ತುಮಕೂರು : ಸಾಮಾಜಿಕ ಅಂತರ ಕಾಪಾಡಿಕೊಂಡು ರಾಜ್ಯ ವಿಧಾನ ಸಭಾ ಅಧಿವೇಶನ ಹೇಗೆ ನಡೆಸೋದು? ಒಂದು ಆಸನ ಬಿಟ್ಟು ಇನ್ನೊಂದು ಆಸನದಲ್ಲಿ ಕುಂತರೂ ಕ್ರಮೇಣ ಅಂತರ ಮರೆಯಾಗುತ್ತದೆ. ಇದರಿಂದ ಮತ್ತೆ ಸೋಂಕು ಹರಡುವ ಭೀತಿ ಕಾಡುತ್ತದೆ. ಆದರೆ ತುಮಕೂರು ಜಿಲ್ಲಾ ಪಂಚಾಯತಿ ಸಿಇಒ ಶುಭಾ ಕಲ್ಯಾಣ್ ಸಭೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿಭಿನ್ನ ಆಲೋಚನೆಯೊಂದನ್ನು ಮಾಡಿದ್ದಾರೆ. ಸಾಮಾಜಿಕ ಅಂತರದಿಂದ ಕೊರೋನಾ ಮಟ್ಟ ಹಾಕಬಹುದು ಅಂತಾ ಸರ್ಕಾರ ಘೋಷಿಸಿದೆ. ಸಚಿವರು, ಶಾಸಕರು …
Read More »ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಸಿದ್ಧರಾಮಯ್ಯ
ಬೆಂಗಳೂರು: ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಆಸ್ಪತ್ರೆಯಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ರಾಜಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ …
Read More »ಮಳೆ ಅನಾಹುತ – ತುರ್ತಾಗಿ 50 ಕೋಟಿ ರೂ. ಬಿಡುಗಡೆಗೆ :B.S.Y.
ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.ಕರ್ನಾಟಕದಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆದ್ದರಿಂದ ಆಸ್ಪತ್ರೆಯಲ್ಲಿದ್ದರೂ ಸಿಎಂ ಯಡಿಯೂರಪ್ಪ ಎಲ್ಲಾ ಡಿಸಿಗಳಿಂದ ಮಾಹಿತಿ ಪಡೆದು, ಅವಾಂತರ ತಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆ ಅನಾಹುತ ತಡೆಯಲು ತುರ್ತಾಗಿ 50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ …
Read More »366 ಸ್ತಂಭಗಳ ಆಧಾರ, 24 ಅಮೃತಶಿಲೆಯ ಬಾಗಿಲುಗಳು – ವಿಶ್ವದ ಮೂರನೇ ಅತೀದೊಡ್ಡ ಹಿಂದೂ ದೇಗುಲ
ಲಕ್ನೋ: ಇಂದು ದೇಶದ ರಾಜಕೀಯ, ಸಾಮಾಜಿಕ ಚರಿತ್ರೆಯಲ್ಲಿ ಒಂದು ಅಪೂರ್ವ ದಿನ. ಶತಮಾನಗಳ ಕನಸು ನನಸಾಗುವ ಸಂದರ್ಭ ಬಂದಿದೆ. ಸರಿಯಾಗಿ ವರ್ಷದ ಹಿಂದೆ ಜಮ್ಮು ಕಾಶ್ಮೀರದಲ್ಲಿ 370ನೇ ಆರ್ಟಿಕಲ್ ರದ್ದು ಮಾಡಿದಾಗ ಅದನ್ನು ಐತಿಹಾಸಿಕ ಘಟ್ಟ ಎಂದು ಬಣ್ಣಿಸಲಾಗಿತ್ತು. ಇದು ದಶಕಗಳ ವಿವಾದವಷ್ಟೇ ಆಗಿತ್ತು. ಆದರೆ ಭರತ ಖಂಡದ ಅಸ್ತಿತ್ವದ ಚಿನ್ಹೆಯಾದ ರಾಮಜನ್ಮ ಭೂಮಿಯಲ್ಲಿ ಒಂದು ಮಸೀದಿ ನಿರ್ಮಾಣ ಆಗಿ ಶತಮಾನಗಳು ಕಳೆದು ಹೋಗಿದ್ವು. ಪುರಾತತ್ವ ಇಲಾಖೆಯಲ್ಲಿ ಮಾತ್ರವಲ್ಲ, ಮೊಗಲ್ …
Read More »ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಸಾಧ್ಯತೆ; ರಾಜ್ಯದ ಆಡಳಿತ ನೋಡಿಕೊಳ್ಳುವವರು ಯಾರು?
