Breaking News

ರಾಜಕೀಯ

ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್‍ಗೆ ಸಿಎಂ ಚಾಲನೆ …..

ಬೆಂಗಳೂರು,ಏ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ರೋಗ ಕೊರೊನಾ ವೈರಸ್ ಹರಡುವಿಕೆ ಶೀಘ್ರದ ಲ್ಲೇ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್‍ಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಕೊರೊನಾ ಹೋರಾಟದಲ್ಲಿ ಈಗ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂದರು. ಸಹಾಯವಾಣಿಯ ಉದ್ದೇಶ ರಾಜ್ಯದ ಎಲ್ಲಾ ನಿವಾಸಿಗಳಿಗೆ …

Read More »

ಲಾಕ್‍ಡೌನ್ ನಿಂದ ಕೆಎಸ್‌ಆರ್‌ಟಿಸಿಗೆ 816 ಕೋಟಿ ಲಾಸ್..!

ಬೆಂಗಳೂರು, ಏ.22- ಲಾಕ್‍ಡೌನ್ ಜಾರಿಯಾದ ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 816 ಕೋಟಿ ಲಾಸ್ ಆಗಿದೆ. ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸುವ ಉದ್ದೇಶದಿಂದ ಸರ್ಕಾರ ಲಾಕ್‍ಡೌನ್ ಜಾರಿಗೆ ತಂದ ನಂತರ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ರಾಜ್ಯದಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿಯವರೆಗೆ ಸಂಸ್ಥೆಗೆ 816.23 ಕೋಟಿ ನಷ್ಟ ಸಂಭವಿಸಿದೆ ಎಂದು ಕೆಎಸ್‍ಆರ್‍ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 314.89, ವಾಣಿಜ್ಯ …

Read More »

ಆಹಾರದ ಕಿಟ್ ಹಂಚಿಕೆಯಲ್ಲೂ ತಾರತಮ್ಯ : ಸಿದ್ದರಾಮಯ್ಯ ಆರೋಪ

ಬೆಂಗಳೂರು, ಏ.22- ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ, ಕಾರ್ಮಿಕರಿಗೆ ಹಂಚುವ ಆಹಾರದ ಪೊಟ್ಟಣದಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಶಾಸಕ ರಾಮಲಿಂಗಾ ರೆಡ್ಡಿ ಅವರು ಬಡವರಿಗೆ ಹಂಚಲು ತಯಾರಿಸುತ್ತಿರುವ ಆಹಾರ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಆದಾಗಿನಿಂದ ಪ್ರತಿ ದಿನ 48 ಸಾವಿರ ನಿರ್ಗತಿಕ ಕಾರ್ಮಿಕ ವರ್ಗಕ್ಕೆ ಆಹಾರ ಮತ್ತು ದಿನ ನಿತ್ಯ ಆಹಾರ …

Read More »

ಪೆನ್ಷನ್ ಹಣ ಸಿಗದೆ ಸಂಕಷ್ಟದಲ್ಲಿ ವಿಕಲಚೇತನೆ – ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಹಾಸನ: ಸರ್ಕಾರ ವಿಕಲಚೇತನರಿಗೆ ನೀಡುತ್ತಿದ್ದ 1400 ರೂಪಾಯಿ ಪೆನ್ಷನ್ ಹಣ 9 ತಿಂಗಳುಗಳಿಂದ ಬಾರದ ಕಾರಣ ಎರಡು ಕಾಲಿನಲ್ಲಿ ಸ್ವಾಧೀನವಿಲ್ಲದ ಮಹಿಳೆಯೊಬ್ಬಳು ಓರ್ವ ಮಗನೊಂದಿಗೆ ಸರಿಯಾಗಿ ಊಟವಿಲ್ಲದೆ ಸಂಕಟ ಪಡುತ್ತಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ಮಲ್ಲೇಶ್ವರ ನಗರದಲ್ಲಿ ನಡೆದಿದೆ. ವಿಕಲಚೇತನೆ ಭಾಗ್ಯಲಕ್ಷ್ಮಿ ತನ್ನ ಮಗನೊಂದಿಗೆ ಅರಸೀಕೆರೆ ಪಟ್ಟಣದಲ್ಲಿ ವಾಸವಿದ್ದು ಹೂಕಟ್ಟಿ ಜೀವನ ಸಾಗಿಸುತ್ತಿದ್ದರು. ಕೊರೊನಾ ಲಾಕ್‍ಡೌನ್ ಆದ ನಂತರ ಹೂ ಕಟ್ಟುವ ಕಾಯಕಕ್ಕೂ ಕುತ್ತು ಬಿದ್ದಿದೆ. ಪರಿಣಾಮ …

Read More »

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು……..

