Breaking News

ರಾಜಕೀಯ

ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದ ದುಡಿಯುವ ಕೈಗಳಿಗೆ ಕೆಲಸ ನೀಡಿದ ಈಶ್ವರಪ್ಪ

ಶಿವಮೊಗ್ಗ: ದೇಶವೇ ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದು, ಅದೆಷ್ಟೋ ದುಡಿಯುವ ಮಂದಿ ಕೈಕಟ್ಟಿ ಮನೆಯಲ್ಲೇ ಕುಳಿತುಕೊಳ್ಳುವಂತಹ ಸ್ಥಿತಿ ಎದುರಾಗಿದೆ. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾತ್ರ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿ ನಡೆಸಿದ್ದಾರೆ. ಕೊರೊನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ, ದೂರ ದೂರ ನಿಂತು ಕೆಲಸ ಮಾಡುವಂತೆ ಸೂಚನೆ ಕೂಡ ನೀಡಿದ್ದು, ಜಿಲ್ಲೆಯ …

Read More »

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ- ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್”….

ಚಿಕ್ಕಮಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣ ಹಸಿ ಇರುವಾಗಲೇ ಕಾಫಿನಾಡಲ್ಲೂ ಅಂತಹದ್ದೊಂದು ಪ್ರಕರಣ ನಡೆದಿದೆ. ರಸ್ತೆ ಬದಿಯಲ್ಲಿ ಕಸದ ಆಟೋ ನಿಲ್ಲಿಸಿದ್ದರು ಎಂಬ ಕಾರಣಕ್ಕೆ ಏಕಾಏಕಿ ಮಹಿಳೆ ಹಾಗೂ ಪುರುಷ ಪೌರಕಾರ್ಮಿಕರ ಮೇಲೆ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಉಪ್ಪಳ್ಳಿಯ ಮಸೀದಿ ಸಮೀಪದ ತಮೀಮ್ ಬಂಧಿತ. ಆಟೋದಲ್ಲಿದ್ದ ಮಂಜುನಾಥ್, ಯೇಸು ಹಾಗೂ ಮಹಿಳಾ ಕಾರ್ಮಿಕರ ಮೇಲೂ ತಮೀಮ್ ಹಲ್ಲೆಗೈದಿದ್ದು, ಯೇಸು ಅವರ ಶರ್ಟ್ ಹರಿದು …

Read More »

ಕೋವಿಡ್-19 ಪರಿಹಾರ ನಿಧಿಗೆ ಧಾರವಾಡ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.

ಧಾರವಾಡ: ಕೋವಿಡ್-19 ಪರಿಹಾರ ನಿಧಿಗೆ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವರಾಜ ನೀಲಪ್ಪ ಗಾಣಿಗೇರ ಅವರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಬಸವರಾಜ ಅವರು ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ನಿವಾಸಿಯಾಗಿದ್ದು, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಒಂದನೇ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚೆಕ್ ಸ್ವೀಕರಿಸಿದ …

Read More »

ಶಿವಮೊಗ್ಗ/ಬೆಳಗಾವಿ:ಬಿರುಗಾಳಿ ಸಹಿತ ಭಾರೀ ಮಳೆ – ಶಿವಮೊಗ್ಗದಲ್ಲಿ ಅವಾಂತರ ಸೃಷ್ಟಿ

ಶಿವಮೊಗ್ಗ/ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇತ್ತ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಶಿವಮೊಗ್ಗದಲ್ಲಿ ಇಂದು ಸಂಜೆ ಅರ್ಧ ಗಂಟೆಗಳ ಕಾಲ ಭರ್ಜರಿ ಮಳೆಯಾಗಿದ್ದು, ಮಳೆಗೆ ಹಲವು ಅವಾಂತರ ಸಹ ಸೃಷ್ಟಿಯಾಗಿದೆ. ನಗರದ ಹಲವೆಡೆ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಮರಗಳು ಉರುಳಿ ಬಿದ್ದಿದ್ರೆ, ಕೆಲವು ಮನೆ ಮೇಲೂ ಮರಗಳು ಉರುಳಿ ಬಿದ್ದಿದೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ …

Read More »

ಪಬ್ಲಿಕ್ ಟಿವಿ ವರದಿಗಾರ ಹನುಮಂತು ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಇಂದು ಮೃತಪಟ್ಟ ಪಬ್ಲಿಕ್ ಟಿವಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಭಗವಂತನು ಹನುಮಂತು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಅಕಾಲಿಕ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿ, ಪಬ್ಲಿಕ್ ಟಿವಿಯ ರಾಮನಗರ …

Read More »

ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವ ಕೊರೋನಾವಾರಿಯರ್ಸ್ ಗೆ ಪತ್ರ ಬರೆದು ಸನ್ಮಾನಿಸಿದ ಸತೀಶ ಜಾರಕಿಹೊಳಿ

ಬೆಳಗಾವಿ – ಶಾಸಕ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ಕೊರೋನಾ ವಿರುದ್ದ ಹೋರಾಟದಲ್ಲಿ ಪ್ರಾಣದ ಹಂಗು ತೊರೆದು ಜನರ ರಕ್ಷಣೆಯಲ್ಲಿ ನಿರತರಾಗಿರುವ ಆರೋಗ್ಯ ಸಿಬ್ಬಂದಿ, ಪಂಚಾಯಿತಿ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ, ಸ್ವಚ್ಚತಾ ಕಾರ್ಮಿಕರಿಗೆ ಮತ್ತು ಜನಪ್ರತಿನಿಧಿಗಳಿಗೆ ಖುದ್ದು ಶಾಸಕರು ಪತ್ರ ಬರೆದು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜನರ ರಕ್ಷಣೆಗಾಗಿ ಕುಟುಂಬವನ್ನು ಬಿಟ್ಟು ನಿರತರಾಗಿರುವ ನಿಮ್ಮ ಅಮೂಲ್ಯವಾದ ಸೇವೆ ಮತ್ತು ಸಹನೆಗೆ ಬೆಲೆ ಕಟ್ಟಲಾಗದು ನಿಮ್ಮ ಶ್ರಮ ಶ್ಲಾಘನೀಯ. …

Read More »

ಬೆಳಗಾವಿ –ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ…….