ಬೆಂಗಳೂರು (ಜು. 3): ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆಡಳಿತವನ್ನು ನೋಡಿಕೊಳ್ಳುವವರು ಯಾರು? ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಾರದ ರೊಟೀನ್ ಚೆಕಪ್ ವೇಳೆ ನಿನ್ನೆ ಸಿಎಂಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಹೀಗಾಗಿ, ರಾತ್ರೋರಾತ್ರಿ ಅವರು ಆಸ್ಪತ್ರೆಗೆ …
Read More »63,922 ಪಡಿತರ ಕಾರ್ಡ್ ರದ್ದು: ಗಡಾದ
ಮೂಡಲಗಿ: ರಾಜ್ಯದಲ್ಲಿ ಒಟ್ಟು 1,27,00,451 ಪಡಿತರ ಕಾರ್ಡ್‌ಗಳು ಇದ್ದು ಇವುಗಳಲ್ಲಿ 63,922 ಕಾರ್ಡ್‌ಗಳನ್ನು ಅನರ್ಹ ಪಡಿತರ ಕಾರ್ಡ್‌ಗಳೆಂದು ಗುರುತಿಸಿ ರದ್ದು ಪಡಿಸಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, 43,138 ಕಾರ್ಡ್‌ಗಳನ್ನು ಬಿಪಿಎಲ್‌ದಿಂದ ಎಪಿಎಲ್‌ಗೆ ಪರಿವರ್ತಿಸಲಾಗಿದೆ ಮತ್ತು ಅಕ್ರಮ ಬಿಪಿಎಲ್ ಕಾರ್ಡ್‌ಗಳನ್ನು ವಾಪಸ್ ಪಡೆಯುವಾಗ ಕಾರ್ಡ್‌ದಾರರಿಂದ ದಂಡದ ರೂಪದಲ್ಲಿ ಒಟ್ಟು 96,27,961 ರೂ. ಖಜಾನೆಗೆ ಪಾವತಿಸಿಕೊಳ್ಳಲಾಗಿರುವ ಅಂಶವು ಮಾಹಿತಿ ಹಕ್ಕಿನಿಂದ ಬೆಳಕಿಗೆ …
Read More »ಸಿ.ಪಿ ಯೋಗೇಶ್ವರ್‌ಗೆ ಸಿಎಂ ಬಿಎಸ್‍ವೈ ಖಡಕ್ ವಾರ್ನಿಂಗ್…………
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಆರೋಪ ಮಾಡಿರುವ ಸಿಪಿ ಯೋಗೇಶ್ವರ್‌ಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪಕ್ಷ, ಸರ್ಕಾರಕ್ಕೆ ಮುಜುಗರ ಆಗುವಂಥ ಹೇಳಿಕೆ ಕೊಡಬೇಡಿ. ಕೊರೊನಾ ಸಮಯದಲ್ಲಿ ಅನಗತ್ಯ ಹೇಳಿಕೆ ಕೊಡಬೇಡಿ. ನಿಮ್ಮ ಕಿತ್ತಾಟ ಕ್ಷೇತ್ರದ ಮಟ್ಟಿಗೆ ಇಟ್ಕೊಳ್ಳಿ. ಸುಮ್ನೆ ನಿಮ್ ಜಂಜಾಟದಲ್ಲಿ ನಮ್ಮನ್ನ್ಯಾಕೆ ಎಳೀತೀರಾ ಅಂದಿದ್ದಾರೆ ಅಂತ ತಿಳಿದುಬಂದಿದೆ. ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ …
Read More »ಕೊರೊನಾ ಉಪಕರಣ ಖರೀದಿಯಲ್ಲಿ ಸರ್ಕಾರ 2 ಸಾವಿರ ಕೋಟಿ ರೂ. ಭ್ರಷ್ಟಾಚಾರ………!
ಬೆಂಗಳೂರು: ಕೊರೊನಾ ಉಪಕರಣ ಖರೀದಿಯಲ್ಲಿ ಸರ್ಕಾರ 2 ಸಾವಿರ ಕೋಟಿ ರೂ. ಭ್ರಷ್ಟಾಚಾರ ನಡೆಸಿದೆ ಎಂದು ಆರೋಪ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಲೀಗಲ್ ನೋಟಿಸ್ ಜಾರಿ ಮಾಡಿದೆ. ರಾಜ್ಯ ಸರ್ಕಾರದ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಈ ಹಿಂದೆಯೇ ತಿಳಿಸಿತ್ತು. ಅದರಂತೆ ಸದ್ಯ ನೋಟಿಸ್ ಜಾರಿ ಮಾಡಲಾಗಿದ್ದು, ಮಾಹಿತಿಯೇ …
Read More »ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್ ಕಿಟ್ ವಿತರಣೆ
ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್.ಎಸ್. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿದ್ದ ಶಾಸಕರು ಈಗ …
Read More »ರೈಲಿನಡಿ ಸಿಲುಕ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಭದ್ರತಾ ಸಿಬ್ಬಂದಿ………..
ಮುಂಬೈ: ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯನ್ನ ಭದ್ರತಾ ಸಿಬ್ಬಂದಿ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಮುಂಬೈ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ 52 ವರ್ಷದ ದಿಲೀಪ್ ಮಂಡಗೆ ಎಂಬವರು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಜಿಗಿಯಲು ಪ್ರಯತ್ನಿಸಿದ್ದರು. ಈ ವೇಳೆ ಆಯತಪ್ಪಿದ ದಿಲೀಪ್ ಅವರನ್ನು ಪ್ಲಾಟ್‍ಫಾರಂನಲ್ಲಿ ಕರ್ತವ್ಯನಿರತ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ದಿಲೀಪ್ ಮಗನೊಂದಿಗೆ ಮುಂಬೈನಿಂದ ಕಯಾಮತಿ ಎಕ್ಸ್ ಪ್ರೆಸ್ ಮೂಲಕ ಮಧ್ಯಪ್ರದೇಶದ ಬುರಹಾನಪುರಕ್ಕೆ ಹೊರಟಿದ್ದರು. …
Read More »
Laxmi News 24×7