ನವದೆಹಲಿ: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಆಗಲಿದೆ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಇಲ್ಲಿಯವರೆಗಿದ್ದ 6 ತಿಂಗಳ ಶಿಕ್ಷೆಯ ಪ್ರಮಾಣವನ್ನು 7 ವರ್ಷಕ್ಕೆ ಏರಿಸಿದೆ. ದೇಶದ ಹಲವೆಡೆ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಈ ವಾರದಲ್ಲಿ ಬೆಂಗಳೂರಿನ ಪಾದರಾಯನಪುರ, ಮೈಸೂರಿನಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. …

Read More »

ಗುರುವಾರದಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲ- ಏನಿದೆ, ಏನಿಲ್ಲ? – ಮದ್ಯ ಪ್ರಿಯರಿಗೆ ಸಿಗಲ್ಲ ಎಣ್ಣೆ

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಹೇರಿದ್ದ ಲಾಕ್‍ಡೌನ್ ಗುರುವಾರದಿಂದ ಭಾಗಶಃ ಸಡಿಲಗೊಳ್ಳಲಿದೆ. ನಾಳೆಯಿಂದ ಕಟೈಂನ್‍ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆಯಲ್ಲಿ ಲಾಕ್‍ಡೌನ್ ನಿಯಮ ಸಡಿಲಗೊಳ್ಳಲಿದೆ. ಈ ಮೂಲಕ ಕಟ್ಟಡ ನಿರ್ಮಾಣ, ಅಗತ್ಯ ವಸ್ತುಗಳ ಕೈಗಾರಿಕೆ, ಕೆಲ ಸರ್ಕಾರಿ ಕಚೇರಿಗಳು ತೆರೆಯಲಿವೆ. ಆದರೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ. ಸಾರ್ವಜನಿಕ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ. ಏನಿರುತ್ತೆ?: ಸೇಫ್ ಝೋನ್‍ನಲ್ಲಿ ಕಟ್ಟಡ ನಿರ್ಮಾಣ, …

Read More »

ಸಂಚಾರಿ ನಿಯಮ ಮಾಲಿಸುವ ಕುರಿತು ಅರಿವು ಮೂಡಿಸಬೇಕಾದ ಪೊಲೀಸರೇ ಹೆಲ್ಮೆಟ್ ಹಾಕದಿದ್ದರೆ ಹೇಗೆ?…..

ಹಾಸನ: ಸಂಚಾರಿ ನಿಯಮ ಮಾಲಿಸುವ ಕುರಿತು ಅರಿವು ಮೂಡಿಸಬೇಕಾದ ಪೊಲೀಸರೇ ಹೆಲ್ಮೆಟ್ ಹಾಕದಿದ್ದರೆ ಹೇಗೆ ಅಲ್ಲವೆ, ಹೀಗಾಗಿ ಹಾಸನ ಎಸ್‍ಪಿ ಶ್ರೀನಿವಾಸ್‍ಗೌಡ ಅವರು ಎಎಸ್‍ಐಗೆ ತಕ್ಕ ಪಾಠ ಕಲಿಸಿದ್ದು, ಹೆಲ್ಮೆಟ್ ಧರಿಸದ್ದಕ್ಕೆ ಅವರಿಗೂ ಫೈನ್ ಹಾಕುವಂತೆ ಸೂಚಿಸಿದ್ದಾರೆ. ಹಾಸನದ ಸಂತೆ ಪೇಟೆ ಸರ್ಕಲ್ ಬಳಿ ಅನವಶ್ಯಕವಾಗಿ ಓಡಾಡುತ್ತಿದ್ದ ವಾಹನಗಳನ್ನು ಎಸ್‍ಪಿ ಶ್ರೀನಿವಾಸಗೌಡ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಎಎಸ್‍ಐ ಹೆಲ್ಮೆಟ್ ಇಲ್ಲದೆ ಸ್ಕೂಟರ್‍ನಲ್ಲಿ ಆಗಮಿಸುತ್ತಿದ್ದ ರು. ಇದನ್ನು ಗಮನಿಸಿದ ಎಸ್‍ಪಿ, …

