Breaking News
Home / ರಾಜಕೀಯ (page 251)

ರಾಜಕೀಯ

ರಾಯಚೂರು: ಜಲ ಜೀವನ್ ಮಿಷನ್‌ ಕಾಮಗಾರಿಗೆ ತಂದಿದ್ದ ಪೈಪ್​ ಬಂಡಲ್‌ಗಳಿಗೆ ಬೆಂಕಿ

ರಾಯಚೂರು: ಜಲ ಜೀವನ್ ಮೀಷನ್‌ (ಜೆಎಂಎಂ) ಕಾಮಗಾರಿಗಾಗಿ ತಂದು ಹಾಕಿದ್ದ ಪೈಪ್​ಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ರಾಯಚೂರಿನ ದೇವಸೂಗೂರು ಗ್ರಾಮದಲ್ಲಿ ಬುಧವಾರ ಜರುಗಿದೆ. ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿ ಹತೋಟಿಗೆ ತಂದರು.   ಜಿಲ್ಲೆಯ ಮನೆ ಮನೆಗೆ ನೀರು ಪೂರೈಕೆ ಮಾಡಲು ಜೆಎಂಎಂ ಕಾಮಗಾರಿ ನಡೆಯುತ್ತಿದೆ. ದೇವಸೂಗೂರು ಗ್ರಾಮ ಪಂಚಾಯತಿ ಕಚೇರಿಯ ಹತ್ತಿರದ ಹಿಂಬದಿಯ ಖಾಲಿ ಜಾಗದಲ್ಲಿ …

Read More »

ಹಟಕಿನಾಳ ಗ್ರಾಮದಲ್ಲಿ ಚಿರತೆ ದಾಳಿಗೆ ಎತ್ತು ಬಲಿ‌

ಹುಬ್ಬಳ್ಳಿ: ಕಲಘಟಗಿ ತಾಲೂಕಿನಲ್ಲಿ ದಿನದಿನಕ್ಕೆ ಕಾಡು ಪ್ರಾಣಿಗಳ ಹಾವಳಿ ಜೋರಾಗಿದೆ. ತಾಲೂಕಿನ ಹಟಕಿನಾಳ ಗ್ರಾಮದಲ್ಲಿ ಚಿರತೆಗಳ ಗುಂಪು ದಾಳಿ ಮಾಡಿ ಎತ್ತನ್ನು ತಿಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ಮಲ್ಲಯ್ಯ ಶರಣಯ್ಯ ಗೋಡಿಮನಿ ಎಂಬವರು ಎತ್ತು ಕಳೆದುಕೊಂಡಿದ್ದಾರೆ.‌ ರಾತ್ರಿ ಹೊಲದ ಮನೆಯಲ್ಲಿ ಎರಡು ಎತ್ತುಗಳನ್ನು ಕಟ್ಟಿ ಹಾಕಿದ್ದರು. ಈ ಪೈಕಿ ಒಂದು ಕಾಣೆಯಾಗಿತ್ತು. ಬೆಳಿಗ್ಗೆ ತಾನಾಗಿಯೇ ಒಂದು ಎತ್ತು ಮನೆಯತ್ತ ಮರಳಿದೆ. ಆದ್ರೆ ಇನ್ನೊಂದು ಕಾಣದೇ ಇದ್ದಾಗ ರೈತ ಕಬ್ಬಿನ ಗದ್ದೆಯಲ್ಲಿ …

Read More »

ಹುಬ್ಬಳ್ಳಿಯಲ್ಲಿ ರೈತ ಆತ್ಮಹತ್ಯೆ: ಸಾಲ ಮರುಪಾವತಿಗೆ ಕಿರುಕುಳ ಆರೋಪ

ಹುಬ್ಬಳ್ಳಿ: ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ನಡೆದಿದೆ. ರಾಜ್ಯದಲ್ಲಿ ಬರ ತಾಂಡವಾಡುತ್ತಿದ್ದು, ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ.‌ ಇಂತಹ ಪರಿಸ್ಥಿತಿಯಲ್ಲಿ ಬೆಳೆ ಸಾಲ ವಸೂಲಿ ಮಾಡಲು ಬ್ಯಾಂಕ್​ವೊಂದರ ಮ್ಯಾನೇಜರ್​ ರೈತನಿಗೆ ನಿರಂತರ ಕಿರುಕುಳ‌ ನೀಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಮಹಾದೇವಪ್ಪ ಫಕೀರಪ್ಪ ಜಾವೂರ್ (75) ಎಂಬಾತ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈತ ನಿನ್ನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ …

Read More »

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದ: ಸಚಿವ ಕೆ.ಎಚ್.ಮುನಿಯಪ್ಪ

ಹುಬ್ಬಳ್ಳಿ: ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್​ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿಗಳು ಬಂದಿವೆ. ಇದರಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಅರ್ಜಿ ಪರಿಷ್ಕರಣೆ ಮಾಡಿ ಅರ್ಹರಿಗೆ ಕಾರ್ಡ್ ವಿತರಣೆ ಮಾಡಲಾಗುವುದು. ಈಗಾಗಲೇ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಜನರಿಗೆ …

Read More »

