ಬೆಂಗಳೂರು: ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. …
Read More »ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ
ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …
Read More »ರಾಜಕೀಯದ ನಿಖರ ಭವಿಷ್ಯದ ಮೂಲಕ ಖ್ಯಾತಿಗಳಿಸಿದ್ದ ಪಂ.ಶ್ರೀಪಾಲ್ ಇನ್ನಿಲ್ಲ
ಅಥಣಿ : ರಾಜಕೀಯ ಭವಿಷ್ಯ ನುಡಿಯುವ ಮೂಲಕ ಖ್ಯಾತಿಗಳಿಸಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿಯ ಪಂಡಿತ ಶ್ರೀಪಾಲ್ ಉಪಾಧ್ಯೆ (78) ಮಂಗಳವಾರ ಬೆಳಗ್ಗೆ ನಿಧನರಾದರು. ನ್ಯುಮೋನಿಯಾದಿಂದ ಬಳಲುತ್ತಿದ್ದ ಉಪಾಧ್ಯೆ ಅವರು ಬೆಳಗಿನ ಜಾವ 6.30ಕ್ಕೆ ನಿಧನರಾದರು.1985ರಲ್ಲಿ ಚುನಾವಣೆಗೆ ಸ್ಪರ್ಧಿಸದ ಆ ಧೀಮಂತ ವ್ಯಕ್ತಿ ಮುಖ್ಯಮಂತ್ರಿ ಆಗ್ತಾರೆ ಎಂದು ಕವಡೆ ಭವಿಷ್ಯ ನುಡಿದಿದ್ದರು. ಅದರಂತೆ ಅಂದು ಚುನಾವಣೆಗೆ ಸ್ಪರ್ಧಿಸದ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. 2018ರ ವಿಧಾನಸಭೆ ಚುನಾವಣೆ ವೇಳೆ ಎಚ್.ಡಿ.ಕುಮಾರಸ್ವಾಮಿಯೇ …
Read More »ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ.
ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ. ಇಂದು ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದಾರೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ …
Read More »ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ
ಬೆಳಗಾವಿ, : ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರು-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೊದನೆ ದೊರೆತಿದ್ದು, ಈ ಯೋಜನೆಗೆ 927.40 ಕೋಟಿ ವೆಚ್ಚವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ. ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಂಡಲ್ಲಿ ಪ್ರಮುಖ ನಗರಗಳಾದ ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿಗೆ ಕಡಿಮೆ ಸಮಯದಲ್ಲಿ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಮುಂದಿನ ವರ್ಷಗಳಲ್ಲಿ …
Read More »ಖಾಸಗಿ ಶಾಲೆಗಳಿಗೆ ಶಿಕ್ಷಣ ಸಚಿವರ ಖಡಕ್ ವಾರ್ನಿಂಗ್ :`ಒನ್ ಟರ್ಮ್ ಪ್ರವೇಶ ಶುಲ್ಕ ಮಾತ್ರ ಪಡೆಯಲು ಸೂಚನೆ
ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಖಾಸಗಿ ಶಾಲೆಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಒಂದು ಅವಧಿಯ (ಟರ್ಮ್) ಪ್ರವೇಶ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ. ‘ಜೂನ್‌ನಿಂದ ಶಾಲೆಗಳು ಆರಂಭವಾಗಿಲ್ಲ. ಅನೇಕ ಖಾಸಗಿ ಶಾಲೆಗಳ ಶಿಕ್ಷಕರು ಕಷ್ಟದಲ್ಲಿದ್ದಾರೆ. ಹೀಗಾಗಿ, ಮಕ್ಕಳ ದಾಖಲಾತಿಗೆ ಅನುಮತಿ ನೀಡಿ, ಒಂದು ಅವಧಿಯ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯುವಂತೆ ಸೂಚಿಸಿದ್ದೇವೆ ಮತ್ತು ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕೆ ಪಾವತಿಸಲು ಬಳಸುವಂತೆ ತಿಳಿಸಲಾಗಿದೆ …
Read More »ಈ ಬಾರಿಯ ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 8,071 ಕೋಟಿ ರೂ.ಗಳಷ್ಟು ನಷ್ಟ:B.S.Y.
