Breaking News

ರಾಜಕೀಯ

ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ:ಸಿಟಿ ರವಿ

ಬೆಂಗಳೂರು: ಎಸ್‍ಡಿಪಿಐ ನಿಷೇಧ ವಿಚಾರ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದರು.ವಿಧಾನಸೌಧದ ಬಳಿ ಮಾತನಾಡಿದ ಸಿಟಿ ರವಿ ಅವರು, ಯಾವುದೇ ಒಂದು ಘಟನೆ ಮೇಲೆ ನಿಷೇಧದಂತಹ ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರ ಕಲೆ ಹಾಕುವ ಕೆಲಸ ಆಗುತ್ತಿದೆ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆ ಇಲ್ಲ. ನಾಳೆ …

Read More »

ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?

ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್‌ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್‌, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್‌ ಸಚಿವ ಸ್ಥಾನಕ್ಕೆ ಲಾಬಿಗೆ …

Read More »

ಡೇಂಜರ್ ಝೋನ್‍ನಿಂದ ಎಸ್‍ಪಿಬಿ ಪಾರಾಗಿದ್ದು, ಖುಷಿ ತಂದಿದೆ: ತಲೈವಾ

ಚೆನ್ನೈ: ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರು ಡೇಂಜರ್ ಝೋನ್ ನಿಂದ ಪಾರಾಗಿದ್ದು, ಖುಷಿ ತಂದಿದೆ ಎಂದು ನಟ ರಜನಿಕಾಂತ್ ತಿಳಿಸಿದ್ದಾರೆ.ಈ ಸಂಬಂಧ ವಿಡಿಯೋ ಮಾಡಿ ಎಸ್‍ಪಿಬಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ತಲೈವಾ, ಈ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿರುವ 71 ವರ್ಷದ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಸದ್ಯ ಡೇಂಜರ್ ಝೋನ್ ನಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ. ಎಸ್‍ಪಿ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರ …

Read More »

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ

ಹೊಸದಿಲ್ಲಿ: ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ ಮಾಡಿದರು.  ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳನ್ನು  ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಪಕ್ಷದ …

Read More »

ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ:ರಮೇಶ್ ಜಾರಕಿಹೋಳಿ.

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ‌ ಧಾರಾಕಾರ ಮಳೆಯಾಗುತ್ತಿದೆ.ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ …

Read More »

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,‌ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ

ಹಾವೇರಿ,   : ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,‌ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಸಿ ಪಾಟೀಲ್,ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ ಎಂದು ಆರೋಪಿಸಿದರು. ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..! ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆಯೋ ಅವರು ನಿಜವಾಗಿಯೂ ಅಮಾಯಕರಲ್ಲ.ರಾಜಕೀಯ ಪಿತೂರಿ ಕಾರಣಕ್ಕಾಗಿಯೇ …

Read More »

1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಈ ಯೋಜನೆಯಿಂದಾಗಿ 50 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ನೇರವಾಗಿ ರೈತರ ಖಾತೆಗೇ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ. 2019-20ನೇ ಸಾಲಿನ ಬೆಳೆವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ …

Read More »

74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ.: ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ:  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ. ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವ ದ ಶುಭಾಶಯಗಳು-ರಮೇಶ್ ಜಾರಕಿಹೊಳಿ‌, ಜಲಸಂಪನ್ಮೂಲ ಸಚಿವರು.

Read More »

ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ,

ಬೆಂಗಳೂರು,ಆ.14- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿ ಈ ಬಾರಿ ರಾಜ್ಯದ 19 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಇಗೆ ಲಭಿಸಿದೆ. ಅತ್ಯುತ್ತಮ ಸೇವೆ ಸಲ್ಲಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆಪ್ರಶಸ್ತಿ ಪುರಸ್ಕೃತರು : 1. ಹೇಮಂತ್ಕುಮಾರ್- ಉಪಪೊಲೀಸ್ ವರಿಷ್ಠಾಧಿಕಾರಿ, ಲೋಕಾಯುಕ್ತ, ಬೆಂಗಳೂರು 2. ಪರಮೇಶ್ವರ್ ಹೆಗ್ಡೆ -ಉಪಪೊಲೀಸ್ ವರಿಷ್ಠಾಧಿಕಾರಿ, ಆರ್ಥಿಕ ಅಪರಾಧ ವಿಭಾಗ, ಸಿಐಡಿ, ಬೆಂಗಳೂರು 3. …

Read More »

ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಮೂರು ಸಲ ಪ್ರಧಾನಿಯಾಗಿ ಆರು ವರ್ಷ 78 ದಿನ ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ. ಮೋದಿ ಆರು ವರ್ಷ 79 ದಿನ ಆಡಳಿತ ನಡೆಸಿದ್ದು ವಾಜಪೇಯಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. 2014ರ ಮೇ 26 ರಂದು ಭಾರತದ 14 ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು 2019ರ ಮೇ …

Read More »