ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವನೋರ್ವ ಭಯಗೊಂಡು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಕೂಕಿನ ಚಂದನಲ್ಲಿ ಗ್ರಾಮದ ಬಳಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಪೀರಶೆಟ್ಟಿ (29) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆ ನೀರಿನಿಂದ ಹಳ್ಳ ಕೊಳ್ಳಗಳು ತುಂಬಿ ರಭಸದಿಂದ ಹರಿಯುತ್ತಿವೆ. ಈ ಸಮಯದಲ್ಲಿ ಹಳ್ಳ ದಾಟಲು ಹೋದ ಪೀರಶೆಟ್ಟಿ ನೀರನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಆದರೆ ಹಳ್ಳಕ್ಕೆ ಆಡಲಾಗಿ ಹಾಕಿದ್ದ ಕಂಬವನ್ನು …
Read More »ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್
ಶಿವಮೊಗ್ಗ: ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸಿದ್ದು, ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಆಗುಂಬೆ ಬಳಿ ಸಹ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅಪಾರ ಪ್ರಮಾಣದ ನೀರು ಆಗುಂಬೆಯ ಭಾಗಗಳ ತೋಟ, ಗದ್ದೆಗಳಿಗೆ ನುಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್.ಹೆಚ್ 169-ಎ …
Read More »ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧ………..
ಬೆಂಗಳೂರು: ಇವತ್ತಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಕೊರೊನಾ, ಲಾಕ್‍ಡೌನ್ ಬಳಿಕ ನಡೆಯುತ್ತಿರುವ ವಿಧಾನಮಂಡಲದ ಮೊದಲ ಅಧಿವೇಶನ ಇದಾಗಿದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧವಾಗಿದ್ದು, ಕೊರೊನಾ ಹಗರಣ, ಕೇಂದ್ರದಿಂದ ಬರಬೇಕಿರುವ ಜಿಎಸ್‍ಟಿ ಪರಿಹಾರ ಬಾಕಿ, ಲಾಕ್‍ಡೌನ್ ಹೊತ್ತಲ್ಲೇ ರೈತರಿಗೆ ಸಂಬಂಧಿಸಿದ ಮಸೂದೆಗಳಿಗೆ ಮಾಡಲಾಗಿರುವ ತಿದ್ದುಪಡಿ. ಏರುತ್ತಿರುವ ಕೊರೋನಾ ಕೇಸ್, ಪ್ರವಾಹ ಪರಿಹಾರ, ಡ್ರಗ್ಸ್ ಕೇಸ್, ಡಿಜೆ ಹಳ್ಳಿ ಕೇಸ್ ಹೀಗೆ ಸರ್ಕಾರದ ವಿರುದ್ಧ ಅಸ್ತ್ರಗಳನ್ನು ಬಳಸಲು ಸಿದ್ಧವಾಗಿವೆ. ಕೊರೊನಾ ಹಿನ್ನೆಲೆಯಲ್ಲಿ …
Read More »ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಊಸರವಳ್ಳಿ:H.D.K.
ಬೆಂಗಳೂರು, ಸೆ.20- ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಅವಕಾಶ ವಾದಿ ಪಕ್ಷ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚï.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ,ಸ್ಥಾನ- ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗ ರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ …
Read More »ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ
ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಇತ್ತೀಚೆಗಷ್ಟೇ ಕುಟುಂಬ ಸಮೇತ ಮಡಿಕೇರಿಗೆ ಪ್ರವಾಸ ತೆರಳಿದ್ದ ಕುಮಾರಸ್ವಾಮಿಯವರು, ಅಲ್ಲಿ ಒಂದು ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದರು. ಈಗ ಹಾಸನದ ಬೇಲೂರು, ಹಳೆಬೀಡು, ಗೊರೂರಿಗೆ ಭೇಟಿ ನೀಡುವ ಸಲುವಾಗ ಪತ್ನಿ, ಮಗ, ಸೊಸೆ ಜೊತೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಕಳೆದ ಎರಡು ದಿನದ ಹಿಂದೆ ಮಾಜಿ ಸಚಿವ ಹೆಚ್‍ಡಿ ರೇವಣ್ಣ ವಿರುದ್ಧ ಅರಕಲಗೂಡು …
Read More »ವಿರೋಧ ಪಕ್ಷದ ಭಾರೀ ಪ್ರತಿಭಟನೆಯ ನಡುವೆ ಇಂದು ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾಗಿವೆ.