ನೈರುತ್ಯ ರೈಲ್ವೆ ಆದಾಯದಲ್ಲಿ ಗಣನೀಯ ಏರಿಕೆ

ಹುಬ್ಬಳ್ಳಿ : ನೈರುತ್ಯ ರೈಲ್ವೆ ಇಲಾಖೆಯು ಆದಾಯದಲ್ಲಿ ಅತ್ಯುತ್ತಮ ಬೆಳವಣಿಗೆ ದಾಖಲಿಸಿದೆ. ಈ ವಲಯವು 2023 ರ ಏಪ್ರಿಲ್​ನಿಂದ ಅಕ್ಟೋಬರ್ ಅವಧಿಯಲ್ಲಿ ಶೇ. 10.44% ಹೆಚ್ಚಳದೊಂದಿಗೆ ಒಟ್ಟು 4288.27 ಕೋಟಿ ರೂ.ಗಳ ಆದಾಯವನ್ನು (ಹಂಚಿಕೆ) ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 3882.93 ಕೋಟಿ ರೂಪಾಯಿ ಸಂಗ್ರಹವಾಗಿತ್ತು. ನೈರುತ್ಯ ರೈಲ್ವೆಯ ಮೂಲ ಪ್ರಯಾಣಿಕರ ಆದಾಯವು 2023 ರ ಏಪ್ರಿಲ್​ನಿಂದ ಅಕ್ಟೋಬರ್ ಅವಧಿಯಲ್ಲಿ 1801.68 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷದ ಇದೇ ಅವಧಿಯ …

Read More »

ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಬರ ಅಧ್ಯಯನಕ್ಕಾಗಿ ಬಿಜೆಪಿ ಮಾದರಿಯಲ್ಲಿಯೇ ತಂಡ ರಚಿಸಿಕೊಂಡು ಜೆಡಿಎಸ್‌ ಸಹ ಅಧ್ಯಯನ ನಡೆಸಲು ತೀರ್ಮಾನಿಸಿದ್ದು, ಈ ಸಂಬಂಧ ಇಂದು ಸಭೆ ನಡೆಸಲಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಸಿಎಂ, ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜಿಲ್ಲಾವಾರು, ವಿಭಾಗವಾರು ಸಭೆ ನಡೆಯಲಿದೆ. ರಾಜ್ಯದಲ್ಲಿನ ಬರ ಅಧ್ಯಯನಕ್ಕೆ ಬಿಜೆಪಿ ನಿರ್ಧರಿಸಿ ತಂಡ ರಚಿಸಿದೆ. ಈ ಬೆನ್ನಲ್ಲೇ ಜೆಡಿಎಸ್ ಸಹ ಬರ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ …

Read More »

ಹಾವೇರಿಯಲ್ಲಿ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ

ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಮೈದುನ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7) ಎಂದು ಗುರುತಿಸಲಾಗಿದೆ. ಕುಮಾರಗೌಡ್ ಮರಿಗೌಡ್ರು ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಕುಮಾರ್​ಗೌಡ್​​ ತನ್ನ ಸ್ವಂತ ಅಣ್ಣ ಹೊನ್ನೇಗೌಡರ ಹೆಂಡತಿ ಮತ್ತು ಮಕ್ಕಳ ಹತ್ಯೆಗೈದು ಪರಾರಿಯಾಗಿದ್ದಾನೆ. ಕೊಲೆಯಾದ ಗೀತಾ ಅವರ ಗಂಡ ಹೊನ್ನೇಗೌಡ ದುಬೈನಲ್ಲಿ ಕೆಲಸ …

Read More »

ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ,: ಚೆಲುವರಾಯ ಸ್ವಾಮಿ

ಕೊಡಗು: ಪಕ್ಷದಲ್ಲಿ ಉದ್ಬವಿಸಿರುವ ಸಮಸ್ಯೆಯನ್ನು ಹೈ-ಕಮಾಂಡ್, ಪಕ್ಷದ ಅಧ್ಯಕ್ಷರು, ಸಿಎಂ ತೀರ್ಮಾನ ಮಾಡ್ತಾರೆ. ಅದು ನಮ್ಮ ಕೆಲಸ ಅಲ್ಲ. ಸಣ್ಣಪುಟ್ಟ ಅಸಮಾಧಾನ ಎಲ್ಲಾ‌ ಕಡೆ ಇರುತ್ತೆ ಅದನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ. ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ, …

Read More »

“ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ..:C.M.

ಗದಗ: ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನೊಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ ನಡೆದ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ, ಡಿಸಿಎಂ ಡಿಕೆ ಶಿವಕುಮಾರ್​ ಸಹ ಇದ್ದರು. ತುಮಕೂರಿನಲ್ಲಿ ಸಚಿವ ಕೆ ಎನ್​ ರಾಜಣ್ಣ ಅವರು, ಜಿ ಪರಮೇಶ್ವರ್​​ಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಹೊರತುಪಡಿಸಿದರೆ ಪರಮೇಶ್ವರ್​ ಸಿಎಂ …

Read More »

ಭ್ರೂಣ ಪತ್ತೆ ಸ್ಕ್ಯಾನಿಂಗ್​ ಆರೋಪ: ಆಸ್ಪತ್ರೆ ಮೇಲೆ ಎಸಿ ನೇತೃತ್ವದಲ್ಲಿ ದಿಢೀರ್ ದಾಳಿ

ಬೆಳಗಾವಿ: ಗರ್ಭಿಣಿಯರ ಭ್ರೂಣ ಪತ್ತೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆಸ್ಪತ್ರೆಯೊಂದರ ಮೇಲೆ ಬೆಳಗಾವಿ ಎಸಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಸ್ಕ್ಯಾನಿಂಗ್ ರೂಮ್ ಸೀಜ್ ಮಾಡಿದ್ದಾರೆ. ಬೆಳಗಾವಿಯ ಮಾಧವ ನಗರದಲ್ಲಿರುವ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆಹಚ್ಚುವ ಯಂತ್ರಗಳ ಕಾಯ್ದೆ ಉಲ್ಲಂಘನೆಯಡಿ ದಾಳಿ ಮಾಡಿ ಅಧಿಕಾರಿಗಳು …

Read More »