ಬೆಂಗಳೂರು,ಸೆ.20-ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಅರಂಭವಾಗುತ್ತಿದ್ದು, ಬಹುತೇಕ ಎಲ್ಲ ಪಕ್ಷಗಳ ಶಾಸಕರು ಆತಂಕಗೊಂಡಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಕೇಂದ್ರ ಸರ್ಕಾರ ಬುಧವಾರವೇ ಕಲಾಪವನ್ನು ಮೊಟಕುಗೊಳಿಸಲು ಮುಂದಾಗಿರುವಾಗ, ರಾಜ್ಯದಲ್ಲಿ ಕಲಾಪವನ್ನು ನಡೆಸುವ ಔಚಿತ್ಯವಾದರೂ ಏನು? ಎಂದು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಪ್ರಶ್ನಿಸುತ್ತಿದ್ದಾರೆ. ಜನಪ್ರತಿನಿಧಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವೇ ಅಧಿವೇಶನವನ್ನು ಅರ್ಧಕ್ಕೆ ನಿಲ್ಲಿಸುತ್ತಿರುವಾಗ, ರಾಜ್ಯದಲ್ಲಿ ಕಲಾಪ ನಡೆಸುವ ಅಗತ್ಯವಾದರೂ ಏನಿತ್ತ್ತು ಎಂಬುದು …
Read More »ಎಡಬಿಡಂಗಿ, ಅವಕಾಶವಾದಿಯಿಂದ ನಾವು ಸ್ವಾಭಿಮಾನದ ಪಾಠ ಕಲಿಯಬೇಕಾಗಿಲ್ಲ; ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು : ಆತ್ಮವಂಚನೆಯ ರಾಜಕಾರಣಿಯಾದ ನಿಮ್ಮಿಂದ ಜೆಡಿಎಸ್ ಪಕ್ಷದವರು ಕಲಿಯಬೇಕಾಗಿದ್ದು ಏನೂ ಇಲ್ಲ. ಅಧಿಕಾರದ ಆಸೆಗಾಗಿ ಬೇರೆ ಪಕ್ಷಕ್ಕೆ ಜಿಗಿದವರು ನೀವು. ನಿಮ್ಮಿಂದ ನಾವು ಕಲಿಯಬೇಕಾಗಿಲ್ಲ. ಈಗ ನಮ್ಮನ್ನು ಅವಕಾಶವಾದಿ ಪಕ್ಷ ಎಂದು ಹೇಳುತ್ತಿದ್ದೀರಿ. ಈ ಮೂಲಕ ನಿಮ್ಮ ಊಸರವಳ್ಳಿ ರಾಜಕಾರಣದ ಬಣ್ಣ ಬಯಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸರಣಿ ಟ್ವೀಟ್ಗಳನ್ನು ಮಾಡಿರುವ ಮಾಜಿ ಸಿಎಂ …
Read More »ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ದೇವೇಗೌಡ; ಕನ್ನಡದಲ್ಲಿ ಪ್ರಮಾಣ ಮೊದಲ ಬಾರಿ ಭಾನುವಾರವೂ ನಡೆಯುತ್ತಿರುವ ಅಧಿವೇಶನ
ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬೆಳಗ್ಗೆ ಸುಮಾರು 9 ಗಂಟೆಗೆ ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಸಮ್ಮುಖದಲ್ಲಿ ಹೆಚ್.ಡಿ.ದೇವೇಗೌಡ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್‍ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿರುವುದು ವಿಶೇಷ. ದೇವೇಗೌಡರು 24 ವರ್ಷಗಳ ಬಳಿಕ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಹಿಂದೆ ಪ್ರಧಾನ …
Read More »ಸಾವಿರಾರು ಎಕರೆ ರೈತರ ಫಲವತ್ತಾದ ಭೂಮಿ ಸರ್ಕಾರದ ಸ್ವಾಧೀನಕ್ಕೆ’
ನಾಗಮಂಗಲ : ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿ ಎಂಬ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದೇಶದ ಬರಡು ಭೂಮಿಯಲ್ಲಿ ಕೈಗಾರಿಕಾ ಯೋಜನೆ ರೂಪಿಸಿದ್ದೆ. ಆದರೀಗ ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಏನೇ ಆದರೂ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ರೈತರ ಕೃಷಿಗೆ ಯೋಗ್ಯವಾದ …
Read More »ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ- ಕುಳಿತುಕೊಳ್ತಾರೆ, ಊಟ ಮಾಡ್ತಾರೆ ಗಾನ ಗಾರುಡಿಗ
ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಸ್ವಲ್ಪ ಮಟ್ಟಿಗೆ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಆಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್‍ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು …
Read More »ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ
ಬೆಂಗಳೂರು: ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ, ಜೆಡಿಎಸ್ ಪಕ್ಷದ ದೇವೇಗೌಡರು ಹಾಗೂ ಕುಟುಂಬ ಒಂದು ಅವಕಾಶವಾದಿ. ಪಕ್ಷಸ್ವಾರ್ಥ ಇರುವವರು. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಬಿಜೆಪಿ ಜೊತೆಯೂ …
Read More »ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಗ್ರೀನ್ ಸಿಗ್ನಲ್ – ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಡೌಟ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಸಿಎಂ ದೆಹಲಿ ಭೇಟಿ ಅಂತ್ಯವಾಗಿದೆ. ಆದರೆ ಸಂಪುಟ ಪುನಾರಚನೆಯೋ ಅಥವಾ ಸಂಪುಟ ವಿಸ್ತರಣೆಯೋ ಅನ್ನೋ ವಿಚಾರಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆಗೆ ಒಲವು ತೋರಿದ್ದ ಸಿಎಂಗೆ ಈ ಬೆಳವಣಿಗೆ ನಿರಾಸೆ ತಂದಿದೆ. ಭಾನುವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಶುಕ್ರವಾರ ರಾತ್ರಿಯಿಂದ ಸುದ್ದಿ ಹಬ್ಬಿತ್ತು. ಆದರೆ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. …
Read More »ವಿಧಾನ ಮಂಡಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬುವುವನ್ನು ನನ್ನ ಬಯಕೆ:BSY
ಹೊಸದಿಲ್ಲಿ: ವಿಧಾನ ಮಂಡಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬುವುವನ್ನು ನನ್ನ ಬಯಕೆ ಇದೆ. ವರಿಷ್ಠರ ಅನುಮತಿ ಮತ್ತು ಸಹಮತಿ ಸಿಕ್ಕಿದ ತಕ್ಷಣ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆಗೆ ಶುಕ್ರವಾರ ಸಮಾಲೋಚನೆ ನಡೆಸಿದ್ದೇನೆ. ಅವರು ಪ್ರಧಾನಿ ಜೊತೆಗ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ …
Read More »ಮನೆಗಳಿಗೆ ಮಳೆ ನೀರು ನುಗ್ಗಿ ಊಟಕ್ಕೂ ಪರದಾಟ
ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜನ ಊಟಕ್ಕೂ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ. ಮನೆಗಳಿಗೆ ನೀರು ನುಗ್ಗಿರುವ ರಾಯಚೂರು ನಗರದ ಜಹಿರಾಬಾದ್, ಸಿಯತಲಾಬ್ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದು ಊಟದ ವ್ಯವಸ್ಥೆ ಮಾಡಲಾಗಿದೆ. ಮನೆಯಲ್ಲಿನ ದವಸ ಧಾನ್ಯ ಹಾಗೂ ಎಲ್ಲಾ ವಸ್ತುಗಳು ನೀರುಪಾಲಾಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ನಿಧಾನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳೆಲ್ಲಾ ಸತತವಾಗಿ ಸುರಿದ ಮಳೆಯಿಂದ …
Read More »SCP/TSP ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು.
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ(ಸೆ.19) ನಡೆದ ಸಮಾರಂಭದಲ್ಲಿ ಲ್ಯಾಪ್‌ಟಾಪ್ ಗಳನ್ನು ನೀಡಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ದಶಮಾನೋತ್ಸವದ ಸಂಭ್ರಮದಲ್ಲಿ ಇರುವ ಅಭಿವೃದ್ಧಿ ಕೆಲಸ ಭರದಿಂದ ನಡೆಯಲಿವೆ ಎಂದರು. ಭೌಗೋಳಿಕವಾಗಿ ಹಾಗೂ ಶೈಕ್ಷಣಿಕವಾಗಿ …
Read More »
Laxmi News 24×7