ಹೊಸದಿಲ್ಲಿ: ವಿರೋಧ ಪಕ್ಷದ ಭಾರೀ ಪ್ರತಿಭಟನೆಯ ನಡುವೆ ಇಂದು ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾಗಿವೆ. ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ ಪ್ರೋತ್ಸಾಹ ಮತ್ತು ನೆರವು ಮಸೂದೆ-2020 ಹಾಗೂ ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ 2020 ರ ಒಪ್ಪಂದ ಮಸೂದೆ ಯನ್ನು ಮಂಡಿಸಲಾಗಿದೆ. ಮಸೂದೆ ಚರ್ಚೆ ವೇಳೆ, ಟಿಎಂಸಿ ಸಂಸದರಾದ ಡೆರೆಕ್ ಓ ಬ್ರಯನ್ ಹಾಗೂ ಇತರೆ ಕೆಲ ಸದಸ್ಯರು ಸದನದ …
Read More »ನಿಧನರಾದ ಆನಂದ ಚೋಪ್ರಾರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದಸತೀಶ್ ಜಾರಕಿಹೊಳಿ
ಸವದತ್ತಿ: ಸವದತ್ತಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು, ಅನಾರೋಗ್ಯದಿಂದ ನಿಧನರಾದ ತಾಲ್ಲೂಕಿನ ಕಾಂಗ್ರೆಸ್ ಮುಖಂಡ ಆನಂದ ಚೋಪ್ರಾರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾತನಾಡಿದ ಅವರು, ಆನಂದ ಚೋಪ್ರಾ ಅವರು ಕಳೆದ ಒಂದುವರೆ ದಶಕದಿಂದ ಸಾಮಾಜಿಕ ಸೇವಕಾರಗಿ ಗುರುತಿಸಿಕೊಂಡಿದ್ದರು. ಹಲವಾರು ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಜನರಿಗೆ ಹತ್ತಿರವಾಗಿದ್ದರು. ಶೈಕ್ಷಣಿಕ, ಸಾಮಾಜಿಕ, ಕ್ರೀಡೆ, ಸಾಹಿತ್ಯ, ಮತ್ತು ರಾಜಕೀಯವಾಗಿ ಸಾಕಷ್ಟು ಪ್ರಭಾವಿಗಳಾಗಿದ್ದರು. ಅವರ ಅಕಾಲಿಕ …
Read More »ಕಾರಜೋಳರು ಬರೆದ ಪತ್ರಕ್ಕೆ ಒಂದು ತಿಂಗಳು ತುಂಬುವ ಮೊದಲೇ ಮಲಪ್ರಭೆಯ ” ವಿಮೋಚನೆ” ಗೆ ಕೈ ಹಾಕಿದ ರಮೇಶ ಜಾರಕಿಹೊಳಿ!
ಕಳೆದ ಅಗಷ್ಟ 23 ರಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಪಿಡಬ್ಲುಡಿಖಾತೆಯ ಸಚಿವ ಶ್ರೀ ಗೋವಿಂದಕಾರಜೋಳರು ಮಲಪ್ರಭೆಯ ಅತಿಕ್ರಮಣತೆರವುಗೊಳಿಸುವ ಸಂಬಂಧ ನೀರಾವರಿನೀರಾವರಿಸಚಿವರಿಗೆ ಬರೆದ ಪತ್ರಕ್ಕೆಒಂದು ತಿಂಗಳು ತುಂಬುವ ಮುನ್ನವೇಬೆಳಗಾವಿಯ ಸುವರ್ಣಸೌಧದಲ್ಲಿಸಪ್ಟೆಂಬರ್ 20 ರಂದು ಉನ್ನತ ಮಟ್ಟದ ಸಭೆ ನಡೆದಿರುವದು ಮಲಪ್ರಭೆ ತೀರದ ಜನತೆಯಲ್ಲಿ ಹೊಸ ಆಶಾಭಾವನೆ ಉಂಟು ಮಾಡಿದೆ. ನೀರಾವರಿ ಸಚಿವ ಶ್ರೀ ರಮೇಶ ಜಾರಕಿಹೊಳಿ ಅವರು ನಿನ್ನೆ ಶನಿವಾರ ನಡೆಸಿದ ಸಭೆಯು ಬೆಳಗಾವಿ,ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಏಳು ತಾಲೂಕುಗಳ …
Read More »ಕೇಂದ್ರ ಸರ್ಕಾರ ವೈಫಲ್ಯಗಳ ಕುರಿತು ಸಂಸದ ಡಿ.ಕೆ. ಸುರೇಶ್ ಲೋಕಸಭೆಯಲ್ಲಿ ಧ್ವನಿ ಎತ್ತಿದರು.
ಹೊಸದಿಲ್ಲಿ: ಕೋವಿಡ್ ನಿರ್ವಹಣೆ ವೈಫಲ್ಯ, ಜನ ಹಾಗೂ ರೈತ ವಿರೋಧಿ ಕಾಯ್ದೆ, ಸಾಲದ ಹೊರೆ, ನಾನಾ ಇಲಾಖೆ ಖಾಸಹೀಕರಣ, ಜಿಡಿಪಿ ಕುಸಿತ, ರಸಗೊಬ್ಬರ ಕೊರತೆ ಸೇರಿ ಕೇಂದ್ರ ಸರ್ಕಾರ ವೈಫಲ್ಯಗಳ ಕುರಿತು ಸಂಸದ ಡಿ.ಕೆ. ಸುರೇಶ್ ಲೋಕಸಭೆಯಲ್ಲಿ ಧ್ವನಿ ಎತ್ತಿದರು. 2020-21ನೇ ಸಾಲಿನ ಬಜೆಟ್ ಅನುದಾನದ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಂಸದ ಸುರೇಶ್ ಅವರು, ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. …
Read More »130.00 ಲಕ್ಷಗಳಡಿ ಇಂದು ಗೋಕಾಕ ನಗರದಲ್ಲಿ ಪೌರಕಾರ್ಮಿಕರ ವಸತಿ ಸಮುಚ್ಚಯ ಕಟ್ಟಡಗಳ ಉದ್ಘಾಟನೆ.
ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …
Read More »
Laxmi News 24×7