Read More »

ಗದಗ:ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ

ಗದಗ: ಕೊರೊನಾ ವೈರಸ್ ತಡೆಗೆ ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ ಲಗ್ಗೆ ಇಟ್ಟಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಜನರನ್ನು ಗುಂಪು ಸೇರುವುದನ್ನು ತಡೆಯುವುದೇ ಪೊಲೀಸರಿಗೆ ತಲೆನೋವಾಗಿದೆ. ನಗರದ ಗ್ರೇನ್ ಮಾರ್ಕೆಟ್ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್‍ನಲ್ಲಿ ಜನಸ್ತೋಮ ನಿರ್ಮಾಣವಾಗಿದೆ. ಜಿಲ್ಲೆನಲ್ಲಿ ಲಾಕ್‍ಡೌನ್ ನಿಯಮ ಸಂಪೂರ್ಣ ಉಲ್ಲಂಘನೆ ಮಾಡಲಾಗಿದೆ. ಕೊರೊನಾ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ಮಾಡಲು ಜನರು ಹೂವು, ಹಣ್ಣು, ದಿನಸಿ, ಬಟ್ಟೆ …

Read More »

ಜ್ಯೂಮ್ ಪರ್ಯಾಯವಾಗಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಿದರೆ ಕೇಂದ್ರ ಸರ್ಕಾರದಿಂದ  ಒಂದು ಕೋಟಿ

ಹೊಸದಿಲ್ಲಿ: ಜ್ಯೂಮ್ ಪರ್ಯಾಯವಾಗಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಿದರೆ ಕೇಂದ್ರ ಸರ್ಕಾರದಿಂದ  ಒಂದು ಕೋಟಿ ಮೊತ್ತದ ಬಹುಮಾನ ನೀಡಲು ಘೋಷಿಸಿದೆ. ಲಾಕ್​​ಡೌನ್​​ ಅವಧಿಯಲ್ಲಿ ಮನೆಯಲ್ಲಿ ಕುಳಿತು ಕಾಲ ಕಳೆಯುತ್ತಿರೋ ಜನರು, ಹೆಚ್ಚಾಗಿ ಜ್ಯೂಮ್ ಆ್ಯಪ್ ಅನ್ನು ಹೆಚ್ಚಾಗಿ ಬಳಸೋಕೆ ಶುರು ಮಾಡಿದ್ದರು. ವರ್ಕ್ ಫ್ರಮ್ ಹೋಮ್ ಮಾಡುವ ಪ್ರತಿಷ್ಟಿತ ಕಂಪನಿಗಳ ಸಿಬ್ಬಂದಿ, ಉದ್ಯಮಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಜೂಮ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿಡಿಯೋ ಕಾನ್ಪರೆನ್ಸ್​  ಬಳಕೆ ಮಾಡ್ತಿದ್ರು. ಈ ಜ್ಯೂಮ್ …

Read More »

ಹುಟ್ಟುಹಬ್ಬಕ್ಕೆ ಕೂಡಿಟ್ಟ 11,111 ರೂ. ಕೊರೊನಾ ಹೋರಾಟಕ್ಕೆ ನೀಡಿದ ಬಾಲಕಿ

ಕೋಲಾರ: ಕಳೆದ ಒಂದು ವರ್ಷದಿಂದ ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಪುಟಾಣಿ ಬಾಲಕಿಯೊರ್ವಳು ಮಾದರಿಯಾಗಿದ್ದಾಳೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮೂಲದ 2ನೇ ತರಗತಿ ವಿದ್ಯಾರ್ಥಿನಿ ಚರಿತ ಆರ್. ರಾಯಲ್ ಪಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾಳೆ. ಹುಟ್ಟುಹಬ್ಬಕ್ಕೆಂದು ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನ ಕೊರೊನಾ ಪರಿಹಾರ ನಿಧಿಗೆ ಬಾಲಕಿ ನೀಡಿದ್ದಾಳೆ. ಕೋವಿಡ್-19 ಚಿಕಿತ್ಸೆಗಾಗಿ ತಾನೂ ಕೂಡಿಟ್ಟಿದ್ದ 11,111 ರೂಪಾಯಿ ಹಣವನ್ನು ಕೋಲಾರ ಜಿಲ್ಲಾಧಿಕಾರಿ …

Read More »