ಬೆಳಗಾವಿ – ಈವರೆಗೆ ಕ್ಯಾಂಪ್ ಪ್ರದೇಶ, ಪೀರನವಾಡಿ ಮತ್ತು ಯಳ್ಳೂರು ಕಂಟೈನ್ಮೆಂಟ್ ಝೋನ್ ಆಗಿದ್ದರೂ ಬೆಳಗಾವಿ ನಗರಕ್ಕೆ ಅದರ ಪರಿಣಾಮ ಅಷ್ಟಾಗಿರಲಿಲ್ಲ. ಇಂದು ಬಂದಿರುವ ವರದಿ ಪ್ರಕಾರ ಆಝಾದ್ ನಗರದ ಯುವತಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ. ಪೂರ್ವಕ್ಕೆ ಹಳೆ ಪಿಬಿ ರಸ್ತೆ, ಪಶ್ಚಿಮಕ್ಕೆ ಬಾತಖಾಂಡೆ ಗಲ್ಲಿ, ಉತ್ತರಕ್ಕೆ ಖಡೇಬಜಾರ್, ದಕ್ಷಿಣಕ್ಕೆ ರವಿವಾರ ಪೇಟೆ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಒಳಗೊಂಡ ಪ್ರದೇಶ ಇಂದು …

Read More »

ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಣೆ- ನಾಲ್ವರು ಅಂದರ್……..

ಚಿತ್ರದುರ್ಗ: ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ನಾಲ್ವರನ್ನು ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆಯಲ್ಲೇ ಇಂತಹ ಕೃತ್ಯ ನಡೆದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಂಬುಲೆನ್ಸ್ ಚಾಲಕ ಸುಬಾನ್, ಲ್ಯಾಬ್ ಟೆಕ್ನಿಶಿಯನ್ ಸಂತೋಷ್, ಶಿವಗಂಗಾ ಗ್ರಾಮದ ಜೀವನ್ ಹಾಗೂ ಗಿರೀಶ್ ಬಂಧಿತರು. ಆರೋಪಿಗಳು ಮದ್ಯವನ್ನುಅಂಬುಲೆನ್ಸ್‌ನಿಂದ ಓಮಿನಿ ವ್ಯಾನ್‍ಗೆ ಶಿಫ್ಟ್ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಿಎಸ್‍ಐ …

Read More »

ಜಮೀರ್ ಅಹಮ್ಮದ್‍ರನ್ನ ಗೂಂಡಾ ಕಾಯ್ದೆಯಡಿ ಬಂಧಿಸಿ: ಕಟೀಲ್

ಮಂಗಳೂರು: ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಾದರಾಯನಪುರ ಗಲಾಟೆ ವಿಚಾರದಲ್ಲಿ ಶಾಸಕ ಜಮೀರ್ ಅಹ್ಮದ್ ನೀಡಿದ ಹೇಳಿಕೆ ವಿಚಾರ ಹಾಗೂ ನಡೆದುಕೊಂಡ ರೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈ ಘಟನೆ ನಡೆದಾಗ ಶಾಸಕ ಜಮೀರ್ ತೆಗೆದುಕೊಂಡ ನಿರ್ಧಾರ ಮತ್ತು ವರ್ತನೆ ಕಾನೂನು ಬಾಹಿರವಾಗಿದೆ. ಅಲ್ಲಿನ ಗೂಂಡಾಗಿರಿಗೆ ಶಾಸಕನಾಗಿ ಬೆಂಗಾವಲಾಗಿ ನಿಂತಿರುವುದು …

Read More »

ತಕ್ಷಣ ಎಲ್ಲ ಪತ್ರಕರ್ತರಿಗಾಗಿ ಅಗತ್ಯ ತಪಾಸಣಾ ಶಿಬಿರ ಏರ್ಪಡಿಸುವಂತೆ ಸೂಚನೆ ನೀಡಿದ್ದಾರೆ:B.S.Y

ಬೆಂಗಳೂರು: ಕೊರೊನಾ ವೈರಸ್ ಮಾಧ್ಯಮದವರ ಮೇಲೂ ತನ್ನ ವಕ್ರದೃಷ್ಟಿ ಬೀರಿದೆ. ನಿನ್ನೆ ಮುಂಬೈನಲ್ಲಿ 53 ಪತ್ರಕರ್ತರಿಗೆ ಕೊರೊನಾ ಸೋಂಕು ದೃಢಪಟ್ಟ ಬಳಿಕ ಇತರೆ ನಗರಗಳ ಪತ್ರಕರ್ತರಲ್ಲಿ ಆತಂಕ ಸೃಷ್ಟಿಯಾಗಿದೆ. ರಿಸ್ಕ್​ ತೆಗೆದುಕೊಂಡು ವರದಿ ಮಾಡುವ ಪತ್ರಕರ್ತರು ಬಹಳ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಮುಂಬೈ ಘಟನೆ ಬಳಿಕ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಮಾಧ್ಯಮ ಸಿಬ್ಬಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ಮುಂದಾಗಿದೆ. ಮುಂಬೈ ಪ್ರಕರಣದ ಬಗ್ಗೆ ಪರ್ತಕರ್ತರಿಂದ ಮಾಹಿತಿ …

Read More »