ಬೆಂಗಳೂರು: ಪ್ರವಾಹದಿಂದಾಗಿ ಈ ಬಾರಿ ಸಹ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, 8,071 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರವಾಹದ ಹಾನಿಯ ಸಮೀಕ್ಷೆಗೆ ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ನೇತೃತ್ವದ ತಂಡ ಆಗಮಿಸಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ತಂಡ ಭೇಟಿ ಮಾಡಿ ವಿವರ ಪಡೆಯಿತು. ಈ ವೇಳೆ ರಾಜ್ಯದಲ್ಲಿ ಹಾನಿಯಾಗಿರುವ ಕುರಿತು ಸಿಎಂ ವಿವರಿಸಿದರು. ಈ …
Read More »ಕುಮಾರಸ್ವಾಮಿ ಅವರಿಗೆ ಈಗ ಜ್ಞಾನೋದಯವಾಗಿದೆ ಅಂತಾ ಕಾಣುತ್ತದೆ. : ಲಕ್ಷ್ಮಣ ಸವದಿ
ಕಲಬುರಗಿ : ಮೈತ್ರಿ ಸರ್ಕಾರ ಕೆಡವಲು ಡ್ರಗ್ಸ್ ದಂಧೆ ಹಣ ಬಳಕೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಈಗ ಜ್ಞಾನೋದಯವಾಗಿದೆ ಅಂತಾ ಕಾಣುತ್ತದೆ. ತಮ್ಮ ಸರ್ಕಾರ ಆಡಳಿತದಲ್ಲಿ ಇರುವಾಗ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೊಲೀಸರಿಂದ ತನಿಖೆ ನಡೆಸಬೇಕಿತ್ತು. ಸಿಎಂಯಾಗಿ ಅಸಮರ್ಥರಾಗಿದ್ದದನ್ನು ಹೇಳಿಕೆ ಮೂಲಕ …
Read More »ಜೆಡಿಎಸ್ ಪಕ್ಷ ತೀರಿಸುವ ಕೆಲಸ ನಡೆಯುತ್ತಿದೆ : ಗಂಭೀರ ಆರೋಪ
ನಾಗಮಂಗಲ : ಜಿಲ್ಲಾಡಳಿತ ಜೆಡಿಎಸ್ ಪಕ್ಷವನ್ನು ತೀರಿಸುವ ಕೆಲಸ ಮಾಡುತ್ತಿದೆ. ಜನರಿಂದ ಆಯ್ಕೆಯಾದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಕನಿಷ್ಠ ಪ್ರಯತ್ನವನ್ನೂ ಮಾಡುತ್ತಿಲ್ಲ. ಜನರಿಂದ ತಿರಸ್ಕೃತರಾದವರೇ ಅಧಿಕಾರಿಗಳಿಗೆ ಗಾಡ್‌ಫಾದರ್‌ಗಳಾಗಿದ್ದಾರೆ ಎಂದು ನಾಗಮಂಗಲ ಶಾಸಕ ಕೆ.ಸುರೇಶ್‌ಗೌಡ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ನಾಗಮಂಗಲ ಶಾಸಕ ಕೂಡ ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ಸಿಟ್ಟಿಗೆದ್ದಿದ್ದಾರೆ. …
Read More »`LPG’ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಮೋದಿ ಸರ್ಕಾರ ಕನ್ನ ಹಾಕುತ್ತಿದೆ : ಈಶ್ವರ್ ಖಂಡ್ರೆ ಕಿಡಿ
ಬೆಂಗಳೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನು ಧೀಡಿರ್ ಆಗಿ ರದ್ದುಗೊಳಿಸುವ ಮೂಲಕ ಮಧ್ಯಮ ವರ್ಗದ ಜನರಿಗೆ ಮೋಸ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ್ ಖಂಡ್ರೆ, ಈಶ್ವರ್ ಖಂಡ್ರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ. ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ …
Read More »
Laxmi News 24×7