂತರ ಮಾಜಿ ಪ್ರಧಾನಿ ದೇವೇಗೌಡ ಅವರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಗೊಂದಲ ಮೂಡಿದೆ. ಸತ್ಯನಾರಾಯಣ ಪತ್ನಿ ಅಥವಾ ಮಗನಿಗೆ ಟಿಕೆಟ್ ಕೊಟ್ಟರೆ ಅನುಕಂಪದಿಂದ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿದ್ದರು. ದಿನ ಕಳೆದಂತೆ ಅನುಕಂಪದ ಅಲೆ ಕಡಿಮೆಯಾಗುತ್ತಿದ್ದು, …
Read More »
Laxmi News 24×7